Tag: young girl

  • ತುಮಕೂರು| ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯ ರಕ್ಷಣೆ – ಐಸಿಯುನಲ್ಲಿ ಚಿಕಿತ್ಸೆ

    ತುಮಕೂರು| ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯ ರಕ್ಷಣೆ – ಐಸಿಯುನಲ್ಲಿ ಚಿಕಿತ್ಸೆ

    -ಸತತ 12 ಗಂಟೆಗಳ ಕಾರ್ಯಾಚರಣೆ ಬಳಿಕ ಯುವತಿಯ ರಕ್ಷಣೆ

    ತುಮಕೂರು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕೆರೆಕೋಡಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿ ಸಾವನ್ನು ಗೆದ್ದು ಬಂದಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.

    ತುಮಕೂರು ಜಿಲ್ಲೆ ಗುಬ್ಬಿ (Gubbi) ತಾಲೂಕಿನ ಶಿವರಾಂಪುರ ಗ್ರಾಮದ ಹಂಸಾ (19) ತುಮಕೂರು ಜಿಲ್ಲೆಯ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಕೊಚ್ಚಿ ಹೋಗಿದ್ದಳು. ಸತತ 12 ಗಂಟೆಗಳ ಕಾರ್ಯಾಚರಣೆ ಮೂಲಕ ಅಗ್ನಿ ಶಾಮಕ ದಳದವರು ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: Tourism| ಕೇಂದ್ರದ ಯೋಜನೆಯಡಿ ಆಲಮಟ್ಟಿ, ಹರಕಲ್ ಗ್ರಾಮಗಳ ಅಭಿವೃದ್ಧಿ

    ಕಲ್ಲುಬಂಡೆಯ ಗುಹೆಯೊಳಗೆ ಯುವತಿ ಹಂಸಾ ಸಿಲುಕಿಕೊಂಡಿದ್ದಳು. ಅದೃಷ್ಟವಶಾತ್ ಆ ಭಾಗದಲ್ಲಿ ಮುಂಡಿಯುದ್ದಕ್ಕಷ್ಟೇ ನೀರಿತ್ತು. ಹಾಗಾಗಿ ಹಂಸಾಳಿಗೆ ತೊಂದರೆಯಾಗಿಲ್ಲ. ರಕ್ಷಣೆ ಮಾಡಿದ ಬಳಿಕ ಹಂಸಾಳನ್ನು ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಅನುಮತಿ ಇಲ್ಲದೇ ದೆಹಲಿ ವಕ್ಫ್ ಬೋರ್ಡ್‌ನಿಂದ ವರದಿ – ಜೆಪಿಸಿ ಅಧ್ಯಕ್ಷರಿಗೆ ಸಿಎಂ ಅತಿಶಿ ಪತ್ರ

    ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಹಂಸಾ, ಮಂದಾರಗಿರಿ ನೋಡಿಕೊಂಡು ಜಲಪಾತ ನೋಡಲು ನಾನು ಮತ್ತು ನನ್ನ ಸ್ನೇಹಿತೆ ಕೀರ್ತನಾ ಹೋಗಿದ್ದೆವು. ಸೆಲ್ಫಿ ಮುಗಿಸಿಕೊಂಡು ವಾಪಸ್ ಬರುವಾಗ ಬಂಡೆ ಜಾರಿ ಕೆಳಕ್ಕೆ ಬಿದ್ದೆ. ನನಗೆ ಈಜು ಬರೋದಿಲ್ಲ. ಪುಣ್ಯಕ್ಕೆ ಬಂಡೆ ಮಧ್ಯೆ ಸಿಲುಕಿಕೊಂಡೆ. ಬಂಡೆಯೊಳಗೆ ಸ್ವಲ್ಪ ಆಕಾಶ ಕಾಣಿಸುತ್ತಿತ್ತು. ಇಂಥ ಜಾಗಕ್ಕೆ ಹೋಗುವಾಗ ಜಾಗೃತೆಯಿಂದ ಹೋಗಬೇಕು. ಮಂಡಿ ಮೇಲೆ ನಿಂತಿದ್ದರಿಂದ ಮಂಡಿ ನೋವಿದೆ. ಮಂಡಿ ಸಪೋರ್ಟ್ ಬಿಟ್ಟರೆ ನಾನು ನೀರಿನಲ್ಲಿ ಕೊಚ್ಚಿ ಹೋಗುತಿದ್ದೆ. ಅಲ್ಲದೇ ತಹಶಿಲ್ದಾರ್ ಹಾಗೂ ಅಗ್ನಿ ಶಾಮಕ ದಳದವರಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾಳೆ.  ಇದನ್ನೂ ಓದಿ: ದೀಪಾವಳಿಗೂ ಮುನ್ನವೇ ಗ್ಯಾಸ್ ಚೇಂಬರಾಗುವ ಭೀತಿಯಲ್ಲಿ ದೆಹಲಿ

