Tag: Yuva Nidhi Scheme

  • ಒಬಿಸಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ಗೆ ಕೊಕ್ಕೆ?- ವಿದ್ಯಾರ್ಥಿವೇತನ ಬಾರದೇ ವಿದ್ಯಾರ್ಥಿಗಳು ಪರದಾಟ

    ಒಬಿಸಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ಗೆ ಕೊಕ್ಕೆ?- ವಿದ್ಯಾರ್ಥಿವೇತನ ಬಾರದೇ ವಿದ್ಯಾರ್ಥಿಗಳು ಪರದಾಟ

    – ಯುವನಿಧಿ ಬೇಡ.. ಸ್ಕಾಲರ್‌ಶಿಪ್ ಕೊಡಿ ಸ್ವಾಮಿ ಎನ್ನುತ್ತಿದ್ದಾರೆ ವಿದ್ಯಾರ್ಥಿಗಳು

    ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ಗೆ ಕೊಕ್ಕೆ ಬಿದ್ದಿದೆ ಎನ್ನಲಾಗಿದೆ. ವಿದ್ಯಾರ್ಥಿ ವೇತನ ಸಿಗದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರೆ.

    ರಾಜ್ಯದಲ್ಲಿ ಈಗ ವಿದ್ಯಾರ್ಥಿಗಳು ಸ್ಕಾಲರ್‌ಶಿಪ್‌ಗಾಗಿ ಅಲೆದಾಡುವ ಪರಿಸ್ಥಿತಿ ಉದ್ಭವವಾಗಿದೆ. ಎಂಬಿಎ, ಎಂಬಿಬಿಎಸ್ ಹೀಗೆ ಬಹುತೇಕ ಕೋರ್ಸ್ ಓದುತ್ತಿರುವ ಒಬಿಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಸಿಕ್ಕಿಲ್ಲ ಎನ್ನುವುದು ವಿದ್ಯಾರ್ಥಿಗಳ ಅಳಲು. ನಿರುದ್ಯೋಗ ಭತ್ಯೆ ಕೊಡುವ ಬದಲು ನಮಗೆ ಓದಲು ಪ್ರೋತ್ಸಾಹಕ್ಕೆ ಸ್ಕಾಲರ್‌ಶಿಪ್ ಕೊಡಿ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

    ಎಸ್ಸಿಎಸ್ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಸಿಗುತ್ತಿದೆ. ಆದರೆ, ಒಬಿಸಿ ವಿದ್ಯಾರ್ಥಿಗಳಿಗೆ ಈ ಅನ್ಯಾಯವಾಗುತ್ತಿದೆ ಅಂತಾ ವಿದಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ಕೂಡ ಸ್ಕಾಲರ್‌ಶಿಪ್ ಬಗ್ಗೆ ಸಮೀಕ್ಷೆ ಮಾಡಿದ್ದು, 97% ನಷ್ಟು ವಿದ್ಯಾರ್ಥಿಗಳು ಸ್ಕಾಲರ್‌ಶಿಪ್ ಪಡೆದಿಲ್ಲ ಎಂದು ಹೇಳಿದ್ದಾರೆ.

  • ಪ್ರೇಮಿಗಳೆಂದು ಅಕ್ಕ-ತಮ್ಮನನ್ನು ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು

    ಪ್ರೇಮಿಗಳೆಂದು ಅಕ್ಕ-ತಮ್ಮನನ್ನು ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು

    – ಗಾಂಜಾ ನಶೆಯಲ್ಲಿ 7 ಮುಸ್ಲಿಂ ಯುವಕರಿಂದ ಕೃತ್ಯ?

    ಬೆಳಗಾವಿ: ಗಾಂಜಾ ನಶೆಯಲ್ಲಿದ್ದ ಮುಸ್ಲಿಂ ಯುವಕರು, ಪ್ರೇಮಿಗಳೆಂದು ತಿಳಿದು ಅಕ್ಕ-ತಮ್ಮನನ್ನು ಶೆಡ್‍ನಲ್ಲಿ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಗರದಲ್ಲಿ ನಡೆದಿದೆ.

    ಬೆಳಗಾವಿ (Belagavi) ಹೊರವಲಯದ ಯಮನಾಪುರದ ಸಹೋದರ ಹಾಗೂ ಸಹೋದರಿಯ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಕೋಟಿ ಕೆರೆಯ ದಡದಲ್ಲಿ ಅಕ್ಕ-ತಮ್ಮ ಇಬ್ಬರು ಕುಳಿತು ಮಾತಾಡುತ್ತಿದ್ದರು. ಈ ವೇಳೆ ಬಂದ ಕಿಡಿಗೇಡಿಗಳು ಇಬ್ಬರನ್ನು ಎಳೆದೊಯ್ದು ಶೆಡ್‍ನೊಳಗೆ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆ. ಗಾಂಜಾ ನಶೆಯಲ್ಲಿದ್ದ ಏಳು ಜನ ಮುಸ್ಲಿಂ ಯುವಕರು ಸೇರಿ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು (Police) ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎರಡೂ ಹೆಣ್ಣುಮಗು ಅಂತ ಸಿಟ್ಟಿಗೆದ್ದ ಪತಿ- 2ನೇ ಮಗುವನ್ನು ಮಾರಲು ಮುಂದಾದ ಪಾಪಿ

    ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ (Yuva Nidhi Scheme) ಅರ್ಜಿ ಸಲ್ಲಿಸಲು ಸಹೋದರನ ಜೊತೆಗೆ ಯುವತಿ ಬೆಳಗಾವಿಗೆ ಆಗಮಿಸಿದ್ದಳು. ಈ ವೇಳೆ ಸೇವಾ ಕೇಂದ್ರದ ಸಿಬ್ಬಂದಿ ಸರ್ವರ್ ಸಮಸ್ಯೆ ಇದೆ, ಮಧ್ಯಾಹ್ನ 3 ಗಂಟೆಗೆ ಬರುವಂತೆ ತಿಳಿಸಿದ್ದಾರೆ. ಇದರಿಂದ ಅಕ್ಕ- ತಮ್ಮ ಮಧ್ಯಾಹ್ನ 1 ಗಂಟೆಯ ವೇಳೆಗೆ ಕೋಟೆ ಕೆರೆ ದಡದ ಮೇಲೆ ಬಂದು ಕುಳಿತಿದ್ದರು. ಈ ವೇಳೆ ಅಲ್ಲಿಗೆ ಬಂದ ಕಿಡಿಗೇಡಿಗಳು ಮುಸ್ಲಿಂ ಹುಡುಗಿ ಜೊತೆಗೆ ಏಕೆ ಕುಳಿತಿದ್ದೀಯಾ? ಎಂದು ಯುವಕನ ಜೊತೆಗೆ ಜಗಳ ತೆಗೆದಿದ್ದಾರೆ. ಈ ವೇಳೆ ನಾವು ಪ್ರೇಮಿಗಳಲ್ಲ, ಅಕ್ಕ-ತಮ್ಮ ಎಂದು ಮನವರಿಕೆ ಮಾಡಲು ಯತ್ನಿಸಿದ್ದಾರೆ. ಅಲ್ಲದೇ ಅವರ ಚಿಕ್ಕಪ್ಪನಿಗೆ ಫೋನ್ ಮಾಡಿ ಮನವರಿಕೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಫೋನ್ ಸ್ವಿಚ್ ಆಫ್ ಮಾಡಿ ಕೋಟೆ ಕೆರೆ ಪಕ್ಕದ ಶೆಡ್‍ಗೆ ಎಳೆದೊಯ್ದ ಕೂಡಿ ಹಾಕಿ ಇಬ್ಬರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

    ಸ್ವಲ್ಪ ಸಮಯದ ಬಳಿಕ ಯುವತಿಯ ಚಿಕ್ಕಪ್ಪ ವಾಪಸ್ ಕರೆ ಮಾಡಿದ್ದು, ಈ ವೇಳೆ ಮೊಬೈಲ್ ಸ್ವಿಚ್ ಆಫ್ ಆಗಿದ್ದು ತಿಳಿಯುತ್ತಿದ್ದಂತೆ ಎಪಿಎಂಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಕೋಟೆ ಕೆರೆ ಸುತ್ತಲೂ ಅವರ ಚಿಕ್ಕಪ್ಪ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಕಿರಿಚಾಟದ ಶಬ್ಧ ಕೇಳಿ ಶೆಡ್ ಒಳಗೆ ನುಗ್ಗಿ ಇಬ್ಬರನ್ನು ರಕ್ಷಿಸಿದ್ದಾರೆ. ಬಳಿಕ ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ಕರೆದೊಯ್ದ ದಾಖಲಿಸಿದ್ದಾರೆ. ಅಕ್ಕ-ತಮ್ಮ ಇಬ್ಬರಿಗೂ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಯುವತಿಯ ತಾಯಿ ಹಾಗೂ ಯುವಕನ ತಾಯಿ ಸ್ವಂತ ಅಕ್ಕ-ತಂಗಿಯರಾಗಿದ್ದು, ಲಮಾಣಿ ಸಮುದಾಯಕ್ಕೆ ಸೇರಿದ್ದ ಯುವತಿಯ ತಾಯಿ ಮುಸ್ಲಿಂ ವ್ಯಕ್ತಿಯೊಂದಿಗೆ ವಿವಾಹವಾಗಿದ್ದರು. 11 ವರ್ಷಗಳ ಹಿಂದೆಯೇ ಯುವತಿಯ ತಂದೆ ಅಕಾಲಿಕ ಸಾವು ಹಿನ್ನೆಲೆಯಲ್ಲಿ ಸಹೋದರಿಯ ಮನೆ ಪಕ್ಕದ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.

