Tag: Youths

  • ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಇಬ್ಬರು ಯುವಕರ ಬಂಧನ

    ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಇಬ್ಬರು ಯುವಕರ ಬಂಧನ

    ರಾಯಚೂರು: ಹಳೆಯ ದ್ವೇಷ ಹಿನ್ನೆಲೆ ಗಣೇಶ ಮೆರವಣಿಗೆ (Ganesha Procession) ವೇಳೆ ಇಬ್ಬರು ಯುವಕರು ಕಲ್ಲು ತೂರಾಟ (Stone Pelting) ನಡೆಸಿ ಪುಂಡಾಟ ಮೆರೆದಿರುವ ಘಟನೆ ರಾಯಚೂರು (Raichur) ನಗರದ ಗಂಗಾನಿವಾಸ ರಸ್ತೆಯಲ್ಲಿ ನಡೆದಿದೆ.

    ಪ್ರಶಾಂತ್ ಹಾಗೂ ಪ್ರವೀಣ್ ಮಳಿಗೆಯೊಂದರ ಟೆರೆಸ್ ಮೇಲೆ ನಿಂತು ಕಲ್ಲು ತೂರಿದ್ದಾರೆ. ಗಂಗಾನಿವಾಸ ಮಾರ್ಗ ಮೂಲಕ ಮೆರವಣಿಗೆ ಬಂದಿದ್ದಕ್ಕೆ ಯುವಕರು ವಿನಯ್ ಕುಮಾರ್ ಹಾಗೂ ಗಣೇಶ್ ಇಬ್ಬರನ್ನ ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದ್ರೆ ರಾಜೀನಾಮೆ ಕೊಟ್ಟು ಸರಿಯಿಲ್ಲ ಅಂತ ಹೇಳಲಿ: ಬೊಮ್ಮಾಯಿ

    ಘಟನೆಯಲ್ಲಿ ವಿನಯ್ ಕುಮಾರ್ ಹಾಗೂ ಗಣೇಶ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಲ್ಲು ತೂರಿದ ಯುವಕರನ್ನ ಕೂಡಲೇ ಹಿಡಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಹಿನ್ನೆಲೆ ಸದರಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್‌ಗೆ ರೈತರ ಸ್ವಾಗತ – 1.5 ಕೋಟಿಯಿಂದ 2.5 ಕೋಟಿ ರೂ. ಪರಿಹಾರಕ್ಕೆ ಸಂತಸ

  • ಎಷ್ಟು ಜನರಿಗೆ ಯುವನಿಧಿ ಸಿಕ್ಕಿದೆ? ಬಜೆಟ್‌ನಲ್ಲಿ ಲೆಕ್ಕ ನೀಡಿದ ಸಿಎಂ

    ಎಷ್ಟು ಜನರಿಗೆ ಯುವನಿಧಿ ಸಿಕ್ಕಿದೆ? ಬಜೆಟ್‌ನಲ್ಲಿ ಲೆಕ್ಕ ನೀಡಿದ ಸಿಎಂ

    ಬೆಂಗಳೂರು: ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಇಂಡಸ್ಟ್ರಿ ಲಿಂಕೆಜ್ ಸೆಲ್ ಅಡಿ ಭವಿಷ್ಯ ಕೌಶಲ್ಯ ತರಬೇತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು 2025-26ನೇ ಬಜೆಟ್‌ನಲ್ಲಿ ತಿಳಿಸಿದರು.

    ಈ ಬಾರಿ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ನಿರುದ್ಯೋಗಿಗಳಾಗಿರುವ ಪದವೀಧರರಿಗೆ ಹಾಗೂ ಡಿಪ್ಲೋಮ ಪಡೆದವರಿಗೆ ನಿರುದ್ಯೋಗ ಭತ್ಯೆಯನ್ನು ನೀಡಲು ನಮ್ಮ ಸರ್ಕಾರವು ‘ಯುವನಿಧಿ’ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈಗಾಗಲೇ ಸುಮಾರು 2.58 ಲಕ್ಷ ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, 286 ಕೋಟಿ ರೂ. ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದರು. ಇದನ್ನೂ ಓದಿ: Olympics 2028 | ತರಬೇತಿಗಾಗಿ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹ ಧನ

    ಯುವನಿಧಿ ಯೋಜನೆ ಮೂಲಕ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂಪಾಯಿ ಮತ್ತು ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ನೀಡಲಾಗುತ್ತದೆ. ಯುವ ನಿಧಿ ಯೋಜನೆಯಿಂದ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಗೆ 2 ವರ್ಷಗಳ ನಂತರ ಅಥವಾ 2 ವರ್ಷದೊಳಗೆ ಕೆಲಸ ಸಿಕ್ಕರೆ ತಕ್ಷಣವೇ ನಿರುದ್ಯೋಗ ಭತ್ಯೆ ನಿಲ್ಲಿಸಲಾಗುತ್ತದೆ. ಇದನ್ನೂ ಓದಿ: ಮಲ್ಟಿಪ್ಲೆಕ್ಸ್ ಟಿಕೆಟ್ ದರ 200 ರೂ.ಗೆ ಸೀಮಿತ – ಕನ್ನಡ ಚಿತ್ರಗಳಿಗೆ OTT

    ನಮ್ಮ ಸರ್ಕಾರದ ಹಿಂದಿನ ಆಡಳಿತಾವಧಿಯಲ್ಲಿ, ಮುಖ್ಯಮಂತ್ರಿಗಳು ಕೌಶಲ್ಯ ಕರ್ನಾಟಕ ಪ್ರಾರಂಭಿಸಲಾಗಿತ್ತು. ಯೋಜನೆಯನ್ನು (ಸಿಎಂಕೆಕೆವೈ) ಪ್ರಾರಂಭಿಸಲಾಗಿತ್ತು. ಪ್ರಸ್ತುತ, ರಾಜ್ಯದ ಯುವಕರಿಗೆ ಉದ್ಯೋಗಾರ್ಹತೆ ಮತ್ತು ಉದ್ಯಮಶೀಲತೆಯನ್ನು ಇನ್ನಷ್ಟು ಉತ್ತೇಜಿಸಲು ಯೋಜನೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸಿ ಸಿಎಂಕೆಕೆವೈ 2.0 ಅನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ಸಾಂಪ್ರದಾಯಿಕ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ಈ ಕೆಳಗಿನ ಉಪಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆಯಾಗಿಲ್ಲ: ಬಜೆಟ್ ಭಾಷಣದಲ್ಲಿ ಕೇಂದ್ರಕ್ಕೆ ಸಿದ್ದು ಗುದ್ದು

    ರಾಜ್ಯದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜರ್ಮನ್, ಇಟಾಲಿಯನ್, ಸ್ಪ್ಯಾನಿಷ್ ಮತ್ತು ಇತರೆ ವಿದೇಶೀ ಭಾಷಾ ಕೌಶಲ್ಯ ತರಬೇತಿ ನೀಡಲಾಗುವುದು. ವಿದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಅಂತಾರಾಷ್ಟ್ರೀಯ ವಲಸೆ ಕೇಂದ್ರದ ಮೂಲಕ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸೂಕ್ತ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಮಾರ್ಗದರ್ಶನವನ್ನು ಒದಗಿಸಲು `ನನ್ನ ವೃತ್ತಿ, ನನ್ನ ಆಯ್ಕೆ’ ಕಾರ್ಯಕ್ರಮದಡಿ ಸರ್ಕಾರಿ ಶಾಲಾ/ಕಾಲೇಜುಗಳಲ್ಲಿನ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಅಬಕಾರಿ ಇಲಾಖೆಗೆ 40,000 ಕೋಟಿ ತೆರಿಗೆ ಸಂಗ್ರಹ ಟಾರ್ಗೆಟ್‌