  • ಇಷ್ಟಪಟ್ಟವನನ್ನು ಮದುವೆಯಾಗಿದ್ದಕ್ಕೆ ಕುಟುಂಬಸ್ಥರಿಂದ್ಲೇ ಯುವತಿಯ ಬರ್ಬರ ಹತ್ಯೆ

    ಇಷ್ಟಪಟ್ಟವನನ್ನು ಮದುವೆಯಾಗಿದ್ದಕ್ಕೆ ಕುಟುಂಬಸ್ಥರಿಂದ್ಲೇ ಯುವತಿಯ ಬರ್ಬರ ಹತ್ಯೆ

    ಜೈಪುರ: ರಾಜಸ್ಥಾನದ (Rajastan) ಝಲಾವರ್‌ನಲ್ಲಿ 24 ವರ್ಷದ ಯುವತಿಯೊಬ್ಬಳು ತಾನು ಇಷ್ಟಪಟ್ಟವನನ್ನು ಮದುವೆಯಾದ ಕಾರಣಕ್ಕೆ ಆಕೆಯ ಮನೆಯವರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

    ವಿವರಗಳ ಪ್ರಕಾರ, ಪತಿಯ ಮುಂದೆಯೇ ಯುವತಿಯನ್ನು ಆಕೆಯ ಕುಟುಂಬಸ್ಥರು ಅಪಹರಣ ಮಾಡಿದ್ದಾರೆ. ಬಳಿಕ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಅಲ್ಲದೇ ಆಕೆಯ ಮೃತದೇಹವನ್ನು ಸುಡಲಾಗಿದೆ.

    ಈ ಸಂಬಂಧ ಪೊಲೀಸರು ತನಿಖೆ ನಡೆಸಿದಾಗ ಯುವತಿ ತನ್ನ ಕುಟುಂಬದ ವಿರುದ್ಧವಾಗಿ ರವಿ ಭೀಲ್ ಎಂಬಾತನನ್ನು ಮದುವೆಯಾಗಿದ್ದಾಳೆ. ಅಲ್ಲದೇ ವಿಚಾರ ಗೊತ್ತಾಗಿ ಯುವತಿ ಕುಟುಂಬಸ್ಥರು ತಮ್ಮ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದು ದಂಪತಿ ಬೇರೆ ಕಡೆ ನೆಲೆಸಿದ್ದರು.

    ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ದಂಪತಿ ವಾಸವಾಗಿದ್ದು, ಬ್ಯಾಂಕ್‌ಗೆ ಭೇಟಿ ನೀಡುವ ಬಗ್ಗೆ ಖಚಿತ ಮಾಹಿತಿ ಪಡೆದ ಕುಟುಂಬದ ಸದಸ್ಯರು ಆಕೆಯನ್ನು ಅಲ್ಲಿಂದ ಅಪಹರಿಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದ್ರೆ 500ರೂ. ದಂಡ- ಬಿಬಿಎಂಪಿ ಆಯುಕ್ತ ಎಚ್ಚರಿಕೆ

    ಇತ್ತ ಪತ್ನಿ ಕಾಣೆಯಾಗಿರುವ ಕುರಿತು ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಈ ನಡುವೆ ಕುಟುಂಬಸ್ಥರು ಆಕೆಯ ದೇಹವನ್ನು ಸುಟ್ಟು ಹಾಕಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಮಹಿಳೆಯ ದೇಹ 80%ಕ್ಕೂ ಹೆಚ್ಚು ಸುಟ್ಟಿತ್ತು. ಇನ್ನು ಆಕೆಯ ಕುಟುಂಬ ಸದಸ್ಯರು ಸ್ಥಳದಿಂದ ಪರಾರಿಯಾಗಿದ್ದಾರೆ.

    ಸದ್ಯ ಮಹಿಳೆಯ ಸುಟ್ಟ ಅವಶೇಷಗಳನ್ನು ಹೆಚ್ಚಿನ ತನಿಖೆಗಾಗಿ ವಿಧಿವಿಜ್ಞಾನಕ್ಕೆ ಕಳುಹಿಸಲಾಗಿದೆ.

  • ಮಹಿಳೆ, ಯುವತಿಯ ಕೂದಲು ಎಳೆದಾಡಿ ಹಲ್ಲೆಗೈದ ಪುಂಡರು!

    ಮಹಿಳೆ, ಯುವತಿಯ ಕೂದಲು ಎಳೆದಾಡಿ ಹಲ್ಲೆಗೈದ ಪುಂಡರು!

