Tag: Youtube Ban

  • ನೇಪಾಳದಲ್ಲಿ ಫೇಸ್‌ಬುಕ್‌, ಯೂಟ್ಯೂಬ್‌, ಎಕ್ಸ್‌ ನಿಷೇಧ – ಸರ್ಕಾರದ ವಿರುದ್ಧ ಸಿಡಿದೆದ್ದ ಜನರು; ಹಿಂಸಾಚಾರಕ್ಕೆ 9 ಬಲಿ

    ನೇಪಾಳದಲ್ಲಿ ಫೇಸ್‌ಬುಕ್‌, ಯೂಟ್ಯೂಬ್‌, ಎಕ್ಸ್‌ ನಿಷೇಧ – ಸರ್ಕಾರದ ವಿರುದ್ಧ ಸಿಡಿದೆದ್ದ ಜನರು; ಹಿಂಸಾಚಾರಕ್ಕೆ 9 ಬಲಿ

    – ಬೀದಿಗಿಳಿದು ಬೃಹತ್‌ ಪ್ರತಿಭಟನೆ

    ಕಠ್ಮಂಡು: ಭ್ರಷ್ಟಾಚಾರ ಹಾಗೂ ಫೇಸ್‌ಬುಕ್‌, ಯೂಟ್ಯೂಬ್‌, ಎಕ್ಸ್‌ ಆ್ಯಪ್‌ಗಳನ್ನು ಬ್ಯಾನ್‌ ಮಾಡಿದ ಸರ್ಕಾರದ ವಿರುದ್ಧ ನೇಪಾಳದ (Nepal) ಜನತೆಗೆ ತಿರುಗಿಬಿದ್ದಿದ್ದಾರೆ. ದೇಶಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ.

    ಪ್ರತಿಭಟನಾಕಾರರು ಬೀದಿಗಿಳಿದಾಗ ನಡೆದ ಹಿಂಸಾತ್ಮಕ ಘರ್ಷಣೆಗಳಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಕೋಪಗೊಂಡ ಪ್ರತಿಭಟನಾಕಾರರು ಕರ್ಫ್ಯೂ ನಿರ್ಬಂಧಗಳನ್ನು ಮುರಿದು ಸಂಸತ್ತಿನ ಬಳಿಯ ನಿರ್ಬಂಧಿತ ವಲಯಗಳನ್ನು ಪ್ರವೇಶಿಸಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ, ನೇಪಾಳ ರಾಜಧಾನಿಯಲ್ಲಿ ಸೈನ್ಯವನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ನೇಪಾಳದಲ್ಲಿ ಫೇಸ್ಬುಕ್, ಎಕ್ಸ್, ಯೂಟ್ಯೂಬ್ ಸೇರಿ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ

    ಪ್ರತಿಭಟನಾಕಾರರು ಮರದ ಕೊಂಬೆಗಳು ಮತ್ತು ನೀರಿನ ಬಾಟಲಿಗಳನ್ನು ಎಸೆದು ಸರ್ಕಾರದ ವಿರೋಧಿ ಘೋಷಣೆಗಳನ್ನು ಕೂಗಿದರು. ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ರಬ್ಬರ್ ಗುಂಡು ಸಿಡಿಸಿದರು. ಕೆಲವು ಪ್ರತಿಭಟನಾಕಾರರು ಸಂಸತ್ತಿನ ಆವರಣವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾದರು, ಇದು ಪರಿಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸಿದೆ.

    ಮುಖ್ಯ ಜಿಲ್ಲಾ ಅಧಿಕಾರಿ ಛಬಿಲಾಲ್ ರಿಜಾಲ್ ಪ್ರಕಾರ, ಕರ್ಫ್ಯೂ ಮಧ್ಯಾಹ್ನ 12:30 ರಿಂದ ರಾತ್ರಿ 10:00 ರವರೆಗೆ (ಸ್ಥಳೀಯ ಸಮಯ) ಜಾರಿಯಲ್ಲಿದೆ. ಈ ವಲಯಗಳಲ್ಲಿ ಸಾರ್ವಜನಿಕರ ಓಡಾಟ, ಸಭೆ ಸೇರುವುದು, ಪ್ರತಿಭಟನೆಗಳು ಅಥವಾ ಸುತ್ತುವರಿದ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದನ್ನೂ ಓದಿ: ಇಸ್ರೇಲಿನ ಜೆರುಸಲೇಂನಲ್ಲಿ ಉಗ್ರರ ದಾಳಿ – ಕನಿಷ್ಠ 5 ಬಲಿ, ಹಲವು ಮಂದಿಗೆ ಗಾಯ

