Tag: youtuber

  • ಧಾರವಾಡ | ಯೂಟ್ಯೂಬರ್‌ ಮುಕಳೆಪ್ಪನ ಪತ್ನಿ ಪೊಲೀಸರ ವಶಕ್ಕೆ – ಶಕ್ತಿ ಸದನ ಕೇಂದ್ರಕ್ಕೆ ರವಾನೆ

    ಧಾರವಾಡ | ಯೂಟ್ಯೂಬರ್‌ ಮುಕಳೆಪ್ಪನ ಪತ್ನಿ ಪೊಲೀಸರ ವಶಕ್ಕೆ – ಶಕ್ತಿ ಸದನ ಕೇಂದ್ರಕ್ಕೆ ರವಾನೆ

    ಧಾರವಾಡ: ಯೂಟ್ಯೂಬರ್‌ ಮುಕಳೆಪ್ಪನ (Youtuber Mukaleppa) ಹೆಂಡತಿ ಗಾಯತ್ರಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ತಮ್ಮ ವಶಕ್ಕೆ ಪಡೆದು ಧಾರವಾಡದ ಶಕ್ತಿ ಸದನ ಕೇಂದ್ರದಲ್ಲಿರಿಸಿದ್ದಾರೆ.

    ಮುಕಳೆಪ್ಪ ಲವ್ ಜಿಹಾದ್ ಮಾಡಿ, ಖೊಟ್ಟಿ ದಾಖಲೆ ನೀಡಿ ಹಿಂದೂ ಯುವತಿಯನ್ನು ಮದುವೆಯಾಗಿದ್ದಾನೆ. ಅಲ್ಲದೇ ಗಾಯತ್ರಿಯ ತಲೆ ಕೆಡಿಸಿ, ಆಕೆಯ ಮನೆಯವರನ್ನೂ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಸ್ವತಃ ಗಾಯತ್ರಿ ಪಾಲಕರೇ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಸದ್ಯ ಗಾಯತ್ರಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಆಕೆಗೆ ನಾಳೆಯವರೆಗೂ ಇರಲು ಧಾರವಾಡದ ಶಕ್ತಿ ಸದನ ಕೇಂದ್ರದಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಮುಕಳೆಪ್ಪನ ಹೆಂಡತಿಯ ಮತ್ತೊಂದು ವೀಡಿಯೋ ವೈರಲ್ – ತಾಯಿ ಜೊತೆ ಗಾಯತ್ರಿ ಮಾತಾಡಿದ್ದೇನು?

    ಸೋಮವಾರ ರಾತ್ರಿಯೇ ಗಾಯತ್ರಿಯನ್ನು ಪೊಲೀಸರು ಧಾರವಾಡದ ಶಕ್ತಿ ಸದನ ಕೇಂದ್ರಕ್ಕೆ ಕರೆತಂದಿದ್ದಾರೆ. ಇವತ್ತು ಅಲ್ಲೇ ಆಕೆಗೆ ಇರಲು ಅವಕಾಶ ಮಾಡಿಕೊಟ್ಟು ನಾಳೆ ನ್ಯಾಯಾಲಯದ ಮುಂದೆ ಪೊಲೀಸರು ಆಕೆಯನ್ನು ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ಧಾರವಾಡ | ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ – ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು

    ಇವತ್ತು ರಾತ್ರಿ ಗಾಯತ್ರಿ ಜೊತೆ ಮಹಿಳಾ ಪೊಲೀಸ್ ಸಿಬ್ಬಂದಿಯೇ ವಸತಿ ಮಾಡಲಿದ್ದು, ನಾಳೆ ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಒಟ್ಟಾರೆ ಕಾಮಿಡಿ ವೀಡಿಯೋಗಳ ಮೂಲಕವೇ ಹೆಸರು ಮಾಡಿದ್ದ ಮುಕಳೆಪ್ಪನ ವಿರುದ್ಧ ಇದೀಗ ಗಂಭೀರ ಆರೋಪ ಕೇಳಿ ಬರುವುದರ ಜೊತೆಗೆ ಆತನ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಸದ್ಯ ಈ ಪ್ರಕರಣ ಮುಂದೆ ಯಾವ ಹಂತಕ್ಕೆ ಹೋಗಿ ನಿಲ್ಲುತ್ತದೆಯೋ ಕಾದು ನೋಡಬೇಕಿದೆ. ಇದನ್ನೂ ಓದಿ: ಯೂಟ್ಯೂಬರ್ ಮುಕಳೆಪ್ಪ ಮದುವೆ ಕೇಸ್; ಪೋಷಕರ ವಿರುದ್ಧವೇ ತಿರುಗಿ ಬಿದ್ದ ಮಗಳು! 

  • ಮುಕಳೆಪ್ಪನ ಹೆಂಡತಿಯ ಮತ್ತೊಂದು ವೀಡಿಯೋ ವೈರಲ್ – ತಾಯಿ ಜೊತೆ ಗಾಯತ್ರಿ ಮಾತಾಡಿದ್ದೇನು?

    ಮುಕಳೆಪ್ಪನ ಹೆಂಡತಿಯ ಮತ್ತೊಂದು ವೀಡಿಯೋ ವೈರಲ್ – ತಾಯಿ ಜೊತೆ ಗಾಯತ್ರಿ ಮಾತಾಡಿದ್ದೇನು?

    ಧಾರವಾಡ: ಯೂಟ್ಯೂಬರ್ (Youtuber) ಕಾಮಿಡಿ ಸ್ಟಾರ್ ಮುಕಳೆಪ್ಪನ (Mukleppa) ಹೆಂಡತಿ ಗಾಯತ್ರಿಯ ಮತ್ತೊಂದು ವೀಡಿಯೋ ವೈರಲ್ ಆಗಿದೆ. ವೀಡಿಯೋದಲ್ಲಿ ಗಾಯತ್ರಿ ಹಾಗೂ ಆಕೆಯ ತಾಯಿ ಫೋನ್‌ನಲ್ಲಿ ಮಾತಾಡಿದ ಆಡಿಯೋ ಸೇರಿಸಿ ಹರಿಬಿಡಲಾಗಿದೆ.