    ಬೆಂಗಳೂರು: ಕುಡಿದ ನಶೆಯಲ್ಲಿ ಕ್ಲುಲ್ಲಕ ಕಾರಣಕ್ಕೆ ಮಹಿಳೆ ಮತ್ತ ಯುವತಿಯನ್ನು ಎಳೆದಾಡಿ ಪುಂಡರು ಹಲ್ಲೆ ನಡೆಸಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ತಲಗಟ್ಟಪುರ ಠಾಣಾ ವ್ಯಾಪ್ತಿಯ ಆವಲಹಳ್ಳಿಯಲ್ಲಿ ಭಾನುವಾರ ಸಂಜೆ 6 ಗಂಟೆ ವೇಳೆಗೆ ಘಟನೆ ನಡೆದಿದೆ. ಬಾಲಾಜಿ ಮತ್ತು ಯೋಗಿ ಮತ್ತು ಮೂವರ ಗ್ಯಾಂಗ್ ನಿಂದ ಈ ಕೃತ್ಯ ಎಸೆಯಲಾಗಿದೆ. ಇದನ್ನೂ ಓದಿ: ಇಂದು ಪ್ರಜ್ವಲ್ ರೇವಣ್ಣ ಎಸ್‍ಐಟಿ ಕಸ್ಟಡಿ ಅಂತ್ಯ

    ಮಹಿಳೆ ಮತ್ತು ಯುವತಿ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಬಳಿಕ ನೆರೆಹೊರೆಯವರ ಸಹಾಯದಿಂದ ಯುವತಿ ಮತ್ತು ಮಹಿಳೆ ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದಾರೆ.

    ರಸ್ತೆಯಲ್ಲಿ ಮಗ ಮಕ್ಕಳೊಂದಿಗೆ ಆಟವಾಡಿದ್ದನು. ಈ ವೇಳೆ ಮನೆ ಬಳಿ ಬಂದ ಗ್ಯಾಂಗ್ ನಿಂದಿಸಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಪುಂಡರು ಯುವತಿಯ ಕೂದಲು ಹಿಡಿದೆಳೆದು ಅಟ್ಟಾಡಿಸುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‍ಗಳಲ್ಲಿ ಸೆರೆಹಿಡಿದಿದ್ದಾರೆ.

    ಸದ್ಯ ಆರೋಪಿಗಳಾದ ಬಾಲಾಜಿ ಮತ್ತು ಯೋಗಿ ಇತರರ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಐಪಿಸಿ ಸೆಕ್ಷನ್ 506 (ಬೆದರಿಕೆ), 34, 504 (ಶಾಂತಿ ಕದಡುವ ಪ್ರಯತ್ನ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 354 (ಮಹಿಳೆಯ ಮೇಲೆ ದೌರ್ಜನ್ಯ) ಅಡಿ ಕೇಸ್ ದಾಖಲಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

  • ಲವ್‌ ಮಾಡಿ ಯುವತಿಯನ್ನು ಕರೆದೊಯ್ದನೆಂದು ಯುವಕನ ತಾಯಿಯನ್ನೇ ಕಂಬಕ್ಕೆ ಕಟ್ಟಿ ಥಳಿತ!

    ಲವ್‌ ಮಾಡಿ ಯುವತಿಯನ್ನು ಕರೆದೊಯ್ದನೆಂದು ಯುವಕನ ತಾಯಿಯನ್ನೇ ಕಂಬಕ್ಕೆ ಕಟ್ಟಿ ಥಳಿತ!

    ಹಾವೇರಿ: ಕೆಲವೊಮ್ಮೆ ಮಕ್ಕಳು ಮಾಡುವ ತಪ್ಪಿಗೆ ಹೆತ್ತವರು ಶಿಕ್ಷೆ ಅನುಭವಿಸುತ್ತಾರೆ. ಅಂತೆಯೇ ಹಾವೇರಿ (Haveri) ಜಿಲ್ಲೆಯಲ್ಲಿ ಇಂಥದ್ದೇ ಒಂದು ಘಟನೆ ನಡೆದಿದೆ.

    ಪ್ರೀತಿಸಿ ಬಳಿಕ ಯುವತಿಯನ್ನು ಕರೆದುಕೊಂಡು ಹೋದನೆಂದು ಸಿಟ್ಟಿಗೆದ್ದ ಯುವತಿ ಕಡೆಯವರು ಯುವಕನ ತಾಯಿಯನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಥಳಿಸಿದ್ದಾರೆ. ಈ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಈ ಘಟನೆ 4 ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    50 ವರ್ಷದ ಹನುಮವ್ವ ಮೆಡ್ಲೇರಿ ಹಲ್ಲೆಗೊಳಗಾದ ಮಹಿಳೆ. ಆರೋಪಿಗಳನ್ನು ಚಂದ್ರಪ್ಪ , ಗಂಗಪ್ಪ ಹಾಗೂ ಗುತ್ತೆವ್ವ ಎಂದು ಗುರುತಿಸಲಾಗಿದೆ. ಹನುಮವ್ವಳ ಮಗ ಯುವತಿಯನ್ನ ಕರೆದುಕೊಂಡು ಹೋಗಿದ್ದಾನೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಮಗ ಮಾಡಿದ ತಪ್ಪಿಗೆ ತಾಯಿಯನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿ ಕ್ರೌರ್ಯ ಮೆರೆದಿದ್ದಾರೆ.

    ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  • ಪ್ರೀತಿ ನಿರಾಕರಿಸಿದ ಗೆಳತಿಯನ್ನು ಕತ್ತುಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡ್ಕೊಂಡ!

    ಪ್ರೀತಿ ನಿರಾಕರಿಸಿದ ಗೆಳತಿಯನ್ನು ಕತ್ತುಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡ್ಕೊಂಡ!

    ಮುಂಬೈ: ಇಲ್ಲಿನ ತಲೋಜಾ ಜೈಲು (Taloja Central Jail) ಆವರಣದಲ್ಲಿ 19 ವರ್ಷದ ಯುವತಿಯ ಮೃತದೇಹವೊಂದು ಪತ್ತೆಯಾಗಿತ್ತು. ಇದು ಆ ಪ್ರದೇಶದ ಜನರಲ್ಲಿ ಆತಂಕ ಉಂಟುಮಾಡಿತ್ತು. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರ ತಂಡ ಧಾವಿಸಿ, ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿತ್ತು. ಬಳಿಕ ಈ ಪ್ರಕರಣದ ತನಿಖೆಯನ್ನು ಕೈಗೊಂಡ ಪೊಲೀಸರಿಗೆ ಆಘಾತಕಾರಿ ಮಾಹಿತಿಯೊಂದು ದೊರಕಿತ್ತು.

    ನವಿ ಮುಂಬೈನ (Mumbai) ಕಲಾಂಬೋಲಿ ಪ್ರದೇಶದ ನಿವಾಸಿ 19 ವರ್ಷದ ಯುವತಿ ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದಳು. ಆದರೆ ರಾತ್ರಿಯಾದರೂ ಆಕೆ ಮನೆಗೆ ವಾಪಸ್ಸಾಗಿರಲಿಲ್ಲ. ಹೀಗಾಗಿ ಮನೆಯವರು ಆತಂಕಗೊಂಡು ಬಳಿಕ ಪೊಲೀಸರಿಗೆ ದೂರು ನೀಡಿದ್ದರು. ಇತ್ತ ಇದೇ ದಿನ ರೈಲ್ವೇ ಪೊಲೀಸರ ಮೂಲಕ ಪೊಲೀಸರಿಗೆ ಆತ್ಮಹತ್ಯೆ ಪ್ರಕರಣವೊಂದರ ಮಾಹಿತಿ ಸಿಕ್ಕಿತ್ತು.

    ಪೊಲೀಸರು ಸ್ಥಳಕ್ಕಾಗಮಿಸಿದಾಗ ಯುವಕನ ಮೃತದೇಹದ ಬಳಿ ಫೋನ್‌ನಲ್ಲಿ ಡೆತ್‌ ನೋಟ್ ಪತ್ತೆಯಾಗಿದ್ದು, ಅದರಲ್ಲಿ ತನ್ನ ಗೆಳತಿಯನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದನು. ನಂತರ ಪೊಲೀಸರು ಆತ್ಮಹತ್ಯೆ ಪತ್ರದಲ್ಲಿ ಸಿಕ್ಕ ಸುಳಿವು ಆಧರಿಸಿ ಯುವತಿಯ ಶವಕ್ಕಾಗಿ ಹುಡುಕಾಟ ಆರಂಭಿಸಿದ್ದರು. ಪೊಲೀಸರು ಡ್ರೋನ್ ಸಹಾಯದಿಂದ ಹುಡುಕಿದಾಗ ಖಾರ್ಘರ್ ಅರಣ್ಯದಲ್ಲಿ ಯುವತಿ ಶವ ಪತ್ತೆಯಾಯಿತು ಎಂದು ನವಿ ಮುಂಬೈ ಡೆಪ್ಯುಟಿ ಕಮಿಷನರ್ ಅಮಿತ್ ಕಾಳೆ ಹೇಳಿದ್ದಾರೆ.

