Tag: young man

  • ರಾಜ್ಯೋತ್ಸವಕ್ಕೆ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು

    ರಾಜ್ಯೋತ್ಸವಕ್ಕೆ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು

    ಬೆಳಗಾವಿ: ಕನ್ನಡ ರಾಜ್ಯೋತ್ಸವ (Kannada Rajyotsava) ಹಿನ್ನೆಲೆ ಧ್ವಜಸ್ತಂಭ (Flagpole) ನಿಲ್ಲಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ (Electric Shock) ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ (Bailahongala) ತಾಲೂಕಿನಲ್ಲಿ ನಡೆದಿದೆ.

    ತಾಲೂಕಿನ ವಕ್ಕುಂದ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಪ್ರಜ್ವಲ್ ಚನ್ನಗೌಡ ಮುನೇಪ್ಪನವರ (18) ಮೃತಪಟ್ಟ ಯುವಕ. ಗ್ರಾಮದ ಬಸ್ ನಿಲ್ದಾಣದ ಮುಂದೆ ಧ್ವಜಸ್ತಂಭ ನಿಲ್ಲಿಸಲು ತಯಾರಿ ನಡೆಸುತ್ತಿದ್ದಾಗ ಸರ್ವಿಸ್ ತಂತಿ ತಾಗಿದ್ದರಿಂದ ವಿದ್ಯುತ್ ಪ್ರವಹಿಸಿ ಪ್ರಜ್ವಲ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಬೈಕ್ ರಿಪೇರಿ ಹಣ ಕೊಡದೆ ಸತಾಯಿಸಿದ್ದಕ್ಕೆ ವ್ಯಕ್ತಿ ಹತ್ಯೆ- ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್

    ವಿದ್ಯುತ್ ಶಾಕ್ ತಗುಲಿದ ತಕ್ಷಣ ಸ್ಥಳೀಯರು ಯುವಕನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನೆ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕೆರೆಗೆ ಧುಮುಕಿದ ಕಾರು- ಓರ್ವ ಪಾರು, ಇಬ್ಬರು ನೀರುಪಾಲು

    ಮನೆ ಮಗನ ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದ್ದ ಒಬ್ಬ ಮಗನನ್ನು ಚೆನ್ನಾಗಿ ಓದಿಸಿ, ನೂರಾರು ಕನಸು ಕಟ್ಟಿಕೊಂಡಿದ್ದ ತಂದೆ-ತಾಯಿಗೆ ಈಗ ದಿಕ್ಕೇ ತೋಚದಾಗಿದೆ. ಅಗ್ನಿವೀರ್ ಪರೀಕ್ಷೆ ಪಾಸ್ ಆಗಿದ್ದ ಯುವಕ ಪ್ರಜ್ವಲ್, ದೈಹಿಕ ಪರೀಕ್ಷೆಗೆ ತಯಾರಾಗುತ್ತಿದ್ದ. ಅಷ್ಟರೊಳಗೆ ಈ ರೀತಿ ದುರಂತ ಸಂಭವಿಸಿರೋದು ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.

    ಮರಣೋತ್ತರ ಪರೀಕ್ಷೆಗಾಗಿ ಯುವಕನ ಮೃತದೇಹ ಬೈಲಹೊಂಗಲ ತಾಲ್ಲೂಕಾಸ್ಪತ್ರೆಯ ಶವಾಗಾರದಲ್ಲಿದ್ದು, ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುವಕ ನಾಪತ್ತೆ ಪ್ರಕರಣ – ರಾತ್ರಿಯಿಡೀ ಹುಡುಕಿದ ಸ್ನೇಹಿತರು; ಮನೆಯಲ್ಲಿ ಆರಾಮವಾಗಿ ಮಲಗಿದ್ದ ದೀಕ್ಷಿತ್!

    ಯುವಕ ನಾಪತ್ತೆ ಪ್ರಕರಣ – ರಾತ್ರಿಯಿಡೀ ಹುಡುಕಿದ ಸ್ನೇಹಿತರು; ಮನೆಯಲ್ಲಿ ಆರಾಮವಾಗಿ ಮಲಗಿದ್ದ ದೀಕ್ಷಿತ್!

    ಚಿಕ್ಕಮಗಳೂರು: ದೇವರಮನೆಗೆ (Devaramane) ಪ್ರವಾಸಕ್ಕೆ ಹೋಗಿದ್ದ ಯುವಕ ಕಣ್ಮರೆಯಾಗಿದ್ದ (Missing) ಪ್ರಕರಣ ಸುಖಾಂತ್ಯ ಕಂಡಿದೆ. ನಾಪತ್ತೆ ಎಂದುಕೊಂಡು ಯುವಕನ ಸ್ನೇಹಿತರು ಇಡೀ ರಾತ್ರಿ ಪೊಲೀಸರೊಂದಿಗೆ ಸೇರಿ ಹುಡುಕುತ್ತಿದ್ದರೆ ಆತ ಮಾತ್ರ ಆರಾಮವಾಗಿ ಮನೆಗೆ ಹೋಗಿ ಮಲಗಿದ್ದ.

    ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ (Belthangadi) ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ನಾಲ್ವರು ಸ್ನೇಹಿತರ ಜೊತೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆ ಗುಡ್ಡಕ್ಕೆ ಆಗಮಿಸಿದ್ದರು. ಈ ವೇಳೆ ಸ್ನೇಹಿತರ ಜೊತೆ ಜಗಳ ಮಾಡಿಕೊಂಡು ಹೋದ ದೀಕ್ಷಿತ್ ಗುಡ್ಡದ ಬಳಿ ನಾಪತ್ತೆಯಾಗಿದ್ದ.

     

    ನಾಲ್ವರು ಯುವಕರು ದೇವರಮನೆ ಬಳಿಯ ದೇವಸ್ಥಾನದ ಬಳಿ ಕಾರು ನಿಲ್ಲಿಸಿ ಟ್ರಕ್ಕಿಂಗ್ ಹೋಗಿದ್ದರು. ಆದರೆ ಈ ವೇಳೆ ಸ್ನೇಹಿತರ ಮಧ್ಯೆ ಮಾತಿನ ಚಕಮಕಿ ನಡೆದು ಜಗಳವಾಡಿದ್ದಾರೆ. ಸ್ನೇಹಿತರು ಕಾರಿನಲ್ಲಿ ಬಾ ಅಂತ ಕರೆದರೂ ಬಾರದ ದೀಕ್ಷಿತ್ ನಡೆದೇ ಹೋಗಿದ್ದಾನೆ. ಆದರೆ ಆತ ಎಲ್ಲಿಗೆ ಹೋಗಿದ್ದಾನೆ ಎಂದು ಗೊತ್ತಿಲ್ಲ. ಇದನ್ನೂ ಓದಿ: ದೇವರಮನೆ ಪ್ರವಾಸ ಮುಗಿಸಿ ವಾಪಸ್ ಬರುತ್ತಿದ್ದಾಗ ಯುವಕ ಕಣ್ಮರೆ

    ನಂತರ ಆತನ ಸ್ನೇಹಿತರು ದೇವರಮನೆ ಗುಡ್ಡ ಪ್ರದೇಶದಲ್ಲಿ ಹುಡುಕಾಡಿದ್ದಾರೆ. ಆದರೆ ಆತನ ಸುಳಿವು ಪತ್ತೆಯಾಗಿಲ್ಲ. ದೇವರಮನೆ ಗುಡ್ಡ ಎಂದರೆ ಅದು ದಟ್ಟ ಕಾನನ. ಕಣ್ಣಿನ ದೃಷ್ಟಿ ಮುಗಿದರೂ ಮುಗಿಯದ ಕಾಡಿನ ಸೌಂದರ್ಯ. 9 ಬೃಹತ್ ಗುಡ್ಡಗಳ ಈ ಪ್ರವಾಸಿ ತಾಣವನ್ನು ನವಗ್ರಹ ಗುಡ್ಡ ಎಂದು ಕರೆಯುತ್ತಾರೆ. ಭಾರತೀಯ ಸೇನೆಯಿಂದ ಟ್ರಕ್ಕಿಂಗ್‌ಗೆ ಉತ್ತಮ ತಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರೋ ದೇವರಮನೆ ಗುಡ್ಡದಲ್ಲಿ ನಾಪತ್ತೆಯಾದರೆ ಹುಡುಕೋದು ಕಷ್ಟಸಾಧ್ಯ. ಹೀಗಾಗಿ ದೀಕ್ಷಿತ್ ಎಲ್ಲಿಗೆ ಹೋಗಿದ್ದಾನೆ ಎಂದು ಯಾರಿಗೂ ತಿಳಿದು ಬಂದಿಲ್ಲ.

    ಸ್ನೇಹಿತರು, ಸ್ಥಳೀಯರು ಹಾಗೂ ಪೊಲೀಸರು ಕೂಡಾ ದೀಕ್ಷಿತ್‌ಗಾಗಿ ಹುಡುಕಾಡಿದ್ದಾರೆ. ಆದರೆ ಆತನ ಸುಳಿವು ಸಿಕ್ಕಿಲ್ಲ. ಪೊಲೀಸರು ಮಧ್ಯರಾತ್ರಿ 2 ಗಂಟೆಯವರೆಗೆ ಹುಡುಕಾಡಿದ್ದಾರೆ. ಇಂದು ಬೆಳಗ್ಗೆ ಮತ್ತೆ ಹುಡುಕಾಡಿದ್ದಾರೆ. ಆದರೆ ಚಾರ್ಮಾಡಿ ಘಾಟಿಯ ತಪ್ಪಲು, ಬೃಹತ್ ಕಾಡು, ಮುಗಿಲೆತ್ತರದ ಬೆಟ್ಟಗುಡ್ಡಗಳ ಪ್ರದೇಶದಲ್ಲಿ ಮಂಜು ಇದ್ದ ಕಾರಣ ಕಾರ್ಯಾಚರಣೆಗೂ ತೊಂದರೆಯಾಗಿದೆ. ಆದರೂ ಪೊಲೀಸರು ಹುಡುಕಾಟವನ್ನು ಕೈಬಿಟ್ಟಿಲ್ಲ. ಇದನ್ನೂ ಓದಿ: ಡಿಕೆಶಿ ಕಾಲಿಗೆ ಬಿದ್ದ ಶಾಸಕ ಮುನಿರತ್ನ