    ಯಾರ್‍ಯಾರೋ ತನ್ನ ತಾಯಿ ಮನೆಗೆ ಬಂದು ಏನೋ ಹೇಳಿ ಹೋಗುತ್ತಿದ್ದಾರೆ. ಇದರ ಬಗ್ಗೆ ಹಾಗೂ ಇಷ್ಟೆಲ್ಲ ಬೆಳವಣಿಗೆಗೆ ಕಾರಣ ಯಾರು ಎಂಬುದನ್ನು ಗಾಯತ್ರಿ ತನ್ನ ತಾಯಿ ಜೊತೆ ಫೋನ್‌ನಲ್ಲಿ ಚರ್ಚಿಸಿದ್ದಾಳೆ. ಅದರ ಆಡಿಯೋವನ್ನು ಗಾಯತ್ರಿ ಶೇರ್ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ನಕಲಿ ದಾಖಲೆ ತೋರಿಸಿ ಹಿಂದೂ ಯುವತಿ ಜೊತೆ ಮದ್ವೆ – ಯೂಟ್ಯೂಬರ್ ಮುಕಳೆಪ್ಪ ವಿರುದ್ಧ ಎಫ್‌ಐಆರ್

    ಆಡಿಯೋದಲ್ಲಿ ಗಾಯತ್ರಿಯ ತಾಯಿ, ನಿನ್ನನ್ನು ಮದುವೆ ಮಾಡಿಕೊಂಡು ಹೋದವರು ನಿನಗೆ ಏನು ಕೊಟ್ಟಿದ್ದಾರೆ? ನೀನು ಅವರ ಹೆಂಡತಿ ಎನ್ನುವುದಕ್ಕೆ ಏನು ಸಾಕ್ಷಿ ಇದೆ ಎಂದು ಕೇಳಿದ್ದಾಳೆ. ಅಲ್ಲದೇ ನನಗೆ ನಿನ್ನ ಮರ್ಯಾದೆ ಹರಾಜು ಹಾಕಲು ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಿದ್ದಾಳೆ.‌

    ಈ ವೇಳೆ ಗಾಯತ್ರಿ ನನಗೆ ಬಂಗಾರದ ಒಡವೆ, ತಾಳಿಯನ್ನು ಮಾಡಿಸಿಕೊಟ್ಟಿದ್ದಾರೆ ಎಂದು ತಾಯಿ ಬಳಿ ಹೇಳಿಕೊಂಡಿದ್ದಾಳೆ. ಯಾರಾದ್ರೂ ಬರಲಿ ಏನಾದ್ರೂ ಹೇಳಲಿ, ನೀವು ಸುಮ್ಮನೆ ಇರಿ. ಮನೆ ಬಾಗಿಲು ಸಹ ತೆಗೆಯ ಬೇಡಿ ಎಂದು ತಾಯಿ ಬಳಿ ಗಾಯತ್ರಿ ಮನವಿ ಮಾಡಿದ್ದಾಳೆ. ಇದನ್ನೂ ಓದಿ: ಯೂಟ್ಯೂಬರ್ ಮುಕಳೆಪ್ಪ ಮದುವೆ ಕೇಸ್; ಪೋಷಕರ ವಿರುದ್ಧವೇ ತಿರುಗಿ ಬಿದ್ದ ಮಗಳು!

  • ಧಾರವಾಡ | ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ – ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು

    ಧಾರವಾಡ | ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ – ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು

    – ಲವ್‌ ಜಿಹಾದ್ ಆರೋಪದ ಮೇಲೆ ದೂರು

    ಧಾರವಾಡ: ಕನ್ನಡದ ಜಯಪ್ರಿಯ ಯೂಟ್ಯೂಬರ್ ಕ್ವಾಜಾ aಬಂದೇನ್‌ವಾಜಾ ಮಹಮದ್ ಹನೀಫ್‌ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ (Youtuber Mukaleppa) ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್‌ ಜಿಹಾದ್ ಆರೋಪ ಮಾಡಿರುವ ಕಾರ್ಯಕರ್ತರು, ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನ ಮದುವೆಯಾಗಿದ್ದಾನೆ ಎಂದು ಆರೋಪಿಸಿದ್ದಾರೆ.

    ಮುಕಳೆಪ್ಪ ಮೂಲತಃ ಇಸ್ಲಾಂ (Islam) ಧರ್ಮಕ್ಕೆ ಸೇರಿದವನಾಗಿದ್ದು, ನಕಲಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನ ವಿವಾಹವಾಗಿದ್ದಾನೆ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟರ್ ಮಾಡಿಕೊಳ್ಳುವ ಮೂಲಕ ಮುಕಳೆಪ್ಪ ವಿವಾಹವಾಗಿದ್ದಾನೆ ಎಂದು ದೂರಿನಲ್ಲಿ ಬಜರಂಗದಳ ಕಾರ್ಯಕರ್ತರು (Bajrang Dal Workers) ಆರೋಪಿಸಿದ್ದಾರೆ. ಇದನ್ನೂ ಓದಿ: ಪತ್ನಿಗೆ ಅಕ್ರಮ ಸಂಬಂಧ ಶಂಕೆ – ಊಟಕ್ಕೆ ವಿಷ ಹಾಕಿ ಕೊಂದು ನಾಪತ್ತೆಯಾಗಿದ್ದಾಳೆಂದು ದೂರು ಕೊಟ್ಟ ಪತಿ

