Tag: Yuva Morcha

  • ಫಿಲ್ಮಿ ಸ್ಟೈಲ್‌ ಗಂಗಾವತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ

    ಫಿಲ್ಮಿ ಸ್ಟೈಲ್‌ ಗಂಗಾವತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ

    ಕೊಪ್ಪಳ: ಸಿನಿಮಿಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ (BJP Yuva Morcha) ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಂಗಾವತಿ (Gangavathi) ನಗರದಲ್ಲಿ ನಡೆದಿದೆ.

    ವೆಂಕಟೇಶ ಕುರುಬರ (31) ವರ್ಷ ಕೊಲೆಯಾದ ಬಿಜೆಪಿ ನಾಯಕ. ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಅಸ್ಪತ್ರೆಯ ಮುಂಭಾಗದಲ್ಲಿ ನಸುಕಿನ ಜಾವ 2 ಗಂಟೆಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ಕೊಲೆ ಮಾಡಿದೆ.  ಇದನ್ನೂ ಓದಿ:  ಬೆಳ್ಳಿ ವಸಂತಕ್ಕೆ ಕಾಲಿಟ್ಟು ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ

    ದೇವಿಕ್ಯಾಂಪ್‌ನಿಂದ ಗಂಗಾವತಿಗೆ ವೆಂಕಟೇಶ್‌ ಅವರು ಸ್ನೇಹಿತರ ಜೊತೆ ಊಟ ಮಾಡಿ ಬೈಕಿನಲ್ಲಿ ಬರುತ್ತಿದ್ದರು. ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಗ್ಯಾಂಗ್‌ ಸದಸ್ಯರು ಬೈಕಿಗೆ ಗುದ್ದಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಡಿವೈಸ್‌ಪಿ ಸಿದ್ದನಗೌಡ ಪಾಟೀಲ್‌ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    ಪ್ರಕರಣದ ಬಗ್ಗೆ ವೆಂಕಟೇಶ ಸ್ನೇಹಿತ ರಾಮು ಪ್ರತಿಕ್ರಿಯಿಸಿ, ಸ್ನೇಹಿತರೆಲ್ಲರೂ ಊಟಕ್ಕೆ ಹೋಗಿದ್ದೆವು. ವಾಪಸ್‌ ಮರಳುತ್ತಿದ್ದಾಗ 7-8 ಜನ ಮಾರಾಕಾಸ್ತ್ರಗನ್ನು ಹಿಡಿದು ನಮ್ಮನ್ನು ಬೆದರಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ:  ಕಲಾವಿದರ ಮೇಲೆ ಸೇಡು ತೀರಿಸಿದ ನಟ್ಟು ಬೋಲ್ಟ್‌ ಮಿನಿಸ್ಟರ್‌- ಜೆಡಿಎಸ್‌ ಕಿಡಿ

  • ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಬರ್ಬರ ಹತ್ಯೆ

    ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಬರ್ಬರ ಹತ್ಯೆ

    ಧಾರವಾಡ: ಬಿಜೆಪಿ (BJP) ಧಾರವಾಡ ಜಿಲ್ಲಾ ಯುವ ಮೋರ್ಚಾ (Yuva Morcha) ಉಪಾಧ್ಯಕ್ಷನನ್ನು ಬರ್ಬರ ಹತ್ಯೆ ಮಾಡಲಾಗಿದೆ.

    ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ (Pravena Kammara) ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತಡ ರಾತ್ರಿ ಪ್ರವೀಣ ಕಮ್ಮಾರನ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಎನ್‌ಸಿಪಿ ಲೋಗೋ ತೆಗೆದ ಅಜಿತ್‌ ಪವಾರ್‌ – ಮಹಾ ಬಿಜೆಪಿ ಜತೆ ಮೈತ್ರಿಗೆ 40 ಶಾಸಕರ ಸಮ್ಮತಿ?


    ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರವೀಣ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

  • ಬೆಂಗಳೂರಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಆತ್ಮಹತ್ಯೆ

    ಬೆಂಗಳೂರಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಆತ್ಮಹತ್ಯೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ  ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಚೇತನ್ (25) ಆತ್ಮಹತ್ಯೆ ಮಾಡಿಕೊಂಡವರು. ಇವರು ರಾಜಗೋಪಾಲನಗರ ವಾರ್ಡ್ ನ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿದ್ದಾರೆ.

    ಚೇತನ್ ಅವರು ಇಂದು ಸಂಜೆ 7 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿಯೇ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ಮಾರುತಿನಗರದಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ಏನು ಅನ್ನೋದು ತಿಳಿದುಬಂದಿಲ್ಲ. ರಾಜಗೋಪಾಲನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಕೊಂದು ಬೆಂಗಳೂರಿನಲ್ಲಿ ಬಚ್ಚಿಟ್ಟುಕೊಂಡಿದ್ದ ಹಂತಕರು..!

    ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಕೊಂದು ಬೆಂಗಳೂರಿನಲ್ಲಿ ಬಚ್ಚಿಟ್ಟುಕೊಂಡಿದ್ದ ಹಂತಕರು..!

    ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸೋಮವಾರ ಬಂಧನವಾಗಿರುವ ಇಬ್ಬರು ಆರೋಪಿಗಳು ಹಲವು ವರ್ಷಗಳಿಂದ ಬೆಂಗಳೂರಿನ ಬೇಕರಿಯಲ್ಲಿಯೇ ಕೆಲಸ ಮಾಡಿಕೊಂಡಿದ್ದರು ಎಂಬುದು ತಿಳಿದುಬಂದಿದೆ.

    ಮಾನ್ಯತಾ ಟೆಕ್‌ಪಾರ್ಕ್ ಬಳಿಯ ಬೇಕರಿಯಲ್ಲಿ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಗಳಾದ ಅಲ್ತಾಫ್ ಹಾಗೂ ಇರ್ಫಾನ್ ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ನಡೆಸಿ, ತಲೆಮರೆಸಿಕೊಳ್ಳಲು ವಾಪಸ್ ಬೆಂಗಳೂರಿಗೆ ಬಂದಿದ್ದರು. ಬಳಿಕ ಏನೂ ಗೊತ್ತಿಲ್ಲದವರಂತೆ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರು ಪೊಲೀಸರ ವಶಕ್ಕೆ

    ಮೂಲತಃ ಸುಳ್ಯ ಮೂಲದ ಅಲ್ತಾಫ್ ಹಾಗೂ ಇರ್ಪಾನ್ ಸಾಕಷ್ಟು ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಪ್ರವೀಣ್ ಹತ್ಯೆ ದಿನ ಆರೋಪಿಗಳು ಬೆಳ್ಳಾರೆಯಲ್ಲಿಯೇ ಇದ್ದು, ಬಳಿಕ ಬೆಂಗಳೂರಿಗೆ ಬಂದು ತಲೆಮರೆಸಿಕೊಂಡಿದ್ದರು. ಬೆಳ್ಳಾರೆಯಲ್ಲಿ ಬಂಧನವಾಗಿದ್ದ ಆರೋಪಿಗಳಾದ ಶಫೀಕ್ ಹಾಗೂ ಝಾಕೀರ್ ಮಾಹಿತಿ ಮೇರೆಗೆ ಇವರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಸರಣಿ ಹತ್ಯೆ ಪ್ರಕರಣ- ದಕ್ಷಿಣ ಕನ್ನಡಕ್ಕೆ DGP ಪ್ರವೀಣ್ ಸೂದ್ ಭೇಟಿ

    Live Tv
    [brid partner=56869869 player=32851 video=960834 autoplay=true]

  • ಹಿಂದೂಗಳ ನರಮೇಧಕ್ಕೆ ಕಾರಣವೇ ಸಿದ್ದರಾಮಯ್ಯ – ಬಿಜೆಪಿ ಕಾರ್ಯಕರ್ತ ಚಂದ್ರಹಾಸ್

    ಹಿಂದೂಗಳ ನರಮೇಧಕ್ಕೆ ಕಾರಣವೇ ಸಿದ್ದರಾಮಯ್ಯ – ಬಿಜೆಪಿ ಕಾರ್ಯಕರ್ತ ಚಂದ್ರಹಾಸ್

    ಮಂಗಳೂರು: ಹಿಂದೂಗಳ ನರಮೇಧಕ್ಕೆ ಮುಖ್ಯ ಕಾರಣ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರಿಗೆ ಪ್ರವೀಣ್ ಹೆಸರು ಎತ್ತುವ ಯೋಗ್ಯತೆ ಇಲ್ಲ ಎಂದು ಬಿಜೆಪಿ ಕಾರ್ಯಕರ್ತ ಚಂದ್ರಹಾಸ್ ಆಕ್ರೋಶ ವ್ಯಕ್ತಪಡಿಸಿದರು.

    ಸುಳ್ಳಿಗೆ ಇನ್ನೊಂದು ಹೆಸರೇ ಸಿದ್ದರಾಮಯ್ಯ. ಇಷ್ಟೆಲ್ಲಾ ಹಿಂದೂಗಳ ನರಮೇಧಕ್ಕೆ ಅವರೇ ಕಾರಣ. ನಾವು ಅವರ ಪ್ರಾಯಕ್ಕೆ ಗೌರವ ಕೊಡುತ್ತೇವೆ ಹೊರತು ಅವರ ಚಿಂತನೆಗೆ ಅಲ್ಲ ಎಂದರು.

    Siddaramaiah

    ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ಜೊತೆಗಿದ್ದರು ನಿಜ. ಅವರು ಚಾಲಕ ವೃತ್ತಿ ಮಾಡುತ್ತಿದ್ದುದೂ ನಿಜ. ಆದರೆ ಅಪರೂಪಕ್ಕೊಮ್ಮೆ ಕಟೀಲ್ ಅವರ ಚಾಲಕರಾಗಿ ಕೆಲಸ ಮಾಡಿದ್ದರು. ಕಟೀಲ್ ಅವರ ಡ್ರೈವರ್‌ಗೆ ರಜೆ ಬೇಕಿದ್ದ ಸಂದರ್ಭ ಪ್ರವೀಣ್ ಹೋಗುತ್ತಿದ್ದರು. ಅವರು ಪರ್ಮನೆಂಟ್ ಡ್ರೈವರ್ ಆಗಿರಲಿಲ್ಲ. ಆದರೆ ಸಿದ್ದರಾಮಯ್ಯ ಇದನ್ನೇ ನೆಪವಾಗಿಟ್ಟುಕೊಂಡು ಪ್ರವೀಣ್ ಅವರು ನಳಿನ್ ಕುಮಾರ್ ಅವರ ಚಾಲಕ ಕೆಲಸ ಬಿಟ್ಟು ಬಂದಿದ್ದರು ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಗಳೂರಿನಲ್ಲಿ ರಾಜಕೀಯಕ್ಕಾಗಿ ಕೊಲೆ ನಡೆದಿವೆ: ಮಾಧುಸ್ವಾಮಿ

    ನಾವು ಪಕ್ಷದ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದೇವೆ, ನಾವು ಸಿದ್ದರಾಮಯ್ಯರಂತೆ ಪೇಮೆಂಟ್ ಕಾರ್ಯಕರ್ತರಲ್ಲ. ನಾವು ಬಿಜೆಪಿಯ ಪರ್ಮನೆಂಟ್ ಕಾರ್ಯಕರ್ತರು. ನಮ್ಮ ನಾಯಕರಿಗೆ ಬಿಸಿ ಮುಟ್ಟಿಸುವ ಸಲುವಾಗಿ ರಾಜೀನಾಮೆ ಕೊಟ್ಟಿದ್ದೇವೆಯೇ ಹೊರತು ಬಿಜೆಪಿಗೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

    ನಾನು ಹಾಗೂ ಪ್ರವೀಣ್ ಒಟ್ಟಿಗೆ ಇದ್ದವರು. ನನಗೂ ಕೆಲವೊಮ್ಮೆ ಜೀವ ಬೆದರಿಕೆಗಳು ಬಂದಿದ್ದವು. ಆ ಸಂದರ್ಭ ಅವರೇ ನನಗೆ ಧೈರ್ಯ ತುಂಬುತ್ತಿದ್ದರು. ಆದರೆ ಇಂದು ಅವರಿಗೆ ಈ ಗತಿ ಬಂದಿದೆ. ಸರ್ಕಾರದಿಂದ ಹೀಗೆಲ್ಲಾ ಆಯ್ತಲ್ಲಾ ಎಂಬ ನೋವು ಎಲ್ಲಾ ಕಾರ್ಯಕರ್ತರಿಗೂ ಇದೆ. ಈ ಕಾರಣ ರಾಜೀನಾಮೆ ಕೊಟ್ಟಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಿದ್ದಾಗ ಅಧಿಕಾರದಲ್ಲಿದ್ದು ಏನು ಸಾರ್ಥಕ: ರೇಣುಕಾಚಾರ್ಯ

    ನಮಗೆ ಕಳೆದ 6 ತಿಂಗಳಿನಿಂದಲೂ ಬೆದರಿಕೆ ಕರೆಗಳು ಬರುತ್ತಿದ್ದವು. ಈ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನು ನಾವು ಆವಾಗಿಂದಲೇ ನೀಡುತ್ತಿದ್ದೆವು. ಆದರೆ ಅವರು ಸರಿಯಾದ ಕ್ರಮವನ್ನು ತೆಗೆದುಕೊಂಡಿಲ್ಲ. ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೂ ಕರೆ ಮಾಡಿ ಈ ಬಗ್ಗೆ ಹೇಳಲು ಪ್ರಯತ್ನ ಪಟ್ಟಿದ್ದೆವು. ಆದರೆ ಅವರು ನಮ್ಮ ಕರೆಯನ್ನು ಸ್ವೀಕರಿಸುತ್ತಿರಲಿಲ್ಲ ಎಂದರು.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಹತ್ಯೆಗೆ ಭುಗಿಲೆದ್ದ ಆಕ್ರೋಶ – ರಾಜ್ಯಾದ್ಯಂತ ಬಿಜೆಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

    ಪ್ರವೀಣ್ ಹತ್ಯೆಗೆ ಭುಗಿಲೆದ್ದ ಆಕ್ರೋಶ – ರಾಜ್ಯಾದ್ಯಂತ ಬಿಜೆಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

    ಬೆಂಗಳೂರು: ಮಂಗಳವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ, ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪ ಪೆರುವಾಜೆ ಕ್ರಾಸ್ ಬಳಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು. ಈ ಹತ್ಯೆಯನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿದ್ದಾರೆ.