    ವಿಶ್ವ ಕೌಶಲ್ಯ ಸ್ಪರ್ಧೆಯ ಪೂರ್ವಸಿದ್ಧತೆಗಾಗಿ ಆಯೋಜಿಸಲಾಗುವ ರಾಷ್ಟ್ರೀಯ ಮಟ್ಟದ ಇಂಡಿಯಾ ಸ್ಕಿಲ್-2026 ಸ್ಪರ್ಧೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುತ್ತದೆ. ಅಳಿವಿನಂಚಿನಲ್ಲಿರುವ ಪಾರಂಪರಿಕ ಮತ್ತು ಪ್ರಾದೇಶಿಕ ಕೌಶಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಲು 2,000 ಅಭ್ಯರ್ಥಿಗಳಿಗೆ ಅಗತ್ಯವಿರುವ ಟೂಲ್‌ಕಿಟ್‌ಗಳೊಂದಿಗೆ ಅಲ್ಪಾವಧಿ ತರಬೇತಿಯನ್ನು ನೀಡಲಾಗುವುದು. ಲಂಬಾಣಿ ಜನಾಂಗದ ಕಸೂತಿ ಕಲೆಯ ಬಗ್ಗೆ ತರಬೇತಿಯನ್ನು 1.000 ಅಭ್ಯರ್ಥಿಗಳಿಗೆ ದಾವಣಗೆರೆ ಮತ್ತು ಬೀದರ್ ಜಿಲ್ಲೆಗಳಲ್ಲಿನ ಕೌಶಲ್ಯ ತರಬೇತಿ ಕೇಂದ್ರಗಳಲ್ಲಿ ನೀಡಲಾಗುವುದು ಎಂದರು. ಇದನ್ನೂ ಓದಿ: ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ

    ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಜೀವನೋಪಾಯ ಚಟುವಟಿಕೆ ಕೈಗೊಳ್ಳಲು ತ್ವರಿತ ಸಾಲ ಸೌಲಭ್ಯ ಒದಗಿಸಿ, ಆರ್ಥಿಕ ಅಗತ್ಯತೆಗಳ ಪೂರೈಕೆ ಮತ್ತು ಭದ್ರತೆ ಒದಗಿಸಿ, ಉಳಿತಾಯ ಮತ್ತು ಉದ್ಯಮಶೀಲತೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಮಟ್ಟದಲ್ಲಿ `ಅಕ್ಕ ಕೋ-ಆಪರೇಟಿವ್ ಸೊಸೈಟಿ’ ಸ್ಥಾಪಿಸಲಾಗುವುದು. `ಗೃಹಲಕ್ಷ್ಮಿ’ ಯೋಜನೆಯ ಯಜಮಾನಿಯರನ್ನು ಸ್ವಸಹಾಯ ಗುಂಪುಗಳ ಸದಸ್ಯರುಗಳನ್ನಾಗಿಸಿ ರಾಜ್ಯಮಟ್ಟದಲ್ಲಿ `ಅಕ್ಕ ಕೋ-ಆಪರೇಟಿವ್ ಸೊಸೈಟಿ’ ವ್ಯಾಪ್ತಿಗೆ ತರಲಾಗುವುದು ಎಂದು ಹೇಳಿದರು.

  • ಬೆಳ್ತಂಗಡಿ| ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರುಪಾಲು

    ಬೆಳ್ತಂಗಡಿ| ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರುಪಾಲು

    ಮಂಗಳೂರು: ಡ್ಯಾಂ ಒಂದರಲ್ಲಿ ಈಜಾಡಲು ಹೋಗಿ ಮೂವರು ಯುವಕರು (Youths) ನೀರುಪಾಲಾದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ವೇಣೂರು ಸಮೀಪದ ಮೂಡುಕೋಡಿ ಎಂಬಲ್ಲಿ ನಡೆದಿದೆ.

    ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮದ ನಿಮಿತ್ತ ಬಂದ ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್ (20), ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ (19), ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಎಂಬವರು ಸಾವನ್ನಪ್ಪಿದ ದುರ್ದೈವಿಗಳು. ವಾಲ್ಟರ್‌ರವರ ಮನೆಯಲ್ಲಿ ಊಟ ಮುಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಈಜಲು ಹೋಗಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ. ಇದನ್ನೂ ಓದಿ: ಭೋವಿ ನಿಗಮ ಹಗರಣ: ಡಿವೈಎಸ್ಪಿ ಹೆಸರು ಬರೆದಿಟ್ಟರೂ ಬಂಧನ ಮಾಡಿಲ್ಲ ಯಾಕೆ – ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

    ಈಜು ತಜ್ಞರು ಮೂವರು ಯುವಕರ ಮೃತದೇಹ ನೀರಿನಿಂದ ಹೊರತೆಗೆದಿದ್ದಾರೆ. ಮೃತರು ಮಂಗಳೂರಿನ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು. ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದಿಢೀರ್‌ ದೆಹಲಿಗೆ ಸಿಎಂ – ಸಿದ್ದರಾಮಯ್ಯ ಸಂಪುಟಕ್ಕೆ ಶೀಘ್ರವೇ ಸರ್ಜರಿ?

  • ಇಂಟರ್ನ್‌ಶಿಪ್‌ ಯೋಜನೆಗೆ ಚಾಲನೆ, ಸಿಗಲಿದೆ ತಿಂಗಳಿಗೆ 5 ಸಾವಿರ ಭತ್ಯೆ – ಅರ್ಜಿ ಸಲ್ಲಿಸೋದು ಹೇಗೆ? ಮಾನದಂಡ ಏನು?

    ಇಂಟರ್ನ್‌ಶಿಪ್‌ ಯೋಜನೆಗೆ ಚಾಲನೆ, ಸಿಗಲಿದೆ ತಿಂಗಳಿಗೆ 5 ಸಾವಿರ ಭತ್ಯೆ – ಅರ್ಜಿ ಸಲ್ಲಿಸೋದು ಹೇಗೆ? ಮಾನದಂಡ ಏನು?

    ನವದೆಹಲಿ: ಕೇಂದ್ರದಿಂದ ಪಿಎಂ ಇಂಟರ್ನ್‌ಶಿಪ್‌ ಯೋಜನೆಗೆ ಚಾಲನೆ (PM Internship Scheme) ನೀಡಲಾಗಿದೆ. ಉನ್ನತ ಕಂಪನಿಗಳಲ್ಲಿ ಇಂಟರ್ನ್‌ಶಿಪ್‌ (Internship) ಪಡೆಯುವ ಯುವಕ – ಯುವತಿಯರಿಗೆ ಮಾಸಿಕ 5 ಸಾವಿರ ರೂ. ಆರ್ಥಿಕ ನೆರವು ನೀಡುವ ಉದ್ದೇಶದೊಂದಿಗೆ ಈ ಯೋಜನೆಗೆ ಗುರುವಾರ ಚಾಲನೆ ನೀಡಲಾಯಿತು.