    ಹಿಂದೂ ಯುವತಿಯರನ್ನೇ ಟಾರ್ಗೆಟ್‌ ಮಾಡಿ ವಿಡಿಯೋ
    ಮುಕಳೆಪ್ಪ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅವರ ಜೊತೆ ವೀಡಿಯೋ ಮಾಡುತ್ತಾನೆ. ಶಾರ್ಟ್ ವೀಡಿಯೋದಲ್ಲಿ ಹಿಂದೂ ಯುವತಿಯರು ಹಾಗೂ ಧರ್ಮಕ್ಕೆ ಅವಮಾನ ಮಾಡುವ ರೀತಿಯಲ್ಲಿ ವೀಡಿಯೋ ಮಾಡುತ್ತಾನೆ. ಕಳೆದ ಜೂನ್ 5 ರಂದು ಖೊಟ್ಟಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನ ಈತ ವಿವಾಹವಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಧಾರವಾಡ ಗ್ರಾಮೀಣ ಠಾಣೆಗೆ (Dharwad Rural Police Station) ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧಾರವಾಡ ಎಸ್ಪಿ ಗುಂಜನ್ ಆರ್ಯ, ಮೇಲ್ನೋಟಕ್ಕೆ ಯಾವುದೇ ನಕಲಿ ದಾಖಲೆ ಕೊಟ್ಟು ಮದುವೆಯಾದ ಬಗ್ಗೆ ತಿಳಿದು ಬಂದಿಲ್ಲ. ಮದುವೆಯಾದ ಯುವತಿಯನ್ನ ವಿಚಾರಣೆ ಮಾಡುತಿದ್ದು, ಪೊಲೀಸ್ ಅಧಿಕಾರಿ ಒಬ್ಬರನ್ನ ನೇಮಿಸಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ:  ಪ್ರಿಂಟಿಂಗ್ ಮಷಿನ್ ಕಾಸ್ಟ್ಯೂಮ್ ಧರಿಸಿ ಬಂದ ಉರ್ಫಿ – ನನಗೊಂದು ಪ್ರಿಂಟ್‌ ಕೊಡಿ ಅಂದ್ರು ನೆಟ್ಟಿಗರು

    ಸದ್ಯಕ್ಕಂತೂ ಮುಕಳೆಪ್ಪನ ವಿರುದ್ಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಜರಂಗದಳ ಕಾರ್ಯಕರ್ತರು ದೂರು ಕೊಟ್ಟಿದ್ದು, ಇನ್ನೂ ಎಫ್ಐಆರ್ ದಾಖಲಾಗಿಲ್ಲ. ಪೊಲೀಸರು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಹಿಂದೂ ಯುವತಿಯರನ್ನೇ ವೀಡಿಯೋದಲ್ಲಿ ಹಾಕಿಕೊಂಡು ಹಿಂದೂ ಧರ್ಮದ ಹಾಗೂ ಹಿಂದೂ ಆಚರಣೆಗಳನ್ನೇ ಟಾರ್ಗೆಟ್ ಮಾಡಿ ಮುಕಳೆಪ್ಪ ವೀಡಿಯೋಗಳನ್ನು ಮಾಡುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಜರಂಗದಳ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕ್ಯಾಬಿನೆಟ್‌ನಲ್ಲಿ ಗೆರಿಲ್ಲಾ ಮಾದರಿ ಪೊಲಿಟಿಕಲ್ ಆಟ್ಯಾಕ್ – ಸಿಎಂ ಸೇರಿ ಹಲವರಿಗೆ ಶಾಕ್ ಕೊಟ್ಟ ಸಚಿವರ ಗುಂಪು

  • ಸಮೀರ್‌ ವಿಡಿಯೋ ವೈರಲ್‌ ಹಿಂದೆ ಭಾರಿ ಫಂಡಿಂಗ್ ಇದೆ; 308 ಟ್ರೋಲ್ ಪೇಜಸ್‌, 50-60 ಕಟೆಂಟ್ ಕ್ರಿಯೇಟರ್ಸ್ ಇದ್ದಾರೆ: ಸುಮಂತ್‌

    ಸಮೀರ್‌ ವಿಡಿಯೋ ವೈರಲ್‌ ಹಿಂದೆ ಭಾರಿ ಫಂಡಿಂಗ್ ಇದೆ; 308 ಟ್ರೋಲ್ ಪೇಜಸ್‌, 50-60 ಕಟೆಂಟ್ ಕ್ರಿಯೇಟರ್ಸ್ ಇದ್ದಾರೆ: ಸುಮಂತ್‌

    – ಧರ್ಮಸ್ಥಳದ ವಿರುದ್ಧ ವಿಡಿಯೋ ಮಾಡೋಕೆ ಮಂಡ್ಯದ ಯುಟ್ಯೂಬರ್‌ಗೆ ಆಫರ್‌
    – SIT ವಿಚಾರಣೆಯಲ್ಲಿರುವ ಅಭಿ ಸ್ನೇಹಿತನಿಂದ ಸ್ಫೋಟಕ ಮಾಹಿತಿ

    ಬೆಂಗಳೂರು/ಮಂಡ್ಯ: ಸಮೀರ್‌ (Sameer MD) ವಿಡಿಯೋ ಸುಮ್ನೆ ವೈರಲ್‌ ಆಗಿಲ್ಲ. ಇದರ ಹಿಂದೆ 300-400 ಪೇಜ್, 50-60 ಕಟೆಂಟ್ ಕ್ರಿಯೇಟರ್ಸ್ ಕೆಲಸ ಮಾಡಿದ್ದಾರೆ ಅಂತ ಅಭಿ ನನಗೆ ಹೇಳಿದ್ದ ಎಂದು ಯೂಟ್ಯೂಬರ್‌ ಅಭಿಷೇಕ್‌ (Youyuber Abhishek M) ಸ್ನೇಹಿತ ಸುಮಂತ್‌ ಸ್ಫೋಟಕ ಮಾಹಿತಿ ನೀಡಿದ್ದಾರೆ.

