Tag: yogesh gowda

  • ನ.23ರ ವರೆಗೆ ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ

    ನ.23ರ ವರೆಗೆ ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ

    – ಮಾಜಿ ಸಚಿವರಿಗೆ ಜೈಲಿನಲ್ಲೇ ದೀಪಾವಳಿ

    ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನವೆಂಬರ್ 23ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಈ ಮೂಲಕ ಮಾಜಿ ಸಚಿವರು ಜೈಲಿನಲ್ಲಿಯೇ ದೀಪಾವಳಿ ಆಚರಿಸುವಂತಾಗಿದೆ.

    ಇಂದು ವೀಡಿಯೋ ಕಾನ್ಫರನ್ಸ್ ಮೂಲಕ ಧಾರವಾಡದ 2ನೇ ಹೆಚ್ಚುವರಿ ನ್ಯಾಯಾಲಯದ ಎದುರು ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಹಾಜರುಪಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ನ.23 ರವರೆಗೆ ಅಂದರೆ ಇಂದಿನಿಂದ 14 ದಿನಗಳ ಕಾಲ ವಿನಯ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಕೊನೆಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅರೆಸ್ಟ್

    ಮೂರು ದಿನಗಳ ಸಿಬಿಐ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಧಾರವಾಡದ 3ನೇ ಹೆಚ್ಚುವರಿ ನ್ಯಾಯಾಲಯದ ಎದುರು ವಿನಯ್ ಅವರನ್ನು ಹಾಜರುಪಡಿಸಬೇಕಾಗಿತ್ತು. ವಿನಯ್ ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಅವಾಂತರದಿಂದಾಗಿ ಕೊನೆ ಕ್ಷಣದಲ್ಲಿ ಸಿಬಿಐ ಅಧಿಕಾರಿಗಳು ವೀಡಿಯೋ ಕಾನ್ಫರನ್ಸ್ ಮೂಲಕ ವಿನಯ್ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಿದರು.ಇದನ್ನೂ ಓದಿ: ಬಿದ್ದು, ಎದ್ದು, ಗೆದ್ದು ಬರುವೆ- ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತೆ: ವಿನಯ್ ಕುಲಕರ್ಣಿ

    ಹೆಚ್ಚಿನ ವಿಚಾರಣೆಗಾಗಿ ಸಿಬಿಐ ವಿನಯ್ ಅವರನ್ನು ತಮ್ಮ ಕಸ್ಟಡಿಗೆ ನೀಡುವಂತೆ ಸಿಬಿಐ ಅರ್ಜಿ ಸಲ್ಲಿಸಿರಲಿಲ್ಲ. ವಿನಯ್ ಪರ ವಕೀಲರೂ ಜಾಮೀನು ಕೋರಿ ಅರ್ಜಿಯನ್ನೂ ದಾಖಲಿಸಿರಲಿಲ್ಲ. ಹೀಗಾಗಿ ನ್ಯಾಯಾಲಯ ನ.23ರ ವರೆಗೂ ವಿನಯ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.  ಇದನ್ನೂ ಓದಿ: ನೂರಕ್ಕೆ ನೂರರಷ್ಟು ರಾಜಕೀಯ- ಪಬ್ಲಿಕ್ ಟಿವಿಗೆ ವಿನಯ್ ಕುಲಕರ್ಣಿ ಪ್ರತಿಕ್ರಿಯೆ

    ಶನಿವಾರ ಹಾಗೂ ಭಾನುವಾರ ಬೆಳಕಿನ ಹಬ್ಬ ದೀಪಾವಳಿ ಆಚರಿಸಲಾಗುತ್ತಿದ್ದು, ಈ ಬೆಳಕಿನ ಹಬ್ಬವನ್ನು ಮಾಜಿ ಸಚಿವ ವಿನಯ್ ಕತ್ತಲಲ್ಲೇ ಆಚರಿಸುವಂತಾಗಿದೆ. ಪ್ರತಿವರ್ಷ ತಮ್ಮದೇ ಒಡೆತನದ ವಿನಯ್ ಡೇರಿಯಲ್ಲಿ ಅದ್ಧೂರಿಯಾಗಿ ದೀಪಾವಳಿ ಆಚರಣೆ ಮಾಡುತ್ತಿದ್ದ ವಿನಯ್, ಈ ವರ್ಷ ಜೈಲಿನಲ್ಲಿ ದೀಪಾವಳಿ ಆಚರಣೆ ಮಾಡುವಂತಾಗಿದೆ.