    ಈ ಸಂಬಂಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ 17 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಿಲ್ಲಾ ಕೆರೆ ನಿವಾಸಿ ಅತೀಕ್ ಹಾಗೂ ಅಸದ್ ಖಾನ್ ಸೇರಿದಂತೆ ಏಳು ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ- 44 ಯುವತಿಯರ ರಕ್ಷಣೆ

  • ನಿರುದ್ಯೋಗ ಯುವಕ-ಯುವತಿಯರಿಗೆ ಗುಡ್‌ನ್ಯೂಸ್ – ಡಿ.21ರಿಂದ `ಯುವ ನಿಧಿ’ಗೆ ನೋಂದಣಿ

    ನಿರುದ್ಯೋಗ ಯುವಕ-ಯುವತಿಯರಿಗೆ ಗುಡ್‌ನ್ಯೂಸ್ – ಡಿ.21ರಿಂದ `ಯುವ ನಿಧಿ’ಗೆ ನೋಂದಣಿ

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ 5ನೇ ಗ್ಯಾರಂಟಿ (Congress Guarantee) ಯುವ ನಿಧಿ ಯೋಜನೆ (Yuva Nidhi Scheme) ಜಾರಿಗೆ ದಿನಗಣನೆ ಆರಂಭವಾಗಿದೆ.

    ಡಿಸೆಂಬರ್ 21 ರಿಂದ ಯುವ ನಿಧಿಗೆ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಸಂಕ್ರಾಂತಿ ವೇಳೆಗೆ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಇದನ್ನೂ ಓದಿ: ಶಾಸಕರ ಆದಾಯ ಕೋಟಿ ಕೋಟಿ ಹೆಚ್ಚಾದ್ರೂ ಕನಕಪುರ ಅಭಿವೃದ್ಧಿಯಾಗಿಲ್ಲ: ಪರೋಕ್ಷವಾಗಿ ಡಿಕೆಶಿ ತಿವಿದ ಯತ್ನಾಳ್‌

    ಈ ಬಗ್ಗೆ ಮಾತನಾಡಿರುವ ಡಿ.ಕೆ ಶಿವಕುಮಾರ್ (DK Shivakumar), ಯುವ ನಿಧಿ ಜಾರಿಗೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕೌಶಲ್ಯ ಅಭಿವೃದ್ಧಿ ಸಚಿವರು ಅದಕ್ಕೆ ಬೇಕಾದ ರೂಪುರೇಷೆ ಸಿದ್ಧಪಡಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ರಾಜಭವನಕ್ಕೂ ಬಾಂಬ್ ಬೆದರಿಕೆ ಹಾಕುವ ಧೈರ್ಯ, ಭಯೋತ್ಪಾದಕರ ಕೇಂದ್ರ ಆಗ್ತಿದೆ ರಾಜ್ಯ: ಈಶ್ವರಪ್ಪ ಕಿಡಿ

    ಈ ಬೆನ್ನಲ್ಲೇ ಕೌಶಲ್ಯಾಭಿವೃದ್ಧಿ ಸಚಿವರೂ ಆಗಿರುವ ಶರಣ ಪ್ರಕಾಶ್ ಪಾಟೀಲ್, ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ ಅಂದಿದ್ದಾರೆ. ಪದವೀಧರರು ಪದವಿ ಪೂರೈಸಿ 6 ತಿಂಗಳು ನಿರುದ್ಯೋಗಿಗಳಾಗಿದ್ದರೆ ಮಾಸಿಕ 3,000 ರೂ. ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ. ಸಿಗಲಿದೆ ಎಂದು ನುಡಿದರು.

    2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನ ಘೋಷಣೆ ಮಾಡಿತ್ತು. ಅದರಲ್ಲಿ ಯುವ ನಿಧಿ ಯೋಜನೆ ಅತ್ಯಂತ ಪ್ರಮುಖವಾದುದಾಗಿದೆ. ಯುವ ನಿಧಿ ಯೋಜನೆಯನ್ನು 2022-23ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣ ಸೇರಿದಂತೆ ಎಲ್ಲಾ ಪದವಿ ಪೂರೈಸಿದ ಯುವಕ ಯುವತಿಯರಿಗೆ ನೀಡಲು ತೀರ್ಮಾನಿಸಲಾಗಿದೆ. ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದ ವರೆಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ 1,500 ರೂ. ನೀಡಲಾಗುತ್ತದೆ. ಅಷ್ಟರೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. 24 ತಿಂಗಳ ಒಳಗೆ ಉದ್ಯೋಗ ಸಿಕ್ಕರೆ ಈ ಯೋಜನೆ ರದ್ದಾಗುತ್ತದೆ. ಯುವಕ, ಯುವತಿ ಹಾಗೂ ತೃತೀಯ ಲಿಂಗಿಗಳಿಗೂ ಈ ಯೋಜನೆ ಅನ್ವಯ ಆಗಲಿದೆ.