     

     

    ಯೂಟ್ಯೂಬರ್ಸ್‌ಗಳಿಗೆ ಆಫರ್‌ ನೀಡಿದ ಸಂಬಂಧ ʻಪಬ್ಲಿಕ್‌ ಟಿವಿʼ (Public TV) ಜೊತೆಗೆ ಮಾತನಾಡಿದ ಸುಮಂತ್‌, ಸ್ಫೋಟಕ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ವಿರುದ್ಧ ವಿಡಿಯೋ ಮಾಡೋದಕ್ಕೆ ದುಡ್ಡು ಕೊಡ್ತೀವಿ ಅಂತ ಆಫರ್‌ ಬಂದಿತ್ತು. ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದ ಅಭಿಷೇಕ್‌ನಿಂದಲೂ ಆಫರ್‌ ಬಂದಿತ್ತು ಅಂತ ಹೇಳಿದ್ದಾರೆ. ಇದನ್ನೂ ಓದಿ: ಯೂಟ್ಯೂಬರ್‌ ಸಮೀರ್‌ ಮನೆ ಮೇಲೆ ಪೊಲೀಸರ ದಾಳಿ, ಪರಿಶೀಲನೆ

    ಧರ್ಮಸ್ಥಳದ (Dharmasthala) ವಿರುದ್ಧ ವಿಡಿಯೋ ಮಾಡಲು ಅಭಿ ನಂಗೆ 5-6 ತಿಂಗಳ ಹಿಂದೆ ಆಫರ್ ಕೊಟ್ಟಿದ್ದ. ನಾನು ವಿಡಿಯೋ ಮಾಡ್ತಾ ಇದ್ದೀನಿ ದುಡ್ಡು ಬರುತ್ತೆ, ಫೈನಾನ್ಶಿಯಲ್ ಸಪೋರ್ಟ್ ಕೂಡ ಇದೆ. ಜೊತೆಗೆ ಟ್ರಾನ್ಸ್‌ಪೋರ್ಟ್‌, ಉಳಿದುಕೊಳ್ಳುವ ವ್ಯವಸ್ಥೆ ಎಲ್ಲವನ್ನೂ ಮಾಡ್ತಾರೆ ಅಂತಾ ಹೇಳಿದ್ದ. ಆದ್ರೆ ನಾನು ಅದಕ್ಕೆ ಒಪ್ಪಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯೂಟ್ಯೂಬರ್‌ ಅಭಿಷೇಕ್‌ಗೆ SIT ಫುಲ್‌ ಗ್ರಿಲ್‌ – ಲೈಕ್ಸ್, ವ್ಯೂವ್ಸ್‌ಗಾಗಿ ವಿಡಿಯೋ ಮಾಡಿದೆ ಅಂತ ತಪ್ಪೊಪ್ಪಿಗೆ

    ಮುಂದುವರಿದು.. ಸಮೀರ್ ವಿಡಿಯೋ ವೈರಲ್ (Video Viral) ಹಿಂದೆ ಸಾಕಷ್ಟು ಫಂಡಿಂಗ್ ಇದೆ ಅಂತಾನೂ ಅಭಿ ನಂಗೆ ಹೇಳಿದ್ದ. ಅಭಿ ಭೇಟಿ ವೇಳೆ ನಾನು ಸಮೀರ್ ವಿಡಿಯೋ ವೈರಲ್ ಬಗ್ಗೆ ಕೇಳಿದ್ದೆ. ಸಮೀರ್ ವಿಡಿಯೋ ಸುಮ್ ಸುಮ್ನೆ ವೈರಲ್ ಆಗಿಲ್ಲ ಅಂತಾ ಅಭಿ ನಂಗೆ ಹೇಳಿದ್ದ. ಅದರ ಹಿಂದೆ 300-400 ಟ್ರೋಲ್ ಪೇಜ್, 50-60 ಕಟೆಂಟ್ ಕ್ರಿಯೇಟರ್ಸ್ ಇದ್ದಾರೆ. ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಡೈರೆಕ್ಟ್ ದುಡ್ಡಿಗೂ ಸಪೋರ್ಟ್ ಮಾಡ್ತಾರೆ. ಪ್ರೀ ಪ್ಲ್ಯಾನ್ಡ್‌ ಇದು ಅಂತಾ ಅಭಿ ನಂಗೆ ಹೇಳಿದ್ದ ಎಂದು ಸುಮಂತ್‌ ರಹಸ್ಯ ಬಾಯ್ಬಿಟ್ಟಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ದೊಡ್ಡ ತಿರುವು – ಸೌಜನ್ಯ ಪ್ರಕರಣದಲ್ಲಿ ಕ್ಲೀನ್‌ ಚಿಟ್‌ ಪಡೆದವರಿಗೆ SIT ಬುಲಾವ್‌ 

  • ಗುರುವಾಯೂರು ದೇವಾಲಯದ ಕೊಳದಲ್ಲಿ ಕಾಲು ತೊಳೆದ ಜಾಸ್ಮಿನ್ ಜಾಫರ್ – ಭುಗಿಲೆದ್ದ ಆಕ್ರೋಶ

    ಗುರುವಾಯೂರು ದೇವಾಲಯದ ಕೊಳದಲ್ಲಿ ಕಾಲು ತೊಳೆದ ಜಾಸ್ಮಿನ್ ಜಾಫರ್ – ಭುಗಿಲೆದ್ದ ಆಕ್ರೋಶ

    ಬಿಗ್ ಬಾಸ್ ಸ್ಪರ್ಧಿಯೊಬ್ಬರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ವಿಚಾರ ದೇಶದಾದ್ಯಂತ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಪವಿತ್ರ ಕೊಳದಲ್ಲಿ ಕಾಲು ತೊಳೆದುಕೊಂಡಿದ್ದ ಆ ಬಿಗ್ ಬಾಸ್ ಸ್ಪರ್ಧಿ, ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅದೇ ನೀರಿನಿಂದಲೇ ದೇವರಿಗೆ ಪೂಜೆ ಸಲ್ಲಿಸಿದ್ದರಿಂದ, ಭಕ್ತರು ಮತ್ತು ಪೂಜಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೇರಳದ ಸುಪ್ರಸಿದ್ಧ ದೇವಾಲಯ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಮಲಯಾಳಂ ಬಿಗ್ ಬಾಸ್ ಸ್ಪರ್ಧಿ ಹಾಗೂ ಯೂಟ್ಯೂಬರ್ ಆಗಿರುವ ಜಾಸ್ಮಿನ್ ಜಾಫರ್ (Jasmin Jaffar) ಭೇಟಿ ಕೊಟ್ಟಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿರುವ ಪವಿತ್ರ ಕೊಳದಲ್ಲಿ ಕಾಲು ತೊಳೆದುಕೊಂಡಿದ್ದಾರೆ. ಅದನ್ನು ವಿಡಿಯೋ ಕೂಡ ಮಾಡಿದ್ದಾರೆ. ವಿಡಿಯೋ ಮಾಡಿ ಆರು ದಿನಗಳ ನಂತರ ಆ ವಿಡಿಯೋವನ್ನು ಅಪ್‌ಲೋಡ್ ಮಾಡಿದ್ದಾರೆ. ಈ ವಿಡಿಯೋ ಕಂಡು ಭಕ್ತರು ಆಘಾತಗೊಂಡಿದ್ದಾರೆ. ಇದನ್ನೂ ಓದಿ: ಸುದೀಪ್ ಹುಟ್ಟುಹಬ್ಬಕ್ಕೆ `ಬಿಗ್’ ಸರ್‌ಪ್ರೈಸ್