  • ಬಿದ್ದು, ಎದ್ದು, ಗೆದ್ದು ಬರುವೆ- ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತೆ: ವಿನಯ್ ಕುಲಕರ್ಣಿ

    ಬಿದ್ದು, ಎದ್ದು, ಗೆದ್ದು ಬರುವೆ- ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತೆ: ವಿನಯ್ ಕುಲಕರ್ಣಿ

    ಧಾರವಾಡ: ತಮ್ಮ ಬಂಧನ ರಾಜಕೀಯ ಪ್ರೇರಿತ ಎಂದು ಹೇಳಿರುವ ವಿನಯ್ ಕುಲಕರ್ಣಿ, ಬಿದ್ದು, ಎದ್ದು, ಗೆದ್ದು ಬರುವೆನು. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

    ಈ ಕುರಿತು ಫೇಸ್ಬುಕ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿದ್ದು, ಎದ್ದು, ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು, ಗೆದ್ದು ಬರುವೆನು. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೆ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ, ನನ್ನೆಲ್ಲಾ ಪ್ರೀತಿ ಪಾತ್ರರಿಗೆ ನನ್ನ ಮೇಲಿಟ್ಟಿರುವ ನಂಬಿಕೆಗೆ ನಾನು ಚಿರಋಣಿ, ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಇಂತಿ ನಿಮ್ಮ ವಿನಯ ಕುಲಕರ್ಣಿ ಎಂದು ಬರೆದುಕೊಂಡಿದ್ದಾರೆ.

    ತಮ್ಮ ಪರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣಗಳ ಪೋಸ್ಟ್ ಫೋಟೋ ಹಾಕಿ ವಿನಯ್ ಕುಲಕರ್ಣಿ ಸಾಲುಗಳನ್ನು ಬರೆದಿದ್ದಾರೆ.

    ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಲ್ಲಿ ರಾತ್ರಿ ಕಳೆದಿದ್ದಾರೆ. ಗುರುವಾರ ಬೆಳಗ್ಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದು ಬಂಧಿಸಿತ್ತು. 1 ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿಗೆ ಕರೆದುಕೊಂಡು ಹೋಗಲಾಗಿತ್ತು.

    “Truth is generally the best vindication against slander”

    ಬಿದ್ದು ಎದ್ದು ಗೆದ್ದು ಬರುವೆನು,
    ಸತ್ಯದ ತಳಹದಿಯಿಂದ ಎದ್ದು ಗೆದ್ದು…

    Posted by Vinay Kulkarni on Thursday, November 5, 2020

    ಸದ್ಯ ಹಿಂಡಲಗಾ ಜೈಲಿನ ರೆಡ್ ಝೋನ್ ಸೆಲ್‍ನಲ್ಲಿ ಇರುವ ವಿನಯ್ ಕುಲಕರ್ಣಿ, ಕೋವಿಡ್ ಹಿನ್ನೆಲೆ ಜೈಲು ಸಿಬ್ಬಂದಿ ಸೆಲ್‍ನಲ್ಲಿ ಒಬ್ಬರನ್ನು ಇರಿಸಿದ್ದಾರೆ. ಸಾಮಾನ್ಯ ಕೈದಿಯಂತೆ ಒಂದು ರಾತ್ರಿ ಕಳೆದ ಮಾಜಿ ಸಚಿವರಿಗೆ ಸೆಲ್‍ನಲ್ಲಿ ಟಿವಿ ಸೇರಿದಂತೆ ಯಾವುದೇ ವ್ಯವಸ್ಥೆ ಇಲ್ಲ. ಸೊಳ್ಳೆ ಕಾಟ ತಾಳಲಾರದೆ ವಿನಯ್, ಸೊಳ್ಳೆ ಬತ್ತಿಯಾದ್ರೂ ಕೊಡಿ ಎಂದು ಜೈಲು ಸಿಬ್ಬಂದಿಗೆ ಮನವಿ ಮಾಡಿಕೊಂಡರು. ಊಟವೂ ಇಲ್ಲ, ರಾತ್ರಿಯಿಡೀ ನಿದ್ದೆ ಮಾಡದೆ ಯೋಚನೆಯಲ್ಲೇ ರಾತ್ರಿ ಕಳೆದಿದ್ದಾರೆ.

    ಇಂದು ವೀಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಯಲಿದೆ. ವಿನಯ್ ಕುಲಕರ್ಣಿ ಅವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 16635 ನೀಡಲಾಗಿದೆ. ಕೋವಿಡ್ ಮಾರ್ಗಸೂಚಿ ಪ್ರಕಾರ ಜೈಲಿನ ಪ್ರತ್ಯೇಕ ಕ್ವಾರಂಟೈನ್ ಸೆಂಟರ್‍ನಲ್ಲಿ ಇಡಲಾಗಿದೆ.

    ನಿನ್ನೆ ಸತತ 9 ಗಂಟೆಗಳ ಸಿಬಿಐ ಅಧಿಕಾರಿಗಳ ವಿಚಾರಣೆ ಎದುರಿಸಿದ ಬಳಿಕ ಅವರನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆ ಹಾಗೂ ಕೊರೊನಾ ಪರೀಕ್ಷೆ ನಡೆಸಲು ಧಾರವಾಡ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ವಿಚಾರಣೆಯ ಕುರಿತು ಪ್ರತಿಕ್ರಿಯೆ ನೀಡಿದ್ದ ವಿನಯ್ ಕುಲಕರ್ಣಿ, ಈ ಕೇಸಿನಲ್ಲಿ ನೂರಕ್ಕೆ ನೂರರಷ್ಟು ರಾಜಕೀಯ ಇದೆ. ಇದರಲ್ಲಿ ಹೇಳೋದು ಏನಿದೆ ಎಂದು ಪ್ರಶ್ನೆ ಮಾಡಿ ಮುಂದೆ ಸಾಗಿದ್ದರು.

  • ಹಿಂಡಲಗಾ ಜೈಲಿನಲ್ಲಿ ಸಾಮಾನ್ಯ ಕೈದಿಯಂತೆ ರಾತ್ರಿ ಕಳೆದ ವಿನಯ್ ಕುಲಕರ್ಣಿ

    ಹಿಂಡಲಗಾ ಜೈಲಿನಲ್ಲಿ ಸಾಮಾನ್ಯ ಕೈದಿಯಂತೆ ರಾತ್ರಿ ಕಳೆದ ವಿನಯ್ ಕುಲಕರ್ಣಿ

    – ಜೈಲು ಸಿಬ್ಬಂದಿಯಲ್ಲಿ ವಿನಯ್ ಮನವಿ

    ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಲ್ಲಿ ರಾತ್ರಿ ಕಳೆದಿದ್ದಾರೆ.

    ಗುರುವಾರ ಬೆಳಗ್ಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದು ಬಂಧಿಸಿತ್ತು. 1 ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿಗೆ ಕರೆದುಕೊಂಡು ಹೋಗಲಾಗಿತ್ತು. ಸದ್ಯ ಹಿಂಡಲಗಾ ಜೈಲಿನ ರೆಡ್ ಝೋನ್ ಸೆಲ್‍ನಲ್ಲಿ ಇರುವ ವಿನಯ್ ಕುಲಕರ್ಣಿ, ಕೋವಿಡ್ ಹಿನ್ನೆಲೆ ಜೈಲು ಸಿಬ್ಬಂದಿ ಸೆಲ್‍ನಲ್ಲಿ ಒಬ್ಬರನ್ನು ಇರಿಸಿದ್ದಾರೆ. ಸಾಮಾನ್ಯ ಕೈದಿಯಂತೆ ಒಂದು ರಾತ್ರಿ ಕಳೆದ ಮಾಜಿ ಸಚಿವರಿಗೆ ಸೆಲ್‍ನಲ್ಲಿ ಟಿವಿ ಸೇರಿದಂತೆ ಯಾವುದೇ ವ್ಯವಸ್ಥೆ ಇಲ್ಲ. ಸೊಳ್ಳೆ ಕಾಟ ತಾಳಲಾರದೆ ವಿನಯ್, ಸೊಳ್ಳೆ ಬತ್ತಿಯಾದ್ರೂ ಕೊಡಿ ಎಂದು ಜೈಲು ಸಿಬ್ಬಂದಿಗೆ ಮನವಿ ಮಾಡಿಕೊಂಡರು. ಊಟವೂ ಇಲ್ಲ, ರಾತ್ರಿಯಿಡೀ ನಿದ್ದೆ ಮಾಡದೆ ಯೋಚನೆಯಲ್ಲೇ ರಾತ್ರಿ ಕಳೆದಿದ್ದಾರೆ.

