Tag: Yuva

  • ಪೊರಕೆ ಹಿಡಿದು ಹೊಸ ಅವತಾರದಲ್ಲಿ ಯುವ ಎಂಟ್ರಿ- ‘‌ಎಕ್ಕ’ ಚಿತ್ರದ ಟೀಸರ್‌ ಔಟ್

    ಪೊರಕೆ ಹಿಡಿದು ಹೊಸ ಅವತಾರದಲ್ಲಿ ಯುವ ಎಂಟ್ರಿ- ‘‌ಎಕ್ಕ’ ಚಿತ್ರದ ಟೀಸರ್‌ ಔಟ್

    ನ್ನಡ ಚಿತ್ರರಂಗದ ಭರವಸೆ ನಟ ಯುವ ರಾಜ್‌ಕುಮಾರ್‌ (Yuva Rajkumar) ಹುಟ್ಟುಹಬ್ಬದ ಅಂಗವಾಗಿ ನಿನ್ನೆ (ಏ.23) ಬಿಡುಗಡೆಯಾಗಬೇಕಿದ್ದ ಯುವ ಟೀಸರ್‌ ಇಂದು ಅನಾವರಣ ಮಾಡಲಾಗಿದೆ. ಪಹಲ್ಗಾಮ್ ಉಗ್ರರ ದಾಳಿಯಲ್ಲಿ ತಮ್ಮ ಕುಟುಂಬದವರನ್ನು ಕಳೆದುಕೊಂಡವರಿಗೆ ಗೌರವ ಸೂಚಿಸುವ ಸಲುವಾಗಿ ಚಿತ್ರತಂಡ ಟೀಸರ್‌ ಬಿಡುಗಡೆ ಮುಂದೂಡಿತ್ತು. ಇಂದು (ಏ.24) ಅಣ್ಣಾವ್ರ ಜನ್ಮದಿನದ ಜೊತೆಗೆ ಯುವ ಬರ್ತಡೇಗೆ ಸ್ಪೆಷಲ್‌ ಆಗಿಯೇ ಟೀಸರ್‌ ರಿಲೀಸ್‌ ಆಗಿದೆ. ಇದನ್ನೂ ಓದಿ:ಸೆಟ್ಟೇರಿತು ಯುವ ರಾಜ್‌ಕುಮಾರ್‌ 2ನೇ ಚಿತ್ರ- ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಚಿತ್ರತಂಡ

    1 ನಿಮಿಷ 9 ಸೆಕೆಂಡ್‌ ಇರುವ ‘ಯುವ’ ಟೀಸರ್‌ ಸಖತ್‌ ಆಗಿ ಮೂಡಿ ಬಂದಿದೆ. ಹೊಸ ಅವತಾರದಲ್ಲಿ ಯುವ ರಾಜ್‌ಕುಮಾರ್‌ ಎಂಟ್ರಿ ಕೊಟ್ಟಿದ್ದಾರೆ. ಮಸ್ತ್‌ ಆಗಿ ಡೈಲಾಗ್‌ ಹೊಡೆಯುತ್ತಾ ಕೈಯಲ್ಲಿ ಪೊರಕೆ ಹಿಡಿದು ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೊಂದ್ ವಿಷ್ಯ ಇದು ಇಲ್ಲಿಗೆ ನಿಲ್ಲೋದಿಲ್ಲ ಅಂತ ಯುವ ಡೈಲಾಗ್‌ ಹೊಡೆದಿದ್ದಾರೆ. ಇದರಿಂದ ಸಿನಿಮಾ ಬಗೆಗಿನ ನಿರೀಕ್ಷೆ ಹೆಚ್ಚಿಸಿದೆ. ‘ಎಕ್ಕ’ (Ekka) ಚಿತ್ರದಲ್ಲಿ ಯುವ ನಟನೆ, ರೋಹಿತ್‌ ಪದಕಿ ನಿರ್ದೇಶನ, ಚರಣ್‌ ರಾಜ್‌ ಅವರ ಮ್ಯೂಸಿಕ್‌ ಕಿಕ್‌ ಈ ಚಿತ್ರದ ಟೀಸರ್‌ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ಈಗಾಗಲೇ ‘ಯುವ’ ಸಿನಿಮಾದ ಟೈಟಲ್‌ ಟ್ರ್ಯಾಕ್‌ ಚಿಂದಿ ಉಡಾಯಿಸಿದ್ದು, ಈಗ ‘ಎಕ್ಕ’ ಟೀಸರ್‌ ಸರದಿ ಅಂತ ಫ್ಯಾನ್ಸ್‌ ಖುಷಿಪಡುತ್ತಿದ್ದಾರೆ. ಇದನ್ನೂ ಓದಿ: ಮಹಾಭಾರತ ಸಿನಿಮಾ ಮಾಡೋದಾಗಿ ಘೋಷಿಸಿದ ಆಮೀರ್ ಖಾನ್

    ರೋಹಿತ್ ಪದಕಿ ನಿರ್ದೇಶನದ ಈ ಚಿತ್ರದಲ್ಲಿ ಯುವರಾಜ್‌ಕುಮಾರ್ ನಾಯಕನಾಗಿ, ಸಂಪದಾ ಹಾಗೂ ಸಂಜನಾ ಆನಂದ್ (Sanjana Anand) ನಾಯಕಿಯರಾಗಿ ಅಭಿನಯಿಸಿದ್ದಾರೆ. ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣ ಚಿತ್ರದಲ್ಲಿ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ ಮತ್ತು ದೀಪು ಎಸ್‍. ಕುಮಾರ್ ಸಂಕಲನ ಒದಗಿಸಿದ್ದಾರೆ.

     

    View this post on Instagram

     

    A post shared by Yuva Rajkumar (@yuva_rajkumar)

    ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾವ್ ಅವರ ಕೆಆರ್‌ಜಿ ಸಂಸ್ಥೆ, ಜಯಣ್ಣ ಹಾಗೂ ಭೋಗೇಂದ್ರ ಅವರ ಜಯಣ್ಣ ಫಿಲ್ಮ್ಸ್, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಈ ಚಿತ್ರದ ಶೂಟಿಂಗ್‌ ಭರದಿಂದ ಸಾಗುತ್ತಿದ್ದು, ಜೂನ್ 6ರಂದು ‘ಎಕ್ಕ’ ಸಿನಿಮಾ ರಿಲೀಸ್‌ ಆಗಲಿದೆ.

  • ಆಯುಧ ಪೂಜೆಯ ದಿನದಂದೇ ಸಿಹಿಸುದ್ದಿ ಕೊಟ್ಟ ಯುವ- ಚಿತ್ರದ ಪೋಸ್ಟರ್‌ ಔಟ್

    ಆಯುಧ ಪೂಜೆಯ ದಿನದಂದೇ ಸಿಹಿಸುದ್ದಿ ಕೊಟ್ಟ ಯುವ- ಚಿತ್ರದ ಪೋಸ್ಟರ್‌ ಔಟ್

    ದೊಡ್ಮನೆ ಕುಡಿ ಯುವ ರಾಜ್‌ಕುಮಾರ್ (Yuva Rajkumar) ಕೊನೆಗೂ ಮುಂದಿನ ಸಿನಿಮಾದ ಬಗ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇಂದು (ಅ.11) ಆಯುಧ ಪೂಜೆಯ ದಿನದಂದೇ ಹೊಸ ಚಿತ್ರದ ಪೋಸ್ಟರ್ ಶೇರ್ ಮಾಡಿ ಅಧಿಕೃತವಾಗಿ ಮುಂದಿನ ಸಿನಿಮಾ ‘ಯುವ 02’ ಕುರಿತು ಮಾಹಿತಿ ನೀಡಿದ್ದಾರೆ.

    ‘ರತ್ನನ್ ಪ್ರಪಂಚ’ ಖ್ಯಾತಿಯ ನಿರ್ದೇಶಕ ರೋಹಿತ್ ಪದಕಿ‌ (Rohith Padaki) ಜೊತೆ ಯುವ ಹೊಸ ಸಿನಿಮಾ ಮಾಡುತ್ತಿದ್ದಾರೆ. ಸದ್ಯ ಯುವ, ರಕ್ತ ಸಿಕ್ತವಾಗಿರುವ ಪೋಸ್ಟರ್‌ ಶೇರ್‌ ಮಾಡಿದ್ದಾರೆ. ಚಿತ್ರದ ಪೋಸ್ಟರ್‌ ಲುಕ್‌ ನೋಡಿ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ. ‘ಯುವ 02’ ಎಂದು ಚಿತ್ರವನ್ನು ಹೆಸರಿಸಲಾಗಿದೆ.

     

    View this post on Instagram

     

    A post shared by Karthik Gowda (@karthik_krg)

    ಇನ್ನೂ ಪೋಸ್ಟರ್ ಅನ್ನು ಸರಿಯಾಗಿ ಗಮನಿಸಿದರೆ ಯುವ ಕೈ ಮೇಲೆ ‘ರತ್ನ’ ಎನ್ನುವ ಹಚ್ಚೆ ಇರುವುದನ್ನು ನೋಡಬಹುದು. ಚಿತ್ರದಲ್ಲಿ ರತ್ನ ಯಾರು? ನಾಯಕನ ತಾಯಿನಾ? ಅಥವಾ ಸಹೋದರಿನಾ? ಇಲ್ಲ ಪ್ರೇಯಸಿನಾ? ಆಕೆಗಾಗಿಯೇ ಈ ರಕ್ತ ಚರಿತ್ರೆ ನಡೆಯುತ್ತಾ? ಎನ್ನುವ ಪ್ರಶ್ನೆಗಳಿಗೆಲ್ಲಾ ಸಿನಿಮಾದಲ್ಲಿಯೇ ಉತ್ತರ ಸಿಗಲಿದೆ.

     

    View this post on Instagram

     

    A post shared by Yuva Rajkumar (@yuva_rajkumar)

    ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಅನ್ನು ನವೆಂಬರ್ 2ರಂದು ಚಿತ್ರತಂಡ ಅನೌನ್ಸ್ ಮಾಡಲಿದ್ದಾರೆ. ಯುವ ರಾಜ್‌ಕುಮಾರ್ ನಟನೆಯ ಮುಂದಿನ ಚಿತ್ರವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar), ಜಯಣ್ಣ & ಭೋಗೇಂದ್ರ, ಕೆಆರ್‌ಜಿ ಸಂಸ್ಥೆ ಜಂಟಿಯಾಗಿ ನಿರ್ಮಾಣ ಮಾಡಲಿದ್ದಾರೆ.

  • ಯುವ ರಾಜ್‌ಕುಮಾರ್‌ಗೆ ರೋಹಿತ್ ಪದಕಿ ಆ್ಯಕ್ಷನ್ ಕಟ್

    ಯುವ ರಾಜ್‌ಕುಮಾರ್‌ಗೆ ರೋಹಿತ್ ಪದಕಿ ಆ್ಯಕ್ಷನ್ ಕಟ್

    ದೊಡ್ಮನೆ ಕುಡಿ ಯುವ ರಾಜ್‌ಕುಮಾರ್ (Yuva Rajkumar) ಅವರು ‘ಯುವ’ ಚಿತ್ರದ ಮೂಲಕ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದರು. ಅದಾದ ನಂತರ ಅವರ ಮುಂದಿನ ಸಿನಿಮಾ ಬಗ್ಗೆ ಯಾವುದೇ ಅಪ್‌ಡೇಟ್ ಸಿಕ್ಕಿರಲಿಲ್ಲ. ಇದೀಗ ಸ್ವತಃ ಅವರೇ ‘ಪಬ್ಲಿಕ್ ಟಿವಿ’ ಡಿಜಿಟಲ್‌ಗೆ ಮುಂದಿನ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಡೈರೆಕ್ಟರ್ ರೋಹಿತ್ ಪದಕಿ (Rohit Padaki) ಜೊತೆ ಸಿನಿಮಾ ಮಾಡೋದಾಗಿ ತಿಳಿಸಿದ್ದಾರೆ.

    ‘ಯುವ’ (Yuva) ಚಿತ್ರದಲ್ಲಿ ಯುವನ ಎಂಟ್ರಿ ನೋಡಿ ಅಭಿಮಾನಿಗಳಲ್ಲಿ ಭರವಸೆ ಮೂಡಿತ್ತು. ಈ ಚಿತ್ರದ ನಂತರ ಮುಂದೇನು? ಅಂತ ಕೇಳುತ್ತಿದ್ದವರಿಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಒಂದೊಳ್ಳೆಯ ಕಂಟೆಂಟ್ ಇರುವ ಚಿತ್ರ ಇದಾಗಿದ್ದು, ಡಿಫರೆಂಟ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಚಿತ್ರವನ್ನು ಡೈರೆಕ್ಟರ್ ರೋಹಿತ್ ಪದಕಿ ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಣದ ಹೊಣೆಯನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ವಹಿಸಿಕೊಂಡಿರೋದಾಗಿ ಯುವ ತಿಳಿಸಿದ್ದಾರೆ. ಇದನ್ನೂ ಓದಿ:‘ಕಾಂತಾರ’ ಚಿತ್ರದ ಪ್ರತಿ ಹಂತವು ವಿಶೇಷವಾಗಿತ್ತು – ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ

    ಇನ್ನೂ ಈ ಚಿತ್ರಕ್ಕೆ ಇನ್ನೂಳಿದ ಕಲಾವಿದರ ಆಯ್ಕೆ ಆಗಬೇಕಿದೆ. ದಸರಾ ಹಬ್ಬದಂದು ಅಧಿಕೃತ ಘೋಷಣೆ ಆಗಲಿದೆ ಎಂದು ಯುವ ಮಾತನಾಡಿದ್ದಾರೆ.

    ಇನ್ನೂ ‘ರತ್ನನ್ ಪ್ರಪಂಚ’ ನಿರ್ದೇಶಕನ ಜೊತೆ ಯುವನ ಹೊಸ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಮೂಡಿಸಿದೆ. ಚಿತ್ರದ ಹೆಚ್ಚಿನ ಅಪ್‌ಡೇಟ್‌ಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

  • ಪರಭಾಷೆಯಲ್ಲೂ ‘ಯುವ’ನ ಮೆರವಣಿಗೆ- ಬಹುಭಾಷೆಗಳಲ್ಲಿ ಸಿನಿಮಾ ಡಬ್

    ಪರಭಾಷೆಯಲ್ಲೂ ‘ಯುವ’ನ ಮೆರವಣಿಗೆ- ಬಹುಭಾಷೆಗಳಲ್ಲಿ ಸಿನಿಮಾ ಡಬ್

    ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ (Yuva Film) ಸಿನಿಮಾ ಚಿತ್ರಮಂದಿರದಲ್ಲಿ 25 ದಿನಗಳು ಪೂರೈಸಿದ ಬೆನ್ನಲ್ಲೇ ಫ್ಯಾನ್ಸ್‌ಗೆ ಇದೀಗ ಹೊಸ ಅಪ್‌ಡೇಟ್‌ವೊಂದು ಸಿಕ್ಕಿದೆ. ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ. ಈ ಮೂಲಕ ಸೌತ್‌ನತ್ತ ಯುವರಾಜ್‌ಕುಮಾರ್ (Yuva Rajkumar) ಮೆರವಣಿಗೆ ಶುರುವಾಗಿದೆ.

    ಕಾಲೇಜು ಹುಡುಗನ ಪಾತ್ರದಲ್ಲಿ ಯುವರಾಜ್‌ಕುಮಾರ್ ನಟಿಸಿದ್ದಾರೆ. ಯುವರಾಜ್‌ಕುಮಾರ್‌ಗೆ ನಾಯಕಿಯಾಗಿ ಸಪ್ತಮಿ ಗೌಡ (Sapthami Gowda) ಬಣ್ಣ ಹಚ್ಚಿದ್ದಾರೆ. ಸಂತೋಷ್ ಆನಂದ್ ರಾಮ್ (Santhosh Anandram) ನಿರ್ದೇಶನ ಮಾಡಿದ್ದಾರೆ. ಮೊದಲ ಸಿನಿಮಾದಲ್ಲೇ ಯುವರಾಜ್‌ಕುಮಾರ್ ‘ಯುವ‌’ ಚಿತ್ರದಿಂದ ಪ್ರೇಕ್ಷಕರ ಸೆಳೆದಿದ್ದಾರೆ. ಇದನ್ನೂ ಓದಿ:ಕನ್ನಡ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

    ಇದೀಗ ಒಟಿಟಿಗೆ ಲಗ್ಗೆ ಇಟ್ಟಿರುವ ‘ಯುವ’ ಸಿನಿಮಾ ತೆಲುಗು, ತಮಿಳು, ಹಿಂದಿ ಭಾಷೆಯಲ್ಲೂ ಡಬ್ ಆಗಿದೆ. ಈ ಮೂಲಕ ಪರಭಾಷೆಯಲ್ಲೂ ಯುವ ಅಬ್ಬರ ಶುರುವಾಗಿದೆ. ಅಂದಹಾಗೆ, ಕಾಂತಾರ, ಕೆಜಿಎಫ್, ಸಲಾರ್ ಸಿನಿಮಾಗಳನ್ನು ನಿರ್ಮಿಸಿದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ ಯುವ ಚಿತ್ರವನ್ನು ನಿರ್ಮಾಣ ಮಾಡಿದೆ.

  • ‘ಯುವ’ ಸಿನಿಮಾ ನೋಡಿ ಧನ್ಯವಾದ ತಿಳಿಸಿದ ಕಿಚ್ಚ ಸುದೀಪ್

    ‘ಯುವ’ ಸಿನಿಮಾ ನೋಡಿ ಧನ್ಯವಾದ ತಿಳಿಸಿದ ಕಿಚ್ಚ ಸುದೀಪ್

    ಕಿಚ್ಚ ಸುದೀಪ್ ‘ಯುವ’ (Yuva) ಸಿನಿಮಾವನ್ನು ನೋಡಿ ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ. ತಮಗಾಗಿ ಸ್ಪೆಷಲ್ ಶೋ ಆಯೋಜನೆ ಮಾಡಿದ್ದಕ್ಕೆ ಹೊಂಬಾಳೆ ಫಿಲ್ಮ್ಸ್ ಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಅಲ್ಲದೇ, ಯುವರಾಜ್ ಕುಮಾರ್ ಅವರಿಗೆ ಉತ್ತಮ ಭವಿಷ್ಯವಿದೆ ಎಂದು ಹಾರೈಸಿದ್ದಾರೆ. ವಿಶೇಷ ಪ್ರದರ್ಶನವನ್ನು ಸುದೀಪ್ (Kichcha Sudeep) ಮನೆಯಲ್ಲೇ ಆಯೋಜನೆ ಮಾಡಲಾಗಿತ್ತು. ನಿರ್ದೇಶಕ ಸಂತೋಷ್ ಆನಂದ್ ರಾಮ್, ಯುವ (Yuvaraj Kumar) ಹಾಗೂ ಕಾರ್ತಿಕ್ ಸೇರಿದಂತೆ ಹಲವು ಭಾಗಿಯಾಗಿದ್ದರು.

    ಸಕ್ಸಸ್ ಸಂಭ್ರಮ

    ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಲಾಂಛದಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ  ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

    ರಾಜ್ಯದ ಜನತೆ “ಯುವ” ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈಗಲೂ ಜನ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ. ಕನ್ನಡ ಕಲಾರಸಿಕರಿಗೆ, ಮಾಧ್ಯಮದವರಿಗೆ, ಹೊಂಬಾಳೆ ಫಿಲಂಸ್ ಸಂಸ್ಥೆಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

    ಜನರು ನನ್ನ ಮೊದಲ ಚಿತ್ರಕ್ಕೆ ತೋರುತ್ತಿರುವ ಒಲವಿಗೆ ಮನ ತುಂಬಿ ಬಂದಿದೆ ಎಂದು ಮಾತನಾಡಿದ ನಾಯಕ ಯುವ ರಾಜಕುಮಾರ್, ಪ್ರಥಮವಾಗಿ ನಾನು ನನಗೆ ಅವಕಾಶ ನೀಡಿದ ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅವರಿಗೆ, ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ನನ್ನ ಸಹ ಕಲಾವಿದರ ಹಾಗೂ ತಂತ್ರಜ್ಞರ ಪ್ರೋತ್ಸಾಹವನ್ನು ಈ ಸಮಯದಲ್ಲಿ ನೆನೆಯುತ್ತೇನೆ. ಮೊದಲ ಚಿತ್ರದಲ್ಲಿ ನನ್ನಿಂದೇನಾದರೂ ಸಣ್ಣಪುಟ್ಟ ತಪ್ಪಾಗಿದ್ದರೆ ಮುಂದಿನ ಚಿತ್ರಗಳಲ್ಲಿ ಸರಿ ಪಡಿಸಿಕೊಳ್ಳುತ್ತೇನೆ. ಜನ ಫ್ಯಾಮಿಲಿ ಸಮೇತ ಬಂದು ಚಿತ್ರವನ್ನು ನೋಡುತ್ತಿರುವುದು ಬಹಳ ಖುಷಿಯಾಗಿದೆ. ಈ ಮೂಲಕ ರಾಜ್ಯದ ಜನತೆಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದರು.

    ನನ್ನ ಮಗನ ಮೊದಲ ಚಿತ್ರವನ್ನು  ನಿರ್ಮಾಣ ಮಾಡಿದ ಹೊಂಬಾಳೆ ಸಂಸ್ಥೆಗೆ ಮೊದಲು ಧನ್ಯವಾದ ಹೇಳುತ್ತೇನೆ. ನಂತರ ನನ್ನ ಮಗನ ಒಂದು ಬ್ರಾಂಡ್ ಗೆ ಸೀಮಿತ ಮಾಡದೆ ಎಲ್ಲಾ ರೀತಿಯ ನಟನೆಯನ್ನು ಅವನಿಂದ ಎಲ್ಲಾ ರೀತಿಯ ನಟನೆಯನ್ನು ಮಾಡಿಸಿರುವ ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೂ ಧನ್ಯವಾದ ಹೇಳುತ್ತಾ, ಯುವನ ಸಿನಿಮಾ ಹಾದಿ ಈಗಷ್ಟೇ ಆರಂಭವಾಗಿದೆ. ‌ಮುಂದೆ ಬೇರೆಬೇರೆ ಪಾತ್ರಗಳಲ್ಲಿ ಅವನು ನಟಿಸಿ ಜನರಿಂದ ಸೈ ಎನಿಸಿಕೊಳ್ಳಬೇಕು ಎಂದು ರಾಘವೇಂದ್ರ ರಾಜಕುಮಾರ್ ತಿಳಿಸಿದರು.

    ಒಳ್ಳೆಯ ಪಾತ್ರ ನೀಡಿದ್ದಕ್ಕೆ ನಾಯಕಿ ಸಪ್ತಮಿ ಗೌಡ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ಹೇಳಿದರು ಚಿತ್ರದಲ್ಲಿ ಅಭಿನಯಿಸಿರುವ ಅಚ್ಯುತಕುಮಾರ್, ಸುಧಾರಾಣಿ, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ, ರಾಘು ಶಿವಮೊಗ್ಗ ಹಾಗೂ ಛಾಯಾಗ್ರಾಹಕ ಶ್ರೀಶ ಕುದುವಳ್ಳಿ “ಯುವ” ಚಿತ್ರದ ಗೆಲುವನ್ನು ‌ತಮ್ಮ ಮಾತುಗಳ ಮೂಲಕ ಹಂಚಿಕೊಂಡರು.

  • ‘ಯುವ’ ಸಕ್ಸಸ್: ಸಂಭ್ರಮ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್

    ‘ಯುವ’ ಸಕ್ಸಸ್: ಸಂಭ್ರಮ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್

    ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಲಾಂಛದಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ (Yuvaraj Kumar) ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ  ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ (Success) ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

    ರಾಜ್ಯದ ಜನತೆ “ಯುವ” (Yuva) ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈಗಲೂ ಜನ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ. ಕನ್ನಡ ಕಲಾರಸಿಕರಿಗೆ, ಮಾಧ್ಯಮದವರಿಗೆ, ಹೊಂಬಾಳೆ ಫಿಲಂಸ್ ಸಂಸ್ಥೆಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

    ಜನರು ನನ್ನ ಮೊದಲ ಚಿತ್ರಕ್ಕೆ ತೋರುತ್ತಿರುವ ಒಲವಿಗೆ ಮನ ತುಂಬಿ ಬಂದಿದೆ ಎಂದು ಮಾತನಾಡಿದ ನಾಯಕ ಯುವ ರಾಜಕುಮಾರ್, ಪ್ರಥಮವಾಗಿ ನಾನು ನನಗೆ ಅವಕಾಶ ನೀಡಿದ ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅವರಿಗೆ, ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ನನ್ನ ಸಹ ಕಲಾವಿದರ ಹಾಗೂ ತಂತ್ರಜ್ಞರ ಪ್ರೋತ್ಸಾಹವನ್ನು ಈ ಸಮಯದಲ್ಲಿ ನೆನೆಯುತ್ತೇನೆ. ಮೊದಲ ಚಿತ್ರದಲ್ಲಿ ನನ್ನಿಂದೇನಾದರೂ ಸಣ್ಣಪುಟ್ಟ ತಪ್ಪಾಗಿದ್ದರೆ ಮುಂದಿನ ಚಿತ್ರಗಳಲ್ಲಿ ಸರಿ ಪಡಿಸಿಕೊಳ್ಳುತ್ತೇನೆ. ಜನ ಫ್ಯಾಮಿಲಿ ಸಮೇತ ಬಂದು ಚಿತ್ರವನ್ನು ನೋಡುತ್ತಿರುವುದು ಬಹಳ ಖುಷಿಯಾಗಿದೆ. ಈ ಮೂಲಕ ರಾಜ್ಯದ ಜನತೆಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದರು.

    ನನ್ನ ಮಗನ ಮೊದಲ ಚಿತ್ರವನ್ನು  ನಿರ್ಮಾಣ ಮಾಡಿದ ಹೊಂಬಾಳೆ ಸಂಸ್ಥೆಗೆ ಮೊದಲು ಧನ್ಯವಾದ ಹೇಳುತ್ತೇನೆ. ನಂತರ ನನ್ನ ಮಗನ ಒಂದು ಬ್ರಾಂಡ್ ಗೆ ಸೀಮಿತ ಮಾಡದೆ ಎಲ್ಲಾ ರೀತಿಯ ನಟನೆಯನ್ನು ಅವನಿಂದ ಎಲ್ಲಾ ರೀತಿಯ ನಟನೆಯನ್ನು ಮಾಡಿಸಿರುವ ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೂ ಧನ್ಯವಾದ ಹೇಳುತ್ತಾ, ಯುವನ ಸಿನಿಮಾ ಹಾದಿ ಈಗಷ್ಟೇ ಆರಂಭವಾಗಿದೆ. ‌ಮುಂದೆ ಬೇರೆಬೇರೆ ಪಾತ್ರಗಳಲ್ಲಿ ಅವನು ನಟಿಸಿ ಜನರಿಂದ ಸೈ ಎನಿಸಿಕೊಳ್ಳಬೇಕು ಎಂದು ರಾಘವೇಂದ್ರ ರಾಜಕುಮಾರ್ ತಿಳಿಸಿದರು.

    ಒಳ್ಳೆಯ ಪಾತ್ರ ನೀಡಿದ್ದಕ್ಕೆ ನಾಯಕಿ ಸಪ್ತಮಿ ಗೌಡ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ಹೇಳಿದರು ಚಿತ್ರದಲ್ಲಿ ಅಭಿನಯಿಸಿರುವ ಅಚ್ಯುತಕುಮಾರ್, ಸುಧಾರಾಣಿ, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ, ರಾಘು ಶಿವಮೊಗ್ಗ ಹಾಗೂ ಛಾಯಾಗ್ರಾಹಕ ಶ್ರೀಶ ಕುದುವಳ್ಳಿ “ಯುವ” ಚಿತ್ರದ ಗೆಲುವನ್ನು ‌ತಮ್ಮ ಮಾತುಗಳ ಮೂಲಕ ಹಂಚಿಕೊಂಡರು.

  • ರಾಜ್ಯಾದ್ಯಂತ ‘ಯುವ’ ಚಿತ್ರ ರಿಲೀಸ್: ಸ್ವಾಗತಿಸಿದ ಅಪ್ಪು ಫ್ಯಾನ್ಸ್

    ರಾಜ್ಯಾದ್ಯಂತ ‘ಯುವ’ ಚಿತ್ರ ರಿಲೀಸ್: ಸ್ವಾಗತಿಸಿದ ಅಪ್ಪು ಫ್ಯಾನ್ಸ್

    ಇಂದಿನಿಂದ ರಾಜ್ಯಾದ್ಯಂತ ಯುವ (Yuva) ಸಿನಿಮಾ ರಿಲೀಸ್ (Released) ಆಗಿದೆ. ಮುನ್ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಯುವ ಬಿಡುಗಡೆಯಾಗಿದ್ದು, ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಚಿತ್ರವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ ಯುವ ರಾಜ್ ಕುಮಾರ್ (Yuvaraj Kumar) ಜೊತೆಗೆ ಅಪ್ಪು (Appu) ಕಟೌಟ್ ಕೂಡ ಚಿತ್ರಮಂದಿರದ ಮುಂದೆ ನಿಲ್ಲಿಸಿದ್ದಾರೆ.

    ಅದರಲ್ಲೂ ಬೆಂಗಳೂರಿನ ಪ್ರಮುಖ ಚಿತ್ರಮಂದಿರಗಳಲ್ಲಿ ಅರಮನೆ ರೀತಿಯ ಸೆಟ್, ಡಾ.ರಾಜ್ ಕುಟುಂಬದ ಕಟೌಟ್, ಯುವ ಕಟೌಟ್, ಪುನೀತ್ ರಾಜ್ ಕುಮಾರ್ ಕಟೌಟ್ ಹೀಗೆ ಅಭಿಮಾನಿಗಳು ತಮ್ಮದೇ ಆದ ರೀತಿಯಲ್ಲಿ ಅಭಿಮಾನ ತೋರಿಸಿದ್ದಾರೆ. ಮುಖ್ಯ ಚಿತ್ರಮಂದಿರ ಮೆಜೆಸ್ಟಿಕ್ ನ ಸಂತೋಷ್ ಥಿಯೇಟರ್ ನಲ್ಲಿ ಕಳೆಗಟ್ಟಿದೆ ಸಂಭ್ರಮ.

     

    ಪಟಾಕಿ ಸಿಡಿಸಿ, ಟಪ್ಪಾಂಗುಚ್ಚಿ ಹೆಜ್ಜೆಹಾಕಿ ದೊಡ್ಮನೆ ನಯಾ‌ ಕುಡಿ ಬರಮಾಡಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಬೆಳ್ಳಂಬೆಳಗ್ಗೆ ಅನೇಕ ಸ್ಕ್ರೀನ್‌ಗಳಲ್ಲಿ ತೆರೆಕಂಡಿರುವ ಯುವ ಸಿನಿಮಾವನ್ನು ನೋಡುತ್ತಾ, ಅಪ್ಪುವನ್ನು ಕಳೆದುಕೊಂಡು ಮಿಸ್ ಮಾಡಿಕೊಳ್ತಿರುವ ಅಭಿಮಾನಿಗಳಿಗೆ ಯುವರಾಜ್ ಕುಮಾರ್ ರನ್ನು ಬರಮಾಡಿಕೊಳ್ಳುವ  ಸಂಭ್ರಮ ಎಲ್ಲೆಲ್ಲೂ ಕಾಣುತ್ತಿದೆ.

  • ‘ಯುವ’ ಚಿತ್ರದ ಪ್ರೀ ರಿಲೀಸ್ ಇವೆಂಟ್: ಫೋಟೋ ಗ್ಯಾಲರಿ

    ‘ಯುವ’ ಚಿತ್ರದ ಪ್ರೀ ರಿಲೀಸ್ ಇವೆಂಟ್: ಫೋಟೋ ಗ್ಯಾಲರಿ

    ರಾಜಕುಮಾರ, ಕೆಜಿಎಫ್, ಕಾಂತಾರದಂತಹ ಜನಪ್ರಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ ‘ಯುವ’ (Yuva) ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು. ಯುವ ರಾಜಕುಮಾರ್ (Yuvaraj Kumar) ಈ ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ.

    ಹೊಸಪೇಟೆಯ ಪುನೀತ್ ರಾಜಕುಮಾರ್ ಮೈದಾನದಲ್ಲಿ ಅದ್ದೂರಿಯಾಗಿ ಈ ವರ್ಣರಂಜಿತ ಸಮಾರಂಭ ನಡೆಯಿತು.  ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ವಿನಯ್ ರಾಜಕುಮಾರ್, ನಿರ್ಮಾಪಕ ವಿಜಯ್ ಕಿರಗಂದೂರ್, ನಿರ್ದೇಶಕ ಸಂತೋಷ್ ಆನಂದರಾಮ್, ನಾಯಕ ಯುವ ರಾಜಕುಮಾರ್, ಚಿತ್ರದಲ್ಲಿ ನಟಿಸಿರುವ ಅಚ್ಯುತಕುಮಾರ್, ಸುಧಾರಾಣಿ, ಹಿತ, ಗಿರಿರಾಜ್, ರಾಘು ಶಿವಮೊಗ್ಗ ಮುಂತಾದವರು ಭಾಗವಹಿಸಿದ್ದರು. ಚಿತ್ರದ ಅನೇಕ ತಂತ್ರಜ್ಞರು ಸಹ ಉಪಸ್ಥಿತರಿದ್ದರು.

    ಯುವ ಚಿತ್ರ ಆಗಲು ಅಶ್ವಿನಿ ಪುನೀತ್ ರಾಜಕುಮಾರ್ ಅವರೆ ಕಾರಣ.‌ ಅವರು ವಿಜಯ್ ಕಿರಗಂದೂರ್ ಅವರಿಗೆ ಫೋನ್ ಮಾಡಿ ನಮ್ಮ ಗುರು(ಯುವ ರಾಜಕುಮಾರ್) ವನ್ನು ನಿಮ್ಮ ಸಂಸ್ಥೆಯ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿಸಿ ಎಂದರು. ವಿಜಯ್ ಕಿರಗಂದೂರ್ ಅವರು ಒಪ್ಪಿ ಈ ಚಿತ್ರ ನಿರ್ಮಾಣ ಮಾಡಿದರು. ಯುವ  ರಾಜಕುಮಾರ್ ಕೂಡ ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಪಟ್ಟಿದ್ದಾರೆ. ಯುವ ಅವರು ಓಡುವ ಸನ್ನಿವೇಶವನ್ನು ಚಿತ್ರದ ಮೊದಲ ಸನ್ನಿವೇಶವಾಗಿ ಚಿತ್ರಿಸಿಕೊಳ್ಳಲಾಗಿದೆ. ಕಾರಣ, ಯುವ ಅವರು ಯಾವಾಗಲೂ ಚಿತ್ರರಂಗದಲ್ಲಿ ಓಡುವ ಕುದುರೆಯಾಗಿರಲಿ ಎಂದು. ಇನ್ನು ನನ್ನ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ. ಇದೇ ಮಾರ್ಚ್ 29 ರಂದು ಚಿತ್ರ ಬಿಡುಗಡೆಯಾಗಲಿದೆ. ಎಲ್ಲರೂ ಬಂದು ಚಿತ್ರ ನೋಡಿ ಪ್ರೋತ್ಸಾಹಿಸಿ. ಈ ಸಂದರ್ಭದಲ್ಲಿ ನಾನು ನಿರ್ಮಾಪಕ ವಿಜಯ್ ಕಿರಗಂದೂರ್ ಅವರಿಗೆ, ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ, ನನ್ನ ತಂಡಕ್ಕೆ ಹಾಗೂ ವಿಶೇಷವಾಗಿ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

    ನಾನು ಮೊದಲು ನನ್ನ‌ ಚಿಕ್ಕಪ್ಪ ಪುನೀತ್ ರಾಜಕುಮಾರ್ ಹಾಗೂ ಚಿಕ್ಕಮ್ಮ ಪುನೀತ್ ರಾಜಕುಮಾರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮಾತನಾಡಿದ ಯುವ ರಾಜಕುಮಾರ್, ಏಕೆಂದರೆ ನನ್ನನ್ನು ನಾಯಕನನ್ನಾಗಿ ಮಾಡಿ ಎಂದು ಅವರಿಬ್ಬರು ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಸರ್ ಗೆ ಹೇಳಿದ್ದಾರೆ. ಅವರಿಂದಲೇ ಸಾಕಷ್ಟು ಹಿಟ್ ಚಿತ್ರಗಳನ್ನು ಕೊಟ್ಟಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರದಲ್ಲಿ ನಟಿಸಲು ಸಾಧ್ಯವಾಗಿದೆ. ನಿರ್ಮಾಪಕರಾದ ವಿಜಯ್ ಕಿರಗಂದೂರ್ ಹಾಗೂ ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೂ ನಾನು ಚಿರ ಋಣಿ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಹಿರಿಯ ನಟರಾದ ಅಚ್ಯುತಕುಮಾರ್, ಸುಧಾರಾಣಿ ಮುಂತಾದವರಿಂದ ಸಾಕಷ್ಟು ಕಲಿತಿದ್ದೇನೆ‌. ನಾಯಕಿಯಾಗಿ ಸಪ್ತಮಿ ಗೌಡ ಅಭಿನಯಿಸಿದ್ದಾರೆ. ಇಡೀ ತಂಡದ ಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆ. ನನ್ನ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು.

    ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ವಿನಯ್ ರಾಜಕುಮಾರ್ ಮುಂತಾದವರು ಯುವ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಈ ಸಮಾರಂಭದಲ್ಲಿ ಕರ್ನಾಟಕದ ಹೆಸರಾಂತ ಕಲಾವಿದರ ಗಾಯನ, ನೃತ್ಯ ಮುಂತಾದ ಮನೋರಂಜನಾ ಕಾರ್ಯಕ್ರಮಗಳು ಸಹ ಅದ್ಭುತವಾಗಿ ಮೂಡಿಬಂತು.

  • ಮೊದಲ ಸಿನಿಮಾದಲ್ಲಿ ‘ಯುವ’ಗೆ ಓಡೋ ಶಾಟ್ ಇಟ್ಟಿದ್ದೇಕೆ? ಸೀಕ್ರೆಟ್‌ ಬಿಚ್ಚಿಟ್ಟ ಡೈರೆಕ್ಟರ್

    ಮೊದಲ ಸಿನಿಮಾದಲ್ಲಿ ‘ಯುವ’ಗೆ ಓಡೋ ಶಾಟ್ ಇಟ್ಟಿದ್ದೇಕೆ? ಸೀಕ್ರೆಟ್‌ ಬಿಚ್ಚಿಟ್ಟ ಡೈರೆಕ್ಟರ್

    ದೊಡ್ಮನೆ ಕುಡಿ ಯುವರಾಜ್‌ಕುಮಾರ್(Yuvarajkumar), ಸಪ್ತಮಿ ಗೌಡ ನಟನೆಯ ಯುವ ಸಿನಿಮಾ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಸದ್ಯ ಹೊಸಪೇಟೆ ಜನತೆಯ ಮುಂದೆ ‘ಯುವ’ ಚಿತ್ರದ ಪ್ರೀ- ರಿಲೀಸ್ ಅದ್ಧೂರಿಯಾಗಿ ನೆರವೇರಿದೆ. ಈ ವೇಳೆ, ಮೊದಲ ಚಿತ್ರದಲ್ಲಿ ಯುವಗೆ ಓಡೋ ಟಾಸ್ಕ್ ಯಾಕೆ ಕೊಟ್ರು ಅಂತ ಡೈರೆಕ್ಟರ್ ಸಂತೋಷ್ ಆನಂದ್‌ರಾಮ್ (Santhosh Anandram) ಸೀಕ್ರೆಟ್ ರಿವೀಲ್ ಮಾಡಿದ್ದಾರೆ.

    ವೇದಿಕೆಗೆ ಎಂಟ್ರಿ ಕೊಡುತ್ತಿರುವಾಗಲೇ ಪುನೀತ್ ರಾಜ್‌ಕುಮಾರ್ ಅವರನ್ನು ನಿರ್ದೇಶಕ ಸಂತೋಷ್ ಆನಂದ್‌ರಾಮ್ ಸ್ಮರಿಸಿದ್ದಾರೆ. ಯುವರತ್ನದಿಂದ ಯುವವರೆಗೂ ನನ್ನದು ಚಾಲೆಂಜಿಂಗ್ ಜರ್ನಿ. ನಾನು ಕಳೆದುಕೊಂಡಿದ್ದು ನನ್ನ ಅಣ್ಣ, ನನ್ನ ರತ್ನ, ಕರ್ನಾಟಕದ ರಾಜರತ್ನ ಅಪ್ಪು ಅಣ್ಣರನ್ನು ಎಂದಿದ್ದಾರೆ. ಅಲ್ಲಿಂದ ಪ್ರತಿ ಕ್ಷಣ ನನ್ನನ್ನು ಒಬ್ಬಂಟಿಯಾಗಿ ಬಿಡದೇ ಇದ್ದಿದ್ದು ನೀವುಗಳು. ಎಲ್ಲಾ ಅವರ ಅಭಿಮಾನಿಗಳು ತುಂಬಾ ದೊಡ್ಡ ಶಕ್ತಿಯಾಗಿ ನಿಂತುಕೊಂಡಿದ್ದೀರಿ. ಆಶೀರ್ವಾದ ಮಾಡಿದ್ದೀರಿ. ಅಲ್ಲಿಂದ ‘ಯುವ’ ಸಿನಿಮಾದವರೆಗೂ ಬಂದಿದ್ದೀನಿ ಅಂದರೆ, ನಿಮ್ಮೆಲ್ಲರ ಹಾರೈಕೆ ಎಂದಿದ್ದಾರೆ. ಇದನ್ನೂ ಓದಿ:ನಾನು ಡ್ರ್ಯಾಗನ್ ಎನ್ನುತ್ತಾ ಸಖತ್ ಹಾಟ್ ಆಗಿ ಕಾಣಿಸಿಕೊಂಡ ಸಮಂತಾ