    ಆ ಜಾಗದಲ್ಲಿ ಹಿಂದೂಯೇತರರು ಹೋಗುವಂತಿಲ್ಲವಂತೆ. ಫೋಟೋಗ್ರಫಿ ಮಾಡುವಂತಿಲ್ಲ. ಈ ಎಲ್ಲ ನಿಯಮವನ್ನು ಜಾಸ್ಮಿನ್ ಉಲ್ಲಂಘನೆ ಮಾಡಿದ್ದಾರೆ. ಜೊತೆಗೆ ಜಾಸ್ಮಿನ್ ಕಾಲು ತೊಳೆದುಕೊಂಡ ಕೊಳದಿಂದಲೇ ದೇವರ ಪೂಜೆಗೆ ನೀರು ತಗೆದುಕೊಂಡು ಹೋಗಲಾಗಿದೆಯಂತೆ. ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ದೇವಸ್ಥಾನ ಮಂಡಳಿಯು ಜಾಸ್ಮಿನ್ ವಿರುದ್ಧ ದೂರು ದಾಖಲಿಸಿದೆ. ಇದನ್ನೂ ಓದಿ: ರಿಷಿಕೇಶದಲ್ಲಿ ಗಂಗಾರತಿ ಮಾಡಿದ ಫರ‍್ಹಾ ಖಾನ್

    ವಿಷಯ ತಿಳಿಯುತ್ತಿದ್ದಂತೆಯೇ ಜಾಸ್ಮಿನ್ ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆ. ನನಗೆ ತಿಳಿಯದೇ ಆಗಿರುವಂಥ ಪ್ರಮಾದವಿದು. ಹಾಗಾಗಿ ಕ್ಷಮೆ ಕೇಳುತ್ತೇನೆ ಅಂತ ಹೇಳಿದ್ದಾರೆ. ಆದರೆ, ಭಕ್ತರ ಆಕ್ರೋಶವಂತೂ ನಿಲ್ಲುತ್ತಲೇ ಇಲ್ಲ.

  • ಒಡಿಶಾ | ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಕೊಚ್ಚಿಹೋದ ಯೂಟ್ಯೂಬರ್

    ಒಡಿಶಾ | ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಕೊಚ್ಚಿಹೋದ ಯೂಟ್ಯೂಬರ್

    ಭುವನೇಶ್ವರ: ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಯೂಟ್ಯೂಬರ್ (YouTuber) ಕೊಚ್ಚಿಹೋದ ಘಟನೆ ಒಡಿಶಾದ (Odisha) ಕೊರಾಪುಟ್ (Koraput) ಜಿಲ್ಲೆಯಲ್ಲಿ ನಡೆದಿದೆ.

    ದುಡುಮಾ ಜಲಪಾತದಲ್ಲಿ (Duduma Waterfall) ಘಟನೆ ನಡೆದಿದೆ. ನೀರಿನಲ್ಲಿ ಸಿಲುಕಿ ಬೆರ್ಹಾಂಪುರ್‌ನ ಸಾಗರ್ ತುಡು (22) ಎಂಬ ಯೂಟ್ಯೂಬರ್ ನಾಪತ್ತೆಯಾಗಿದ್ದಾನೆ. ಸಾಗರ್ ತನ್ನ ಯೂಟ್ಯೂಬ್ ಚಾನೆಲ್‌ಗಾಗಿ ಪ್ರಮುಖ ಪ್ರವಾಸಿ ತಾಣಗಳ ವೀಡಿಯೋಗಳನ್ನು ಚಿತ್ರೀಕರಿಸಲು ಬಂದಿದ್ದಾಗ ಘಟನೆ ಸಂಭವಿಸಿದೆ. ಇದನ್ನೂ ಓದಿ: ಬೆಂಗಳೂರು ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್‌ ಫೈನ್‌ ಕಟ್ಟೋ ಮುನ್ನ ಎಚ್ಚರವಾಗಿರಿ

    ಕಟಕ್‌ನಿಂದ ತನ್ನ ಸ್ನೇಹಿತ ಅಭಿಜಿತ್ ಬೆಹೆರಾ ಜೊತೆ ಕೊರಾಪುಟ್‌ಗೆ ಬಂದಿದ್ದ ಸಾಗರ್ ಜಲಪಾತದಲ್ಲಿ ಡ್ರೋನ್ ಕ್ಯಾಮೆರಾ ಬಳಸಿ ರೀಲ್ ರೆಕಾರ್ಡ್ ಮಾಡುತ್ತಿದ್ದಾಗ ಘಟನೆ ನಡೆದಿದೆ. ಜಲಪಾತದಲ್ಲಿ ಹಠಾತ್ ನೀರಿನ ಪ್ರಮಾಣ ಏರಿಕೆಯಾದ ಪರಿಣಾಮ ಬಂಡೆಯ ಮೇಲೆ ನಿಂತಿದ್ದ ಸಾಗರ್ ಕೊಚ್ಚಿಹೋಗಿದ್ದಾನೆ. ನಾಪತ್ತೆಯಾಗಿರುವ ಸಾಗರ್‌ಗಾಗಿ ಅಗ್ನಿಶಾಮಕ ದಳ ರಕ್ಷಣಾ ಪಡೆಗಳಿಂದ ಶೋಧ ಕಾರ್ಯ ನಡೆಯುತ್ತಿದೆ.  ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ನಿಷೇಧ – BCCI ಪ್ರಾಯೋಜಕತ್ವದಿಂದ ಹಿಂದೆ ಸರಿದ Dream11