    ಇಂದು ವೀಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಯಲಿದೆ. ವಿನಯ್ ಕುಲಕರ್ಣಿ ಅವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 16635 ನೀಡಲಾಗಿದೆ. ಕೋವಿಡ್ ಮಾರ್ಗಸೂಚಿ ಪ್ರಕಾರ ಜೈಲಿನ ಪ್ರತ್ಯೇಕ ಕ್ವಾರಂಟೈನ್ ಸೆಂಟರ್‍ನಲ್ಲಿ ಇಡಲಾಗಿದೆ. ಇದನ್ನೂ ಓದಿ: ಕೊನೆಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅರೆಸ್ಟ್

    ನಿನ್ನೆ ಸತತ 9 ಗಂಟೆಗಳ ಸಿಬಿಐ ಅಧಿಕಾರಿಗಳ ವಿಚಾರಣೆ ಎದುರಿಸಿದ ಬಳಿಕ ಅವರನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆ ಹಾಗೂ ಕೊರೊನಾ ಪರೀಕ್ಷೆ ನಡೆಸಲು ಧಾರವಾಡ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ವಿಚಾರಣೆಯ ಕುರಿತು ಪ್ರತಿಕ್ರಿಯೆ ನೀಡಿದ್ದ ವಿನಯ್ ಕುಲಕರ್ಣಿ, ಈ ಕೇಸಿನಲ್ಲಿ ನೂರಕ್ಕೆ ನೂರರಷ್ಟು ರಾಜಕೀಯ ಇದೆ. ಇದರಲ್ಲಿ ಹೇಳೋದು ಏನಿದೆ ಎಂದು ಪ್ರಶ್ನೆ ಮಾಡಿ ಮುಂದೆ ಸಾಗಿದ್ದರು.

  • ರಾಜಕೀಯ ಪ್ರೇರಿತವೆಂದು ಶೆಲ್ಟರ್ ಪಡೆಯುತ್ತೇವೆ: ಎಚ್‍ಡಿಕೆ

    ರಾಜಕೀಯ ಪ್ರೇರಿತವೆಂದು ಶೆಲ್ಟರ್ ಪಡೆಯುತ್ತೇವೆ: ಎಚ್‍ಡಿಕೆ

    -ರಾಜಕೀಯ ಪ್ರಭಾವಕ್ಕೆ ಒಳಗಾಗದೇ ನಡೆಸಲಿ

    ಬೆಂಗಳೂರು: ಯೋಗೇಶ್ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. ಇದೇ ವೇಳೆ ಪ್ರಕರಣದ ವಿಚಾರವಣೆಯನ್ನು ರಾಜಕೀಯ ಪ್ರಭಾವಕ್ಕೆ ಒಳಗಾಗದೇ ಸಿಬಿಐ ತನಿಖೆ ನಡೆಸಲಿ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್‍ಡಿಕೆ, ಯಾವುದೇ ಹಳೆಯ ಪ್ರಕರಣವನ್ನು ತನಿಖೆ ನಡೆಸಿ ಕ್ರಮಕೈಗೊಳ್ಳಲು ಮುಂದಾದರೇ ರಾಜಕೀಯ ನಾಯಕರಾದ ನಾವು ಅದನ್ನು ರಾಜಕೀಯ ಪ್ರೇರಿತ ಎಂದು ಹೇಳಿ ಶೆಲ್ಟರ್ ಪಡೆದುಕೊಳ್ಳಲು ಯತ್ನಿಸುತ್ತೇವೆ ಎಂದು ಅಭಿಪ್ರಾಯಪಟ್ಟರು.

    ಯೋಗೇಶ್ ಗೌಡ ಪ್ರಕರಣದಲ್ಲಿ ಸಾರ್ವಜನಿಕವಾಗಿ ಹಲವಾರು ಗುಮಾನಿ ಇತ್ತು. ಬಿಜೆಪಿ ಸರ್ಕಾರ ಬಂದು ತನಿಖೆಗೆ ಕೊಟ್ಟಿತ್ತು. ಪ್ರಕರಣದಲ್ಲಿ ನಿಜವಾದ ಸತ್ಯಾಸತ್ಯ ಹೊರ ಬರಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ರಾಜಕೀಯ ಪ್ರಭಾವಕ್ಕೆ ಒಳಗಾಗದೇ ತನಿಖೆ ಮಾಡಬೇಕು. ಆದರೆ ನನಗೆ ವಿನಯ್ ಕುಲಕರ್ಣಿ ಬಿಜೆಪಿಗೆ ಸೇರಲು ಹೊರಟಿದ್ರಾ ಎಂಬುವುದು ನನಗೆ ಗೊತ್ತಿಲ್ಲ. ಇದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ಮಾತ್ರ ತಿಳಿದಿರುತ್ತದೆ ಎಂದರು.