    ಇಬ್ಬರ ನಡುವಿನ ಜಗಳವೇ ಕಾರಣ: ವೈಷ್ಣವಿ ಮನೋಹರ್ ಬಾಬರ್ (19) ಮತ್ತು ವೈಭವ್ ಬುರುಗಲ್ಲೆ (24) ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಕೆಲ ದಿನಗಳಿಂದ ವೈಷ್ಣವಿಯು ಪ್ರಿಯಕರನಿಂದ ದೂರವಾಗಲು ಪ್ರಯತ್ನಿಸುವ ಮೂಲಕ ಪ್ರೀತಿ ಕೊನೆಗೊಳಿಸಲು ಬಯಸಿದ್ದಳು. ಈ ಕುರಿತು ಅವರಿಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಅಂತೆಯೇ ಜಗಳ ವಿಕೋಪಕ್ಕೆ ಹೋಗಿದ್ದು, ಪ್ರಿಯಕರನೇ ಯುವತಿಯ ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಕೋಪದಿಂದ ಆತನೂ ಪತ್ರ ಬರೆದು ಚಲಿಸುತ್ತಿದ್ದ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಸಾವಿಗೆ ಯಾರೂ ಕಾರಣವಲ್ಲ. ಅಲ್ಲದೇ ಗೆಳತಿಯ ಕೊಲೆಯಿಂದ ನೋವಾಗಿ ಈ ರೀತಿ ಮಾಡಿಕೊಂಡಿದ್ದೇನೆ ಎಂದು ಯುವಕ ಡೆತ್‌ನೋಟ್‌ನಲ್ಲಿ ತಿಳಿಸಿದ್ದಾನೆ.

  • ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನ

    ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನ

    ಬೆಂಗಳೂರು: ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಈ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇದೀಗ ಯುವಕನು ಯುವತಿಗೆ ಕೈ ಕೊಟ್ಟಿದ್ದಾನೆ.

    ಪ್ರಿಯಕರ ಕೈಕೊಟ್ಟಿದ್ದರಿಂದ ಬೇಸರಗೊಂಡ ಯುವತಿ ನೇರವಾಗಿ ಆತನ ಮನೆಗೆ ತೆರಳಿದ್ದಾಳೆ. ಅಲ್ಲದೆ ಮನೆಯ ಟೆರೇಸ್‍ಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾಳೆ. ಇದನ್ನೂ ಓದಿ: ಜಗತ್ತಿನಲ್ಲಿ ಒಬ್ಬನಿಂದ ರೇಪ್ ಮಾಡಲು ಸಾಧ್ಯವಿಲ್ಲ: ಅಮರೇಗೌಡ ವಿವಾದಿತ ಹೇಳಿಕೆ

    ಇತ್ತ ಯುವತಿ ಮನೆಗೆ ಬರುತ್ತಿದ್ದಂತೆಯೇ ಯುವಕ ಮನೆಯಿಂದ ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಕೈಯಲಿ ಚಾಕು ಹಿಡಿದು ಪ್ರಿಯಕರನ ಮನೆ ಟೆರೇಸ್ ಮೇಲೆ ಯುವತಿ ನಿಂತಿದ್ದಾಳೆ. ಅಲ್ಲದೇ ಈಗಲೇ ಪ್ರಿಯಕರನನ್ನು ಇಲ್ಲಿಗೆ ಕರೆಸಿ ಎಂದು ಬೇಡಿಕೆ ಇಟ್ಟಿದ್ದಾಳೆ.

  • ನನ್ನನ್ನು ಸಾಯಿಸ್ಬೇಡಿ- ಬೇಡಿಕೊಂಡ್ರೂ ಬಿಡದೆ ಯುವತಿ ಅಪಹರಿಸಿದ ಹಮಾಸ್ ಉಗ್ರರು

    ನನ್ನನ್ನು ಸಾಯಿಸ್ಬೇಡಿ- ಬೇಡಿಕೊಂಡ್ರೂ ಬಿಡದೆ ಯುವತಿ ಅಪಹರಿಸಿದ ಹಮಾಸ್ ಉಗ್ರರು

    ನವದೆಹಲಿ: ಹಮಾಸ್ ಉಗ್ರರು (Hamas Terrorist) ಇಸ್ರೇಲ್‍ನಲ್ಲಿ ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ಯುವತಿಯೊಬ್ಬಳನ್ನು ಅಪಹರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ವೀಡಿಯೋದಲ್ಲಿ ಯುವತಿ ನನ್ನನ್ನು ಕೊಲ್ಲಬೇಡಿ ಎಂದು ಅಳುತ್ತಾ ಕೂಗುತ್ತಿರುವ ದೃಶ್ಯ ಮನಕಲಕುವಂತಿದೆ. ಈ ವೀಡಿಯೋವನ್ನು ಹೆನ್ಸ್ ಮಜೀಗ್ ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಅವನು ನಿಮ್ಮ ಮಗಳು, ಸಹೋದರಿ, ಗೆಳತಿಯೂ ಆಗಿರಬಹುದು ಎಂದು ಬರೆದುಕೊಂಡಿದ್ದಾರೆ.