  • ಮಂಜುನಾಥಸ್ವಾಮಿಗೆ ಬೆದರಿಕೆ – ತುಮಕೂರಿನಲ್ಲಿ ಯೂಟ್ಯೂಬರ್‌ ಅರೆಸ್ಟ್‌

    ಮಂಜುನಾಥಸ್ವಾಮಿಗೆ ಬೆದರಿಕೆ – ತುಮಕೂರಿನಲ್ಲಿ ಯೂಟ್ಯೂಬರ್‌ ಅರೆಸ್ಟ್‌

    ತುಮಕೂರು: ಕುಣಿಗಲ್ ತಾಲ್ಲೂಕಿನ ಹಂಗರಹಳ್ಳಿ ವಿದ್ಯಾ ಚೌಡೇಶ್ವರಿ ಮಠದ ಬಾಲ ಮಂಜುನಾಥಸ್ವಾಮಿಗೆ ಬೆದರಿಕೆ ಹಾಕಿ 25 ಲಕ್ಷ ರೂ.ಗೆ ಬೇಡಿಕೆ ಇಟ್ಟ ಆರೋಪದಲ್ಲಿ ತುಮಕೂರಿನ ಯೂಟ್ಯೂಬರ್‌ (Youtuber) ಸುಧೀಂದ್ರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

    ಸುಧೀಂದ್ರ ಜನವರಿ 21 ರಿಂದಲೂ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಜೂನ್ 28ರಂದು ಮಠದ ಸಿಬ್ಬಂದಿ ಅಭಿಲಾಷ್, ಸುರೇಶ್ ಮತ್ತು ಭಕ್ತರಾದ ಬೀಚನಹಳ್ಳಿ ಕರಿಗೌಡ ಅವರನ್ನು ಸಂಪರ್ಕಿಸಿ ಮಠಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಹೊಂದಿದ್ದು, ಅವುಗಳನ್ನು ಪ್ರಕಟಿಸಿದರೆ ಮಠದ ಹೆಸರು ಹಾಳಾಗುತ್ತದೆ. ಇದನ್ನು ಪ್ರಸಾರ ಮಾಡದಿರಲು 25 ಲಕ್ಷ ರೂ. ನೀಡಿ ಎಂದು ಬೆದರಿಕೆ ಹಾಕಿದ್ದ ಎಂದು ಸ್ವಾಮೀಜಿ ದೂರಿದ್ದಾರೆ. ಇದನ್ನೂ ಓದಿ: ಸೆ.3-4ಕ್ಕೆ ಜಿಎಸ್‌ಟಿ ಕೌನ್ಸಿಲ್ ಸಭೆ; ಮೋದಿಯ ದೀಪಾವಳಿ ಗಿಫ್ಟ್ ಘೋಷಣೆಯ ಬಗ್ಗೆ ಸಭೆಯಲ್ಲಿ ಅಂತಿಮ ನಿರ್ಧಾರ

    ಹಣ ನೀಡದ ಕಾರಣ ಜುಲೈ 10ರಂದು ಸುಧೀಂದ್ರ ತನ್ನ ಯೂಟೂಬ್ ಚಾನಲ್‌ನಲ್ಲಿ ಪುಣ್ಯ ಕ್ಷೇತ್ರ- ಕ್ಷೇತ್ರ ಪಾಪಿ ಬಾಲ ಮೌಡ್ಯ ಲೀಲೆ- ಭಾಗ-1 ನಂತರ 17ರಂದು ಭಾಗ- 2 ಪ್ರಸಾರ ಮಾಡಿದ್ದಾನೆ. ಇವೆಲ್ಲವೂ ಕಲ್ಪಿತ ಮತ್ತು ಆಧಾರ ರಹಿತ ಆರೋಪ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಾಲಮಂಜುನಾಥ ಸ್ವಾಮೀಜಿ ನೀಡಿದ್ದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸ್ವತಃ ದೇವರೇ ಹೇಳಿದ್ರೂ ಮತ್ತೆ ಚುನಾವಣೆಗೆ ನಿಲ್ಲಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ ರಾಜಕೀಯ ನಿವೃತ್ತಿ ಮಾತು

  • ಪೊಲೀಸರು ಬರುತ್ತಿದ್ದಂತೆ ಯೂಟ್ಯೂಬರ್‌ ಸಮೀರ್‌ ನಾಪತ್ತೆ

    ಪೊಲೀಸರು ಬರುತ್ತಿದ್ದಂತೆ ಯೂಟ್ಯೂಬರ್‌ ಸಮೀರ್‌ ನಾಪತ್ತೆ

    ಬೆಂಗಳೂರು: ಧರ್ಮಸ್ಥಳ ಕ್ಷೇತ್ರಕ್ಕೆ (Dharmasthala Temple) ಅವಮಾನ ಎಸಗಿದ ಸಮೀರ್‌ (Youtuber Sameer)  ಬಂಧನಕ್ಕೆ ಹೋದಾಗ ಆತ ನಾಪತ್ತೆಯಾಗಿರುವುದು ವಿಚಾರ ಬೆಳಕಿಗೆ ಬಂದಿದೆ.

    ಸಮೀರ್‌ ವಿರುದ್ಧ ಸರಣಿ ದೂರುಗಳು ರಾಜ್ಯಾದ್ಯಂತ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಗೃಹ ಇಲಾಖೆ ಆತನ ಬಂಧನಕ್ಕೆ ಸೂಚಿಸಿತ್ತು. ಅದರಂತೆ ಆತನ ಮೊಬೈಲ್‌ ಸಂಖ್ಯೆಯ ಮೂಲಕ ಜಾಗ ಪತ್ತೆ ಹಚ್ಚಿದಾಗ ಬನ್ನೇರುಘಟ್ಟದ ನಿವಾಸ ತೋರಿಸಿತ್ತು.

    ಈ ಆಧಾರದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಧರ್ಮಸ್ಥಳ ಠಾಣೆಯ ಸಬ್ ಇನ್ಸ್‌ಪೆಕ್ಟರ್‌, ಇಬ್ಬರು ಪೊಲೀಸ್ ಸಿಬ್ಬಂದಿ ಸಮೀರ್‌ನನ್ನು ಬಂಧಿಸಲು ಜಿಗಣಿಯ ಹುಲ್ಲಳ್ಳಿಯ ಕ್ರೈಸ್ಟ್ ಕಾಲೇಜು ಪಕ್ಕದಲ್ಲಿರುವ ಮನೆಗೆ ಬಂದಿದ್ದಾರೆ. ಧರ್ಮಸ್ಥಳ ಪೊಲೀಸರಿಗೆ ಬನ್ನೇರುಘಟ್ಟ ಪೊಲೀಸರು ಸಾಥ್‌ ನೀಡಿದ್ದಾರೆ. ಇದನ್ನೂ ಓದಿ: ಗಿರೀಶ್ ಮಟ್ಟಣ್ಣನವರ್, ತಿಮರೋಡಿ, ಸಮೀರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

     

    ತಾಯಿ, ಸಹೋದರಿ ಜೊತೆ ನೆಲೆಸಿದ್ದ ಸಮೀರ್‌ ಪೊಲೀಸರು ಮನೆಗೆ ಬಂದಾಗ ಆತ ಮನೆಯಲ್ಲಿ ಇರಲಿಲ್ಲ. ಮನೆಯಲ್ಲಿ ಇಲ್ಲದ ಕಾರಣ ಸಮೀರ್‌ ಬಂದ ತಕ್ಷಣ ತಿಳಿಸುವಂತೆ ಕುಟುಂಬಸ್ಥರಿಗೆ ತಿಳಿಸಿ ಪೊಲೀಸರು ತೆರಳಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣದ‌ ಅನಾಮಿಕನ ಹುಟ್ಟೂರಲ್ಲಿ ʻಪಬ್ಲಿಕ್‌ ಟಿವಿʼ ಮಾಸ್ಕ್‌ ಮ್ಯಾನ್‌ ಊರು ಯಾವ್ದು? ಓದಿದ್ದೇನು?

    ಈಗಾಗಲೇ ಸಮೀರ್‌ಗೆ ಮೂರು ಬಾರಿ ಪೊಲೀಸರು ನೋಟಿಸ್ ನೀಡಿದ್ದರು. ಮೂರು ಬಾರಿ ನೋಟಿಸ್ ನೀಡಿದರೂ ಪ್ರತಿಕ್ರಿಯೆ ನೀಡಿಲ್ಲ.ಹೀಗಾಗಿ ವಾರೆಂಟ್ ಪಡೆದು ಪೊಲೀಸರು ಬಂಧನಕ್ಕೆ ಆಗಮಿಸಿದ್ದರು.

  • ಯಾವುದೇ ಕ್ಷಣದಲ್ಲಿ ಯೂಟ್ಯೂಬರ್‌ ಸಮೀರ್‌ ಅರೆಸ್ಟ್‌ ಸಾಧ್ಯತೆ

    ಯಾವುದೇ ಕ್ಷಣದಲ್ಲಿ ಯೂಟ್ಯೂಬರ್‌ ಸಮೀರ್‌ ಅರೆಸ್ಟ್‌ ಸಾಧ್ಯತೆ

    ಬೆಂಗಳೂರು: ಧರ್ಮಸ್ಥಳ (Dharmasthala Temple) ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸಿದ್ದಕ್ಕೆ ಯೂಟ್ಯೂಬರ್‌ ಸಮೀರ್‌ (Youtber Sameer) ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆಯಿದೆ.

    ಬನ್ನೇರುಘಟ್ಟದಲ್ಲಿರುವ ಸಮೀರ್ ಬಾಡಿಗೆ ಮನೆ‌ಗೆ ಧರ್ಮಸ್ಥಳ ಪೊಲೀಸರು ಆಗಮಿಸಿದ್ದಾರೆ. ಈಗಾಗಲೇ ಸಮೀರ್ ಮನೆಯನ್ನು ಪೊಲೀಸರು ಸುತ್ತುವರೆದಿದ್ದಾರೆ.

    ಇಂದು ಬೆಳಗ್ಗೆ ಧರ್ಮಸ್ಥಳ ಪೊಲೀಸರು ಬನ್ನೇರುಘಟ್ಟಕ್ಕೆ ಆಗಮಿಸಿದ್ದಾರೆ. ಆದರೆ ಖಚಿತವಾಗಿ ವಿಳಾಸ ಸಿಕ್ಕಿರಲಿಲ್ಲ, ಈಗ ಮನೆಯನ್ನು ಸುತ್ತುವರೆದು ವಶಕ್ಕೆ ಪಡೆಯುವ ಸಾಧ್ಯತೆಯಿದೆ.

     

    ಧರ್ಮಸ್ಥಳ ಕ್ಷೇತ್ರಕ್ಕೆ ಅಪಪ್ರಚಾರ ನಡೆಸಿದ್ದಕ್ಕೆ ರಾಜ್ಯದ್ಯಂತ ಆತನ ವಿರುದ್ಧ ಹಿಂದೂ ಸಂಘಟನೆಗಳು ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.  ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಸಮೀರ್‌ ಅನ್ನು ಬಂಧನ ಮಾಡುವಂತೆ ನೆಟ್ಟಿಗರು ಆಗ್ರಹಿಸುತ್ತಿದ್ದರು. ಇದನ್ನೂ ಓದಿ:ಧರ್ಮಸ್ಥಳ ಪ್ರಕರಣದ‌ ಅನಾಮಿಕನ ಹುಟ್ಟೂರಲ್ಲಿ ʻಪಬ್ಲಿಕ್‌ ಟಿವಿʼ – ಮಾಸ್ಕ್‌ ಮ್ಯಾನ್‌ ಊರು ಯಾವ್ದು? ಓದಿದ್ದೇನು?