    ಇದೇ ವೇಳೆ ಉಪಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನಿಡಿದ ಎಚ್‍ಡಿಕೆ, ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಚುನಾವಣೆಯಲ್ಲಿ ಗೆಲುವು ಪಡೆದಿದ್ದೇವೆ ಎಂದು ಹೇಳುತ್ತಿದ್ದಾರೆ. ಚುನಾವಣೆ ಫಲಿತಾಂಶದ ನಂತರ ಸಿಎಂ, ವಿಪಕ್ಷ ಸ್ಥಾನ ಬದಲಾಗುತ್ತೆ ಅಂತಾ ಚರ್ಚೆ ಆಗುತ್ತಿದೆ. ಸಿಎಂ ಪುತ್ರ 25 ಸಾವಿರ ಮತದಲ್ಲಿ ಗೆದ್ದಿದ್ದೇವೆ ಅಂತಾರೆ. ಇಬ್ಬರ ಮಾತು ಕೇಳಿದ್ರೆ ನಾವು ಮೂರನೇ ಸ್ಥಾನಕ್ಕೆ ಬತ್ತೀವಾ ಅನ್ನಿಸುತ್ತಿದೆ. ಯಾರು ಏನೇ ಹೇಳಲಿ, ಏನೇ ಮಾಡಿ ಶಿರಾದಲ್ಲಿ ನಾವು ಗೆಲ್ತೀವಿ. ಜನರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಆರ್‍ಆರ್ ನಗರದಲ್ಲಿ ನಮ್ಮ ಕಾರ್ಯಕರ್ತರು ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿದ್ದು, ಆರ್.ಆರ್. ನಗರದಲ್ಲಿ ಗೆಲುವಿನ ಹತ್ತಿರಕ್ಕೆ ಹೋಗ್ತೀವಿ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಬಿಐ ಬಿಜೆಪಿ ಸರ್ಕಾರದ ರಾಜಕೀಯ ದಾಳವಾಗಿದೆ: ಡಿಕೆಶಿ

  • ತಮ್ಮನಂತೆ ಅಣ್ಣ ವಿನಯ್ ಕುಲಕರ್ಣಿಗೂ ಜನ್ಮದಿನ ಮುಂಚೆಯೇ ಸಿಬಿಐ ವಿಚಾರಣೆ

    ತಮ್ಮನಂತೆ ಅಣ್ಣ ವಿನಯ್ ಕುಲಕರ್ಣಿಗೂ ಜನ್ಮದಿನ ಮುಂಚೆಯೇ ಸಿಬಿಐ ವಿಚಾರಣೆ

    ಧಾರವಾಡ: ತಮ್ಮ ವಿಜಯ್ ಕುಲಕರ್ಣಿಯಂತೆ ಅಣ್ಣ ವಿನಯ್ ಕುಲಕರ್ಣಿಯನ್ನು ಕೂಡ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆ.

    ನವೆಂಬರ್ 7ರಂದು ವಿನಯ್ ಕುಲಕರ್ಣಿ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದರು. ಆದರೆ ಜನ್ಮದಿನಕ್ಕೂ ಮುಂಚೆಯೇ ವಿನಯ್ ಕುಲಕರ್ಣಿ ವಿಚಾರಣೆ ನಡೆಸಲಾಗುತ್ತಿದೆ. ಈ ಮೂಲಕ ತಮ್ಮನಂತೆ ಅಣ್ಣನಿಗೂ ಜನ್ಮದಿನ ಮುಂಚೆಯೇ ಸಿಬಿಐ ಅಧಿಕಾರಿಗಳು ಡ್ರಿಲ್ ಮಾಡಲಿದ್ದಾರೆ.

    ಈ ಹಿಂದೆ ಸೋದರ ವಿಜಯ್ ಕುಲಕರ್ಣಿಗೂ ಜನ್ಮದಿನ ಮುಂಚೆಯೇ ಬೆಂಗಳೂರಿನಲ್ಲಿ ವಿಚಾರಣೆ ನಡೆದಿತ್ತು. ಜನ್ಮದಿನದಂದು ಕೂಡ ಧಾರವಾಡದಲ್ಲಿ ಸಿಬಿಐ, ವಿಜಯ್ ವಿಚಾರಣೆ ನಡೆಸಿತ್ತು. ಈಗ ವಿನಯ್ ಜನ್ಮದಿನಕ್ಕೆ ಎರಡು ದಿನ ಇರುವಾಗಲೇ ಸಿಬಿಐ ವಶಕ್ಕೆ ಪಡೆದಿದೆ.