    ಕಂಪನಿಗಳಲ್ಲಿ ಇಂಟರ್ನ್‌ಶಿಪ್‌ ಮಾಡುವ ಯುವಕ – ಯುವತಿಯರಿಗೆ ಮಾಸಿಕ 5 ಸಾವಿರ ರೂ. ವರ್ಷಕ್ಕೆ 66 ಸಾವಿರ ರೂ.ನಂತೆ ಆರ್ಥಿಕ ನೆರವನ್ನು ಈ ಯೋಜನೆ ನೀಡಲಿದೆ. ಇದರಿಂದ 1.25 ಲಕ್ಷ ಯುವಕ – ಯುವತಿಯರು ಫಲಾನುಭವಿಗಳಾಗಲಿದ್ದಾರೆ.ಇದನ್ನೂ ಓದಿ: ದಸರಾ ವಿಶೇಷ; ಉತ್ತರ ಕರ್ನಾಟಕ ಶೈಲಿಯ ತಾಲಿಪಟ್ಟು ರೆಸಿಪಿ ನಿಮಗಾಗಿ

    21 ರಿಂದ 24 ವರ್ಷದ ಯುವಕ-ಯುವತಿಯರಿಗೆ 1 ವರ್ಷಗಳ ಕಾಲ ಇಂಟರ್ನ್‌ಶಿಪ್‌ನ್ನು ಅವಕಾಶ ಕಲ್ಪಿಸಿಕೊಡುತ್ತದೆ. ಇಂಟರ್ನ್‌ಶಿಪ್‌ ಮಾಡುವವರಿಗೆ ಮಾಸಿಕ 5 ಸಾವಿರ ರೂ. ಭತ್ಯೆ ಮತ್ತು ಒಂದು ಬಾರಿ 6 ಸಾವಿರ ರೂ. ಸಹಾಯ ಭತ್ಯೆಯನ್ನು ಸರ್ಕಾರ ಭರಿಸುತ್ತದೆ.

    ಪ್ರಧಾನ ಮಂತ್ರಿ ಇಂಟರ್ನ್‌ಶಿಪ್‌ ಯೋಜನೆಯು ಮುಂದಿನ ಐದು ವರ್ಷಗಳಲ್ಲಿ 1 ಕೋಟಿ ಯುವಕರಿಗೆ ಇಂಟರ್ನ್‌ಶಿಪ್‌ ನೀಡುತ್ತದೆ. ಇದು ಭಾರತಕ್ಕೆ ಉದ್ಯೋಗಿಗಳನ್ನು ಪರಿವರ್ತಿಸುವ ನಿಟ್ಟಿನಲ್ಲಿ ವಿನ್ಯಾಸಗೊಳಿಸಲಾದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಜೊತೆಗೆ ಕೆಲಸದ ನೈಜ್ಯ ವಾತಾವರಣದ ಮನೋಭಾವವನ್ನು ಈ ಮೂಲಕ ಸೃಷ್ಟಿಸುವ ಯೋಜನೆಯನ್ನು ಹೊಂದಿದೆ. ಈಗಾಗಲೇ ಈ ಯೋಜನೆಯಡಿಯಲ್ಲಿ 500 ಕಂಪನಿಗಳು ಸರ್ಕಾರದ ಜತೆ ಒಪ್ಪಂದ ಮಾಡಿಕೊಂಡಿವೆ.

    ಯೋಜನೆಯನ್ನು ಎರಡು ಹಂತಗಳಲ್ಲಿ ಜಾರಿಗೊಳಿಸಲಾಗುವುದು. ಈ ವರ್ಷ ಪ್ರಾರಂಭವಾಗುವ ಮೊದಲ ಹಂತದಲ್ಲಿ, ಮೂರು ವರ್ಷಗಳ ಅವಧಿಯಲ್ಲಿ 50 ಲಕ್ಷ ಯುವಕರನ್ನು ಇಂಟರ್ನ್‌ಶಿಪ್‌ನಲ್ಲಿ ಇರಿಸಲಾಗುತ್ತದೆ. ಎರಡನೇ ಹಂತವು ಮುಂದಿನ ಎರಡು ವರ್ಷಗಳಲ್ಲಿ ಇನ್ನೂ 50 ಲಕ್ಷ ಯುವಕರಿಗೆ ತರಬೇತಿ ನೀಡಲು ಗಮನಹರಿಸುತ್ತದೆ. ಪ್ರತಿ ಇಂಟರ್ನ್‌ಶಿಪ್‌ ಆರು ತಿಂಗಳವರೆಗೆ ಇರುತ್ತದೆ. ಈ ಸಮಯದಲ್ಲಿ ಭಾಗವಹಿಸುವವರು ತಾವು ಇಂಟರ್ನ್‌ಶಿಪ್‌ಗೆ ಅವಕಾಶ ಪಡೆದಿರುವ ಕಂಪನಿಗಳಿಂದ ಸಮಗ್ರ ತರಬೇತಿ ಮತ್ತು ಮಾರ್ಗದರ್ಶನವನ್ನು ಪಡೆಯುತ್ತಾರೆ.

    ಅರ್ಹತೆ ಮತ್ತು ಅರ್ಜಿ ಪ್ರಕ್ರಿಯೆ:
    ಈ ಯೋಜನೆಯು ಪ್ರಾಥಮಿಕವಾಗಿ ಆರ್ಥಿಕವಾಗಿ ಹಿಂದುಳಿದ ಯುವಜನರನ್ನು ಗುರಿಯಾಗಿರಿಸಿಕೊಂಡಿದೆ. 21 ರಿಂದ 24 ವರ್ಷದವರು ಮುಕ್ತ ಅವಕಾಶವನ್ನು ಹೊಂದಿರುತ್ತಾರೆ. ಕನಿಷ್ಠ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು ಅಥವಾ  ITI, ಡಿಪ್ಲೋಮಾ, BA, B.Sc, B.Com, BCA ಯಾವುದೇ ಪದವಿ ಪಡೆದಿರುವವರು ಅರ್ಹರು. ಸರ್ಕಾರಿ ಉದ್ಯೋಗಿಗಳನ್ನು ಹೊಂದಿರುವ ಕುಟುಂಬಗಳು ಅಥವಾ ಆದಾಯ ತೆರಿಗೆ ಮೌಲ್ಯಮಾಪನ ಮಾಡುವವರು ಈ ಯೋಜನೆಗೆ ಅರ್ಹರಲ್ಲ. ಅರ್ಜಿಗಳು ಆನ್‌ಲೈನ್ ಪೋರ್ಟಲ್ ಮೂಲಕ ಆರಂಭಗೊಳ್ಳಲಿದ್ದು, ಅ.12 ರಿಂದ ಪ್ರಕ್ರಿಯೆ ಪ್ರಾರಂಭಗೊಳ್ಳುತ್ತದೆ.ಇದನ್ನೂ ಓದಿ: ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಅಧಿಕ ಮಾಲಿನ್ಯ – ರಾಜ್ಯಕ್ಕೆ ಹಸಿರು ನ್ಯಾಯಮಂಡಳಿಯಿಂದ ನೋಟಿಸ್‌

    ಅರ್ಜಿ ಪ್ರಕ್ರಿಯೆ:
    www.pminternship.mca.gov.in ನಲ್ಲಿ ಯುವಕ-ಯುವತಿಯರು ಅ.12ರಿಂದ 25ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ತಮ್ಮ ಹೆಸರು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಯ ಬಳಿಕ ಅ.26ರಂದು ಅರ್ಹ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲಾಗುವುದು. ಕಂಪನಿಗಳು ಅ.27ರಿಂದ ನ.7ರವರೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. ನ.8ರಿಂದ ನ.15ರವರೆಗೆ ಆಯ್ಕೆಯಾದ ಅಭ್ಯರ್ಥಿಗಳು ತಾವು ಆಯ್ಕೆಯಾದ ಕಂಪನಿಯಿಂದ ಆಫರ್ ಲೆಟರ್‌ನ್ನು ಪಡೆದುಕೊಳ್ಳಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.