    ವೀಡಿಯೋದಲ್ಲೇನಿದೆ..?: ಹಮಾಸ್ ಉಗ್ರರು ಯುವತಿಯನ್ನು ಅಪಹರಿಸಿ ಬೈಕಿನಲ್ಲಿ ಮಧ್ಯದಲ್ಲಿ ಕೂರಿಸಿಕೊಂಡು ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ. ಈ ವೇಳೆ ಯುವತಿ ನನ್ನನ್ನು ಕೊಲೆ ಮಾಡಬೇಡಿ, ನನ್ನನ್ನು ಕಾಪಾಡಿ ಎಂದು ಪರಿಪರಿಯಾಗಿ ಬೇಡಿಕೊಳ್ಳುವ ದೃಶ್ಯವನ್ನು ಕೂಡ ನಾವು ಕಾಣಬಹುದಾಗಿದೆ. ಇದನ್ನೂ ಓದಿ: ಹಮಾಸ್ ಉಗ್ರರಿಂದ ಮಗಳ ಬೆತ್ತಲೆ ಮೆರವಣಿಗೆ- ಸಾರ್ವಜನಿಕರಲ್ಲಿ ತಾಯಿ ಮನವಿ

    ಇಸ್ರೇಲ್‍ನಲ್ಲಿ ಫೀಸ್ ಮ್ಯೂಸಿಕ್ ಹಬ್ಬ ನಡೆಯುತ್ತಿತ್ತು. ಈ ಹಬ್ಬದಲ್ಲಿ ಯುವತಿ ನೋವಾ ಭಾಗಿಯಾಗಿದ್ದಳು. ಅಲ್ಲಿಂದ ಹಮಾಸ್ ಉಗ್ರರು ಆಕೆಯನ್ನು ಕಿಡ್ನಾಪ್ ಮಾಡಿ ಇಸ್ರೇಲ್‍ನಿಂದ ಗಾಜಾಕ್ಕೆ ಎಳೆದುಕೊಂಡು ಹೋಗಿ, ಒತ್ತೆಯಾಳಾಗಿರಿಸಿಕೊಂಡಿದ್ದಾರೆ. ವೀಡಿಯೋ ನೋಡಿದ ಅನೇಕರು, ಇವರಿಗೆ ನೈತಿಕತೆಯೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಸ್ರೇಲ್‍ಗಾಗಿ ಪ್ರಾರ್ಥಿಸುವಂತೆ ಅನೇಕರು ಮನವಿ ಮಾಡಿದ್ದಾರೆ. ಮಹಿಳೆ ಮಕ್ಕಳ ಮೇಲೆ ಈ ರೀತಿಯ ವರ್ತನೆ ಸರಿಯಲ್ಲ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 4 ವರ್ಷ ಪ್ರೀತಿಸಿ ಕೈಕೊಟ್ಟ ಪ್ರಿಯಕರ- ಇಲಿ ಪಾಷಾಣ ತಿಂದು ಆಸ್ಪತ್ರೆ ಸೇರಿದ್ದ ಯುವತಿ ಸಾವು

    4 ವರ್ಷ ಪ್ರೀತಿಸಿ ಕೈಕೊಟ್ಟ ಪ್ರಿಯಕರ- ಇಲಿ ಪಾಷಾಣ ತಿಂದು ಆಸ್ಪತ್ರೆ ಸೇರಿದ್ದ ಯುವತಿ ಸಾವು

    ಮೈಸೂರು: ಪ್ರೀತಿಸಿದ ಹುಡುಗ ಮತ್ತೊಬ್ಬಳ ಹಿಂದೆ ಸುತ್ತಾಡಿದ ಹಿನ್ನೆಲೆಯಲ್ಲಿ ಯುವತಿ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

    ಮೈಸೂರು ಜಿಲ್ಲೆ ಕೆ.ಆರ್ ನಗರ (KR Nagar) ತಾಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ನಿಸರ್ಗ(20) ಎಂದು ಗುರುತಿಸಲಾಗಿದೆ. ಈಕೆ ಇಲಿ ಪಾಷಾಣ ತಿಂದು ಆಸ್ಪತ್ರೆ ಸೇರಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಬಸ್‍ನಲ್ಲಿ ಪ್ರಯಾಣಿಸುತ್ತಿದ್ದವನಿಗೆ ಬಡಿದ ಮರದ ಕೊಂಬೆ- ವ್ಯಕ್ತಿ ದಾರುಣ ಸಾವು