    2017 ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.

    ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸಹೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ ಗೌಡ ತಾಯಿ ಆರೋಪಿಸಿದ್ದರುನಿದೀಗ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇಂದು ಬೆಳ್ಳಂಬೆಳಗ್ಗೆ ವಿನಯ್ ಮನೆಗೆ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಮಾಜಿ ಸಚಿವರನ್ನು ವಶಕ್ಕೆ ಪಡೆದಿದ್ದಾರೆ.

  • ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಯನ್ನು ವಶಕ್ಕೆ ಪಡೆದಿದ್ದಾರೆ.

    ಇಂದು ಬೆಳ್ಳಂಬೆಳಗ್ಗೆ ಧಾರವಾಡದ ಬರಾಕೊಟ್ರಿಯಲ್ಲಿರುವ ಕುಲಕರ್ಣಿ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಸಿಬಿಐ ಅಧಿಕಾರಿ ರಾಕೇಶ್ ರಂಜನ್ ನೇತೃತ್ವದ 6 ಮಂದಿಯ ತಂಡ ಕುಲಕರ್ಣಿಯನ್ನು ವಶಕ್ಕೆ ಪಡೆದು, ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ. ವಿನಯ್ ಕುಲಕರ್ಣಿ ತನ್ನದೇ ವಾಹನದಲ್ಲಿ ಪೊಲೀಸ್ ಠಾಣೆಗೆ ತೆರಳಿದ್ದಾರೆ.

    2017 ಜೂನ್ 15ರಂದು ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.

    ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸಹೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ ಗೌಡ ತಾಯಿ ಆರೋಪಿಸಿದ್ದರು.

    ರಾಜ್ಯ ಸರ್ಕಾರ 2019 ಸೆಪ್ಟೆಂಬರ್ 9ರಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಆರಂಭಿಸಿರುವ ಸಿಬಿಐ ಪ್ರಕರಣದ ಆರೋಪಿಗಳಾದ ಬಸವರಾಜ ಶಿವಪ್ಪ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ ಹಾಗೂ ಮಹಾಬಲೇಶ್ವರ ಹೊನಗಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.

  • ಯೋಗೇಶ್‌ ಗೌಡ ಕೇಸ್‌ – ಮಾಜಿ ಸಚಿವ ವಿನಯ್‌ ಕುಲಕರ್ಣಿ ಸಹೋದರನಿಗೆ ಸಿಬಿಐ ಡ್ರಿಲ್‌

    ಯೋಗೇಶ್‌ ಗೌಡ ಕೇಸ್‌ – ಮಾಜಿ ಸಚಿವ ವಿನಯ್‌ ಕುಲಕರ್ಣಿ ಸಹೋದರನಿಗೆ ಸಿಬಿಐ ಡ್ರಿಲ್‌

    ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಕೊಲೆ ಪ್ರಕರಣದ ಸಿಬಿಐ ತನಿಖೆ ಮತ್ತೆ ಚುರುಕು ಪಡೆದಿದೆ. ಇಂದು ಮಾಜಿ ಮಂತ್ರಿ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಸಿಬಿಐ ವಿಚಾರಣೆ ಎದುರಿಸಿದ್ದಾರೆ.

    ನೋಟಿಸ್‌ ಜಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸಿಬಿಐ ಕಚೇರಿಗೆ ಬೆಳಗ್ಗೆ 10.30ಕ್ಕೆ ಹಾಜರಾದ ವಿಜಯ್ ಕುಲಕರ್ಣಿಗೆ 7 ಗಂಟೆಗಳ ಕಾಲ ಸಿಬಿಐ ಫುಲ್ ಡ್ರಿಲ್ ಮಾಡಿದೆ.

    ಯೋಗೇಶ್‌ ಗೌಡ
    ಯೋಗೇಶ್‌ ಗೌಡ

    ವಿಚಾರಣೆ ಬಳಿಕ ಮಾತನಾಡಿದ ಅವರು, ಈ ಪ್ರಕರಣದಲ್ಲಿ 537 ಮಂದಿ ವಿಚಾರಣೆ ನಡೆಸಲಾಗಿದೆ. ಇದ್ರಲ್ಲಿ ನಾನು ಒಬ್ಬ ಅಷ್ಟೇ ಎಂದಿದ್ದಾರೆ. ವಿಚಾರಣೆಗೆ ಮತ್ತೆ ಕರೆದರೆ ಬರುತ್ತೇನೆ. ಈ ಹಂತದಲ್ಲಿ ಹೆಚ್ಚು ಮಾತನಾಡುವುದಿಲ್ಲ.