    ಇತ್ತ ದೀಕ್ಷಿತ್ ಸ್ನೇಹಿತರ ಜೊತೆ ಜಗಳವಾಡಿದ ಬೇಜಾರಿನಲ್ಲಿ ಕುಡಿದು ಊರಿಗೆ ಹೋಗಿದ್ದಾನೆ. ಮನೆಗೆ ಹೋದರೆ ಬೈಯ್ಯುತ್ತಾರೆಂದು ಮನೆಯಿಂದ ಸ್ವಲ್ಪ ದೂರದಲ್ಲಿ ಮೋರಿಯಲ್ಲಿ (ಚರಂಡಿ) ಮಲಗಿದ್ದ ಎಂದು ತಿಳಿದುಬಂದಿದೆ. ಸ್ಥಳೀಯರು ಆತನನ್ನು ಮನೆಗೆ ಕಳುಹಿಸಿದ್ದಾರೆ. ಸದ್ಯ ದೀಕ್ಷಿತ್ ಸೇಫ್ ಆಗಿ ಮನೆ ತಲುಪಿರುವುದು ತಿಳಿದು ಸ್ನೇಹಿತರು ನಿಟ್ಟುಸಿರು ಬಿಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಯಂಗ್ ಮ್ಯಾನ್’ ಇದು ಸಿಂಗಲ್ ಟೇಕ್ ಸಿನಿಮಾ

    ‘ಯಂಗ್ ಮ್ಯಾನ್’ ಇದು ಸಿಂಗಲ್ ಟೇಕ್ ಸಿನಿಮಾ

    ನ್ನಡ ಚಿತ್ರರಂಗದಲ್ಲಿ ಹೊಸಪ್ರಯತ್ನಗಳು ನಡೆಯುತ್ತಿರುತ್ತದೆ. ಹೊಸತಂಡದಿಂದ 2 ಗಂಟೆ 38 ನಿಮಿಷಗಳ ಅವಧಿಯ ‘ಯಂಗ್ ಮ್ಯಾನ್’ (Young man) ಎಂಬ ಚಿತ್ರ ನಿರ್ಮಾಣವಾಗಿದೆ. ಸಿಂಗಲ್ ಟೇಕ್ ನಲ್ಲಿ ಚಿತ್ರೀಕರಣವಾಗಿರುವುದು ಈ ಚಿತ್ರದ ವಿಶೇಷ.  ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ನಾನು ಈ ಹಿಂದೆ ಕೆಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಇದು ಮೊದಲ ನಿರ್ದೇಶನದ ಸಿನಿಮಾ. ಚೊಚ್ಚಲ ನಿರ್ದೇಶನದಲ್ಲೇ ಏನಾದರೂ ವಿಶೇಷತೆ ಇರಬೇಕೆಂಬ ಹಂಬಲದಿಂದ ಈ ಚಿತ್ರವನ್ನು ಸಿಂಗಲ್ ಟೇಕ್ ನಲ್ಲಿ ಮಾಡಿ ಮುಗಿಸಿದ್ದೇನೆ. ಈ ಹಿಂದೆ ಶಂಕರ್ ನಾಗ್, ಎಸ್ ನಾರಾಯಣ್ ಮುಂತಾದವರು ಈ ಪ್ರಯತ್ನ ಮಾಡಿದ್ದಾರೆ. ಆ ಸಿನಿಮಾಗಳ ಸ್ಪೂರ್ತಿಯಿಂದ ನಾನು ಈ ಪ್ರಯತ್ನವನ್ನು ಮಾಡಿದ್ದೇನೆ. ಸುಮಾರು ಮೂರು ತಿಂಗಳು ಪೂರ್ವ ತಯಾರಿ ಮಾಡಿಕೊಂಡಿದ್ದೇನೆ. ನಮ್ಮ ಸಿನಿಮಾದಲ್ಲಿ ಬಹುತೇಕ ಹೊಸ ಕಲಾವಿದರೆ ನಟಿಸಿರುವ ಕಾರಣ ಅವರಿಗೆಲ್ಲಾ ತರಭೇತಿ ನೀಡಿ ಆನಂತರ ಚಿತ್ರೀಕರಣ ಮಾಡಿದ್ದೇನೆ. ನಮ್ಮ ಚಿತ್ರದಲ್ಲಿ ದೇಶಪ್ರೇಮವನ್ನು ಆಧರಿಸಿದ ಕಥೆಯಿದೆ. ಯಾರು ಊಹಿಸಲಾಗದ್ದ ಕ್ಲೈಮ್ಯಾಕ್ಸ್ ಸಹ ಇದೆ. ನನ್ನ ಈ ಕನಸ್ಸನ್ನು ನನಸು ಮಾಡಿದ ನನ್ನ ತಾಯಿ ತಂದೆ ವಿಜಯಲಕ್ಷ್ಮಿ – ರಾಮೇಗೌಡ, ಹರೀಶ್ ಹೆಚ್ ಎಸ್ ಹಾಗೂ ಕ್ರಿಯೇಟಿವ್ ಹೆಡ್ ಮುರಳಿ ಎಸ್ ವೈ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ (Muthuraj) ಮುತ್ತುರಾಜ್.

    ಸಿಂಗಲ್ ಟೇಕ್ ನಲ್ಲಿ ಚಿತ್ರ ಮಾಡುವುದು ಸುಲಭದ ಮಾತಲ್ಲ ಎಂದು ಮಾತನಾಡಿದ ಛಾಯಾಗ್ರಾಹಕ ವೀನಸ್ ನಾಗರಾಜ್ ಮೂರ್ತಿ, ನಾವು ಅಂದುಕೊಂಡ ಹಾಗೆ ಚಿತ್ರೀಕರಣ ಮಾಡಲು ಸಹಕಾರ ನೀಡಿದ ಕಲಾವಿದರಿಗೆ ಧನ್ಯವಾದ ಹೇಳಬೇಕು. ಅವರ ಸಹಕಾರವಿಲ್ಲದಿದ್ದರೆ ಸಿಂಗಲ್ ಟೇಕ್ ನಲ್ಲಿ ಚಿತ್ರೀಕರಣ ಮಾಡಲಾಗುತ್ತಿರಲಿಲ್ಲ. ಕನಕಪುರದ ಬಳಿಯ ಮನೆಯೊಂದರಲ್ಲಿ ವಿಶೇಷ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದಾಗಿ ಹೇಳಿದರು. ಚಿತ್ರವನ್ನು ಲಿಮ್ಕಾ ದಾಖಲೆಗೆ ಹಾಗೂ ಕೆಲವು ಚಿತ್ರೋತ್ಸವಗಳಿಗೆ ಕಳುಹಿಸುತ್ತಿರುವುದಾಗಿ ಕ್ರಿಯೇಟಿವ್ ಹಡ್ ಮುರಳಿ ತಿಳಿಸಿದರು. ನಿರ್ಮಾಪಕರಾದ ವಿಜಯಲಕ್ಷ್ಮಿ ರಾಮೇಗೌಡ, ಹರೀಶ್ ಹೆಚ್ ಎಸ್ ಹಾಗೂ ಕಲಾವಿದರಾದ ಸುನೀಲ್ ಗೌಡ, ನಯನ ಪುಟ್ಟಸ್ವಾಮಿ, ಹರೀಶ್ ಆಚಾರ್ಯ, ಆನಂದ್ ಕೆಂಗೇರಿ, ರಾಶಿಕ ಪುಟ್ಟಸ್ವಾಮಿ, ತನುಜಾ, ಶೃತಿ ಗೌಡ ಮುಂತಾದವರು “ಯಂಗ್ ಮ್ಯಾನ್” ಚಿತ್ರದ ಕುರಿತು ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುಡಿತ ಮತ್ತಿನಲ್ಲಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡು ಯುವಕ ಸಾವು

    ಕುಡಿತ ಮತ್ತಿನಲ್ಲಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡು ಯುವಕ ಸಾವು

    ಚಿಕ್ಕೋಡಿ (ಬೆಳಗಾವಿ): ಯುವಕನೊಬ್ಬ ಕುಡಿದ ಮತ್ತಿನಲ್ಲಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.

    ಮೃತ ಯುವಕನನ್ನು ಪರಶುರಾಮ ತೇಲಸಂಗ (32) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ನಿವಾಸಿಯಾಗಿದ್ದ ಪರಶುರಾಮ ತೇಲಸಂಗ, ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಗ್ರಾಮದ ಲಕ್ಷ್ಮೀ ದೇವಸ್ಥಾನದ ಬಳಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡಿದ್ದ. ಇದನ್ನೂ ಓದಿ: ಅನಾರೋಗ್ಯದಿಂದ ಮೃತಪಟ್ಟರೂ ಬಾರದ ವಿದೇಶದಲ್ಲಿರೋ ಮಕ್ಕಳು – ಅಂತ್ಯಕ್ರಿಯೆ ಮಾಡಿ ಮಾನವೀಯತೆ ಮೆರೆದ ಪೊಲೀಸರು

    ಕೂಡಲೇ ಸ್ಥಳೀಯರು ಆತನನ್ನು ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತೀವ್ರ ರಕ್ತಸ್ರಾವ ಉಂಟಾದ ಪರಿಣಾಮ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ.

    ಈ ಘಟನೆ ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜ್ವರವೆಂದು ವೈದ್ಯರು ಕೊಟ್ಟ ಇಂಜೆಕ್ಷನ್ ಯುವಕನ ಪ್ರಾಣವನ್ನೇ ಕಸಿಯಿತಾ?

    ಜ್ವರವೆಂದು ವೈದ್ಯರು ಕೊಟ್ಟ ಇಂಜೆಕ್ಷನ್ ಯುವಕನ ಪ್ರಾಣವನ್ನೇ ಕಸಿಯಿತಾ?

    ಬೆಂಗಳೂರು: ಜ್ವರ (Fever) ಎಂದು ಆಸ್ಪತ್ರೆಗೆ ದಾಖಲಾದ ಯುವಕನ ಪ್ರಾಣವೇ ಹೋದ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಮೃತನನ್ನು ಅಮರ್ ಶೆಟ್ಟಿ (31) ಎಂದು ಗುರುತಿಸಲಾಗಿದೆ. ಉಡುಪಿ (Udupi) ಮೂಲದ ಈತ ದುಬೈನಲ್ಲಿ 7 ವರ್ಷ ಕೆಲಸ ಮಾಡಿ, ಲೈಫ್ ಸೆಟಲ್ ಮಾಡಿಕೊಳ್ಳೋದಕ್ಕೆ ಅಂತಾ ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿಗೆ ಬಂದಿದ್ದ. ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ. ಆದರೆ ಈತನಿಗೆ ಕಳೆದ ವಾರ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಅಲ್ಲೇ ಪಕ್ಕದಲ್ಲಿದ್ದ ಮಾಗಡಿ ರಸ್ತೆಯಲ್ಲಿರುವ ಕ್ಲಿನಿಕ್‍ಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾನೆ.

    ಕ್ಲಿನಿಕ್‍ನ ವೈದ್ಯ ತಪಾಸಣೆ ನಡೆಸಿ ಜ್ವರಕ್ಕೆ ಇಂಜೆಕ್ಷನ್ ಕೊಟ್ಟಿದ್ದಾರೆ. ಆದರೆ ಅಮರ್‍ಗೆ ಇಂಜೆಕ್ಷನ್ ಕೊಟ್ಟ ಭಾಗದಲ್ಲಿ ನೋವು, ಊತ ಕಾಣಿಸಿಕೊಂಡಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಅಂತ ಕಿಮ್ಸ್ ಆಸ್ಪತ್ರೆಗೆ ಯುವಕ ದಾಖಲಾಗಿದ್ದಾನೆ. ಆದರೆ ಅಷ್ಟರಲ್ಲಿ ಯುವಕನ ಬಹು ಅಂಗಾಂಗಗಳಿಗೆ ಹಾನಿ ಆಗಿದೆ. ಕಿಮ್ಸ್ ಆಸ್ಪತ್ರೆ ವೈದ್ಯರ ಚಿಕಿತ್ಸೆಗೆ ಸ್ಪಂದಿಸಿದೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ- 7 ಸಾವು, 90 ಮಂದಿಗೆ ಗಾಯ

    ಯುವಕ ಅಮರ್ ಶೆಟ್ಟಿ ಸಾವಿಗೆ ಇಂಜೆಕ್ಷನ್ ಕೊಟ್ಟ ವೈದ್ಯರೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಕೆಪಿ ಅಗ್ರಹಾರ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಕಿಮ್ಸ್ ಶವಗಾರದ ಮುಂದೆ ಮೃತನ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿತ್ತು. ಇನ್ನು ಆರೋಪಿತ ವೈದ್ಯ ನನ್ನದೇನೂ ತಪ್ಪಿಲ್ಲ, ನನ್ನ ಕೆಲಸ ಮಾಡಿದ್ದೇನೆ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

    ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

    ಬೆಂಗಳೂರು: ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆ ಯುವಕ ಡೆತ್‌ನೋಟ್ (Death Note) ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ (Bengaluru) ಮಹಾಲಕ್ಷ್ಮಿ ಲೇಔಟ್‌ನ (Mahalakshmi Layout) ಎಸ್‌ಜೆ ನಗರದಲ್ಲಿ ನಡೆದಿದೆ.

    ನವೀನ್ ಆತ್ಮಹತ್ಯೆಗೆ ಶರಣಾದ ಭಗ್ನ ಪ್ರೇಮಿ. ಮೂಲತಃ ಚಾಮರಾಜನಗರ (Chamarajanagara) ನಿವಾಸಿಯಾದ ನವೀನ್ ಬದುಕು ರೂಪಿಸಿಕೊಳ್ಳುವ ಸಲುವಾಗಿ ಕುಟುಂಬದವರೇ ಬಾಳೆಕಾಯಿ ಮಂಡಿ ಹಾಕಿಕೊಟ್ಟಿದ್ದರು. ಈ ವೇಳೆ ನವೀನ್‌ಗೆ ಯುವತಿಯೊಬ್ಬಳು ಪರಿಚಯವಾಗಿ ಇಬ್ಬರ ಮಧ್ಯೆ ಪ್ರೀತಿ ಶುರುವಾಗಿದೆ. ಇಬ್ಬರೂ ಪರಸ್ಪರ ಕೈ ಕೈ ಹಿಡಿದುಕೊಂಡು ಸುತ್ತಾಡಿ ಮದುವೆಯ ಕನಸು ಕೂಡಾ ಕಂಡಿದ್ದರು. ಇದನ್ನೂ ಓದಿ: ಪತ್ನಿ, ಸೋದರಳಿಯನಿಗೆ ಗುಂಡು ಹಾರಿಸಿ ಆತ್ಮಹತ್ಯೆಗೆ ಶರಣಾದ ಎಸಿಪಿ

    ಈ ವಿಚಾರವನ್ನು ನವೀನ್ ತನ್ನ ಮನೆಯಲ್ಲೂ ತಿಳಿಸಿದ್ದ. ಆದರೆ ಯುವತಿ ಇತ್ತೀಚಿಗೆ ಪ್ರಿಯಕರ ನವೀನ್‌ನನ್ನು ನಿರ್ಲಕ್ಷಿಸಲು ಶುರುಮಾಡಿದ್ದಳು. ಇದರಿಂದ ನೊಂದ ನವೀನ್ ಯುವತಿಯನ್ನು ಮನವೊಲಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದ. ಆದರೆ ಯುವತಿ ಮಾತ್ರ ಡೋಂಟ್ ಕೇರ್ ಎನ್ನುವ ರೀತಿ ವರ್ತಿಸಲು ಶುರುಮಾಡಿದ್ದಳು. ಇದನ್ನೂ ಓದಿ: ಬೆಂಗ್ಳೂರಿನ ಬಾಡಿಗೆ ಮನೆಯಲ್ಲಿದ್ದುಕೊಂಡೇ ಡ್ರಗ್ಸ್ ಸಪ್ಲೈ ಮಾಡ್ತಿದ್ದ ನೈಜೀರಿಯನ್ ಪ್ರಜೆ ಅರೆಸ್ಟ್!
    ಈ ಮಧ್ಯೆ ಯುವತಿ ಮತ್ತೊಬ್ಬ ಹುಡುಗನ ಜೊತೆಗೆ ಓಡಾಡುತ್ತಿದ್ದಾಳೆ ಎನ್ನುವ ವಿಚಾರ ತಿಳಿದ ನವೀನ್ ಮತ್ತಷ್ಟು ಕೋಪಗೊಂಡಿದ್ದ. ಮದುವೆ ಆಗುವುದಾಗಿ ಹೇಳಿ ಮೋಸ ಮಾಡಿದ್ದಾಳೆ ಎಂದು ಯುವತಿಯ ಕಡೆಯವರಿಗೂ ರಾಜಿ ಸಂಧಾನಕ್ಕೆ ಒತ್ತಾಯಿಸಿದ್ದ. ಈ ಬಗ್ಗೆ ಮನೆಯವರು ಕೂಡಾ ಬುದ್ಧಿ ಹೇಳಿದರೂ ಏನೂ ಪ್ರಯೋಜನವಾಗಲಿಲ್ಲ. ಇದನ್ನೂ ಓದಿ: ಗ್ಯಾಸ್ ಕಟರ್ ಬಳಸಿ ATMನಲ್ಲಿದ್ದ 15 ಲಕ್ಷ ದರೋಡೆ

    ಕೊನೆಗೆ ಪ್ರೀತಿಸಿದ ಹುಡುಗಿ ಕೈಕೊಟ್ಟಳು ಎಂದು ನೊಂದ ಪ್ರಿಯಕರ ನವೀನ್ ಕೊನೆಯದಾಗಿ ಭಾನುವಾರ ಸಂಜೆ ಯುವತಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳೀ ಫೋನ್ ಕಟ್ ಮಾಡಿದ್ದ. ಇದರಿಂದ ಗಾಬರಿಗೊಂಡ ಯುವತಿ ನೂರಕ್ಕೂ ಹೆಚ್ಚು ಬಾರಿ ವಾಪಸ್ ಕರೆ ಮಾಡಿದ್ದಾಳೆ. ಆದರೆ ನವೀನ್ ಫೋನ್ ರಿಸೀವ್ ಮಾಡಿಲ್ಲ. ಬದಲಾಗಿ ಇವರಿಬ್ಬರ ಪ್ರೀತಿ, ಹುಡುಗಿ ಮದುವೆ ಆಗುವುದಾಗಿ ಹೇಗೆ ಮೋಸ ಮಾಡಿದ್ಳು ಎನ್ನುವುದನ್ನು ಡಿಟೇಲ್ ಆಗಿ ಡೆತ್‌ನೋಟಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: 4 ವರ್ಷ ಪ್ರೀತಿಸಿ ಕೈಕೊಟ್ಟ ಪ್ರಿಯಕರ- ಇಲಿ ಪಾಷಾಣ ತಿಂದು ಆಸ್ಪತ್ರೆ ಸೇರಿದ್ದ ಯುವತಿ ಸಾವು

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅವೈಡ್ ಮಾಡ್ತಿದ್ದ ಲವ್ವರ್ ಮನೆಗೆ ಹೋಗಿ ಗಲಾಟೆ ಮಾಡಿ ಚಾಕು ಹಾಕಿದ್ಳು!

    ಅವೈಡ್ ಮಾಡ್ತಿದ್ದ ಲವ್ವರ್ ಮನೆಗೆ ಹೋಗಿ ಗಲಾಟೆ ಮಾಡಿ ಚಾಕು ಹಾಕಿದ್ಳು!

    ಬೆಂಗಳೂರು: ತಾನು ಪ್ರೀತಿಸುತ್ತಿದ್ದ ಯುವಕನಿಗೇ ಯುವತಿಯೊಬ್ಬಳು ಚಾಕುವಿನಿಂದ ಇರಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಈ ಘಟನೆ ಬೆಂಗಳೂರಿನ ವಿವೇಕನಗರದಲ್ಲಿ (Vivekanagar) ನಡೆದಿದೆ. ಜಂಟಿ ದಾಸ್ ಚಾಕು ಇರಿತಕ್ಕೆ ಒಳಗಾದ ಪ್ರಿಯಕರನಾಗಿದ್ದು, ಬರೂತಿ ಈ ಕೃತ್ಯ ಎಸಗಿದ್ದಾಳೆ. ಇದನ್ನೂ ಓದಿ: ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ರಕ್ಷಣೆ- ಟ್ರಾಫಿಕ್ ಕಾನ್ಸ್‌ಸ್ಟೇಬಲ್ ಕಾರ್ಯಕ್ಕೆ ಮೆಚ್ಚುಗೆ

    ದಾಸ್ ಹಾಗೂ ಬರೂತಿ ಕೆಲ ಸಮಯಗಳಿಂದ ಪರಸ್ಪರ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ದಾಸ್, ಪ್ರೇಯಸಿ ಬರೂತಿಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದನು. ಪ್ರಿಯಕರನ ವರ್ತನೆ ನೋಡಿ ರೊಚ್ಚಿಗೆದ್ದ ಬರೂತಿ, ದಾಸ್ ಮನೆಯಲ್ಲಿ ಗಲಾಟೆ ಮಾಡಿ ಚಾಕುವಿನಿಂದ ಇರಿದಿದ್ದಾಳೆ.

    ಘಟನೆಯಲ್ಲಿ ಪ್ರಿಯಕರ ಜಂಟಿ ದಾಸ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇತ್ತ ಯುವತಿ ಬರೂತಿಯನ್ನು ವಿವೇಕನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿರತೆ ಸೆರೆಹಿಡಿದು ಬೈಕ್‍ನಲ್ಲಿ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಗೆ ಒಪ್ಪಿಸಿದ!

    ಚಿರತೆ ಸೆರೆಹಿಡಿದು ಬೈಕ್‍ನಲ್ಲಿ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಗೆ ಒಪ್ಪಿಸಿದ!

    ಹಾಸನ: ಯುವಕನೊಬ್ಬ ಚಿರತೆಯನ್ನೇ (Leopard) ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆಯೊಂದು ಹಾಸನದಲ್ಲಿ (Hassan) ನಡೆದಿದೆ.

    ವೇಣುಗೋಪಾಲ್ ಅಲಿಯಾಸ್ ಮುತ್ತು ಚಿರತೆ ಹಿಡಿದ ಯುವಕ. ಈತ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿ ಬಾಗಿವಾಳು ಗ್ರಾಮದಲ್ಲಿ ಚಿರತೆ ಸೆರೆ ಹಿಡಿದು ತನ್ನ ಬೈಕ್‍ನಲ್ಲಿ ಕಟ್ಟಿಕೊಂಡು ಓಡಾಡಿದ್ದಾನೆ.

    ಮುತ್ತು ಎಂದಿನಂತೆ ಬೆಳಗ್ಗೆ ತಮ್ಮ ಜಮೀನಿಗೆ ಹೋಗಿದ್ದ ವೇಳೆ ಚಿರತೆ ಕಾಣಿಸಿಕೊಂಡಿದೆ. ಈ ವೇಳೆ ಆತ ಹರಸಾಹಸಪಟ್ಟು ಚಿರತೆ ಸೆರೆ ಹಿಡಿದಿದ್ದಾನೆ. ಬಳಿಕ ಬೈಕ್ ನಲ್ಲಿ ಕಟ್ಟಿಕೊಂಡು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾನೆ. ಎರೆ ಹಿಡಿದ ವೇಳೆ ಮುತ್ತು ಕೈಗೆ ತರಚಿದ ಗಾಯಗಳಾಗಿವೆ. ಇದನ್ನೂ ಓದಿ: ಮೂರೇ ದಿನದ ಅಂತರದಲ್ಲಿ ಮತ್ತೊಂದು ಚೀತಾ ಸಾವು – 4 ತಿಂಗಳಲ್ಲಿ 8ನೇ ಘಟನೆ

    ಸದ್ಯ ಚಿರತೆಗೆ ಗಂಡಸಿ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಡಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ:ಚಲಿಸುತ್ತಿದ್ದ ಕಾರಿನಲ್ಲೇ ಪತಿಯೊಂದಿಗೆ ಜಗಳವಾಡುತ್ತಾ ಸ್ಟೇರಿಂಗ್ ಎಳೆದ ಪತ್ನಿ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 20ರ ಯುವಕನಿಗೆ ಚಾಕು ಇರಿತ- ಪೊಲೀಸರ ಮುಂದೆ ಮೃತನ ತಾಯಿ ಹೇಳಿದ್ದೇನು?

    20ರ ಯುವಕನಿಗೆ ಚಾಕು ಇರಿತ- ಪೊಲೀಸರ ಮುಂದೆ ಮೃತನ ತಾಯಿ ಹೇಳಿದ್ದೇನು?

    ನವದೆಹಲಿ: 20 ವರ್ಷದ ಯುವಕನಿಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ದೆಹಲಿಯ ಪಾಂಡವ್ ನಗರದಲ್ಲಿ (Pandav Nagar Delhi) ಭಾನುವಾರ ನಡೆದಿದೆ.