    ಏನಿದು ಪ್ರಕರಣ?: ನಿಸರ್ಗ ಅಂತಿಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಈಕೆ ಅದೇ ಕಾಲೇಜಿನಲ್ಲಿ ಓದುತ್ತಿರುವ ಸುಹಾಸ್ ರೆಡ್ಡಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ನಾಲ್ಕು ವರ್ಷಗಳ ಕಾಲ ಈ ಜೋಡಿ ಊರೂರು ಸುತ್ತಾಡಿದೆ. ನಂತರ ಸುಹಾಸ್ ಗೆ ಅನನ್ಯಾ ಎಂಬ ಮತ್ತೊಬ್ಬಳ ಜೊತೆ ಲವ್ ಆಗಿದೆ. ಈ ವಿಚಾರ ತಿಳಿದಾಗಿನಿಂದ ನಿಸರ್ಗ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು.

    ಕೈ ಕೊಯ್ದುಕೊಂಡು ಸಾಮಾಜಿಕ ಜಾಲಾತಾಣದಲ್ಲಿ ಫೋಟೋ ಹಾಕಿದ್ದಳು. ಪ್ರೀತಿ ವಿಚಾರವನ್ನ ಅನನ್ಯಾಳ ಪೋಷಕರಿಗೆ ನಿರ್ಸಗ ತಿಳಿಸಿದ್ದಾಳೆ. ಅನನ್ಯಾ ಪೋಷಕರು ಕೆಟ್ಟದಾಗಿ ನಿಂದಿಸಿ ಸಾಯುವಂತೆ ಪ್ರೇರಣೆ ಕೊಟ್ಟಿದ್ದಾರೆ ಎಂದು ಡೆತ್‍ನೋಟ್ ಬರೆದಿಟ್ಟು ಬ್ಯಾಗ್‍ನಲಿಟ್ಟುಕೊಂಡು ನಿಸರ್ಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಕೆ.ಆರ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಸುಹಾಸ್ ರೆಡ್ಡಿ, ಅನನ್ಯಾ ಪೋಷಕರ ಸೇರಿದಂತೆ ಐವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ನಿಸರ್ಗ ಆತ್ಮಹತ್ಯೆಗೆ ಯತ್ನಿಸುತ್ತಿದ್ದಂತೆ ಸುಹಾಸ್ ರೆಡ್ಡಿ ಎಸ್ಕೇಪ್ ಆಗಿದ್ದಾನೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅವೈಡ್ ಮಾಡ್ತಿದ್ದ ಲವ್ವರ್ ಮನೆಗೆ ಹೋಗಿ ಗಲಾಟೆ ಮಾಡಿ ಚಾಕು ಹಾಕಿದ್ಳು!

    ಅವೈಡ್ ಮಾಡ್ತಿದ್ದ ಲವ್ವರ್ ಮನೆಗೆ ಹೋಗಿ ಗಲಾಟೆ ಮಾಡಿ ಚಾಕು ಹಾಕಿದ್ಳು!

    ಬೆಂಗಳೂರು: ತಾನು ಪ್ರೀತಿಸುತ್ತಿದ್ದ ಯುವಕನಿಗೇ ಯುವತಿಯೊಬ್ಬಳು ಚಾಕುವಿನಿಂದ ಇರಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಈ ಘಟನೆ ಬೆಂಗಳೂರಿನ ವಿವೇಕನಗರದಲ್ಲಿ (Vivekanagar) ನಡೆದಿದೆ. ಜಂಟಿ ದಾಸ್ ಚಾಕು ಇರಿತಕ್ಕೆ ಒಳಗಾದ ಪ್ರಿಯಕರನಾಗಿದ್ದು, ಬರೂತಿ ಈ ಕೃತ್ಯ ಎಸಗಿದ್ದಾಳೆ. ಇದನ್ನೂ ಓದಿ: ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ರಕ್ಷಣೆ- ಟ್ರಾಫಿಕ್ ಕಾನ್ಸ್‌ಸ್ಟೇಬಲ್ ಕಾರ್ಯಕ್ಕೆ ಮೆಚ್ಚುಗೆ

    ದಾಸ್ ಹಾಗೂ ಬರೂತಿ ಕೆಲ ಸಮಯಗಳಿಂದ ಪರಸ್ಪರ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ದಾಸ್, ಪ್ರೇಯಸಿ ಬರೂತಿಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದನು. ಪ್ರಿಯಕರನ ವರ್ತನೆ ನೋಡಿ ರೊಚ್ಚಿಗೆದ್ದ ಬರೂತಿ, ದಾಸ್ ಮನೆಯಲ್ಲಿ ಗಲಾಟೆ ಮಾಡಿ ಚಾಕುವಿನಿಂದ ಇರಿದಿದ್ದಾಳೆ.

    ಘಟನೆಯಲ್ಲಿ ಪ್ರಿಯಕರ ಜಂಟಿ ದಾಸ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇತ್ತ ಯುವತಿ ಬರೂತಿಯನ್ನು ವಿವೇಕನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Mango Season: ಊಟದ ಬಳಿಕ ಮಾವು ತಿಂದು ಯುವತಿ ದುರ್ಮರಣ!

    Mango Season: ಊಟದ ಬಳಿಕ ಮಾವು ತಿಂದು ಯುವತಿ ದುರ್ಮರಣ!

    ಭೋಪಾಲ್: 23 ವರ್ಷದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಇಂದೋರ್ (Indore Madhyapradesh) ನಲ್ಲಿ ನಡೆದಿದೆ.

    ಯುವತಿಯನ್ನು ಅರ್ಚನಾ ಅಲೇರಿಯಾ ಎಂದು ಗುರುತಿಸಲಾಗಿದೆ. ಈಕೆ ಇಂದೋರ್ ನಗರದ ಬಿಜ್‍ಪುರ್ ಪ್ರದೇಶದ ನಿವಾಸಿ. ಇದನ್ನೂ ಓದಿ: ಮಹಿಳೆಯ ದೇಹವನ್ನು ಕತ್ತರಿಸಿ ಎರಡು ಬ್ಯಾಗ್‍ನಲ್ಲಿ ಎಸೆದ್ರು

    ಮಾವು (Mango) ತಿಂದ ಬಳಿ ಅರ್ಚನಾ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಜುಲೈ 8ರಂದು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸೋಮವಾರ ರಾತ್ರಿ ಚಿಕಿತ್ಸೆ ಫಲಿಸದೇ ಅರ್ಚನಾ ಇಹಲೋಕ ತ್ಯಜಿಸಿದ್ದಾಳೆ. ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಈ ಸಂಬಂಧ ಅರ್ಚನಾ ಮಾವ ಬನ್ಸಿಲಾಲ್ ಅಲೇರಿಯಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಮಧ್ಯಾಹ್ನ ಊಟವಾದ ಬಳಿಕ ಅರ್ಚನಾ ಮಾವು ತಿಂದಿದ್ದಾಳೆ. ಇದಾದ ಬಳಿಕ ಆಕೆಯ ಆರೋಗ್ಯದಲ್ಲಿ ವ್ಯತ್ಯಾಸವುಂಟಾಗಿದೆ. ಕೂಡಲೇ ನಾವು ಆಕೆಯನ್ನು ಸ್ಥಳೀಯ ಕ್ಲಿನಿಕ್ ಗೆ ಕರೆದುಕೊಂಡು ಹೋಗಿದ್ದೆವು. ಆದರೆ ಅಲ್ಲಿ ಪರೀಕ್ಷೆ ಮಾಡಿದ ವೈದ್ಯರು ಕೆಲವೊಂದಷ್ಟು ಮಾತ್ರೆಗಳನ್ನು ಬರೆದುಕೊಟ್ಟರು.

    ಅಂತೆಯೇ ಮಾತ್ರೆಗಳನ್ನು ತೆಗೆದುಕೊಂಡು ಮನೆಗೆ ವಾಪಸ್ ಬಂದೆವು. ಆದರೆ ಆಕೆಗೆ ಮತ್ತೆ ತಲೆತಿರುಗುವಿಕೆ ಆರಂಭವಾಯಿತು. ಬಳಿಕ ಆಸ್ಪತ್ರೆಗೆ ದಾಖಲಿಸಿದೆವು. ಆದರೆ ಚಿಕಿತ್ಸೆ ಫಲಿಸದೇ ಆಕೆ ಸೋಮವಾರ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ.

    ಆಕೆ ವಿಷಕಾರಿ ಮಾವು ತಿಂದ ಪರಿಣಾಮವೇ ಮೃತಪಟ್ಟಿರುವುದಾಗಿ ಅರ್ಚನಾ ಕುಟುಂಬಸ್ಥರು ಆರೋಪಿಸಿದ್ದಾರೆ. ಒಟ್ಟಿನಲ್ಲಿ ಮರೋತ್ತರ ಪರೀಕ್ಷೆಯ ಬಳಿಕವಷ್ಟೇ ಅರ್ಚನಾ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಈ ಮಧ್ಯೆ ಅರ್ಚನಾ ಕುಟುಂಬಸ್ಥರ ಹೇಳಿಕೆಗಳನ್ನು ಕೂಡ ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ರಾಜೇಂದ್ರ ನಗರ ಪೊಲೀಸ್ ಠಾಣೆಯ ಎಎಸ್‍ಐ ರಾಜೇಂದ್ರ ಸಿಂಗ್ ಚೌಹಾಣ್ ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]