    ಈಗಾಗಲೇ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಆರು ಆರೋಪಿಗಳ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿದೆ. ಹೆಚ್ಚಿನ ವಿಚಾರಣೆಗಾಗಿ ಶೀಘ್ರವೇ ಮಾಜಿ ಸಚಿವ ವಿನಯ್ ಕುಲಕರ್ಣಿಗೂ ಸಹ ಸಿಬಿಐ ನೋಟಿಸ್ ಕೊಡುವ ಸಾಧ್ಯತೆ ಇದೆ.

    ಸಿಬಿಐ ತನಿಖೆ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ. ಅನಗತ್ಯವಾಗಿ ಸಿಬಿಐ ವಿಚಾರಣೆ ಮಾಡುತ್ತಿದೆ ಎಂದು ಆಪಾದಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಸಚಿವ ಶೆಟ್ಟರ್, ತಪ್ಪು ಮಾಡಿಲ್ಲ ಅಂದ್ರೆ ಸಿಬಿಐ ತನಿಖೆಗೆ ಹೆದರೋದ್ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

  • ಯೋಗೇಶ್‍ಗೌಡ ಕೊಲೆ ಪ್ರಕರಣ- ಪೇದೆಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ಸಿಬಿಐ

    ಯೋಗೇಶ್‍ಗೌಡ ಕೊಲೆ ಪ್ರಕರಣ- ಪೇದೆಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ಸಿಬಿಐ

    ಹುಬ್ಬಳ್ಳಿ: ಧಾರವಾಡ ಜಿ.ಪಂ ಸದಸ್ಯ ಯೋಗೇಶ್‍ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯ ಮುಖ್ಯ ಪೇದೆಯೊಬ್ಬರನ್ನು ವಿಚಾರಣೆಗೆ ಒಳಪಡಿಸಿದೆ.

    ಬೆಂಡಿಗೇರಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಬಾಬು ಕಟಗಿಯನ್ನು ಸಿಬಿಐ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಬಾಬು ಕಟಗಿ ಯೋಗೇಶ್ ಗೌಡ ಕೊಲೆಯಲ್ಲಿ ಪೇದೆಯ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗಿದ್ದು, ಬಾಬು ಕಟಗಿ ಕೊಲೆ ಆರೋಪಿಗಳ ನಿರಂತರ ಸಂಪರ್ಕದಲ್ಲಿದ್ದರು ಎಂಬುವ ಮಾಹಿತಿ ಸಿಬಿಐ ಮೂಲಗಳಿಂದ ತಿಳಿದು ಬಂದಿದೆ.

    ಕೊಲೆಯಾದ ದಿನವೂ ಆರೋಪಿಗಳ ಜೊತೆ ಬಾಬು ಕಟಗಿ ಸಂಪರ್ಕದಲ್ಲಿದ್ದರು ಎನ್ನಲಾಗಿದ್ದು, ಕೊಲೆ ನಡೆದ ದಿನ ಪೇದೆ ರಜೆಯಲ್ಲಿದ್ದರೂ ಘಟನಾ ಸ್ಥಳದಲ್ಲಿ ಉಪಸ್ಥಿತರಿದ್ದ ಬಗ್ಗೆ ಸಿಬಿಐಗೆ ಸಾಕ್ಷ್ಯಗಳು ದೊರೆತಿವೆ. ಈ ಹಿನ್ನೆಲೆಯಲ್ಲಿ ಸಿಬಿಐ ತೀವ್ರ ವಿಚಾರಣೆಗೆ ಒಳಪಡಿಸಿದೆ. ವಿಚಾರಣೆ ವೇಳೆ ಪೊಲೀಸ್ ಪೇದೆ ಹಲವು ಮಹಿಳೆಯರ ಜೊತೆ ಸಂಪರ್ಕದಲ್ಲಿದ್ದ ವಿಚಾರದ ಬಗ್ಗೆಯೂ ಸಿಬಿಐ ಮಾಹಿತಿ ಕಲೆ ಹಾಕಿದೆ.

    2017 ಜೂನ್ 15ರಂದು ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು.