    ಇದರ ಜೊತೆಗೆ ಇದು ಉದ್ಯೋಗ ಅಲ್ಲ. ಇದು ತರಬೇತಿ ಕಾರ್ಯಾಗಾರ (ಇಂಟರ್ನ್‌ಶಿಪ್‌) ಎಂದು ಸರ್ಕಾರ ಸ್ಪಷ್ಟಪಡಿಸಿದೆ.

    ಪ್ರಧಾನ ಮಂತ್ರಿ ಇಂಟರ್ನ್‌ಶಿಪ್‌ ಯೋಜನೆಯ ಪ್ರಮುಖ ಮಾಹಿತಿ
    ಉದ್ದೇಶ: ಐದು ವರ್ಷಗಳಲ್ಲಿ 1 ಕೋಟಿ ಯುವಕರಿಗೆ ಇಂಟರ್ನ್‌ಶಿಪ್‌ ಒದಗಿಸುವುದು, ಭಾರತದ ಅಗ್ರ 500 ಕಂಪನಿಗಳಲ್ಲಿ ಉದ್ಯೋಗಾವಕಾಶಗಳು
    ಅರ್ಹತೆ: 21-24 ವಯಸ್ಸಿನ ಅಭ್ಯರ್ಥಿಗಳು, 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು ಅಥವಾ ITI, ಡಿಪ್ಲೋಮಾ, BA, B.Sc, B.Com, BCA ಯಾವುದೇ ಪದವಿ ಪಡೆದಿರಬೇಕು. ಸರ್ಕಾರಿ ನೌಕರರು ಅಥವಾ ಆದಾಯ ತೆರಿಗೆ ಮೌಲ್ಯಮಾಪಕರು ಇಲ್ಲದ ಕುಟುಂಬದ ಯುವಕ – ಯುವತಿಯರಿಗೆ ಅವಕಾಶ
    ವೇತನ: ಕೇಂದ್ರ ಸರ್ಕಾರದಿಂದ 4,500ರೂ. , ಜೊತೆಗೆ ಕಂಪನಿಗಳಿಂದ 500ರೂ.
    ಅಪ್ಲಿಕೇಶನ್ ಪೋರ್ಟಲ್: 12 ಅಕ್ಟೋಬರ್ 2024 ಆರಂಭಗೊಳ್ಳುತ್ತದೆ.ಇದನ್ನೂ ಓದಿ: ನವರಾತ್ರಿ ವಿಶೇಷ-2 | ವಿವಾಹಿತ ಮಹಿಳೆಯರು ದೇವಿಗೆ ಸಿಂಧೂರ ಹಚ್ಚುವ ಸಂಭ್ರಮ!

  • ಹೆಚ್ಚು ಸಂಬಳದ ಆಸೆಗೆ ಉಜ್ಬೇಕಿಸ್ತಾನಕ್ಕೆ ಹೋದ ಕರ್ನಾಟಕದ ಯುವಕರು – ಅನ್ನ, ನೀರು ಸಿಗದೇ ಪರದಾಟ

    ಹೆಚ್ಚು ಸಂಬಳದ ಆಸೆಗೆ ಉಜ್ಬೇಕಿಸ್ತಾನಕ್ಕೆ ಹೋದ ಕರ್ನಾಟಕದ ಯುವಕರು – ಅನ್ನ, ನೀರು ಸಿಗದೇ ಪರದಾಟ

    – ಸ್ವದೇಶಕ್ಕೆ ಕರೆಸಿಕೊಳ್ಳುವಂತೆ ಸಿಎಂ, ಪಿಎಂಗೆ ಮನವಿ

    ಬೀದರ್: ಲಕ್ಷ ಲಕ್ಷ ಸಂಬಳದ ಆಸೆಗೆ ಕೆಲಸ ಅರಸಿ ಉಜ್ಬೇಕಿಸ್ತಾನಕ್ಕೆ (Uzbekistan) ಹೋಗಿದ್ದ ಬೀದರ್ (Bidar) ಹಾಗೂ ಕಲಬರಗಿ (Kalaburagi) ಮೂಲದ ಯುವಕರಿಗೆ ಸಂಕಷ್ಟ ಎದುರಾಗಿದ್ದು, ಉದ್ಯೋಗ ಹಾಗೂ ಅನ್ನ, ನೀರು ಇಲ್ಲದೆ ಪರದಾಡುತ್ತಿದ್ದಾರೆ.

    ಬೀದರ್ ಹಾಗೂ ಕಲಬರಗಿಯ 14 ಮಂದಿ ಯುವಕರು ಲಕ್ಷಾಂತರ ಸಂಬಳದ ಆಸೆಗೆ ಮಧ್ಯವರ್ತಿಗಳಿಗೆ ಲಕ್ಷ ಲಕ್ಷ ಹಣ ನೀಡಿ ಉಜ್ಬೇಕಿಸ್ತಾನಕ್ಕೆ ತೆರಳಿ ಮೋಸ ಹೋಗಿದ್ದಾರೆ. ಅತ್ತ ಉದ್ಯೋಗವೂ ಇಲ್ಲದೇ ತಿನ್ನಲು ಅನ್ನ ನೀರು ಕೂಡ ಸಿಗದೇ ಇದೀಗ ಯುವಕರು ಪರದಾಡುವಂತಾಗಿದೆ. ಇದನ್ನೂ ಓದಿ: ರಾಗಾ ಹೊಲಿದ ಚಪ್ಪಲಿಗೆ 10 ಲಕ್ಷ ರೂ. ಆಫರ್ ತಿರಸ್ಕರಿಸಿದ ಚಮ್ಮಾರ