    ನೇಪಾಳ ಸರ್ಕಾರ ನೋಂದಾಯಿತ 26 ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಿದೆ. ಇಲ್ಲಿನ ಜನತೆಗೆ ಯೂಟ್ಯೂಬ್‌, ಎಕ್ಸ್‌, ಫೇಸ್‌ಬುಕ್‌ ಸೈಟ್‌ಗಳನ್ನು ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಇದು ಬಳಕೆದಾರರ ಆಕ್ರೋಶ ಕಾರಣವಾಗಿದೆ. ಇನ್‌ಸ್ಟಾಗ್ರಾಮ್‌ನಂತಹ ಜನಪ್ರಿಯ ಪ್ಲಾಟ್‌ಫಾರ್ಮ್‌ಗಳು ನೇಪಾಳದಲ್ಲಿ ಲಕ್ಷಾಂತರ ಬಳಕೆದಾರರನ್ನು ಹೊಂದಿದೆ.

    ಸರ್ಕಾರದ ಕ್ರಮವು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಾವಿರಾರು ಯುವ ನೇಪಾಳಿಗಳು ಕಠ್ಮಂಡುವಿನಲ್ಲಿ ಮೆರವಣಿಗೆ ನಡೆಸಿ, ಸರ್ಕಾರವು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ನಿಷೇಧವನ್ನು ತೆಗೆದುಹಾಕಬೇಕು. ದೇಶವನ್ನು ವ್ಯಾಪಿಸಿರುವ ಭ್ರಷ್ಟಾಚಾರದ ಸಂಸ್ಕೃತಿಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

  • ಪಾಕ್‌ನ ನ್ಯೂಸ್ ಚಾನೆಲ್ ಸೇರಿ 16 ಯೂಟ್ಯೂಬ್, 29 ಎಕ್ಸ್ ಖಾತೆ ಬ್ಯಾನ್ ಮಾಡಿದ ಕೇಂದ್ರ

    ಪಾಕ್‌ನ ನ್ಯೂಸ್ ಚಾನೆಲ್ ಸೇರಿ 16 ಯೂಟ್ಯೂಬ್, 29 ಎಕ್ಸ್ ಖಾತೆ ಬ್ಯಾನ್ ಮಾಡಿದ ಕೇಂದ್ರ

    – ಬಿಬಿಸಿಗೂ ತಟ್ಟಿದ ಬಿಸಿ

    ನವದೆಹಲಿ: ಪಹಲ್ಗಾಮ್‌ನ ಉಗ್ರರ ದಾಳಿಯ (Pahalgam Terror Attack) ಬಳಿಕ ಭಾರತದ ವಿರುದ್ಧ ಪ್ರಚೋದನಕಾರಿ ಹಾಗೂ ನಕಲಿ ಸುದ್ದಿಯನ್ನು ಪ್ರಸಾರ ಮಾಡುತ್ತಿದ್ದ ಪಾಕಿಸ್ತಾನದ (Pakistan) ನ್ಯೂಸ್ ಚಾನೆಲ್ ಸೇರಿ 16 ಯೂಟ್ಯೂಬ್ (Youtube), 29 ಎಕ್ಸ್ ಖಾತೆಗಳನ್ನು ಕೇಂದ್ರ ಸರ್ಕಾರ ಭಾರತದಲ್ಲಿ ಬ್ಯಾನ್ ಮಾಡಿದೆ.

    ಡಾನ್, ಸಮಾ ಟಿವಿ, ಎಆರ್‌ವೈ ನ್ಯೂಸ್, ಬೋಲ್ ನ್ಯೂಸ್, ರಫ್ತಾರ್, ಜಿಯೋ ನ್ಯೂಸ್ ಮತ್ತು ಸುನೋ ನ್ಯೂಸ್ ಸುದ್ದಿ ವಾಹಿನಿಗಳನ್ನ ಭಾರತದಲ್ಲಿ ಬ್ಯಾನ್ ಮಾಡಲಾಗಿದೆ. ಪತ್ರಕರ್ತರಾದ ಇರ್ಷಾದ್ ಭಟ್ಟಿ, ಅಸ್ಮಾ ಶಿರಾಜಿ, ಉಮರ್ ಚೀಮಾ ಮತ್ತು ಮುನೀಬ್ ಫಾರೂಕ್ ಅವರ ಯೂಟ್ಯೂಬ್ ಚಾನೆಲ್‌ಗಳನ್ನು ಸಹ ನಿಷೇಧಿಸಲಾಗಿದೆ. ದಿ ಪಾಕಿಸ್ತಾನ್ ರೆಫರೆನ್ಸ್, ಸಮಾ ಸ್ಪೋರ್ಟ್ಸ್, ಉಜೈರ್ ಕ್ರಿಕೆಟ್ ಮತ್ತು ರಾಜಿ ನಾಮಾ ಸೇರಿದಂತೆ ಇತರ ಖಾತೆಗಳನ್ನು ಕೇಂದ್ರ ಗೃಹಸಚಿವಾಲಯದ ಶಿಫಾರಸ್ಸಿನ ಮೇಲೆ ಬ್ಯಾನ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮೋದಿ-ರಾಜನಾಥ್ ಸಿಂಗ್ ಮಹತ್ವದ ಚರ್ಚೆ; ಉಗ್ರರ ವಿರುದ್ಧ ಮುಂದಿನ ಕ್ರಮಕ್ಕೆ ಮಾಸ್ಟರ್ ಪ್ಲ್ಯಾನ್