    ಮೃತನನ್ನು ಅಭಿಷೇಕ್ ಎಂದು ಗುರತಿಸಲಾಗಿದೆ. ಈತ ದೆಹಲಿಯ ಸಂಗಮ್ ಕಾಲೋನಿ ನಿವಾಸಿ. ಯುವಕನ ಕೊಲೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ. ಇದನ್ನೂ ಓದಿ: ಮಹಿಳಾ ಶಕ್ತಿಗೆ ಜಗ್ಗಲಿಲ್ಲ- ಫ್ರೀ ಬಸ್‍ನಲ್ಲಿ ಪುರುಷ ಪ್ರಯಾಣಿಕರ ಸಂಖ್ಯೆ 13 ಲಕ್ಷಕ್ಕೆ ಏರಿಕೆ

    ಭಾನುವಾರ ಸಂಜೆ 3 ಗಂಟೆ ಸುಮಾರಿಗೆ ಅಭಿಷೇಕ್ ಮನೆಯ 10 ಮೀಟರ್ ದೂರದಲ್ಲಿ ಕೊಲೆಯಾಗಿದೆ. ಈ ಘಟನೆ ಸಾರ್ವಜನಿಕರ ಮುಂದೆಯೇ ನಡೆದಿದ್ದು, ಆದರೂ ನನ್ನ ಮಗನ ರಕ್ಷಣೆಗೆ ಯಾರೊಬ್ಬರು ಧಾವಿಸಿಲ್ಲ ಎಂದು ಅಭಿಷೇಕ್ ತಾಯಿ ಪೊಲೀಸರ ಮುಂದೆ ದೂರಿದ್ದಾರೆ.

    2 ರಿಂದ 3 ಜನ ಅಭಿಷೇಕ್ ಜೊತೆ ಕ್ಲುಲ್ಲಕ ವಿಚಾರಕ್ಕೆ ಜಗಳ ತೆಗೆದಿದ್ದಾರೆ. ಈ ಜಗಳ ತಾರಕಕ್ಕೇರಿ ದುಷ್ಕರ್ಮಿಗಳು ಅಭಿಷೇಕ್‍ಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಪ್ರಾಥಮಿಕ ತನಿಖೆಯ ವೇಳೆ ಬೆಳಕಿಗೆ ಬಂದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಘಟನೆ ನಡೆದ ಕೂಡಲೇ ಅಭಿಷೇಕ್‍ನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಸದ್ಯ ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇದು ನಮ್ಮ ಸರ್ಕಾರ, ಹಿಂದೂಗಳು ಏನೂ ಮಾಡಲು ಸಾಧ್ಯವಿಲ್ಲ- ಬರ್ತ್ ಡೇ ಆಚರಿಸಿದ್ದಕ್ಕೆ ಚಾಕು ಇರಿತ

    ಇದು ನಮ್ಮ ಸರ್ಕಾರ, ಹಿಂದೂಗಳು ಏನೂ ಮಾಡಲು ಸಾಧ್ಯವಿಲ್ಲ- ಬರ್ತ್ ಡೇ ಆಚರಿಸಿದ್ದಕ್ಕೆ ಚಾಕು ಇರಿತ

    ಮೈಸೂರು: ಹುಟ್ಟುಹಬ್ಬ ಆಚರಣೆ (Birthday Celebration) ವೇಳೆ ಗಲಾಟೆ ನಡೆದು ಅನ್ಯ ಕೋಮಿನವರಿಂದ ಯುವಕನಿಗೆ (Young Man) ಚಾಕು ಇರಿತವಾದ (Stabbing) ಘಟನೆ ಮೈಸೂರು (Mysuru) ಜಿಲ್ಲೆಯ ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ನಡೆದಿದೆ.

    ಪ್ರಸಾದ್ (22) ಚಾಕು ಇರಿತಕ್ಕೊಳಗಾದ ಯುವಕ. ಹುಟ್ಟುಹಬ್ಬ ಆಚರಿಸುತ್ತಿದ್ದಕ್ಕೆ ಆಕ್ಷೇಪಿಸಿ, ಇಲ್ಲಿ ಹುಟ್ಟುಹಬ್ಬ ಆಚರಿಸಬೇಡಿ. ಇನ್ನು ಮುಂದೆ ನಿಮ್ಮ ಮನೆಗಳಲ್ಲಿ ಹುಟ್ಟುಹಬ್ಬ ಆಚರಿಸಿ. ಇದು ನಮ್ಮ ಸರ್ಕಾರ, ನೀವು ಹಿಂದೂಗಳು ಏನು ಮಾಡಲಾಗುವುದಿಲ್ಲ ಎಂದು ಅವಾಚ್ಯ ಶಬ್ಧಗಳಿಂದ ಕೆಲ ಯುವಕರು ನಿಂದಿಸಿದ್ದಾರೆ. ಬಳಿಕ ಗಲಾಟೆ ನಡೆದು ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ.

    ಘಟನೆಗೆ ಸಂಬಂಧಿಸಿದಂತೆ 5 ಜನರ ವಿರುದ್ಧ ಪೊಲೀಸರು ಎಫ್‌ಐರ್ ದಾಖಲಿಸಿದ್ದಾರೆ. ಶೋಹೆಬ್, ಶಹೇನಸಾ, ಸಲ್ಮಾನ್, ಇಲ್ಲು ಹಾಗೂ ಜಾಫರ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯುವತಿಯ ಶವ ಕೆರೆಯಲ್ಲಿ ಪತ್ತೆ- ಆತ್ಮಹತ್ಯೆ ಶಂಕೆ

    ಗಾಯಗೊಂಡಿರುವ ಪ್ರಸಾದ್‌ಗೆ ನಂಜನಗೂಡು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಟಿಪ್ಪರ್, ಕಾರು ಮಧ್ಯೆ ಭೀಕರ ಅಪಘಾತ – ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