    ಉಜ್ಬೇಕಿಸ್ತಾನಕ್ಕೆ ತೆರಳಿದವರ ಪೈಕಿ ಬೀದರ್ ಜಿಲ್ಲೆಯ ಬಸವಕಲ್ಯಾಣ, ಹುಮ್ನಾಬಾದ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಯುವಕರು ಸೇರಿದ್ದಾರೆ. ವಿದೇಶದಿಂದ ಸ್ವದೇಶಕ್ಕೆ ವಾಪಸ್ ಕರೆಸಿಕೊಳ್ಳುವಂತೆ ಪ್ರಧಾನಿ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯಗೆ ಮೋಸ ಹೋದ ಯುವಕರು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ನಾವು ನಮ್ಮ ಮಧ್ಯವರ್ತಿಗಳನ್ನು ನಂಬಿ ಮೋಸ ಹೋಗಿದ್ದೇವೆ. ಇಲ್ಲಿ ಊಟ ಇಲ್ಲದೆ ಹಲವು ಜನ ಸತ್ತಿದ್ದಾರೆ. ಇದರಿಂದ ನಮಗೆ ಭಯವಾಗುತ್ತಿದೆ. ಬೇಗ ನಮ್ಮನ್ನು ಸ್ವದೇಶಕ್ಕೆ ಕರೆಸಿಕೊಳ್ಳಿ ಎಂದು ಯುವಕರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಆಟವಾಡುತ್ತಾ ಮೆಟ್ರೋ ಹಳಿಗೆ ಬಿದ್ದ ಮಗು – ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಪಾರು

  • 2024ರ ಕೇಂದ್ರ ಬಜೆಟ್‌ನಲ್ಲಿ ಯುವಜನತೆಗಾಗಿ ಹೊಸ ಇಂಟರ್ನ್‌ಶಿಪ್‌ ಯೋಜನೆ; ಏನಿದು ಸ್ಕೀಮ್?‌

    2024ರ ಕೇಂದ್ರ ಬಜೆಟ್‌ನಲ್ಲಿ ಯುವಜನತೆಗಾಗಿ ಹೊಸ ಇಂಟರ್ನ್‌ಶಿಪ್‌ ಯೋಜನೆ; ಏನಿದು ಸ್ಕೀಮ್?‌

    ಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಜುಲೈ 23ರಂದು ಮಂಡಿಸಿದ 2024-25ನೇ ಸಾಲಿನ ಕೇಂದ್ರ‌ ಬಜೆಟ್‌ನಲ್ಲಿ (Union Budget 2024) ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇಂತಿಷ್ಟು ಹಣವನ್ನು ಯೋಜನೆಗಾಗಿ ಮೀಸಲಿಟ್ಟಿದ್ದಾರೆ. ಈ ಬಜೆಟ್‌ನಲ್ಲಿ ಮುಖ್ಯವಾಗಿ ಬಡವರು, ಯುವಜನತೆ, ಮಹಿಳೆಯರು ಹಾಗೂ ಅನ್ನದಾತರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಈ ಯೋಜನೆಗಳ ಪೈಕಿ ಯುವಜನತೆಗಾಗಿ ಇಂಟರ್ನ್‌ಶಿಪ್‌ ಯೋಜನೆಯನ್ನು (Internship Scheme) ಜಾರಿಗೆ ತರಲಾಗಿದೆ. ಯುವಕರಿಗೆಂದೇ ಮಾಡಿರುವ ಈ ಹೊಸ ಸ್ಕೀಮ್‌ನಲ್ಲಿ ಏನಿದೆ? ಇದರ ಉದ್ದೇಶವೇನು? ಈ ಯೋಜನೆಯನ್ನು ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು ಎಂಬುದರ ಕುರಿತು ಇಲ್ಲಿ ವಿವರಿಸಲಾಗಿದೆ.

    ಇಂಟರ್ನ್‌ಶಿಪ್‌ ಯೋಜನೆ ಏನು?
    ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾದ ಬಳಿಕ ಮಂಡಿಸಿದ ಮೊದಲ ಬಜೆಟ್‌ನಲ್ಲಿ ಈ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದೆ. ಮುಂದಿನ ಐದು ವರ್ಷಗಳಲ್ಲಿ 500 ಉನ್ನತ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್‌ಶಿಪ್ ಅವಕಾಶಗಳನ್ನು ಒದಗಿಸಲು ಈ ಯೋಜನೆ ಮಾಡಲಾಗಿದೆ. ಈ ಯೋಜನೆಯ ಅಡಿಯಲ್ಲಿ ಇಂಟರ್ನ್‌ಗಳಿಗೆ ಮಾಸಿಕ ಭತ್ಯೆ ಮತ್ತು ಒಂದು ಬಾರಿ ಸಹಾಯದ ಮೊತ್ತವನ್ನು ನೀಡಲಾಗುತ್ತದೆ.

    ಯೋಜನೆಯ ಪ್ರಕಾರ, ಯುವಕರು ಮಾಸಿಕ ಭತ್ಯೆಯಾಗಿ 5,000 ರೂ. ಮತ್ತು ಒಂದು ಬಾರಿ ಸಹಾಯಧನವಾಗಿ 6,000 ರೂ. ಹಣವನ್ನು ಪಡೆಯುತ್ತಾರೆ. ಯೋಜನೆಯ ಮೊದಲ ಹಂತವು ಎರಡು ವರ್ಷಗಳವರೆಗೆ ಇರುತ್ತದೆ. ಆದರೆ ಎರಡನೇ ಹಂತವು ಮೂರು ವರ್ಷಗಳಾಗಿರುತ್ತದೆ.

    ಯುವಕರಿಗೆ ತರಬೇತಿ ನೀಡುವ ವೆಚ್ಚವನ್ನು ಕಂಪನಿಗಳು ಭರಿಸುತ್ತವೆ ಮತ್ತು ಅವರ ಇಂಟರ್ನ್‌ಶಿಪ್‌ನ 10 ಪ್ರತಿಶತವು ಅವರ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಭರಿಸುತ್ತದೆ ಎಂದು ಪ್ರಸ್ತಾಪವು ಹೇಳುತ್ತದೆ. ಅರ್ಜಿ ಪ್ರಕ್ರಿಯೆಯು ಆನ್‌ಲೈನ್ ಪೋರ್ಟಲ್ ಮೂಲಕ ನಡೆಯಲಿದೆ. ಅದರ ವಿವರಗಳನ್ನು ಇನ್ನಷ್ಟೇ ಪ್ರಕಟಿಸಬೇಕಾಗಿದೆ.

    ಈ ಯೋಜನೆಯ ಪ್ರಕಾರ, ಇಂಟರ್ನ್‌ಶಿಪ್ ಅವಕಾಶಗಳನ್ನು ನೀಡುವ ಕಂಪನಿಗಳು ಅವರಿಗೆ ನಿಜವಾದ ಕೆಲಸದ ಅನುಭವ ಮತ್ತು ಕೌಶಲ್ಯ ಅಭಿವೃದ್ಧಿ ಅವಧಿಗಳನ್ನು ಒದಗಿಸಬೇಕು. ಇಂಟರ್ನ್‌ಶಿಪ್‌ನಲ್ಲಿ  ಅರ್ಧದಷ್ಟು ಸಮಯ ಕೆಲಸದ ವಾತಾವರಣದಲ್ಲಿದ್ದುಕೊಂಡು ಕಲಿಯಬೇಕು.

    ಕಂಪನಿಗಳು ಇತರ ರೆಗ್ಯುಲರ್ ಉದ್ಯೋಗಿಗಳಿಗೆ ನೀಡಲಾಗುವ ಕೆಲಸದ ಅವಕಾಶಗಳನ್ನು ಇಂಟರ್ನ್​ಶಿಪ್​ನವರಿಗೂ ಕೊಡಬೇಕು. ಅವರಿಗೆ ಪ್ರಾಕ್ಟಿಕಲ್ ಕೆಲಸದ ಅನುಭವ ಸಿಗಬೇಕು ಎನ್ನುವುದು ಈ ಯೋಜನೆಯ ಉದ್ದೇಶ. ಈ ಸ್ಕೀಮ್ ಸುಮಾರು 1 ಕೋಟಿ ಯುವಕ ಮತ್ತು ಯುವತಿಯರಿಗೆ ಅನುಕೂಲವಾಗುವ ನಿರೀಕ್ಷೆ ಇದೆ.