    ಈ ಚಾನೆಲ್‌ಗಳನ್ನು ನೋಡಲು ಯಾರಾದರೂ ಪ್ರಯತ್ನಿಸಿದರೆ, ಅವರಿಗೆ ಈ ಕೆಳಗಿನ ಸಂದೇಶವು ಕಾಣಿಸುತ್ತದೆ. `ರಾಷ್ಟ್ರೀಯ ಭದ್ರತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ಸರ್ಕಾರದ ಆದೇಶದಿಂದಾಗಿ ಈ ವಿಷಯವು ಪ್ರಸ್ತುತ ಈ ದೇಶದಲ್ಲಿ ಲಭ್ಯವಿಲ್ಲ. ಸರ್ಕಾರದ ಈ ನಿರ್ಧಾರದ ಕುರಿತು ಹೆಚ್ಚಿನ ವಿವರಗಳಿಗಾಗಿ, ದಯವಿಟ್ಟು ಗೂಗಲ್‌ನ ಪಾರದರ್ಶಕತೆ ವರದಿಗೆ ಭೇಟಿ ನೀಡಿ’ ಎಂದು ತೋರಿಸುತ್ತದೆ. ಇದನ್ನೂ ಓದಿ: 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಹಿ; ಭಾರತ-ಫ್ರಾನ್ಸ್ ಮಧ್ಯೆ 63,000 ಕೋಟಿ ಮೆಗಾ ಡೀಲ್‌

    ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನವು ಪ್ರಮುಖ ಪಾತ್ರವಹಿಸಿದೆ ಎಂದು ಶಂಕಿಸಿ ಭಾರತ ಪಾಕ್ ವಿರುದ್ಧ ತೀವ್ರ ಕ್ರಮ ಕೈಗೊಂಡಿದೆ. ನವದೆಹಲಿ ಸಿಂಧೂ ಜಲ ಒಪ್ಪಂದ ಮತ್ತು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದೆ. ಇದರ ಬೆನ್ನಲ್ಲೇ ಪಾಕ್ ಕೂಡಾ ಶಿಮ್ಲಾ ಗಡಿ ಒಪ್ಪಂದ ಸೇರಿ ಎಲ್ಲಾ ರೀತಿಯ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಇದನ್ನೂಓದಿ: ಉಗ್ರರ ದಾಳಿ ಬಳಿಕ ಕಾಶ್ಮೀರಕ್ಕೆ ಭೇಟಿ ನೀಡಿದ ಅತುಲ್ ಕುಲಕರ್ಣಿ

    `ಕಾಶ್ಮೀರದಲ್ಲಿ ಪ್ರವಾಸಿಗರ ಮೇಲಿನ ದಾಳಿಯ ನಂತರ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ವೀಸಾ ಸ್ಥಗಿತಗೊಳಿಸಿದೆ’ ಎಂಬ ಶೀರ್ಷಿಕೆಯ ಬಗ್ಗೆ ಸರ್ಕಾರ ಬಿಬಿಸಿಗೆ ಎಚ್ಚರಿಕೆ ನೀಡಿದೆ. ಅಲ್ಲದೇ ಕೆಲವು ಸುದ್ದಿಗಳಲ್ಲಿ `ಭಾರತ ಪ್ರವಾಸಿಗರನ್ನು ಕೊಂದಿದೆ’ ಎಂಬ ಶೀರ್ಷಿಕೆಯನ್ನು ಹಾಕಲಾಗಿದೆ. ಈ ಕುರಿತು ಬಿಬಿಸಿಗೆ ಪತ್ರ ಬರೆದ ಭಾರತ ವಾಸ್ತವ ವರದಿಗಳನ್ನಷ್ಟೇ ಪ್ರಸಾರ ಮಾಡುವಂತೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದೆ.