Tag: YS Jagan mohan Reddy

  • Tirupati Laddu Row | ಟಿಟಿಡಿ ಲಡ್ಡು ತಯಾರಿಕೆಗೆ ಪ್ರಮಾಣಿಕೃತ ತುಪ್ಪವನ್ನೇ ಬಳಸಲಾಗಿದೆ: ಜಗನ್ ಸ್ಪಷ್ಟನೆ

    Tirupati Laddu Row | ಟಿಟಿಡಿ ಲಡ್ಡು ತಯಾರಿಕೆಗೆ ಪ್ರಮಾಣಿಕೃತ ತುಪ್ಪವನ್ನೇ ಬಳಸಲಾಗಿದೆ: ಜಗನ್ ಸ್ಪಷ್ಟನೆ

    – ತಿರುಪತಿ ಲಡ್ಡು ವಿಚಾರದಲ್ಲಿ ಟಿಡಿಪಿ ರಾಜಕೀಯ

    ಅಮರಾವತಿ: ತಿರುಪತಿ (Tirupathi) ದೇವಸ್ಥಾನದಲ್ಲಿ ಲಡ್ಡು ತಯಾರಿಕೆಗೆ ತುಪ್ಪದ ಮಾದರಿ ಸಂಗ್ರಹಿಸಿ ಪ್ರಮಾಣಿಕರಿಸಿದ ಬಳಿಕವೇ ತುಪ್ಪದ ಬಳಕೆ ಮಾಡಲಾಗುತ್ತದೆ ಎಂದು ವೈಎಸ್‍ಆರ್‌ಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಸ್ಪಷ್ಟನೆ ನೀಡಿದ್ದಾರೆ.

    ತಿರುಪತಿ ಲಡ್ಡು ವಿಷಯದಲ್ಲಿ ನಡೆಯುತ್ತಿರುವ ವಿವಾದದ (Tirupati Laddu Row) ವಿಚಾರವಾಗಿ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಪ್ರಸಾದದ ಅರ್ಹತೆಯ ಮಾನದಂಡ ದಶಕಗಳಿಂದ ಬದಲಾಗಿಲ್ಲ. ಪೂರೈಕೆದಾರರು ಎನ್‍ಎಬಿಎಲ್ ಪ್ರಮಾಣಪತ್ರ ಮತ್ತು ಉತ್ಪನ್ನ ಗುಣಮಟ್ಟದ ಪ್ರಮಾಣಪತ್ರವನ್ನು ನೀಡಬೇಕು. ಅದಾದ ಬಳಿಕ ಟಿಟಿಡಿ (TTD) ತುಪ್ಪದಿಂದ ಮಾದರಿಗಳನ್ನು ಸಂಗ್ರಹಿಸುತ್ತದೆ. ಬಳಿಕ ಪರಿಶೀಲಿಸಿದ ಉತ್ಪನ್ನಗಳನ್ನು ಮಾತ್ರ ಬಳಸಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Tirupati Laddu Row: ಹೈಕೋರ್ಟ್‌ ಮೊರೆ ಹೋದ ಜಗನ್‌

    ದೇವಾಲಯಕ್ಕೆ ಲಡ್ಡು ತಯಾರಿಕೆಗಾಗಿ ಸಾಮಗ್ರಿಗಳನ್ನು ಒದಗಿಸಲು ಪ್ರತಿ ಆರು ತಿಂಗಳಿಗೊಮ್ಮೆ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ. ಈ ವೇಳೆ ಅಗತ್ಯ ದಾಖಲೆಗಳನ್ನು ಹಾಗೂ ಗುಣಮಟ್ಟದ ಪ್ರಮಾಣ ಪತ್ರವನ್ನು ಒದಗಿಸಿ ಟೆಂಡರ್ ಪಡೆಯಬೇಕು. ನಮ್ಮ ಆಡಳಿತದಲ್ಲಿ ನಾವು 18 ಬಾರಿ ಉತ್ಪನ್ನಗಳನ್ನು ತಿರಸ್ಕರಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

    ಚಂದ್ರಬಾಬು ನಾಯ್ಡು ಅವರು, ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಅಧಿಕಾರದಲ್ಲಿದ್ದಾಗ ತಿರುಪತಿ ಲಡ್ಡು ತಯಾರಿಕೆಗೆ ಬಳಸಿದ ತುಪ್ಪದ ಮಾದರಿಗಳಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿದೆ ಎಂದು ಆರೋಪಿಸಿದ್ದರು. ಅಲ್ಲದೇ ಈ ಬಗ್ಗೆ ಗುಜರಾತ್‍ನ ಸರ್ಕಾರಿ ಲ್ಯಾಬ್‍ನ ವರದಿಯನ್ನು ಅವರು ಉಲ್ಲೇಖಿಸಿದ್ದರು.

    ಈ ವಿಚಾರ ಸದ್ದು ಮಾಡುತ್ತಿದ್ದಂತೆ ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿದೆ ಎಂಬ ಆಂಧ್ರಪ್ರದೇಶದ ಸಿಎಂ ಎನ್.ಚಂದ್ರಬಾಬು ನಾಯ್ಡು ಅವರ ಆರೋಪದ ಕುರಿತು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಅವರಿಗೆ ವಿವರವಾದ ವರದಿ ಕೇಳಿದ್ದಾರೆ.

    ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ ಕೂಡ ಈ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ವರದಿ ಕೇಳಿದ ಕೇಂದ್ರ ಸರ್ಕಾರ

  • ತಿರುಪತಿ ಲಡ್ಡು ವಿವಾದ – ವರದಿ ಕೇಳಿದ ಕೇಂದ್ರ ಸರ್ಕಾರ

    ತಿರುಪತಿ ಲಡ್ಡು ವಿವಾದ – ವರದಿ ಕೇಳಿದ ಕೇಂದ್ರ ಸರ್ಕಾರ

    ನವದೆಹಲಿ: ತಿರುಪತಿಯಲ್ಲಿ ಲಡ್ಡುಗಳನ್ನು (Tirupati Laddoo) ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿದೆ ಎಂಬ ಆಂಧ್ರಪ್ರದೇಶದ ಸಿಎಂ ಎನ್.ಚಂದ್ರಬಾಬು ನಾಯ್ಡು ಅವರ ಆರೋಪದ ಕುರಿತು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ (J.P Nadda) ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಅವರಿಗೆ ವಿವರವಾದ ವರದಿ ಕೇಳಿದ್ದಾರೆ.

    ಲಡ್ಡೂಗಳನ್ನು ದೇವಾಲಯಕ್ಕೆ ಭೇಟಿ ನೀಡುವ ಕೋಟಿಗಟ್ಟಲೆ ಭಕ್ತರಿಗೆ ನೀಡಲಾಗುತ್ತದೆ. ಇದರಿಂದಾಗಿ ಸಿಎಂ ಏನೇ ಹೇಳಿದರೂ ಅದು ಗಂಭೀರ ಮತ್ತು ಕಳವಳಕಾರಿ ವಿಷಯವಾಗಿದೆ. ಈ ಆರೋಪದ ವಿರುದ್ಧ ಕೂಲಂಕುಷ ತನಿಖೆ ನಡೆಸುವ ಅಗತ್ಯವಿದೆ. ಅಲ್ಲದೇ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ನಡ್ಡಾ ಹೇಳಿದ್ದಾರೆ.

    ಚಂದ್ರಬಾಬು ನಾಯ್ಡು ಅವರು, ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಅವರು ಅಧಿಕಾರದಲ್ಲಿದ್ದಾಗ ತಿರುಪತಿ ಲಡ್ಡು ತಯಾರಿಕೆಗೆ ಬಳಸಿದ ತುಪ್ಪದ ಮಾದರಿಗಳಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿದೆ ಎಂದು ಆರೋಪಿಸಿದ್ದರು. ಅಲ್ಲದೇ ಈ ಬಗ್ಗೆ ಗುಜರಾತ್‍ನ ಸರ್ಕಾರಿ ಲ್ಯಾಬ್‍ನ ವರದಿಯನ್ನು ಅವರು ಉಲ್ಲೇಖಿಸಿದ್ದರು.

    ಈ ವಿಚಾರವಾಗಿ ನಾಲ್ಕು ವರ್ಷಗಳ ಕಾಲ ಟಿಟಿಡಿಯ ಅಧ್ಯಕ್ಷರಾಗಿದ್ದ ರಾಜ್ಯಸಭಾ ಸಂಸದ ವೈವಿ ಸುಬ್ಬಾ ರೆಡ್ಡಿಯವರು, ದೇವರಿಗೆ ಪ್ರತಿನಿತ್ಯ ಅರ್ಪಿಸುವ ನೈವೇದ್ಯ ಮತ್ತು ಭಕ್ತರಿಗೆ ನೀಡುವ ಲಡ್ಡೂಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಹೇಳುವುದು ಹೇಯ ಕೃತ್ಯ ಎಂದು ಆಂಧ್ರ ಸಿಎಂಗೆ ಎಕ್ಸ್‌ನಲ್ಲಿ ತಿರುಗೇಟು ನೀಡಿದ್ದಾರೆ.

    ಟಿಟಿಡಿ ಅಧ್ಯಕ್ಷರಾಗಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದ ಪಕ್ಷದ ಹಿರಿಯ ನಾಯಕ ಕರುಣಾಕರ್ ರೆಡ್ಡಿ, ಟಿಡಿಪಿ ಸರ್ಕಾರ ಜಗನ್ ಮೋಹನ್ ರೆಡ್ಡಿ ವಿರುದ್ಧ ರಾಜಕೀಯ ಸೇಡು ತೀರಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

    ವಿವಾದದ ಬೆನ್ನಲ್ಲೇ, ಆಂಧ್ರಪ್ರದೇಶದ ಕಾಂಗ್ರೆಸ್‌ನ ರಾಜ್ಯ ಘಟಕದ ಮುಖ್ಯಸ್ಥೆ ವೈಎಸ್ ಶರ್ಮಿಳಾ ಅವರು, ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಅಥವಾ ಸಿಬಿಐ ತನಿಖೆಗೆ ವಹಿಸಿ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

  • Tirupati Laddu Row: ಹೈಕೋರ್ಟ್‌ ಮೊರೆ ಹೋದ ಜಗನ್‌

    Tirupati Laddu Row: ಹೈಕೋರ್ಟ್‌ ಮೊರೆ ಹೋದ ಜಗನ್‌

    ಹೈದರಾಬಾದ್‌: ತಿರುಪತಿ ದೇವಸ್ಥಾನದ (Tirupati Temple) ಲಡ್ಡು (Laddu ) ಪ್ರಸಾದ ವಿವಾದ ಜೋರಾಗುತ್ತಿದ್ದಂತೆ ಮಾಜಿ ಸಿಎಂ ಜಗನ್‌ ರೆಡ್ಡಿ (YS Jagan Mohan Reddy) ಆಂಧ್ರ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

    ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬೆರೆಸಲಾಗಿದೆ ಸಿಎಂ ಚಂದ್ರಬಾಬು ನಾಯ್ಡು ಅವರು ಆರೋಪಿಸಿದ್ದಾರೆ. ಹೀಗಾಗಿ ಈ ಆರೋಪದ ಬಗ್ಗೆ ಹಾಲಿ ನ್ಯಾಯಾಧೀಶರು ಅಥವಾ ಹೈಕೋರ್ಟ್ (High Court) ನೇಮಿಸಿದ ಸಮಿತಿ ತನಿಖೆ ನಡೆಸಬೇಕು ಎಂದು ಜಗನ್‌ ಪರ ವಕೀಲರು ಮನವಿ ಮಾಡಿದರು.

    ಈ ವೇಳೆ ಸೆ.25 ರ ಒಳಗಡೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿ. ಅಂದು ವಿಚಾರಣೆ ನಡೆಸಲಾಗುವುದು ಎಂದು ಹೈಕೋರ್ಟ್‌ ಸೂಚಿಸಿದೆ. ಇದನ್ನೂ ಓದಿ: ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ – ಜಗನ್ ಅವಧಿಯಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ!

     

    ಲ್ಯಾಬ್ ವರದಿಯಲ್ಲಿ ಏನಿದೆ?
    ಲಡ್ಡುಗೆ ಬಳಸಿದ ತುಪ್ಪದಲ್ಲಿ ಮೀನೆಣ್ಣೆ, ಹಂದಿಯ ಕೊಬ್ಬು, ತಾಳೆ ಎಣ್ಣೆ ಕೊಬ್ಬು, ತೆಂಗಿನ ಎಣ್ಣೆಯ ಕೊಬ್ಬು ಪತ್ತೆಯಾಗಿದೆ. ಸೋಯಾ, ಸೂರ್ಯಕಾಂತಿ, ಆಲಿವ್, ಹತ್ತಿ ಬೀಜದೆಣ್ಣೆ ಸಿಕ್ಕಿದೆ. ತುಪ್ಪದಲ್ಲಿ ವ್ಹೀಟ್ ಜೆರ್ಮ್ ಆಯಿಲ್, ಮೇಜ್ ಜೆರ್ಮ್ ಆಯಿಲ್ ಪತ್ತೆಯಾಗಿದೆ. ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ ಬೆರೆಸಿರುವುದು ಸ್ಪಷ್ಟವಾಗಿದೆ: ರಾಮಜನ್ಮಭೂಮಿ ಪ್ರಧಾನ ಅರ್ಚಕ

     

    ಸಿಎಂ ಹೇಳಿಕೆಯನ್ನು ಟಿಟಿಡಿ ಭಾಗಶಃ ಒಪ್ಪಿದೆ. ಒಂದು ಕಂಪನಿಯ ತುಪ್ಪದಲ್ಲಿ ವೆಜಿಟೆಬಲ್ ಫ್ಯಾಟ್ ಬೆರೆಸಿರುವುದು ಗೊತ್ತಾಗಿದೆ ಎಂದು ಟಿಟಿಡಿ ಇಓ ಶ್ಯಾಮಲರಾವ್ ಹೇಳಿದ್ದಾರೆ. ಟಿಟಿಡಿ ಮಾಜಿ ಸದಸ್ಯ ಓವಿ ರಮಣ ಅವರು ಚಂದ್ರಬಾಬು ನಾಯ್ಡು ಹೇಳಿದ್ದೆಲ್ಲಾ ಸತ್ಯ ಎಂದಿದ್ದಾರೆ.

    ಜಗನ್ ಸಿಎಂ ಆಗಿದ್ದಾಗ ವಿದೇಶದಿಂದ ಆಮದು ಮಾಡಿಕೊಂಡ ಬೆಣ್ಣೆಯನ್ನು ಲಡ್ಡು ತಯಾರಿಗೆ ಬಳಸಲಾಗುತ್ತಿತ್ತು ಎಂದು ಆಪಾದಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಗೆ ಬಿಜೆಪಿ ಆಗ್ರಹಿಸಿದೆ.

     

  • ಮುಂಬೈ ಮೂಲದ ಮಾಡೆಲ್‍ಗೆ ಕಿರುಕುಳ – ಆಂಧ್ರದ ಮೂವರು ಐಪಿಎಸ್ ಅಧಿಕಾರಿಗಳು ಸಸ್ಪೆಂಡ್

    ಮುಂಬೈ ಮೂಲದ ಮಾಡೆಲ್‍ಗೆ ಕಿರುಕುಳ – ಆಂಧ್ರದ ಮೂವರು ಐಪಿಎಸ್ ಅಧಿಕಾರಿಗಳು ಸಸ್ಪೆಂಡ್

    ಅಮರಾವತಿ: ಮುಂಬೈ (Mumbai) ಮೂಲದ ಮಾಡೆಲ್ ಕಮ್ ನಟಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿ, ಕಿರುಕುಳ ನೀಡಿದ ಆರೋಪದ ಮೇಲೆ ಆಂಧ್ರಪ್ರದೇಶದ (Andhra Pradesh) ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

    ಡೈರೆಕ್ಟರ್ ಜನರಲ್ ಶ್ರೇಣಿಯ ಒಬ್ಬರು, ಇನ್ಸ್ ಪೆಕ್ಟರ್ ಜನರಲ್ ಮತ್ತು ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪಿಎಸ್ ಆರ್ ಆಂಜನೇಯುಲು (ಡಿಜಿ ಶ್ರೇಣಿ), ಕಂಠಿ ರಾಣಾ ಟಾಟಾ (ಐಜಿ ಶ್ರೇಣಿ) ಮತ್ತು ವಿಶಾಲ್ ಗುನ್ನಿ (ಎಸ್‍ಪಿ ಶ್ರೇಣಿ) ಅಮಾನತುಗೊಂಡ ಮೂವರು ಹಿರಿಯ ಅಧಿಕಾರಿಗಳಾಗಿದ್ದಾರೆ.

    ವೈಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಸರ್ಕಾರದ ಆಡಳಿತದ ಇರುವಾಗ ನಟಿ ಪೊಲೀಸರಿಂದ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಆರೋಪಿಸಿದ್ದರು. ಮುಂಬೈನ ಕಾರ್ಪೋರೇಷನ್‌ನ ಉನ್ನತ ಕಾರ್ಯನಿರ್ವಾಹಕರ ವಿರುದ್ಧ ತಾನು ಈ ಹಿಂದೆ ದಾಖಲಿಸಿದ ಪ್ರಕರಣವನ್ನು ಹಿಂದೆಗೆದುಕೊಳ್ಳಬೇಕು. ಇಲ್ಲದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಬೆದರಿಕೆ ಹಾಕಿದ್ದರು. ಅಲ್ಲದೇ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸಿದ್ದರು ಎಂದು ನಟಿ ಆರೋಪಿಸಿದ್ದರು.

    ಆಂಧ್ರಪ್ರದೇಶ ಪೊಲೀಸರು ಆರೋಪಗಳ ವಿಚಾರಣೆ ನಡೆಸಿದ್ದು, ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ ಮತ್ತು ದುರ್ನಡತೆ ಆರೋಪದಡಿ ಅಮಾನತು ಆದೇಶ ಹೊರಡಿಸಲಾಗಿದೆ. ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969 ರ ನಿಯಮ 3 (1) ರ ಅಡಿಯಲ್ಲಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಆಗ ರಾಜ್ಯ ಗುಪ್ತಚರ ಮುಖ್ಯಸ್ಥರಾಗಿದ್ದ ಪಿ ಎಸ್ ಆರ್ ಆಂಜನೇಯುಲು ಅವರು ಫೆಬ್ರವರಿ 2 ರಂದು ಎಫ್‍ಐಆರ್ ದಾಖಲಿಸುವ ಮೊದಲೇ ಕಂಠಿ ರಾಣಾ ಟಾಟಾ ಮತ್ತು ವಿಶಾಲ್ ಗುನ್ನಿ ಅವರನ್ನು ಕರೆಸಿ ಜನವರಿ 31 ರಂದು ನಟನ ಬಂಧನಕ್ಕೆ ನಿರ್ದೇಶನ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಅಮಾನತು ಆದೇಶದಲ್ಲಿ ಆಂಜನೇಯುಲು ಅವರು ತಮ್ಮ ಅಧಿಕಾರ ಮತ್ತು ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡು, ಸಮರ್ಪಕ ಪರಿಶೀಲನೆಯಿಲ್ಲದೆ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿದ್ದಾರೆ. ಇದು ಅಧಿಕಾರದ ದುರುಪಯೋಗ ಎಂದು ಆದೇಶದಲ್ಲಿ ಹೇಳಲಾಗಿದೆ.

    ವಿಜಯವಾಡದ ಮಾಜಿ ಕಮಿಷನರ್ ಆಗಿದ್ದ ಕಂಠಿ ರಾಣಾ ಟಾಟಾ ಅವರು ತನಿಖೆಯನ್ನು ಸರಿಯಾಗಿ ಮೇಲ್ವಿಚಾರಣೆ ಮಾಡಲು ವಿಫಲರಾಗಿದ್ದಾರೆ ಮತ್ತು ಎರಡು ದಿನಗಳ ನಂತರ ಎಫ್‍ಐಆರ್ ದಾಖಲಿಸುವ ಮೊದಲು ಜನವರಿ 31 ರಂದು ತಮ್ಮ ಮೇಲಧಿಕಾರಿಗಳ ಮೌಖಿಕ ಸೂಚನೆಯ ಮೇರೆಗೆ ನಟಿಯನ್ನು ಬಂಧಿಸಲು ಆದೇಶ ಹೊರಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

    ಪ್ರಕರಣ ದಾಖಲಾದ 1 ಗಂಟೆ ಬಳಿಕ, ಸರಿಯಾದ ಲಿಖಿತ ಆದೇಶ ಇಲ್ಲದೇ ನಟಿಯ ಬಂಧನಕ್ಕಾಗಿ ಮುಂಬೈಗೆ ತೆರಳಲು ಪೊಲೀಸ್ ಅಧಿಕಾರಿಗಳಿಗೆ ಟಿಕೆಟ್‍ಗಳನ್ನು ಕಾಯ್ದಿರಿಸುವಂತೆ ಅವರು ಆದೇಶಿಸಿದ್ದರು ಎಂದು ವರದಿಯಾಗಿದೆ.

    ನಟನನ್ನು ಬಂಧಿಸುವ ಮುನ್ನ ದೂರನ್ನು ಕೂಲಂಕಷವಾಗಿ ಪರಿಶೀಲಿಸಲು ವಿಫಲವಾದ ಆರೋಪವನ್ನು ವಿಶಾಲ್ ಗುನ್ನಿ ಮೇಲೆ ಹೊರಿಸಲಾಗಿದೆ. ಸರಿಯಾದ ಲಿಖಿತ ಆದೇಶವಿಲ್ಲದೆ ಬಂಧನಕ್ಕಾಗಿ ಫೆಬ್ರವರಿ 2 ರಂದು ಮುಂಬೈಗೆ ಪ್ರಯಾಣಿಸಿದ್ದರು ಮತ್ತು ಮೇಲಧಿಕಾರಿಗಳ ಮೌಖಿಕ ಸೂಚನೆಯಂತೆ ಕಾರ್ಯನಿರ್ವಹಿಸಿದ್ದರು ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ನಟಿ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಇಬ್ರಾಹಿಂಪಟ್ಟಣಂ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ದೂರು ದಾಖಲಿಸಿದ್ದರು.

  • ಗೃಹ ಬಂಧನದ ಭೀತಿಯಿಂದ ಪಕ್ಷದ ಕಚೇರಿಯಲ್ಲೇ ಮಲಗಿದ ವೈ.ಎಸ್ ಶರ್ಮಿಳಾ

    ಗೃಹ ಬಂಧನದ ಭೀತಿಯಿಂದ ಪಕ್ಷದ ಕಚೇರಿಯಲ್ಲೇ ಮಲಗಿದ ವೈ.ಎಸ್ ಶರ್ಮಿಳಾ

    ಅಮರಾವತಿ: ಆಂಧ್ರಪ್ರದೇಶ ಕಾಂಗ್ರೆಸ್ (Congress) ಮುಖ್ಯಸ್ಥೆ ವೈ.ಎಸ್ ಶರ್ಮಿಳಾ ರೆಡ್ಡಿ (YS Sharmila Reddy) ಅವರು ಗೃಹಬಂಧನದಿಂದ ತಪ್ಪಿಸಿಕೊಳ್ಳಲು ಬುಧವಾರ ರಾತ್ರಿ ವಿಜಯವಾಡದಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿಯೇ ಮಲಗಿ ಕಾಲಕಳೆದಿದ್ದಾರೆ.

    ನಿರುದ್ಯೋಗಿ ಯುವಕರು ಮತ್ತು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ರಾಜ್ಯ ಸರ್ಕಾರ ಬಗೆಹರಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದರು. ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಶರ್ಮಿಳಾ ಅವರನ್ನು ಬಂಧಿಸುವ ಸಾಧ್ಯತೆ ಇದ್ದಿದ್ದರಿಂದ ಅವರು ರಾತ್ರಿ ಪಕ್ಷದ ಕಚೇರಿಯಲ್ಲಿಯೇ ಉಳಿದುಕೊಂಡಿದ್ದರು. ಈ ಬಗ್ಗೆ ಶರ್ಮಿಳಾ ಅವರು ವಿಜಯವಾಡದ ಆಂಧ್ರರತ್ನ ಭವನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಕಳೆದ ಐದು ವರ್ಷಗಳಲ್ಲಿ ಯುವಜನರು, ನಿರುದ್ಯೋಗಿಗಳು ಮತ್ತು ವಿದ್ಯಾರ್ಥಿಗಳ ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅಣು ಶಕ್ತಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾಸಗಿ ಹಣ – ರೇಸ್‌ನಲ್ಲಿ ಟಾಟಾ, ರಿಲಯನ್ಸ್‌, ಅದಾನಿ

    ನಾವು ಭಯೋತ್ಪಾದಕರೇ? ಅಥವಾ ಸಮಾಜ ವಿರೋಧಿ ಶಕ್ತಿಗಳಾ? ಅವರು ನಮ್ಮನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಅಂದರೆ ಅವರು (ಸರ್ಕಾರ) ನಮಗೆ ಹೆದರುತ್ತಿದ್ದಾರೆ. ಅವರು ತಮ್ಮನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ. ನಮ್ಮನ್ನು ತಡೆಯಲು ಪ್ರಯತ್ನಿಸಿದರೂ, ನಿರುದ್ಯೋಗಿಗಳ ಪರವಾಗಿ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

    ಈ ಬಗ್ಗೆ ಎಕ್ಸ್‍ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ನಾವು ನಿರುದ್ಯೋಗಿಗಳ ಪರವಾಗಿ ಪ್ರತಿಭಟನೆಗೆ ಕರೆ ನೀಡಿದರೆ, ನೀವು ನಮ್ಮನ್ನು ಗೃಹಬಂಧನದಲ್ಲಿ ಇರಿಸಲು ಪ್ರಯತ್ನಿಸುತ್ತೀರಾ? ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವ ಹಕ್ಕು ನಮಗಿಲ್ಲವೇ? ಇದು ನಾಚಿಕೆಗೇಡಿನ ಸಂಗತಿಯಲ್ಲವೇ? ಮಹಿಳೆಯಾಗಿ ನಾನು ಪೊಲೀಸರಿಂದ ತಪ್ಪಿಸಿಕೊಳ್ಳಲು ಮತ್ತು ಗೃಹಬಂಧನವನ್ನು ತಪ್ಪಿಸಲು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ರಾತ್ರಿ ಕಳೆದಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

    ಆಂಧ್ರಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಮತ್ತು ಸಂಸದ ಮಾಣಿಕ್ಕಂ ಠಾಗೋರ್ ಅವರು ರಾಜ್ಯ ಸರ್ಕಾರದ್ದು ಸರ್ವಾಧಿಕಾರಿ ಧೋರಣೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ತಜ್ಞರ ಅಭಿಪ್ರಾಯ ಕೇಳದೆ ಬಿಬಿಎಂಪಿಯಿಂದ ಬೋರ್ ಕೊರೆತ – 25 ಬೋರ್ ಫೇಲ್ಯೂರ್

  • ಶ್ರೀರಾಮುಲು ಸಹೋದರಿ ಬಿಜೆಪಿಗೆ ಗುಡ್ ಬೈ – ಹಿಂದುಪುರದಿಂದ ಸ್ಪರ್ಧೆ?

    ಶ್ರೀರಾಮುಲು ಸಹೋದರಿ ಬಿಜೆಪಿಗೆ ಗುಡ್ ಬೈ – ಹಿಂದುಪುರದಿಂದ ಸ್ಪರ್ಧೆ?

    ಬಳ್ಳಾರಿ: ಮಾಜಿ ಸಚಿವ ಶ್ರೀರಾಮುಲು (B.Sriramulu) ಸಹೋದರಿ ಮಾಜಿ ಸಂಸದೆ ಜೆ.ಶಾಂತಾ (J.Shantha) ಅವರು ಬಿಜೆಪಿಗೆ (BJP) ಗುಡ್ ಬೈ ಹೇಳಿದ್ದಾರೆ. ವೈಎಸ್‍ಆರ್ ಕಾಂಗ್ರೆಸ್ (YSR Congress) ಸೇರ್ಪಡೆಗೊಳ್ಳುವ ಮೂಲಕ ಕರ್ನಾಟಕ ರಾಜಕಾರಣ ಬಿಟ್ಟು ಆಂಧ್ರಪ್ರದೇಶದ ರಾಜಕಾರಣಕ್ಕೆ ಅವರು ಎಂಟ್ರಿ ಕೊಟಿದ್ದಾರೆ.

    ವಿಜಯವಾಡ ತಾಡಿಪಲ್ಲಿ ಸಿಎಂ ಕ್ಯಾಂಪ್ ಆಫೀಸ್‍ನಲ್ಲಿ ಆಂಧ್ರ ಸಿಎಂ ಜಗನ್‍ಮೋಹನ್ ರೆಡ್ಡಿ (Y.S Jagan Mohan Reddy) ನೇತೃತ್ವದಲ್ಲಿ ಅವರು ವೈಎಸ್‍ಆರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ವೈಎಸ್‍ಆರ್ ಪಕ್ಷದಿಂದ ಹಿಂದುಪುರ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಈ ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯದ 4.5 ಲಕ್ಷ ಮತದಾರರಿದ್ದಾರೆ. ಇದೇ ಕಾರಣಕ್ಕೆ ಅವರು ಹಿಂದುಪುರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಕರ್ನಾಟಕದಲ್ಲಿ ವಾಲ್ಮೀಕಿ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ್ದರೆ, ಆಂಧ್ರದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದೆ. ಇದನ್ನೂ ಓದಿ: ತೀಸ್ರಿ ಬಾರ್ ಮೋದಿ ಸರ್ಕಾರ್ – ಚುನಾವಣೆಗೆ ಬಿಜೆಪಿಯಿಂದ ಹೊಸ ಘೋಷ ವಾಕ್ಯ

    ಅನಂತಪುರ ಜಿಲ್ಲೆಯ ಗುಂತಕಲ್ ಪಟ್ಟಣದ ನಿವಾಸಿಯಾಗಿರುವ ಶಾಂತಾ ಅವರು, 2009ರಲ್ಲಿ ಬಿಜೆಪಿ ಮೂಲಕ ರಾಜಕೀಯ ಪ್ರವೇಶ ಮಾಡಿ, ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ಪ್ರಭಾವದಿಂದ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿಯಿಂದ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ನಿವೃತ್ತ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ ವಿರುದ್ಧ ಗೆಲುವು ಪಡೆದರು. 2014ರ ಚುನಾವಣೆಯಲ್ಲಿ ಸಹೋದರ ಬಿ.ಶ್ರೀರಾಮುಲು ಸ್ಪರ್ಧೆ ಮಾಡಿದ್ದರಿಂದ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ. 2018ರ ಉಪ ಚುನಾವಣೆಯಲ್ಲಿ ಮತ್ತೆ ಲೋಕಸಭೆಗೆ ಬಿಜೆಪಿಯಿಂದ ಅಖಾಡಕ್ಕಿಳಿದರು. ಕಾಂಗ್ರೆಸ್‍ನ ವಿ.ಎಸ್. ಉಗ್ರಪ್ಪ ವಿರುದ್ಧ ಭಾರೀ ಅಂತರದಲ್ಲಿ ಸೋತಿದ್ದರು.

    ಜಗನ್‍ಮೋಹನ್ ರೆಡ್ಡಿಯವರು ಸಂಸದಾಗಿದ್ದಾಗ ಲೋಕಸಭೆಯಲ್ಲಿ ಶಾಂತಾ ಪರಿಚಯವಾಗಿದ್ದು, ಆಂಧ್ರದ ರಾಜಕೀಯ ಎಂಟ್ರಿಗೆ ಅಂದಿನ ಪರಿಚಯ ಕಾರಣವಾಗಿದೆ. ಇತ್ತ ಬಳ್ಳಾರಿಯ ಬಿಜೆಪಿಯ ಲೋಕಸಭಾ ಟಿಕೆಟ್ ಶ್ರೀರಾಮುಲು ಅವರಿಗೆ ಸಿಗುವ ಸಾಧ್ಯತೆ ಇರುವುದರಿಂದ ಅವರು ಹಿಂದುಪುರ ಕಡೆಗೆ ಮುಖ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಅದಾನಿ ಹಿಂಡೆನ್‌ಬರ್ಗ್‌ ಶಾರ್ಟ್‌ ಸೆಲ್ಲಿಂಗ್‌ ಕೇಸ್‌: ಸುಪ್ರೀಂನಿಂದ ಇಂದು ತೀರ್ಪು ಪ್ರಕಟ

  • ಆಂಧ್ರ ಸಿಎಂ ಸಹೋದರಿ ಅರೆಸ್ಟ್; ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕೇಸ್ ದಾಖಲು

    ಆಂಧ್ರ ಸಿಎಂ ಸಹೋದರಿ ಅರೆಸ್ಟ್; ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕೇಸ್ ದಾಖಲು

    ಹೈದರಬಾದ್: ಆಡಳಿತ ಪಕ್ಷ ಭಾರತೀಯ ರಾಷ್ಟ್ರೀಯ ಸಮಿತಿಯ ಶಾಸಕರೊಬ್ಬರ (BRS) ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪದ ಮೇಲೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‍ಮೋಹನ್ ರೆಡ್ಡಿ (Y.S.Jagan Mohan Reddy) ಸಹೋದರಿ ಹಾಗೂ ವೈಎಸ್‍ಆರ್ ತೆಲಂಗಾಣ ಪಾರ್ಟಿಯ (YSRTP) ಅಧ್ಯಕ್ಷೆ ವೈ.ಎಸ್.ಶರ್ಮಿಳಾ ಅವರನ್ನು ತೆಲಂಗಾಣದ ಮೆಹಬೂಬಾಬಾದ್‍ನ ಬೆತೋಲ್‍ನಲ್ಲಿ ಬಂಧಿಸಲಾಗಿದೆ. ಅಲ್ಲದೇ ಶರ್ಮಿಳಾ ವಿರುದ್ಧ ಎಸ್‍ಸಿ-ಎಸ್‍ಟಿ ದೌರ್ಜನ್ಯ ತಡೆ ಕಾಯ್ದೆ (SC, ST atrocities case) ಅಡಿ ಪ್ರಕರಣ ದಾಖಲಿಸಲಾಗಿದೆ.

    ಶರ್ಮಿಳಾ ಅವರು ಮೆಹಬೂಬಾಬಾದ್ ನಗರದ ಶಾಸಕ ಶಂಕರ್ ನಾಯ್ಕ್ ವಿರುದ್ಧ ಪಕ್ಷದ ಸಭೆಯೊಂದರಲ್ಲಿ ಮಾನಹಾನಿ ಪದಗಳ ಬಳಕೆ ಮಾಡಿದ್ದರು. ದರೋಡೆ, ಅಕ್ರಮ, ಭೂ ಒತ್ತುವರಿ, ಭ್ರಷ್ಟಾಚಾರದ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಿಆರ್‍ಎಸ್ ಮಂಡಲ್ ಅಧ್ಯಕ್ಷ ಲುನಾವತ್ ಅಶೋಕ್ ಅವರು ಪೊಲೀಸ್ ಠಾಣೆಯಲ್ಲಿ ಶರ್ಮಿಳಾ ವಿರುದ್ಧ ದೂರು ದಾಖಲಿಸಿದ್ದರು. ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡುವಾಗ ಶಂಕರ್ ನಾಯ್ಕ್ ವಿರುದ್ಧ ಶರ್ಮಿಳಾ ಕಠಿಣ ಪದಗಳನ್ನು ಬಳಸಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮೆಹಬೂಬಾಬಾದ್ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮನುಷ್ಯತ್ವ ಇರೋರು ಜನ ಸಾಯುತ್ತಿದ್ದಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರಾ – ಫೇಸ್‌ಬುಕ್‌ನಲ್ಲಿ ರೋಹಿಣಿ ವಿರುದ್ಧ ರೂಪಾ ಕಿಡಿ

    ಬೆತೋಲ್‍ನಲ್ಲಿ ಅವರು ಪಾದಯಾತ್ರೆ ನಡೆಸುತ್ತಿದ್ದ ವೇಳೆ ಅಡಳಿತ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಪರಿಣಾಮ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಶರ್ಮಿಳಾ ಅವರನ್ನು ಬಂಧಿಸಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಅವರನ್ನು ಹೈದ್ರಾಬಾದ್‍ಗೆ (Hyderabad) ಕರೆದೊಯ್ಯಲಾಯಿತು.

    ಈ ಹಿಂದೆ ಸಹ ಶರ್ಮಿಳಾ ಅವರ ಬೆಂಬಲಿಗರು ಹಾಗೂ ಬಿಆರ್‍ಎಸ್ ಪಕ್ಷದ ಕಾರ್ಯಕರ್ತರೊಂದಿಗಿನ ಗಲಾಟೆ ವಿಚಾರವಾಗಿ ಹೈದ್ರಾಬಾದ್ ಪೊಲೀಸರು ಆಕೆಯನ್ನು ಬಂಧಿಸಿದ್ದರು. ಶರ್ಮಿಳಾ ಅವರು ಕಾರಿನಲ್ಲಿರುವಾಗಲೇ ಪೊಲೀಸರು ಕಾರನ್ನು ಕ್ರೈನ್ ಮೂಲಕ ಎಳೆದೊಯ್ದಿದ್ದರು. ಇದನ್ನು ತೀವ್ರವಾಗಿ ಖಂಡಿಸಿದ್ದ ಶರ್ಮಿಳಾ ಅವರು ಜನರ ಸಂಕಷ್ಟಗಳ ಬಗ್ಗೆ ಬೆಳಕು ಚೆಲ್ಲುವ ಶಾಂತಿಯುತ ಪಾದಯಾತ್ರೆ ನಡೆಸುತ್ತಿದ್ದೇವೆ. ನಮ್ಮ ಜನಪ್ರಿಯತೆಯನ್ನು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (K. Chandrashekar Rao) ಹಾಗೂ ಅವರ ಬೆಂಬಲಿಗರು ಸಹಿಸುತ್ತಿಲ್ಲ ಎಂದು ಆರೋಪಿಸಿದ್ದರು. ಇದನ್ನೂ ಓದಿ: ನಟ ತಾರಕ ರತ್ನ ಅಂತಿಮ ದರ್ಶನಕ್ಕೆ ತೆಲುಗು ಫಿಲ್ಮ್ ಚೇಂಬರ್ ವ್ಯವಸ್ಥೆ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಉಪವಾಸ ಸತ್ಯಾಗ್ರಹ ಮಾಡ್ತಿದ್ದ ಆಂಧ್ರ ಸಿಎಂ ಸಹೋದರಿ ಆಸ್ಪತ್ರೆಗೆ ದಾಖಲು

    ಉಪವಾಸ ಸತ್ಯಾಗ್ರಹ ಮಾಡ್ತಿದ್ದ ಆಂಧ್ರ ಸಿಎಂ ಸಹೋದರಿ ಆಸ್ಪತ್ರೆಗೆ ದಾಖಲು

    ಹೈದರಾಬಾದ್: ಕಳೆದೆರಡು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಅವರ ಸಹೋದರಿ ಶರ್ಮಿಳಾ (YS Sharmila) ಅವರನ್ನ ಪೊಲೀಸರು (Police) ಜುಬಿಲಿ ಹಿಲ್ಸ್‌ನಲ್ಲಿರುವ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಿಸಿದ್ದಾರೆ.

    ತಮ್ಮ ನೇತೃತ್ವದಲ್ಲಿ ನಡೆಯುತ್ತಿರುವ `ಪ್ರಜಾ ಸಂಸ್ಥಾನಂ’ ಪಾದಯಾತ್ರೆಗೆ ಅನುಮತಿ ನೀಡದ ತೆಲಂಗಾಣ ರಾಷ್ಟ್ರ ಸಮಿತಿ (TRS) ಸರ್ಕಾರ ವಿರುದ್ಧ ಶುಕ್ರವಾರ ಬೆಳಿಗ್ಗೆಯಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಇದೀಗ ಆಸ್ಪತ್ರೆಗೆ ದಾಖಲಿಸಿದ್ದು, ಶರ್ಮಿಳಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಇಶಾನ್ ಕಿಶನ್ ಒಂದೇ ದ್ವಿಶತಕಕ್ಕೆ ಹಲವು ದಾಖಲೆಗಳು ಉಡೀಸ್ – ಕೊಹ್ಲಿಗೆ ಥ್ಯಾಂಕ್ಸ್

    ಈ ಹಿಂದೆ ಶರ್ಮಿಳಾ ಅವರಿಗೆ ರಕ್ತದೊತ್ತಡ ಹಾಗೂ ಗ್ಲೂಕೋಸ್ ಮಟ್ಟವು ಕಡಿಮೆಯಾಗಿದೆ ಎಂದು ವೈದ್ಯರು ಹೇಳಿದ್ದರು. ಅಲ್ಲದೇ ನಿರ್ಜಲೀಕರಣ ಸಮಸ್ಯೆ ಇರುವ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದರು. ಇದು ಕಿಡ್ನಿ (ಮೂತ್ರಪಿಂಡ)ಗೆ ಸಾಕಷ್ಟು ಅಪಾಯ ಇರುವ ಲಕ್ಷಣವನ್ನು ಸೂಚಿಸಿತ್ತು ಎನ್ನಲಾಗಿತ್ತು. ಇದೀಗ ವೈದ್ಯರು ಆರೋಗ್ಯ ಸ್ಥಿರವಾಗಿದೆ ಎಂದು ಅಭಯ ನೀಡಿದ್ದಾರೆ.

    ಶರ್ಮಿಳಾ ಅವರು ನ್ಯಾಯಾಲಯದ ಅನುಮತಿಯಿದ್ದರೂ ಪೊಲೀಸರು ತನಗೆ ಪಾದಯಾತ್ರೆ ಮುಂದುವರಿಸಲು ಅವಕಾಶ ನೀಡುತ್ತಿಲ್ಲ. ತೆಲಂಗಾಣದಲ್ಲಿ ಪ್ರಜಾಪ್ರಭುತ್ವ ರಕ್ಷಿಸಬೇಕೆಂದು ಪಾದಯಾತ್ರೆ ಮುಂದುವರಿಸಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಶುಕ್ರವಾರ ಸತ್ಯಾಗ್ರಹಕ್ಕೆ ಕುಳಿತಿದ್ದರು. ಇದನ್ನೂ ಓದಿ: ಮೈಲಿಗೆ ಆಗುತ್ತೆ ಅಂತಾ ದತ್ತಪೀಠದಲ್ಲಿ ಮೌಲ್ವಿಗಳ ಪೂಜೆಗೆ ನಕಾರ – ಅರ್ಚಕರ ವಿರುದ್ಧ ಆರೋಪ

    ಇದೇ ಸಂದರ್ಭದಲ್ಲಿ ತೆಲಂಗಾಣ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಸಿಎಂ ಕೆ. ಚಂದ್ರಶೇಖರ್ ರಾವ್ (KCR) ನನ್ನ ಪಾದಯಾತ್ರೆ ತಡೆಯಲು ಪ್ರಯತ್ನಿಸುತ್ತಿದ್ದಾರೆ. ನನ್ನ ಬಸ್ಸೊಂದನ್ನ ಸುಟ್ಟುಹಾಕಿದರು. ನನ್ನ ಬೆಂಬಲಿತರನ್ನ ಥಳಿಸಿ ಹಿಂಸಾಚಾರ ಮಾಡಿದರು. ನಂತರ ನನ್ನನ್ನು ಬಂಧಿಸಿ ಕರೆದೊಯ್ದಿದ್ದರು. ಮರುದಿನ ನ್ಯಾಯಾಲಯ ನನ್ನ ಪಾದಯಾತ್ರೆ ಮುಂದುವರಿಸಲು ಅನುಮತಿ ನೀಡಿತ್ತು. ಆದಾಗ್ಯೂ ಪಾದಯಾತ್ರೆ ಮುಂದುವರಿಸಲು ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

    ನವೆಂಬರ್ 29 ರಂದು, ವೈ.ಎಸ್ ಶರ್ಮಿಳಾ ಅವರು ಎಸ್‌ಯುವಿ ಕಾರಿನೊಳಗೆ ಕುಳಿತಿದ್ದಾಗ ಪಂಜಗುಟ್ಟ ಪೊಲೀಸರು ಕಾರಿನ ಸಮೇತ ಅವರನ್ನು ಎಳೆದೊಯ್ದು ವಶಕ್ಕೆ ಪಡೆದಿದ್ದರು.

    Live Tv
    [brid partner=56869869 player=32851 video=960834 autoplay=true]

  • ಆಂಧ್ರ ಸಿಎಂ ಜಗನ್ ಸಹೋದರಿ ಅರೆಸ್ಟ್

    ಆಂಧ್ರ ಸಿಎಂ ಜಗನ್ ಸಹೋದರಿ ಅರೆಸ್ಟ್

    ಹೈದರಾಬಾದ್: ಆಂಧ್ರಪ್ರದೇಶದ (Andhra Pradesh) ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಅವರ ಸಹೋದರಿ ವೈ.ಎಸ್. ಶರ್ಮಿಳಾ (YS Sharmila) ಅವರನ್ನು ವಾರಂಗಲ್‍ನಲ್ಲಿ ಪೊಲೀಸರು ಬಂಧಿಸಿದ್ದಾರೆ.

    ತೆಲಂಗಾಣದಲ್ಲಿ ಶರ್ಮಿಳಾ ಅವರು ವೈಎಸ್‍ಆರ್ ತೆಲಂಗಾಣ ಪಕ್ಷವನ್ನು (YSRTP) ಸಂಘಟಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪಾದಾಯಾತ್ರೆಯನ್ನು ಹಮ್ಮಿಕೊಂಡಿದ್ದರು. ಅಷ್ಟೇ ಅಲ್ಲದೇ  ಈವರೆಗೆ ಸುಮಾರು 3,500 ಕಿ.ಮೀವರೆಗೆ ಪಾದಯಾತ್ರೆ ನಡೆಸಿದ್ದರು.

    ನಿನ್ನೆ ನರಸಂಪೇಟೆಯಲ್ಲಿದ್ದ ಅವರು ಸ್ಥಳೀಯ ಟಿಆರ್‌ಎಸ್ ಶಾಸಕ ಪೆದ್ದಿ ಸುದರ್ಶನ್ ರೆಡ್ಡಿ ಅವರನ್ನು ಟೀಕಿಸಿದರು. ಇದರಿಂದಾಗಿ ಕೋಪಗೊಂಡ ಟಿಆರ್‌ಎಸ್ (Telangana Rashtra Samithi) ಕಾರ್ಯಕರ್ತರು ಶರ್ಮಿಳಾ ಅವರ ವಾಹನದ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೆಳತಿಗೆ ಹತ್ತಿರವಾಗಿದ್ದ ಹುಡುಗನ ವಿರುದ್ಧ ಸೇಡು – ಮೋದಿಗೆ ಬೆದರಿಕೆ ಹಾಕಿದ್ದ ಟೆಕ್ಕಿ ಅರೆಸ್ಟ್

    ಇದರಿಂದಾಗಿ ವೈ.ಎಸ್. ಶರ್ಮಿಳಾ ಬೆಂಬಲಿಗರಿಗೂ ಸಿಟ್ಟಿಗೆದ್ದಿದ್ದಾರೆ. ಈ ವೇಳೆ ಶರ್ಮಿಳಾ ಬೆಂಬಲಿಗರಿಗೂ ಹಾಗೂ ಟಿಆರ್‌ಎಸ್ (TRS) ಕಾರ್ಯಕರ್ತರಿಗೂ ಮಾರಾಮಾರಿ ನಡೆದಿದೆ. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಶರ್ಮಿಳಾ ಅವರನ್ನು ಬಂಧಿಸಿದ್ದಾರೆ. ಈ ವೇಳೆ ಶರ್ಮಿಳಾ ಅವರು ನನನ್ನು ಯಾಕೆ ಬಂಧಿಸುತ್ತಿದ್ದೀರಿ? ಇಲ್ಲಿ ನಾನು ಸಂತ್ರಸ್ತೆ, ನಾನು ಆರೋಪಿಯಲ್ಲ ಎಂದು ಕೂಗಾಡಿದ್ದಾರೆ. ಈಗಿರುವ ಆರ್‌ಎಸ್‌ಎಸ್ ಕಳ್ಳರ ಆರ್‌ಎಸ್‌ಎಸ್ : ಪರಿಷತ್ ಸದಸ್ಯ ರಾಜೇಂದ್ರ ಕಿಡಿ

    Live Tv
    [brid partner=56869869 player=32851 video=960834 autoplay=true]

  • ಓರ್ವ ಅಪ್ರಾಪ್ತ ಸೇರಿ ಮೂವರಿಂದ ಗರ್ಭಿಣಿ ಮೇಲೆ ಅತ್ಯಾಚಾರ – 24 ಗಂಟೆಯಲ್ಲಿ 2ನೇ ರೇಪ್

    ಅಮರಾವತಿ: ರೈಲ್ವೆ ಪ್ಲಾಟ್‌ಫಾರ್ಮ್ನಲ್ಲಿ ಮಲಗಿದ್ದ ಗರ್ಭಿಣಿಯ ಮೇಲೆ ಓರ್ವ ಅಪ್ರಾಪ್ತ ಸೇರಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಆಂಧ್ರಪ್ರದೇಶದ ರೆಪಲ್ಲೆ ರೈಲು ನಿಲ್ದಾಣದಲ್ಲಿ ನಡೆದಿದೆ.

    STOP RAPE

    ನಿನ್ನೆಯಷ್ಟೇ ಇದೇ ರೈಲ್ವೆ ನಿಲ್ದಾಣದಲ್ಲಿ ವಲಸೆ ಕಾರ್ಮಿಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತು. ಇದಾದ 24 ಗಂಟೆಗಳಲ್ಲಿ ಅದೇ ರೀತಿಯಲ್ಲಿ ಮತ್ತೊಂದು ಕೃತ್ಯ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ರೆಪಲ್ಲೆ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಶವರ್ಮ ತಿಂದು 16 ವರ್ಷದ ವಿದ್ಯಾರ್ಥಿನಿ ಸಾವು, 18 ಮಂದಿ ಅಸ್ವಸ್ಥ

    police (1)

    ಮಹಿಳೆಯು ತನ್ನ ಪತಿ ಮತ್ತು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ನಲ್ಲಿ ಮಲಗಿದ್ದ ವೇಳೆ ಮೂವರು ಆರೋಪಿಗಳು ಅವರ ಬಳಿಗೆ ಬಂದು ಪತಿಯನ್ನು ಹಿಡಿದು ಥಳಿಸಿದ್ದಾರೆ. ನಂತರ ಗರ್ಭಿಣಿಯನ್ನು ಸಮೀಪದ ಪೊದೆಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮೂವರು ಆರೋಪಿಗಳು ಕುಡಿದ ಅಮಲಿನಲ್ಲಿ ಪತಿ ಮೇಲೆ ಹಲ್ಲೆ ನಡೆಸಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಪಟ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಆರೋಪ – ಐಎಎಸ್ ಅಧಿಕಾರಿ ವಿರುದ್ಧ ಕೇಸ್ ದಾಖಲು

    ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್‌ಮೋಹನ ರೆಡ್ಡಿ ಹಾಗೂ ಮಹಿಳಾ ಆಯೋಗದ ಅಧ್ಯಕ್ಷೆ ವಾಸಿರೆಡ್ಡಿ ಪದ್ಮಾ, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್, ಒಂಗೋಲ್)ಗೆ ದಾಖಲಿಸಲಾಗಿದೆ.