    ಬಳಿಕ ‘ಯುವ’ ಸಿನಿಮಾ ಶುರುವಾಗಿದ್ದು ಹೇಗೆ? ಅನ್ನೋದನ್ನು ಸಂತೋಷ್ ಆನಂದ್‌ರಾಮ್ ರಿವೀಲ್ ಮಾಡಿದ್ದಾರೆ. ಈ ಸಿನಿಮಾ ಆಗುವುದಕ್ಕೆ ಕಾರಣ ಅಶ್ವಿನಿ ಮೇಡಂ. ಅವರು ವಿಜಯ್ ಕಿರಗಂದೂರು ಸರ್‌ಗೆ ಫೋನ್ ಮಾಡಿ ಗುರುಗೆ ಒಂದು ಸಿನಿಮಾ ಮಾಡಬೇಕು ಅಂತ ಹೇಳುತ್ತಾರೆ. ಆ ನಂತರ ವಿಜಯ್ ಅವರು ನನಗೆ ತಿಳಿಸಿದ್ದರು. ನೀನು ಯುವನನ್ನು ಲಾಂಚ್ ಮಾಡಬೇಕು ಅಂತ. ಒಂದು ಫೋನ್ ಕರೆ ಇವತ್ತು ಇಲ್ಲಿವರೆಗೂ ಕರೆದುಕೊಂಡು ಬಂದಿದೆ. ವಿಜಯ್ ಕಿರಗಂದೂರು ಸರ್ ಕೂಡ ಒಂದೇ ಮಾತು ಹೇಳಿದ್ದು, ಗುರು (ಯುವ) ಲಾಂಚ್ ಮಾಡುವುದು ಒಂದು ಜವಾಬ್ದಾರಿಯಾಗಿ ತೆಗೆದುಕೊಳ್ಳಬೇಕು. ನಾವು ಸಿನಿಮಾವನ್ನು ನಿಲ್ಲಿಸಬೇಕು ಅಂತ ಹೇಳಿರೋದನ್ನು ಸ್ಮರಿಸಿದ್ದಾರೆ.

     

    View this post on Instagram

     

    A post shared by Hombale Films (@hombalefilms)

    ‘ಯುವ’ ಸಿನಿಮಾ ಯುವ ರಾಜ್‌ಕುಮಾರ್ ಅಭಿನಯದ ಮೊದಲ ಸಿನಿಮಾ. ಹೀಗಾಗಿ ಸಣ್ಣ ಪುಟ್ಟ ತಪ್ಪುಗಳಾಗಿದ್ದರೆ ಕ್ಷಮಿಸಿ ಎಂದು ಸಂತೋಷ್ ಆನಂದ್‌ರಾಮ್ ಇದೇ ವೇಳೆ ಹೇಳಿಕೊಂಡಿದ್ದಾರೆ. ಮಗು ಮೊದಲನೇ ಹೆಜ್ಜೆ ಇಟ್ಟಾಗ ಎಡುವುತ್ತದೆ. ಮಾತಾಡುವಾಗ ತೊದಲುತ್ತೆ. ಮುಂದಿನ ಸಿನಿಮಾಗಳಲ್ಲಿ ನಾವು ಸರಿ ಮಾಡಿಕೊಳ್ಳುತ್ತೇವೆ. ‘ಯುವ’ ಚಿತ್ರವನ್ನು ಗೆಲ್ಲಿಸಲು ಅಭಿಮಾನಿಗಳಲ್ಲಿ ಸಂತೋಷ್ ಆನಂದ್‌ರಾಮ್ ಮನವಿ ಮಾಡಿದ್ದಾರೆ.

    ಇದೇ ಸಂದರ್ಭದಲ್ಲಿ, ಯುವ ಸಿನಿಮಾಗೆ ತೆಗೆದ ಮೊದಲ ಶಾಟ್ ಬಗ್ಗೆ ರಿವೀಲ್ ಮಾಡಿದ್ದಾರೆ. ಅದನ್ನು ರಜನಿಕಾಂತ್ ಮೊದಲ ಸಿನಿಮಾದ ಮೊದಲ ಶಾಟ್‌ಗೆ ಉದಾಹರಣೆ ಕೊಟ್ಟು ಸಂತೋಷ್ ಮಾತನಾಡಿದ್ದಾರೆ. ನಾವು ಮೊದಲು ಫೈಟ್‌ನಿಂದ ಶೂಟಿಂಗ್ ಶುರು ಮಾಡಿದ್ವಿ. ಅದು ಓಡುವ ಶಾಟ್. ನನಗೆ ಯಾವುದೋ ಸಂದರ್ಶನದಲ್ಲಿ ಓದಿದ ನೆನಪು. ರಜನಿಕಾಂತ್ ಮೊದಲನೇ ಸಿನಿಮಾ ‘ಅಪೂರ್ವ ರಾಗಂಗಳ್‌’ನಲ್ಲಿ ಮೊದಲ ಗೇಟ್ ತೆಗೆಯುವ ಶಾಟ್ ಇಟ್ರಂತೆ. ಯಾಕಂದ್ರೆ ಅಲ್ಲಿಂದ ಜೀವನ ಶುರುವಾಗಲಿ, ಹೊಸ ಜರ್ನಿ ಶುರುವಾಗಲಿ ಅಂತ. ನಾವಿಲ್ಲಿ ಗುರುವಿನದ್ದು ಓಡುವ ಶಾಟ್ ಇಟ್ಟಿದ್ದೇವೆ. ಯಾಕಂದ್ರೆ, ಈ ಕುದುರೆ ಓಡುತ್ತಲೇ ಇರಬೇಕು ಅಂತ ಎಂದು ಮಾತನಾಡಿದ್ದಾರೆ. ‘ಯುವ’ ಚಿತ್ರದ ಮೂಲಕ ಯುವ ರಾಜ್‌ಕುಮಾರ್ ಚಿತ್ರರಂಗದಲ್ಲಿ ಓಡೋ ಕುದುರೆಯಾಗಿ ಗೆಲ್ಲಬೇಕು ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ.

