Tag: youngman

  • ಸುಳ್ಯದ ಯುವಕನ ಮೇಲೆ ಗುಂಡಿನ ದಾಳಿ

    ಸುಳ್ಯದ ಯುವಕನ ಮೇಲೆ ಗುಂಡಿನ ದಾಳಿ

    ಮಂಗಳೂರು: ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮೊಗರ್ಪಣೆಯಲ್ಲಿ ನಡೆದಿದೆ.

    ಸುಳ್ಯ ಜಯನಗರದ ನಿವಾಸಿ ಮೊಹಮ್ಮದ್ ಸಾಯಿ (39) ಗುಂಡಿನ ದಾಳಿಗೊಳಗಾದ ವ್ಯಕ್ತಿ. ಮೊಹಮ್ಮದ್ ಕಾರು ಹತ್ತುತ್ತಿದ್ದ ವೇಳೆ ಗುಂಡಿನ ದಾಳಿ ನಡೆಸಲಾಗಿದೆ. ಕೆಎ 12 ನೋಂದಣಿಯ ಸ್ಕಾರ್ಪಿಯೋ ಕಾರಿನಿಂದ ಗುಂಡು ಹಾರಾಟ ನಡೆದಿದೆ. ಅದೃಷ್ಟವಶಾತ್ ಗುಂಡು ಗುರಿ ತಪ್ಪಿ ಕಾರಿನ ಬಾಗಿಲಿಗೆ ತಾಗಿದೆ. ಈ ವೇಳೆ ಗುಂಡು ತಾಗಿ ಮೊಹಮ್ಮದ್ ಹೊಟ್ಟೆ ಭಾಗಕ್ಕೆ ಸಣ್ಣ ಗಾಯವಾಗಿದೆ.

    ತಂಗಿಯ ಮನೆಗೆ ತೆರಳಿ ವಾಪಸ್ ತನ್ನ ಕಾರು ಹತ್ತುತ್ತಿದ್ದ ವೇಳೆ ಈ ದಾಳಿ ನಡೆದಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಆರಂಭಿಸಿದ್ದಾರೆ.

  • ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧನ: ಆರಗ ಜ್ಞಾನೇಂದ್ರ

    ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧನ: ಆರಗ ಜ್ಞಾನೇಂದ್ರ

    ಶಿವಮೊಗ್ಗ: ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಆರೋಪಿಗಳ ಬಗ್ಗೆ ಸುಳಿವು ದೊರೆತಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ಕಾರ್ಯ ಮಾಡುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

    ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದ ಅವರು ಪರಿಶೀಲನೆ ನಡೆಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದದ ಅವರು, ಕೊಲೆಯಾದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಜನರು ಯಾರೂ ಉದ್ವೇಗಕ್ಕೆ ಒಳಗಾಗಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಯುವಕನ ಬರ್ಬರ ಹತ್ಯೆ – ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ

    ಹರ್ಷ ಎಂಬಾತ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಇದನ್ನೂ ಓದಿ: ಮೆಟ್ರೋವನ್ನು ತಂದಿದ್ದು ಎಸ್‍ಪಿ ಸರ್ಕಾರ, ಉದ್ಘಾಟಿಸಿದ್ದು ಯೋಗಿ ಆದಿತ್ಯನಾಥ್: ಅಖಿಲೇಶ್ ಯಾದವ್

    ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಎರಡು ಕೋಮಿನ ಯುವಕರ ಗುಂಪು ಮೆಗ್ಗಾನ್ ಆಸ್ಪತ್ರೆ ಬಳಿ ಜಮಾಯಿಸಿತು. ಹೀಗಾಗಿ ಮೆಗ್ಗಾನ್ ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

    ಪರಿಸ್ಥಿತಿ ನಿಯಂತ್ರಿಸಲು ಗುಂಪುಗೂಡಿದ್ದ ಯುವಕರನ್ನು ಪೊಲೀಸರು ಮನೆಯತ್ತ ವಾಪಸ್ ಕಳುಹಿಸಿದ್ದಾರೆ ಮತ್ತು ಮುಂಜಾಗ್ರತಾ ಕ್ರಮವಾಗಿ ತಕ್ಷಣದಿಂದಲೇ ಶಿವಮೊಗ್ಗ ಜಿಲ್ಲೆಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.