    ಒಂದು ಧರ್ಮ, ಧಾರ್ಮಿಕ ಕ್ಷೇತ್ರವನ್ನು ಅವಹೇಳನ ಮಾಡುವಂತಿಲ್ಲ. ಹೀಗಿದ್ದರೂ ಧರ್ಮಸ್ಥಳ ದೇವಸ್ಥಾನದ ವಿರುದ್ಧ ಎಐ ವಿಡಿಯೋ ಪ್ರಕಟಿಸಿ ಅವಹೇಳನ ಮಾಡಿದ್ದರೂ ಯಾಕೆ ಇನ್ನೂ ಆತನ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಜನರು ಸರ್ಕಾರವನ್ನು ಪ್ರಶ್ನಿಸುತ್ತಿದ್ದರು. ಜನರ ಆಗ್ರಹ ಜೋರಾಗುತ್ತಿದ್ದಂತೆ ಈಗ ಗೃಹ ಇಲಾಖೆ  ಎಚ್ಚೆತ್ತುಕೊಂಡಿದೆ.

    ಸಮೀರ್‌ ನಾಪತ್ತೆ: ಪಬ್ಲಿಕ್‌ ಟಿವಿಗೆ ಸಿಕ್ಕಿದ ಮಾಹಿತಿ ಪ್ರಕಾರ ಸಮೀರ್‌ ಈಗ ನಾಪತ್ತೆಯಾಗಿದ್ದಾನೆ. ಪೊಲೀಸರು ಈಗ ಆತನ ಪತ್ತೆಗೆ ಬಲೆ ಬೀಸಿದ್ದಾರೆ.

    ಈಗಾಗಲೇ ಸಮೀರ್ಗೆ ಮೂರು ಬಾರಿ ಪೊಲೀಸರು ನೋಟಿಸ್ ನೀಡಿದ್ದರು. ಮೂರು ಬಾರಿ ನೋಟಿಸ್ ನೀಡಿದರೂ ಪ್ರತಿಕ್ರಿಯೆ ನೀಡಿಲ್ಲ.ಹೀಗಾಗಿ ವಾರೆಂಟ್ ಪಡೆದು ಪೊಲೀಸರು ಬಂಧನಕ್ಕೆ ಆಗಮಿಸಿದ್ದರು.

  • ಬಿಗ್ ಬಾಸ್‌ ವಿಜೇತ ಎಲ್ವಿಶ್ ಮನೆ ಮೇಲೆ 25 ಸುತ್ತು ಗುಂಡಿನ ದಾಳಿ – ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ

    ಬಿಗ್ ಬಾಸ್‌ ವಿಜೇತ ಎಲ್ವಿಶ್ ಮನೆ ಮೇಲೆ 25 ಸುತ್ತು ಗುಂಡಿನ ದಾಳಿ – ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ

    ಫೇಮಸ್‌ ಯೂಟ್ಯೂಬರ್ (YouTuber), ಮಾಜಿ ಬಿಗ್ ಬಾಸ್‌ ವಿಜೇತ (Bigg Boss winner) ಹಾಗೂ ನಟನೂ ಆಗಿರುವ ಎಲ್ವಿಶ್ ಯಾದವ್ ಅವ್ರ ಮನೆ ಮೇಲೆ ಇಂದು ಬೆಳಗ್ಗೆ ಭೀಕರ ಗುಂಡಿನ ದಾಳಿ ನಡೆದಿದೆ.

    ಬೆಳಗ್ಗೆ 5:30 ರಿಂದ 6 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ಮನೆಯ ಬಳಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು 2 ಡಜನ್‌ಗಿಂತಲೂ ಅಧಿಕ ಸುತ್ತು ಗುಂಡು ಹಾಅರಿಸಿ, ಎಸ್ಕೇಪ್‌ ಆಗಿದ್ದಾರೆ. ಅದೃಷ್ಟವಶಾತ್‌ ಆ ಸಂದರ್ಭದಲ್ಲಿ ಎಲ್ವಿಶ್‌ (Elvish Yadav) ಮನೆಯಲ್ಲಿ ಇರಲಿಲ್ಲವಾದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಫೈರಿಂಗ್‌ (Bullets Fire) ಬಳಿಕ ಇಡೀ ಪ್ರದೇಶದ ಜನರಲ್ಲಿ ಆತಂಕ ಮನೆ ಮಾಡಿದೆ. ಇದನ್ನೂ ಓದಿ: ಬೆಂಗಳೂರು | ಐವರನ್ನು ಬಲಿ ಪಡೆದಿದ್ದ ಅಗ್ನಿ ದುರಂತ ಪ್ರಕರಣ – ಕಟ್ಟಡದ ಮಾಲೀಕ ಅರೆಸ್ಟ್

    ಏನಾಯಿತು?
    ಎಲ್ವಿಶ್ ಯಾದವ್ ತಮ್ಮ ಯೂಟ್ಯೂಬ್ ಮತ್ತು ಸೋಷಿಯಲ್‌ ಮೀಡಿಯಾ ಆಕ್ಟಿವಿಟೀಸ್‌ಗಳಿಂದ ಫೇಮಸ್‌ ಆಗಿದ್ದಾರೆ. ಗುಂಡು ಹಾರಿಸಿದ ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಗುರುಗ್ರಾಮ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಹಳೇ ಅಕ್ರಮ ಸಂಬಂಧಕ್ಕೆ ಶಿಕ್ಷೆ – ಹೆತ್ತ ತಾಯಿಯನ್ನೇ 2 ಬಾರಿ ಅತ್ಯಾಚಾರಗೈದ ಪಾಪಿ ಮಗ

    ಮೊದಲಿಗೆ ಮನೆಯವರ ಸುರಕ್ಷತೆಯನ್ನು ಖಚಿತಪಡಿಸಿಕೊಂಡಿದ್ದಾರೆ. ಬಳಿಕ ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳ ತಪಾಸಣೆ ನಡೆಸುತ್ತಿದ್ದಾರೆ. 20 ರಿಂದ 25 ಸುತ್ತು ಗುಂಡು ಹಾರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: Video Viral | ಸ್ವಾತಂತ್ರ‍್ಯ ದಿನಾಚರಣೆಯಂದು ಅಂಚೆ ಕಚೇರಿಯಲ್ಲಿ ಭರ್ಜರಿ ಬಾಡೂಟ; ಕ್ರಮಕ್ಕೆ ಆಗ್ರಹ