    ಯಾರೆಲ್ಲಾ ಅರ್ಹರು?
    ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿ ನಿರುದ್ಯೋಗಿಯಾಗಿರುವವರು 21ರಿಂದ 24 ವರ್ಷ ವಯಸ್ಸಿನ ಯುವಕರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ), ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ), ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಅಂಡ್ ರಿಸರ್ಚ್ (ಐಐಎಸ್‌ಇಆರ್) ಗಳಿಂದ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಇಂಟರ್ನ್‌ಶಿಪ್‌ಗೆ ಅರ್ಹರಾಗಿರುವುದಿಲ್ಲ.

    ಈ ಅಭ್ಯರ್ಥಿಗಳ ಕುಟುಂಬದ ಇತರ ಯಾವುದೇ ಸದಸ್ಯರು ಆದಾಯ ತೆರಿಗೆ ಪಾವತಿದಾರರಾಗಿರುವಂತಿಲ್ಲ, ಸರ್ಕಾರಿ ಉದ್ಯೋಗಿಯಾಗಿರುವಂತಿಲ್ಲ. 12 ತಿಂಗಳ ಅವಧಿಯ ಈ ಇಂಟರ್ನ್​ಶಿಪ್ ಅಥವಾ ತರಬೇತಿ ಅವಧಿಯಲ್ಲಿ ಅಭ್ಯರ್ಥಿಗೆ ತಿಂಗಳಿಗೆ 5,000 ರೂ ಭತ್ಯೆ ಸಿಗುತ್ತದೆ. ಒಂದು ವರ್ಷದಲ್ಲಿ ಒಟ್ಟಾರೆ 66,000 ರೂ. ಭತ್ಯೆ ಒಬ್ಬರಿಗೆ ಸಿಗುತ್ತದೆ. ಇದರಲ್ಲಿ ಸರ್ಕಾರ ಮಾಸಿಕ ಭತ್ಯೆಯಾಗಿ ಒಟ್ಟು 54,000 ರೂ. ಒದಗಿಸುತ್ತದೆ. ಅನಿರೀಕ್ಷಿತ ವೆಚ್ಚಗಳಿಗೆಂದು 6,000 ರೂ ನೀಡುತ್ತದೆ. ಕಂಪನಿಗಳೂ ಕೂಡ ಒಬ್ಬ ಇಂಟರ್ನ್​ಗೆ ತರಬೇತಿ ವೆಚ್ಚದ ಜೊತೆಗೆ ಹೆಚ್ಚುವರಿಯಾಗಿ 6,000 ರೂ ಕೊಡಬೇಕಾಗುತ್ತದೆ. ಅಲ್ಲಿಗೆ ಇಂಟರ್ನ್​ಶಿಪ್ ಮಾಡುವ ಯುವಕನೊಬ್ಬನಿಗೆ ಉಚಿತವಾಗಿ ತರಬೇತಿ ಸಿಗುವುದರ ಜೊತೆಗೆ ಒಟ್ಟಾರೆ 66,000 ರೂ ಪ್ರೋತ್ಸಾಹ ಧನ ಕೂಡ ಲಭಿಸುತ್ತದೆ. ಕಂಪನಿಗಳು ಈ ತರಬೇತಿ ವೆಚ್ಚಗಳಿಗೆ ತಮ್ಮ ಸಿಎಸ್​ಆರ್ ಫಂಡ್​​ಗಳನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ.

    ಹಣಕಾಸು ಸಚಿವರು 2024-25ರ ಕೇಂದ್ರ ಬಜೆಟ್‌ನ ಭಾಷಣದಲ್ಲಿ ಭಾರತೀಯ ಆರ್ಥಿಕತೆಯಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಒಂಬತ್ತು ಆದ್ಯತೆಗಳನ್ನು ಘೋಷಿಸಿದರು. ಒಂಬತ್ತು ಆದ್ಯತೆಗಳಲ್ಲಿ ಉತ್ಪಾದಕತೆ, ಉದ್ಯೋಗಗಳು, ಸಾಮಾಜಿಕ ನ್ಯಾಯ, ನಗರಾಭಿವೃದ್ಧಿ, ಇಂಧನ ಭದ್ರತೆ, ಮೂಲಸೌಕರ್ಯ, ನಾವೀನ್ಯತೆ ಮತ್ತು ಸುಧಾರಣೆಗಳು ಸೇರಿವೆ.

    ಕೇಂದ್ರ ಹಣಕಾಸು ಸಚಿವೆ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಮುಂದಿನ ಐದು ವರ್ಷಗಳಲ್ಲಿ ಸುಮಾರು 4.1 ಕೋಟಿ ಯುವಕರಿಗೆ ಉದ್ಯೋಗಾವಕಾಶವನ್ನು ಸೃಷ್ಟಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಯೋಜನೆಗೆ ಸುಮಾರು 2 ಲಕ್ಷ ಕೋಟಿ ರೂ. ಹಣ ಮಂಜೂರು ಮಾಡಿದೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ. 

    ಉದ್ಯೋಗ ವಲಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು, ಮಹಿಳಾ ಉದ್ಯೋಗಿಗಳಿಗೆ ಮಹಿಳಾ ಹಾಸ್ಟೆಲ್‌ಗಳನ್ನು ಸ್ಥಾಪಿಸಲು ಸರ್ಕಾರ ಪ್ರಸ್ತಾಪಿಸಿದೆ. ಕೈಗಾರಿಕೆಗಳ ಸಹಯೋಗದೊಂದಿಗೆ ಉದ್ಯೋಗಿ ಮಹಿಳಾ ಹಾಸ್ಟೆಲ್‌ಗಳನ್ನು ಸ್ಥಾಪಿಸುವ ಮೂಲಕ ಮತ್ತು ಕ್ರೆಷ್‌ಗಳನ್ನು ಸ್ಥಾಪಿಸುವ ಮೂಲಕ ನಾವು ಉದ್ಯೋಗ ವಲಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುತ್ತೇವೆ. ಜೊತೆಗೆ ಮಹಿಳೆಯರಿಗಾಗಿ ನಿರ್ದಿಷ್ಟ ಕೌಶಲ್ಯ ಕಾರ್ಯಕ್ರಮಗಳನ್ನು ಆಯೋಜಿಸುತ್ತೇವೆ ಮತ್ತು ಮಹಿಳಾ ಸ್ವಸಹಾಯ ಗುಂಪುಗಳು ಮಾರುಕಟ್ಟೆ ಪ್ರವೇಶವನ್ನು ಉತ್ತೇಜಿಸುತ್ತೇವೆ ಎಂದು ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆ ವೇಳೆ ಹೇಳಿದ್ದಾರೆ.