    ನನಗೆ ಈ ಸಿನಿಮಾ ಮಾಡುವಾಗ ತುಂಬಾ ನೆನಪುಗಳಿವೆ. ಅದರಲ್ಲೂ ಅಪ್ಪು ಅಣ್ಣನ ನೆನಪು ತುಂಬಾನೇ ಇದೆ. ನಾನು ಕಂಡುಕೊಂಡ ವ್ಯತ್ಯಾಸ. ಒಬ್ಬ ರಾಜನಿಗೂ, ರಾಜಕುಮಾರನಿಗೂ ಏನು ಅಂದರೆ ರಾಜನಿಗೂ ಸೈನ್ಯ ಇರುತ್ತದೆ. ರಾಜಕುಮಾರನಿಗೂ ಸೈನ್ಯ ಇರುತ್ತದೆ. ರಾಜ ಯುದ್ಧ ಮಾಡಿದ ಆದರೆ ರಾಜಕುಮಾರ ಬರೀ ಪ್ರೀತಿ ತೋರಿಸಿದ ಎಂದು ಹೇಳುತ್ತಾ ಅಪ್ಪುರನ್ನು ಸಂತೋಷ್ ಆನಂದ್ ರಾಮ್ ಸ್ಮರಿಸಿದ್ದಾರೆ. ಅಪ್ಪು ಸರ್ ನನಗೆ ಕುಟುಂಬಿಕ ಮೌಲ್ಯಗಳನ್ನು ಹೇಳಿ ಕೊಟ್ಟು ಹೋಗಿದ್ದಾರೆ ಎಂದು ಮಾತನಾಡಿದ್ದಾರೆ.

    ಅಂದಹಾಗೆ, ‘ಯುವ’ (Yuva) ಸಿನಿಮಾ ಇದೇ ಮಾರ್ಚ್ 29ಕ್ಕೆ ರಿಲೀಸ್ ಆಗುತ್ತಿದೆ. ಯುವಗೆ ನಾಯಕಿಯಾಗಿ ‘ಕಾಂತಾರ’ (Kantara) ಬೆಡಗಿ ಸಪ್ತಮಿ ಗೌಡ (Sapthami Gowda) ನಟಿಸಿದ್ದಾರೆ. ಚಿತ್ರದಲ್ಲಿ ಸುಧಾರಾಣಿ, ಅಚ್ಯುತ್ ಕುಮಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ.

  • ಹೊಸಪೇಟೆಯಲ್ಲಿ ‘ಯುವ’ ಪ್ರಿ ರಿಲೀಸ್ ಇವೆಂಟ್: ಚಿತ್ರರಂಗ ಭಾಗಿ

    ಹೊಸಪೇಟೆಯಲ್ಲಿ ‘ಯುವ’ ಪ್ರಿ ರಿಲೀಸ್ ಇವೆಂಟ್: ಚಿತ್ರರಂಗ ಭಾಗಿ

    ಯುವ ರಾಜ್ ಕುಮಾರ್ ನಟನೆಯ, ಸಂತೋಷ್ ಆನಂದ್ ರಾವ್ ನಿರ್ದೇಶನದ ‘ಯುವ’ ಚಿತ್ರದ ಪ್ರಿ ರಿಲೀಸ್ ಇವೆಂಟ್ (Pre Release Event) ನಾಳೆ ಸಂಜೆ ಹೊಸಪೇಟೆಯಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಅದಕ್ಕಾಗಿ ಸರ್ವ ಸಿದ್ಧತೆಯನ್ನೂ ಮಾಡಿಕೊಂಡಿದೆ. ಕನ್ನಡ ಸಿನಿಮಾ ರಂಗದ ಅನೇಕ ತಾರೆಯರು ಈ ಇವೆಂಟ್ ನಲ್ಲಿ ಭಾಗಿ ಆಗುತ್ತಿದ್ದು, ರಸಮಂಜರಿ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ.

    ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್, ರಿಷಬ್ ಶೆಟ್ಟಿ, ಸಪ್ತಮಿ ಗೌಡ ಸೇರಿದಂತೆ ಅನೇಕ ನಟ ನಟಿಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದು, ವಿಜಯ ಪ್ರಕಾಶ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಾವಿರಾರು ಅಭಿಮಾನಿಗಳು ಭಾಗಿಯಾಗಲಿದ್ದಾರೆ.

    ನಾನಾ ಕಾರಣಗಳಿಂದಾಗಿ ಯುವ ಸಿನಿಮಾ ಕುತೂಹಲ ಮೂಡಿಸಿದೆ. ನಿನ್ನೆಯಷ್ಟೇ ಮಧ್ಯಾಹ್ನ 1 ಗಂಟೆ 1 ನಿಮಿಷಕ್ಕೆ ಯುವ ಸಿನಿಮಾದ ಟ್ರೈಲರ್ (Trailer) ಬಿಡುಗಡೆ ಮಾಡಿದೆ ಹೊಂಬಾಳೆ ಫಿಲ್ಮ್ಸ್. ಇಡೀ ಟ್ರೈಲರ್ ತುಂಬಾ ಯುವರಾಜ್ ಕುಮಾರ್ ಆರ್ಭಟ, ಅಪ್ಪ-ಮಗನ ಸೆಂಟಿಮೆಂಟ್ ಮತ್ತು ಕಾಲೇಜು ಗುದ್ದಾಟಗಳನ್ನು ಕಾಣಬಹುದಾಗಿದೆ. ಮೇಲ್ನೋಟಕ್ಕೆ ಇದೊಂದು ನಾರ್ಮಲ್ ಕಥೆ ಅಂತ ಅನಿಸುತ್ತಿದ್ದರೂ, ಅದನ್ನು ಹೇಗೆ ತೆಗೆದುಕೊಂಡು ಹೋಗಿದ್ದಾರೆ ಎನ್ನುವ ಕುತೂಹಲವಂತೂ ಇದ್ದೇ ಇದೆ. ಒಂದು ರೀತಿಯಲ್ಲಿ ಟ್ರೈಲರ್ ತುಂಬಾ ತುಂಬಿಕೊಂಡಿದ್ದಾರೆ ಯುವರಾಜ್ ಕುಮಾರ್. ಟ್ರೈಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ಯುವ (Yuva) ಸಿನಿಮಾದ ಬಿಡುಗಡೆಗಡೆ ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ ಚಿತ್ರತಂಡ. ಈ ಸಿನಿಮಾದ ಮೂಲಕ ಯುವರಾಜ್ ಕುಮಾರ್ (Yuvraj Kumar) ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಹಾಗಾಗಿ ಅದ್ಧೂರಿಯಾಗಿಯೇ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಯುವ ಸಿನಿಮಾದ ಟ್ರೈಲರ್ (Trailer) ಈಗಾಗಲೇ ರಿಲೀಸ್ ಆಗಿದೆ.

     

    ಯುವ ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ – ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ಮಾಡುತ್ತಾನೆ. ಆದರೆ ಆತ ಯಾರಿಂದಲೂ ಏನನ್ನು ನಿರೀಕ್ಷಿಸುವುದಿಲ್ಲ. ಕುಟುಂಬದಲ್ಲಿ ಅಪ್ಪನ ಪಾತ್ರ ಬಹಳ ದೊಡ್ಡದು. ಅಂತಹ ಅಪ್ಪನ ಗುಣಗಳನ್ನು ವರ್ಣಿಸುವ ನಮ್ಮ ಚಿತ್ರದ ‘ಅಪ್ಪುಗೆ’ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ನಾನೇ ಬರೆದಿದ್ದೇನೆ. ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಚಿತ್ರ ಮಾರ್ಚ್ 29ಕ್ಕೆ ತೆರೆಗೆ ಬರಲಿದೆ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ತಿಳಿಸಿದರು.