    ಹಾಸನ ಜಿಲ್ಲೆಯ ಅರಸೀಕೆರೆ ನಗರ ಬಿಜೆಪಿ ಮಂಡಲದ ಅಧ್ಯಕ್ಷ ಪುರುಷೋತ್ತಮ್, ಕಾರ್ಯದರ್ಶಿ ಚಂದ್ರು, ಉಪಾಧ್ಯಕ್ಷ ಸುಭಾಷ್, ಜಿಲ್ಲಾ ಯುವ ಮೋರ್ಚಾ ಖಂಜಾಂಚಿ ಯುವರಾಜ್ ಸೇರಿ ಐವರು ರಾಜೀನಾಮೆ ನೀಡಿದ್ದಾರೆ. ಆರೋಪಿಗಳನ್ನು ಬಂಧಿಸುವವರೆಗೂ ಪಕ್ಷದ ಚಟುವಟಿಕೆಗಳನ್ನು ಮಾಡುವುದಿಲ್ಲ. ಪ್ರವೀಣ್ ಹತ್ಯೆ ಆರೋಪಿಗಳನ್ನು ಬಂಧಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬೆಳಗಾವಿಯಲ್ಲೂ ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ಪರ್ವ ಪ್ರಾರಂಭವಾಗಿದ್ದು, ಬಿಜೆಪಿ ಅರಭಾವಿ ಮಂಡಲ ಸಾಮಾಜಿಕ ಜಾಲತಾಣ ಸದಸ್ಯ ಸ್ಥಾನಕ್ಕೆ ಅವಿನಾಶ್ ಹಿರೇಮಠ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ಹಿಂದೆ ಎಲ್ಲಾ ಹಿಂದೂಪರ ಕಾರ್ಯಕರ್ತರ ಹತ್ಯೆಯಾದಾಗ ಕಠಿಣ ಕ್ರಮ ಜರುಗಿಸಿದ್ದೀರಿ ಎಂಬುದು ನಮ್ಮ ಕಣ್ಮುಂದೆ ಇದೆ. ಆದರೆ ಅದು ಕೇವಲ ಭರವಸೆಯಾಗಿಯೇ ಉಳಿದಿದೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ತಾಕತ್ತಿದ್ರೆ ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿ ನೋಡಿ: ಕಟೀಲ್ ಶಪಥದ ಹಳೇ ವೀಡಿಯೋ ವೈರಲ್

     

    ಮೈಸೂರಿನಲ್ಲಿ ಬಿಜೆಪಿ ಯುವ ಮೋರ್ಚಾದ ಎನ್.ಆರ್ ಕ್ಷೇತ್ರದ ಅಧ್ಯಕ್ಷ ಲೋಹಿತ್ ಸೇರಿದಂತೆ ಹಲವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಾವು ಹೇಳಿ ಕೇಳಿ ಅಲ್ಪಸಂಖ್ಯಾತ ಸಮುದಾಯ ಹೆಚ್ಚಾಗಿರುವ ಎನ್.ಆರ್ ಕ್ಷೇತ್ರದಲ್ಲೆ ಪಕ್ಷ ಸಂಘಟಿಸಬೇಕಿರುವ ಕಾರಣ ನಮ್ಮ ಮನೆಗಳಲ್ಲೂ ಆತಂಕ ಹೆಚ್ಚಾಗಿದೆ. ಈ ಕಾರಣ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಬಿಜೆಪಿ ಯುವಮೋರ್ಚ ಕಾರ್ಯಕರ್ತರೆಲ್ಲರೂ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಬಾಗಲಕೋಟೆ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಅವರಿಗೆ ಸಲ್ಲಿಸಿದ್ದಾರೆ. ಅಲ್ಲದೆ ಬಿಜೆಪಿ ರಾಜ್ಯ ಪ್ರಮುಖರ ವಿರುದ್ಧ ಯುವ ಮೋರ್ಚಾ ಆಕ್ರೋಶ ಹೊರಹಾಕಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ- NIA ತನಿಖೆಗೆ ವಹಿಸುವಂತೆ ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

    ಚಿಕ್ಕಮಗಳೂರಿನಲ್ಲೂ ಪ್ರವೀಣ್ ಹತ್ಯೆಗೆ ಆಕ್ರೋಶ ಹೊರ ಹಾಕಿ ಬಿಜೆಪಿ ಯುವ ಮೋರ್ಚ ಸದಸ್ಯರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಶಶಿ ಜಿಲ್ಲಾ ಕಾರ್ಯದರ್ಶಿ, ಮಂಡಲ ಅಧ್ಯಕ್ಷ ರಾಜೇಶ್, ಕಾಂಚನ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಹತ್ಯೆ ಖಂಡಿಸಿ ಬಾಗಲಕೋಟೆ ಯುವ ಮೋರ್ಚಾದ ಕಾರ್ಯಕರ್ತರು ರಾಜೀನಾಮೆ

    ಪ್ರವೀಣ್ ಹತ್ಯೆ ಖಂಡಿಸಿ ಬಾಗಲಕೋಟೆ ಯುವ ಮೋರ್ಚಾದ ಕಾರ್ಯಕರ್ತರು ರಾಜೀನಾಮೆ

    ಬಾಗಲಕೋಟೆ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರಿಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಖಂಡಿಸಿ ಬಾಗಲಕೋಟೆ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕರ್ತರೆಲ್ಲರು ಸಾಮಾಹಿಕವಾಗಿ ರಾಜೀನಾಮೆ ನೀಡಿದ್ದಾರೆ.

    ಯುವ ಮೋರ್ಚಾದಿಂದ ಸಭೆ ನಡೆಸಿದ ಬಳಿಕ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆನಂದ ಇಂಗಳಗಾಂವಿ ಹಾಗೂ ಪ್ರಧಾನ ಕಾರ್ಯದರ್ಶಿ ಭುವನೇಶ್ವರ ಪೂಜಾರ್ ಹೇಳಿದ್ದಾರೆ.

    ಜಿಲ್ಲೆಯ ಯುವೋರ್ಚಾದ 12 ಮಂಡಳಗಳ ಪದಾಧಿಕಾರಿಗಳು, ಕಾರ್ಯಕರ್ತರು ರಾಜೀನಾಮೆ ನೀಡಿದ್ದು, ಬಾಗಲಕೋಟೆ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಅಲ್ಲದೆ ಬಿಜೆಪಿ ರಾಜ್ಯ ಪ್ರಮುಖರ ವಿರುದ್ಧ ಯುವ ಮೋರ್ಚಾ ಆಕ್ರೋಶ ಹೊರಹಾಕಿದೆ. ಇದನ್ನೂ ಓದಿ: ನಳಿನ್‌ ಕುಮಾರ್ ಕಾರನ್ನು ಎತ್ತಲು ಪ್ರಯತ್ನಿಸಿದ ಕಾರ್ಯಕರ್ತರು – ಬೆಳ್ಳಾರೆಯಲ್ಲಿ ಲಾಠಿಚಾರ್ಜ್

    ಗ್ರಹ ಸಚಿವರು, ಸಿಎಂ, ಸೇರಿದಂತೆ ಸಂಬಂಧ ಪಟ್ಟವರೆಲ್ಲರೂ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಸೂಕ್ತ ಕ್ರಮ ಕೈಗೊಳ್ಳುವ ವರೆಗೂ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ತೀರ್ಮಾನ ಮಾಡಿದ್ದೇವೆ ಎಂದು ನಗರದ ವಿದ್ಯಾಗಿರಿಯಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆನಂದ ಇಂಗಳಗಾಂವಿ ಕಿಡಿಕಾರಿದ್ದಾರೆ.

    ಇತ್ತ ಚಿಕ್ಕಮಗಳೂರಿನಲ್ಲಿ ಕೂಡ ಜಿಲ್ಲಾ ಯುವ ಮೋರ್ಚಾದ ಸುಮಾರು 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಜಿಲ್ಲಾ ಕಾರ್ಯದರ್ಶಿ ಶಶಿ, ಮಂಡಲ ಅಧ್ಯಕ್ಷ ರಾಜೇಶ್, ಕಾಂಚನ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಳಿನ್‌ ಕುಮಾರ್ ಕಾರನ್ನು ಎತ್ತಲು ಪ್ರಯತ್ನಿಸಿದ ಕಾರ್ಯಕರ್ತರು – ಬೆಳ್ಳಾರೆಯಲ್ಲಿ ಲಾಠಿಚಾರ್ಜ್

    ನಳಿನ್‌ ಕುಮಾರ್ ಕಾರನ್ನು ಎತ್ತಲು ಪ್ರಯತ್ನಿಸಿದ ಕಾರ್ಯಕರ್ತರು – ಬೆಳ್ಳಾರೆಯಲ್ಲಿ ಲಾಠಿಚಾರ್ಜ್

    ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯಿಂದ ಬೆಳ್ಳಾರೆ ಉದ್ವಿಗ್ನಗೊಂಡಿದ್ದು ಬಿಜೆಪಿ ನಾಯಕರಿಗೆ ಹಿಂದೂ ಕಾರ್ಯಕರ್ತರು ದಿಗ್ಬಂಧನ ಹಾಕಿದ್ದಾರೆ.

    ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್, ಸಚಿವರಾದ ಸುನೀಲ್‌ಕುಮಾರ್, ಅಂಗಾರ, ಹರೀಶ್ ಪೂಂಜಾ ಅವರನ್ನು ಸುತ್ತುವರೆದು ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ನಳಿನ್‌ ಕುಮಾರ್ ಅವರ ಕಾರನ್ನು ಕಾರ್ಯಕರ್ತರು ಮೇಲಕ್ಕೆ ಎತ್ತಲು ಪ್ರಯತ್ನಿಸಿದ್ದಾರೆ.  ಇದನ್ನೂ ಓದಿ: ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲೇ ಆಗ್ತಿಲ್ಲ ಅಂತ ಒಪ್ಪಿಕೊಳ್ತೇನೆ: ಈಶ್ವರಪ್ಪ

    ಆರ್‌ಎಸ್‌ಎಸ್ ಮುಖಂಡ ಪ್ರಭಾಕರ ಭಟ್ ಅವರಿಗೂ ಪ್ರತಿಭಟನೆಯ ಬಿಸಿ ತಟ್ಟಿದೆ. ನಮಗೆ ನ್ಯಾಯ ಬೇಕು ನ್ಯಾಯ ಬೇಕು ಎಂಬ ಘೋಷಣೆ ಕೂಗುತ್ತಿರುವ ಕಾರ್ಯಕರ್ತರು ಆರೋಪಿಗಳನ್ನು ಕೂಡಲೇ ಬಂಧಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಆಕ್ರೋಶಿತ ಗುಂಪನ್ನು ಸಮಾಧಾನಪಡಿಸಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.

    ಪ್ರತಿಭಟನೆ ಜೋರಾಗುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಪೊಲೀಸರ ಲಾಠಿ ಏಟಿಗೆ ಕಾರ್ಯಕರ್ತರು ದಿಕ್ಕಾಪಾಲಾಗಿ ಓಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಿಲ್ಲಾ, ತಾಲೂಕು, ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ: ಆರ್.ಅಶೋಕ್

    ಜಿಲ್ಲಾ, ತಾಲೂಕು, ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ: ಆರ್.ಅಶೋಕ್

    ಬೆಂಗಳೂರು: ರಾಜ್ಯದಲ್ಲಿ ನಡೆಯುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಗೆದ್ದೇ ಗೆಲ್ಲಬೇಕಿದೆ. ಇದಕ್ಕಾಗಿ ಯುವ ಮೋರ್ಚಾವು ಒಂದು ತಂಡವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದು ರಾಜ್ಯದ ಕಂದಾಯ ಸಚಿವರಾದ ಆರ್. ಅಶೋಕ್ ಅವರು ಕರೆನೀಡಿದ್ದಾರೆ.

    ನಗರದ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ಇಂದು ನಡೆದ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಆರ್. ಅಶೋಕ್ ಅವರು, ಚುನಾವಣೆಯ ಪರೀಕ್ಷೆಯಲ್ಲಿ ಗೆದ್ದು ನಿಮ್ಮ ನಾಯಕತ್ವವನ್ನು ದೃಢಪಡಿಸಿಕೊಳ್ಳಿ. ಬಿಜೆಪಿಯನ್ನು ಈಗ ಪ್ರಪಂಚವೇ ದೊಡ್ಡ ಪಕ್ಷವಾಗಿ ಗುರುತಿಸುತ್ತಿದೆ. ಅದನ್ನು ನಾವು ಉಳಿಸಿಕೊಳ್ಳಬೇಕು. ಪ್ರಧಾನಿಯವರು 18 ರಿಂದ 20 ಗಂಟೆ ಕೆಲಸ ಮಾಡುತ್ತಾರೆ. ಕೋವಿಡ್ ನಿಂದ ಹೊರಬರಲು ನರೇಂದ್ರ ಮೋದಿ ಅವರ ಶ್ರಮವೂ ಕಾರಣವಾಗುತ್ತಿದೆ. ಅಯೋಧ್ಯೆ, ಕಾಶ್ಮೀರದ ವಿಚಾರ, ಭಯೋತ್ಪಾದನೆ ಮೊದಲಾದ ವಿಚಾರಗಳಲ್ಲಿ ದಿಟ್ಟ ನಿರ್ಧಾರವನ್ನು ಪ್ರಧಾನಿಯವರು ಕೈಗೊಂಡಿದ್ದಾರೆ. ಅಂಥ ಚಮತ್ಕಾರವನ್ನು ಬಿಜೆಪಿ ಮಾಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿಯವರೇ 56 ಇಂಚಿನ ಎದೆ ಇದ್ದರೆ ಸಾಲದು: ಸಿದ್ದರಾಮಯ್ಯ

    ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಕೃಷ್ಣ ಆಡ್ವಾಣಿ ಅವರ ದೂರದೃಷ್ಟಿಯ ಯೋಜನೆಗಳಿಂದ ಪಕ್ಷ ಬಲಿಷ್ಠವಾಗಿದೆ. ನಮ್ಮ ಸರ್ಕಾರಗಳ ಜನಪರ ಕಾರ್ಯಗಳನ್ನು ಜನರಿಗೆ ತಿಳಿಸಬೇಕು. ಎಲ್ಲಾ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಜೊತೆಗೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಬಿಜೆಪಿ ಈ ದೇಶಕ್ಕೆ ಅನಿವಾರ್ಯ. ಮತಬ್ಯಾಂಕ್ ಗಾಗಿ ದೇಶವನ್ನು ಬಲಿ ಕೊಡುವ ಪರಿಸ್ಥಿತಿ ಬರದಂತೆ ಕೆಲಸ ಮಾಡಬೇಕು. ನಾನೂ ಇಲ್ಲಿಂದಲೇ ಬಂದವನು. ಅದಕ್ಕೇ ನನಗೆ ಯುವ ಮೋರ್ಚಾ ವೇದಿಕೆ ಅತ್ಯಂತ ಇಷ್ಟವಾದುದು. ಕಾವೇರಿ ನದಿಯ ಮಾದರಿಯಲ್ಲಿ ಬಿಜೆಪಿ ಹರಿಯುವ ನದಿ. ಆ ಹರಿಯುವ ನದಿಗೆ ಯುವ ಮೋರ್ಚಾ ಒಂದು ಕವಲಾಗಿ ಸೇರುತ್ತದೆ. ದೊಡ್ಡ ನದಿ ಸೇರುವ ದೊಡ್ಡ ತೊರೆ ಇದಾಗಿದೆ. ಯು ಮೋರ್ಚಾ ಸಂಘಟನೆಯಿಂದ ಬಂದವರಿಗೆ ಹೆಚ್ಚಿನ ಅವಕಾಶಗಳು ಲಭಿಸುತ್ತದೆ. ನಾನು ಕೂಡ ತುರ್ತು ಪರಿಸ್ಥಿತಿ ಜೈಲಿಗೆ ಹೋಗಿ ಬಂದ ಬಳಿಕ ಒಂದು ವರ್ಷ ಅಜ್ಞಾತವಾಸದಲ್ಲಿದ್ದೆ. ನಾನು ಪೆಟ್ರೋಲ್ ಬಂಕ್ ನಲ್ಲಿ ಸ್ಕೂಟರ್ ಗೆ ಪೆಟ್ರೋಲ್ ಹಾಕಿಸ್ತಾ ಇದ್ದೆ. ಅಲ್ಲಿಂದ ಕರೆದುಕೊಂಡು ಹೋಗಿ ದೊಡ್ಡಬಳ್ಳಾಪುರದಲ್ಲಿ ಯುವ ಮೋರ್ಚಾ ಬೆಂಗಳೂರಿನ ಪ್ರಧಾನ ಕಾರ್ಯದರ್ಶಿಯಾಗಿ ಮಾಡಿದರು. ಅಲ್ಲಿಂದ ಬೆಳೆದು ಈಗ ಸಚಿವನಾಗಿ ನಿಮ್ಮೆದುರು ನಿಂತಿದ್ದೇನೆ ಎಂದು ವಿವರಿಸಿದರು.

    ಯುವ ಮೋರ್ಚಾ ಛಾಪು ಬೆಳೆಸಲು ಮುಂದಾಗಿ. ಸಿಂಹಕ್ಕೆ ಯಾರೂ ಪಟ್ಟಾಭಿಷೇಕ ಮಾಡುವುದಿಲ್ಲ. ಹೋರಾಟದ ಮೂಲಕ ಗುರುತಿಸಿಕೊಂಡರೆ ಯುವ ಮೋರ್ಚಾಗೆ ಶಕ್ತಿ ಬರುತ್ತದೆ. ಯುವ ಮೋರ್ಚಾಗೆ ಮಾರ್ಗದರ್ಶನ ಮಾಡುವ ನಾಯಕರಿಗೆ ಕೊರತೆ ಇಲ್ಲ. ನಿಮ್ಮ ವೈಯಕ್ತಿಕ ನಾಯಕತ್ವವನ್ನು ಬೆಳೆಸುವ ಕೆಲಸವನ್ನು ನೀವೇ ಮಾಡಬೇಕು ಎಂದು ನುಡಿದರು.

    ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ಮತ್ತು ಸಂಸದರೂ ಆದ ತೇಜಸ್ವಿ ಸೂರ್ಯ ಅವರು ಮಾತನಾಡಿ, ಯುವ ಮೋರ್ಚಾವು ನಿರಂತರವಾಗಿ ಅನೇಕ ನಾಯಕರನ್ನು ಪಕ್ಷಕ್ಕೆ ನೀಡಿದೆ. ಅದನ್ನು ಸ್ಫೂರ್ತಿಯ ವಿಷಯವನ್ನಾಗಿ ಯುವ ಮೋರ್ಚಾದ ಪದಾಧಿಕಾರಿಗಳು ಮಾಡಿಕೊಂಡು ಬೆಳೆಯಬೇಕು. ಯುವ ಮೋರ್ಚಾವು ಮಾದರಿ ಸಂಘಟನೆ. ಅದು ಎಲ್ಲ ರೀತಿಯ ಯುವಕರನ್ನು ಪ್ರತಿನಿಧಿಸುವ ಸಂಘಟನೆಯಾಗಿ ಬೆಳೆಯಬೇಕು. ಯುವ ಮೋರ್ಚಾವು ರಾಜಕೀಯದಲ್ಲಿ ಹೊಸ ಪ್ರಯತ್ನ ಅಳವಡಿಸಿಕೊಳ್ಳುವಂತಾಗಬೇಕು. ಮೂಲ ತತ್ವ, ಸಿದ್ಧಾಂತಗಳಲ್ಲಿ ಸ್ಥಿರತೆ ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವಲ್ಲಿ ಬದಲಾವಣೆ ನಮ್ಮದಾಗಿರಬೇಕು ಎಂದು ಅಭಿಪ್ರಾಯಪಟ್ಟರು.

    ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷತೆಗೆ ರಾಜೀನಾಮೆ ಕೊಟ್ಟರು. ಕೊರೊನಾ ಎರಡು ಅಲೆಗಳು ಬಂದು ಹೋಗಿವೆ. ಮೂರನೇ ಅಲೆ ಬರುವಂತಿದೆ. ಆದರೂ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರೇ ಸಿಕ್ಕಿಲ್ಲ. ರಾಜ್ಯದ ಯುವ ಕಾಂಗ್ರೆಸ್‍ನಲ್ಲೂ ಸಮಸ್ಯೆ ಮುಂದುವರಿದಿದೆ. ಗೆದ್ದವರು ಒಬ್ಬರು, ಇನ್ನೊಬ್ಬರಿಗೆ ಅಧ್ಯಕ್ಷತೆ, ಅದರಲ್ಲೂ ಗುಂಪುಗಾರಿಕೆ, ಹೊಡೆದಾಟ ಮುಂದುವರಿದಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿಎಂ ಬಿಎಸ್‍ವೈ ಬದಲಾವಣೆ ವಿಚಾರ – ಒಂದು ವಾರ ಕಾಯಿರಿ: ಡಿಕೆಶಿ

    ರಾಜ್ಯ ಯುವ ಮೋರ್ಚಾ ಅಧ್ಯಕ್ಷರಾದ ಡಾ.ಸಂದೀಪ್ ಕುಮಾರ್ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಎರಡೂ ಕಡೆ ನಮ್ಮದೇ ಸರ್ಕಾರವಿದೆ. ಯುವ ಮೋರ್ಚಾವು ಸಮಾಜದ ನೊಂದವರ ತೊಂದರೆಗೆ ಒಳಗಾದವರಿಗೆ ನೇರವಾಗಿ ಹೋರಾಟಕ್ಕೂ ಸೈ, ಸೇವೆಗೂ ಸೈ ಎಂದು ಸಾಬೀತುಪಡಿಸಿದೆ. ಯುವ ಮೋರ್ಚಾ ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದರು.

    ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಟೆಂಗಿನಕಾಯಿ ಮತ್ತು ಆಹ್ವಾನಿತ ಪದಾಧಿಕಾರಿಗಳು ಭಾಗವಹಿಸಿದ್ದರು.

  • ಪ್ರಧಾನಿ ಮೋದಿ ಜನ್ಮದಿನವನ್ನು ವಿಭಿನ್ನವಾಗಿ ಆಚರಿಸಲು ನಿರ್ಧಾರ

    ಪ್ರಧಾನಿ ಮೋದಿ ಜನ್ಮದಿನವನ್ನು ವಿಭಿನ್ನವಾಗಿ ಆಚರಿಸಲು ನಿರ್ಧಾರ

    ಹುಬ್ಬಳ್ಳಿ: ಸೇವಾ ಹೀ ಸಂಘಟನಾ ಎಂಬ ಪರಿಕಲ್ಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ವಿಭಿನ್ನವಾಗಿ ಆಚರಿಸಿಲು ರಾಜ್ಯ ಬಿಜೆಪಿ ಘಟಕ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದರು.

    ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಹೇಶ್ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಕೆ.ಪಿ.ನಡ್ಡಾರವರ ಕರೆಯ ಮೇರೆಗೆ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 02 ರವರೆಗೆ ಸೇವಾ ಸಪ್ತಾಹ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮತ್ತು ಮಹಾತ್ಮಾ ಗಾಂಧಿ ಜಯಂತಿಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 17 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಪಕ್ಷದ ಎಲ್ಲಾ ಕಾರ್ಯಕರ್ತರು ಪ್ರತಿ ವರ್ಷದಂತೆ ಸೇವಾ ಸಪ್ತಾಹದ ಮೂಲಕ ವಿವಿಧ ರೀತಿಯ ಸೇವಾ ಚಟುವಟಿಕೆಗಳ ಮೂಲಕ ಆಚರಿಸಲಾಗುತ್ತಿದೆ ಎಂದರು.

    ರಾಷ್ಟ್ರೀಯ ಅಧ್ಯಕ್ಷ ನಡ್ಡಾರವರ ನಿರ್ದೇಶನದಂತೆ ಸೆಪ್ಟಂಬರ್ 14 ರಿಂದ ಸೆಪ್ಟೆಂಬರ್ 20 ರವರೆಗೆ ಪ್ರತಿ ಮಂಡಲಗಳಲ್ಲಿ 70 ದಿವ್ಯಾಂಗ ವ್ಯಕ್ತಿಗಳಿಗೆ ಕೃತಕ ಅಂಗ ಜೋಡಣಾ ಉಪಕರಣಗಳನ್ನು ನೀಡುವುದು. 70 ಬಡ ಪುರುಷರು ಮತ್ತು ಮಹಿಳೆಯರಿಗೆ ಉಚಿತ ಕನ್ನಡಕಗಳನ್ನು ನೀಡುವುದು. ಕೋವಿಡ್ 19 ನಿಯಮಗಳನ್ನು ಪಾಲಿಸಿ ಪ್ರತಿ ಜಿಲ್ಲೆಯ 70 ಆಸ್ಪತ್ರೆ ಮತ್ತು ಬಡ ಕಾಲೋನಿಗಳಲ್ಲಿ ಹಣ್ಣು ಹಂಪಲುಗಳನ್ನು ವಿತರಿಸುವುದು. ಸ್ಥಳೀಯ ಆವಶ್ಯಕತೆ ಅನುಗುಣವಾಗಿ ಆಸ್ಪತ್ರೆಯ ಮೂಲಕ ಕೋವಿಡ್-19 ರಿಂದ ಪೀಡಿತರಾದ 70 ವ್ಯಕ್ತಿಗಳಿಗೆ ಪ್ಲಾಸ್ಮಾ ದಾನ ಮಾಡುವುದು.

    ಯುವಮೋರ್ಚಾದ ವತಿಯಿಂದ ರಾಜ್ಯದಲ್ಲಿ 70 ರಕ್ತದಾನ ಶಿಬಿರಗಳನ್ನು ಮಾಡುವುದು. ಪ್ರತಿ ಜಿಲ್ಲೆಗಳಲ್ಲಿ ಕನಿಷ್ಟ 1 ರಕ್ತದಾನ ಶಿಬಿರ ಆಯೋಜಿಸುವುದು. ಪ್ರತಿ ಬೂತ್‍ನಲ್ಲಿ 70 ವೃಕ್ಷಾರೋಹಣ ಕಾರ್ಯಕ್ರಮ ಮತ್ತು ಪರಿಸರ ಸಂರಕ್ಷಣೆಯ ಸಂಕಲ್ಪ ಕಾರ್ಯಕ್ರಮ. ಪ್ರತಿ ಜಿಲ್ಲೆಗಳ 70 ಹಳ್ಳಿಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸುವುದು. ಪ್ಲಾಸ್ಟಿಕ್ ನಿಷೇಧ ಕುರಿತು ಜನಜಾಗೃತಿ, ಪ್ರತಿ ಜಿಲ್ಲಾ ಕೇಂದ್ರದಲ್ಲಿ 70 ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ನಡೆಸುವುದು ಸೇರಿದಂತೆ ಮುಂತಾದ ಸೇವಾ ಸಪ್ತಾಹ ಕಾರ್ಯಕ್ರಮ ನಡೆಸಲಾಗುವುದು ಎಂದರು.