  • ಎನ್‌ಆರ್‌ಬಿಸಿ ಕಾಲುವೆಗೆ ಬಿದ್ದು ಇಬ್ಬರು ಯುವಕರು ಸಾವು

    ಎನ್‌ಆರ್‌ಬಿಸಿ ಕಾಲುವೆಗೆ ಬಿದ್ದು ಇಬ್ಬರು ಯುವಕರು ಸಾವು

    ರಾಯಚೂರು: ಎನ್‌ಆರ್‌ಬಿಸಿ ಕಾಲುವೆಯಲ್ಲಿ (Canal) ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ಬೆಂಡೋಣಿ ಗ್ರಾಮದಲ್ಲಿ ನಡೆದಿದೆ.

    ಊರ ಜಾತ್ರೆ ನಿಮಿತ್ತ ಮನೆಯಲ್ಲಿನ ಬಟ್ಟೆ ಹಾಸಿಗೆ ತೊಳೆಯಲು ಪಾಲಕರೊಂದಿಗೆ ಕಾಲುವೆಗೆ ಹೋದಾಗ ಘಟನೆ ನಡೆದಿದೆ. ಲಿಂಗಸುಗೂರು ತಾಲೂಕಿನ ಬೆಂಡೋಣಿ ಗ್ರಾಮದ ಲಕ್ಕಣ್ಣ (22) ಹಾಗೂ ಬಸವಂತ (25) ಮೃತ ಯುವಕರು. ಬಟ್ಟೆ ತೊಳೆಯೋ ಮೊದಲು ಓರ್ವ ಯುವಕ ಕಾಲು ಜಾರಿ ನೀರಿಗೆ ಬಿದ್ದಿದ್ದ. ಅವನನ್ನು ಕಾಪಾಡಲು ಮತ್ತೋರ್ವ ಯುವಕ ನೀರಿಗೆ ಧುಮುಕಿದ್ದ. ಆದರೆ ಇಬ್ಬರಿಗೂ ಈಜು ಬಾರದ ಹಿನ್ನೆಲೆ ಕಾಲುವೆಯಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ದೇವೇಗೌಡರು ಪ್ಲಾನ್ ಮಾಡಿ ಪ್ರಜ್ವಲ್‌ನನ್ನು ವಿದೇಶಕ್ಕೆ ಕಳುಹಿಸಿದ್ದಾರೆ: ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

    ಸ್ಥಳೀಯರು ರಕ್ಷಣೆಗೆ ಪ್ರಯತ್ನ ಪಟ್ಟರೂ ಯಶಸ್ವಿಯಾಗಿಲ್ಲ. ಬಳಿಕ ಯುವಕರ ಶವಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಈ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಸ್ಲಿಮರು ಮಾತ್ರ ಹೆಚ್ಚು ಮಕ್ಕಳನ್ನು ಹೊಂದುತ್ತಾರೆಯೇ? ನನಗೂ ಐದು ಜನ ಮಕ್ಕಳು: ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

  • ದತ್ತಜಯಂತಿಯ ಶೋಭಾಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಭಕ್ತರು ಭಾಗಿ

    ದತ್ತಜಯಂತಿಯ ಶೋಭಾಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಭಕ್ತರು ಭಾಗಿ

    – ಕೇಸರಿ ಬಾವುಟ ಹಿಡಿದು ಕುಣಿದು ಕುಪ್ಪಳಿಸಿದ ಯುವಕರು

    ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು (Chikkamagaluru) ಅಕ್ಷರಶಃ ಕೇಸರಿ ಮಯವಾಗಿತ್ತು. ದತ್ತ ಜಯಂತಿಯ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಸಲಾಯ್ತು. ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದ್ರು. ಬಸವನಹಳ್ಳಿ ಮುಖ್ಯ ರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆ ಮೂಲಕ ಸಾಗಿದ ಶೋಭಾಯಾತ್ರೆ ಆಜಾದ್ ವೃತ್ತದಲ್ಲಿ ಕೊನೆಗೊಂಡಿತು.

    ಶೋಭಾಯಾತ್ರೆಯಲ್ಲಿ 20 ರಿಂದ 25 ಸಾವಿರ ದತ್ತ ಭಕ್ತರು ಪಾಲ್ಗೊಂಡಿದ್ರು. ವೀರಭದ್ರ ವೇಷಧಾರಿಗಳ ಜೊತೆ ವೀರಗಾಸೆ ಕತ್ತಿ ಹಿಡಿದು ಮಾಡಿದ ನೃತ್ಯ ಎಲ್ಲರ ಗಮನ ಸೆಳೆಯಿತು. ಮೂರು ಡಿಜೆ ಶಬ್ಧಕ್ಕೆ ಯುವಜನತೆ ಯುವಕ-ಯುವತಿಯರು ಎನ್ನದೆ ಎಲ್ಲರೂ ಒಂದೆಡೆ ಸೇರಿ ಮನಸ್ಸೋ ಇಚ್ಛೆ ಕುಣಿದು ಕುಪ್ಪಳಿಸಿದರು. ಈ ಮನಮೋಹಕ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಮಧ್ಯೆ ದತ್ತಪೀಠವನ್ನ ಹಿಂದೂಗಳಿಗೆ ವಹಿಸಿಕೊಡಬೇಕು ಎಂದು ಕೂಗಿ…ಕೂಗಿ ಹೇಳಿದ್ರು. ಇದನ್ನೂ ಓದಿ: ಮನೆ-ಮನೆಗೆ ತೆರಳಿ ಪಡಿ ಸಂಗ್ರಹಿಸಿದ ದತ್ತಮಾಲಾಧಾರಿ ಸಿ.ಟಿ ರವಿ

    ಭಜನೆ, ವೀರಗಾಸೆ ಶೋಭಾಯಾತ್ರೆಗೆ ಮತ್ತಷ್ಟು ಮೆರಗು ತಂದವು. ಭಜರಂಗದಳ (Bhajrangdal) ಹಾಗೂ ವಿಶ್ವಹಿಂದೂ ಪರಿಷತ್‍ನ ಸಾವಿರಾರು ಕಾರ್ಯಕರ್ತರು ಬ್ಯಾಂಡ್ ವಾದ್ಯಕ್ಕೆ ಹೆಜ್ಜೆ ಹಾಕಿದ್ರು. ಡಿಜೆಯ ಮ್ಯೂಸಿಕ್‍ಗೆ ಯುವಜನತೆ ಮನಸ್ಸೋ ಇಚ್ಛೆ ಕುಣಿದು ಕುಪ್ಪಳಿಸಿದರು. ಯಾತ್ರೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಭಾವಚಿತ್ರದ ಬ್ಯಾನರ್ ರಾರಾಜಿಸುತ್ತಿತ್ತು. ಶೋಭಾಯಾತ್ರೆ ಸಾಗೋ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಹೆಜ್ಜೆಗೊಬ್ಬರಂತೆ 3 ಸಾವಿರ ಪೊಲೀಸರು ಶೋಭಾಯಾತ್ರೆ ಮೇಲೆ ಹದ್ದಿನ ಕಣ್ಣಿಟ್ಟಿದ್ದರು.

    ದತ್ತಜಯಂತಿಯ 3ನೇ ದಿನವಾದ ಇಂದು ರಾಜ್ಯದ 25 ಸಾವಿರಕ್ಕೂ ಅಧಿಕ ದತ್ತಭಕ್ತರು ದತ್ತಪೀಠಕ್ಕೆ (Dattapita) ತೆರಳಲಿದ್ದಾರೆ. ಮುಂಜಾನೆಯಿಂದಲೇ ದತ್ತಭಕ್ತರು ದತ್ತಪೀಠಕ್ಕೆ ತೆರಳಿ ಹೋಮ, ಹವನ ನಡೆಸುವುದರ ಜೊತೆಗೆ ಗುಹೆಯಲ್ಲಿನ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ಈ ಮಧ್ಯೆ ನಾಗೇನಹಳ್ಳಿ ದರ್ಗಾದಲ್ಲಿ ದತ್ತ ಜಯಂತಿ ಆಚರಿಸುತ್ತೇವೆ ಎಂದು ಹೇಳಿದ ಶ್ರೀರಾಮ ಸೇನೆಯ ನಡೆಯಾಗಿದೆ. ಈ ಮೂಲಕ ಮೂರು ದಿನಗಳ ಕಾಲ ನಡೆದ ದತ್ತಜಯಂತಿ ಸಮಾಪನಗೊಳ್ಳಲಿದೆ. ಈ ನಡುವೆ ಇಂದು ಕೂಡ ಯಾವುದೇ ಅಹಿತಕರ ಘಟನೆ ನಡೆಯದಂತೆ ದತ್ತಜಯಂತಿ ಶಾಂತಿಯುತವಾಗಿ ನಡೆಯಲೆಂಬುದು ಚಿಕ್ಕಮಗಳೂರಿಗರ ಆಶಯ.

  • ನಡೆದುಕೊಂಡು ಹೋಗ್ತಿದ್ದ ಇಬ್ಬರ ಮೇಲೆ ಹರಿದ ಬೈಕ್- ಸವಾರ, ಪಾದಾಚಾರಿ ದುರ್ಮರಣ

    ನಡೆದುಕೊಂಡು ಹೋಗ್ತಿದ್ದ ಇಬ್ಬರ ಮೇಲೆ ಹರಿದ ಬೈಕ್- ಸವಾರ, ಪಾದಾಚಾರಿ ದುರ್ಮರಣ

    ಬೆಳಗಾವಿ: ಕನ್ನಡ ರಾಜ್ಯೋತ್ಸವ (Kannada Rajyotsava) ಮುಗಿಸಿಕೊಂಡು ಮರಳುತ್ತಿದ್ದ ವೇಳೆ, ಬೈಕ್‌ವೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಿತ್ತೂರು (Kittur) ತಾಲೂಕಿನ ಎಂ.ಕೆ.ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

    ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ರಾತ್ರಿ 11 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮೃತರು ಧಾರವಾಡ (Dharwad) ಜಿಲ್ಲೆಯ ನರೇಂದ್ರದ ಲಬೈಕ್ ಹಲಸಿಗರ ಹಾಗೂ ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಗ್ರಾಮದ ಶ್ರೀನಾಥ ಗುಜನಾಳ ಎಂದು ಗುರುತಿಸಲಾಗಿದೆ. ಘಟನೆಯಿಂದ ಧಾರವಾಡ ನಗರದ ಅಲ್ತಾಫ್ ನಾಲಬಂದ ಹಾಗೂ ಕಡತನ ಬಾಗೇವಾಡಿಯ ಅರ್ಜುನ ರಂಗಣ್ಣವರ್ ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

    ಯುವಕರ ಮೃತದೇಹ ಬಿದ್ದ ಸ್ಥಳದಿಂದ 300 ಮೀಟರ್ ದೂರದಲ್ಲಿ ಬೈಕ್ ಪತ್ತೆಯಾಗಿದೆ. ಇಬ್ಬರು ಯುವಕರು ಬೈಕ್‌ನಲ್ಲಿ ವೇಗವಾಗಿ ಹೊರಟಿದ್ದರು. ಇದೇ ವೇಳೆ ಹೆದ್ದಾರಿ ಪಕ್ಕದ ಹೋಟೆಲ್‌ನಲ್ಲಿ ಊಟ ಮಾಡಿದ ಇಬ್ಬರು ಯುವಕರು ಹೆದ್ದಾರಿ ದಾಟುತ್ತಿದ್ದರು. ಆ ವೇಳೆ ಪಾದಚಾರಿಗಳಿಗೆ ಬೈಕ್ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಹಾಗೂ ಓರ್ವ ಪಾದಚಾರಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಂತಾರಾಜ್ಯ ಅಡಿಕೆ ವ್ಯಾಪಾರಿಯ 1 ಕೋಟಿ ಹಣ ಕಳವು – ಮೂವರ ಬಂಧನ

  • ತುಂಗಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

    ತುಂಗಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

    ಶಿವಮೊಗ್ಗ: ತುಂಗಾ ನದಿಯಲ್ಲಿ (Tunga River) ಮೀನು ಹಿಡಿಯಲು (Fishing) ತೆರಳಿದ್ದ ಇಬ್ಬರು ಯುವಕರು (Youths) ನೀರು ಪಾಲಾದ ಘಟನೆ ಶಿವಮೊಗ್ಗದ (Shivamogga) ಕುರುಬರಪಾಳ್ಯ ಬಳಿ ನಡೆದಿದೆ.

    ತುಂಗಾನದಿಯಲ್ಲಿ ನೀರು ಪಾಲಾದವರನ್ನು ಮಹಮ್ಮದ್ ಫೈಸಲ್ (19) ಹಾಗೂ ಅಂಜುಂಖಾನ್ (19) ಎಂದು ಗುರುತಿಸಲಾಗಿದೆ. ಸವಾಯಿಪಾಳ್ಯದ ಮಹಮ್ಮದ್ ಫೈಸಲ್ ಹಾಗೂ ಇಲಿಯಾಜ್ ನಗರದ ಅಂಜುಂಖಾನ್ ಪದವಿ ವಿದ್ಯಾರ್ಥಿಗಳಾಗಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಇದನ್ನೂ ಓದಿ: ಚೈತ್ರಾ ಕುಂದಾಪುರ ಮೇಲೆ ಮತ್ತೊಂದು FIR – ಸನಾತನ ಧರ್ಮ ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆ

    ಸೋಮವಾರ ಮಧ್ಯಾಹ್ನ ತುಂಗಾನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ವೇಳೆ ಇಬ್ಬರೂ ನೀರು ಪಾಲಾಗಿದ್ದು, ಮಹಮ್ಮದ್ ಫೈಸಲ್ ಮೃತದೇಹ ಪತ್ತೆಯಾಗಿದೆ. ಅಂಜುಂಖಾನ್ ಮೃತದೇಹಕ್ಕಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ. ಇದನ್ನೂ ಓದಿ: ರಸ್ತೆಬದಿ ನಿಲ್ಲಿಸಿದ್ದ ಕಂಟೈನರ್‌ಗೆ ಕಾರು ಡಿಕ್ಕಿ – ನಾಲ್ವರು ಸಾವು

    ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ನದಿಯಲ್ಲಿ ಶೋಧಕಾರ್ಯ ನಡೆಸುತ್ತಿದ್ದಾರೆ. ಘಟನೆಯಿಂದ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ. ಈ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ – ಓರ್ವ ಸಾವು, ನಾಲ್ವರು ಗಂಭೀರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]