  • ಯೋಗೇಶ್‍ಗೌಡ ಕೊಲೆ ಪ್ರಕರಣ – ಸುಪಾರಿ ಕಿಲ್ಲರ್ಸ್ 5 ದಿನ ಸಿಬಿಐ ವಶಕ್ಕೆ

    ಯೋಗೇಶ್‍ಗೌಡ ಕೊಲೆ ಪ್ರಕರಣ – ಸುಪಾರಿ ಕಿಲ್ಲರ್ಸ್ 5 ದಿನ ಸಿಬಿಐ ವಶಕ್ಕೆ

    ಧಾರವಾಡ: ಜಿಲ್ಲಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್‍ಗೌಡ ಕೊಲೆ ಪ್ರಕರಣದ ಸುಪಾರಿ ತೆಗೆದುಕೊಂಡಿದ್ದಾರೆ ಎನ್ನಲಾದ ಆರೋಪಿಗಳನ್ನು ನ್ಯಾಯಾಲಯ 5 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ.

    ಭಾನುವಾರ ಸಿಬಿಐ ಅಧಿಕಾರಿಗಳು ಬೆಂಗಳೂರಿನಿಂದ ಈ ಸುಪಾರಿ ಕಿಲ್ಲರ್ಸ್‍ಗಳನ್ನು ಧಾರವಾಡಕ್ಕೆ ಕರೆ ತಂದು, ನ್ಯಾಯಾಧೀಶರ ಬಳಿ ಹಾಜರು ಪಡಿಸಿದ್ದರು. ನ್ಯಾಯಾಧೀಶರು ಆರೋಪಿಗಳನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು. ಇವತ್ತು ಸಿಬಿಐ ಅಧಿಕಾರಿಗಳು ಮತ್ತೇ ಧಾರವಾಡ ಪ್ರಧಾನ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರ ಎದುರು 6 ಆರೋಪಿಗಳನ್ನ ಹಾಜರು ಪಡಿಸಿ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು.

    ಈ ಹಿನ್ನೆಲೆ ನ್ಯಾಯಾಲಯ 6 ಆರೋಪಿಗಳನ್ನು ಮಾರ್ಚ್ 7ರ ವರೆಗೆ 5 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ. ಸದ್ಯ ದಿನೇಶ್, ಸುನೀಲ್ ಕುಮಾರ್, ನೂತನ್, ಅಶ್ವತ್, ಶಾನವಾಜ್, ನಜೀರ ಅಹ್ಮದನನ್ನು ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳಿಗೆ ಹೆಚ್ಚಿನ ವಿಚಾರಣೆಗೆ ಅವಕಾಶ ಸಿಕ್ಕಿದೆ.

    2016ರ ಜೂನ್ 15ರಂದು ನಡೆದಿದ್ದ ಯೋಗೇಶ್‍ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು 6 ಆರೋಪಿಗಳನ್ನು ಬಂಧಿಸಲಾಗಿತ್ತು. ಯೋಗೇಶ್‍ಗೌಡ ಸಹೋದರ ಕೂಡಾ ಈ ಪ್ರಕರಣದಲ್ಲಿ ಕಾಣದ ಕೈಗಳಿದ್ದು, ಅವರನ್ನು ಹಿಡಿದು ಸಿಬಿಐ ಅಧಿಕಾರಿಗಳು ನಮಗೆ ನ್ಯಾಯ ಕೊಡಿಸುತ್ತಾರೆ ಎಂಬ ಭರವಸೆ ಇದೆ ಎಂದು ಹೇಳಿದ್ದಾರೆ.

  • ಯೋಗೇಶ್ ಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

    ರಾಜ್ಯ ಸರ್ಕಾರವು ಸೆಪ್ಟೆಂಬರ್ 9ರಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಆರಂಭಿಸಿದ್ದ ಸಿಬಿಐ ಪ್ರಮುಖ ಆರೋಪಿಗಳಾದ ಬಸವರಾಜ ಶಿವಪ್ಪ ಮುತ್ತಗಿ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ ಹಾಗೂ ಮಹಾಬಲೇಶ್ವರ ಹೊನಗಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು.

    ರಾಜ್ಯ ಸರ್ಕಾರದ ಆದೇಶ ರದ್ದು ಮಾಡುವಂತೆ ಕೋರಿ ಪ್ರಕರಣದ ಮೊದಲ ಆರೋಪಿ ಬಸವರಾಜ ಶಿವಪ್ಪ ಮುತ್ತಗಿ ಹೈಕೋರ್ಟ್ ಮೆಟ್ಟಿಲೇರಿದ್ದ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

    2017 ಜೂನ್ 15ರಂದು ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.

    ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸಹೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ ಗೌಡ ತಾಯಿ ಆರೋಪಿಸಿದ್ದರು.

    https://www.youtube.com/watch?v=vpNnQPrC3pg