Tag: Yuva

  • ‘ಯುವ’ ಸಿನಿಮಾದಲ್ಲಿಯ ಸಪ್ತಮಿ ಗೌಡ ಪಾತ್ರ ಬಹಿರಂಗ: ಹುಟ್ಟುಹಬ್ಬಕ್ಕೆ ಗಿಫ್ಟ್

    ‘ಯುವ’ ಸಿನಿಮಾದಲ್ಲಿಯ ಸಪ್ತಮಿ ಗೌಡ ಪಾತ್ರ ಬಹಿರಂಗ: ಹುಟ್ಟುಹಬ್ಬಕ್ಕೆ ಗಿಫ್ಟ್

    ಸಂತೋಷ್ ಆನಂದ್ ರಾಮ್ (Santhosh Anand Ram) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಯುವ (Yuva) ಸಿನಿಮಾದಲ್ಲಿ ಸಪ್ತಮಿ ಗೌಡ (Saptami Gowda) ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಹಿಂದೆಯೇ ತಮ್ಮ ಚಿತ್ರಕ್ಕೆ ಸಪ್ತಮಿ ನಾಯಕಿ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಆದರೆ, ಅವರದ್ದು ಯಾವ ರೀತಿಯ ಪಾತ್ರ ಮತ್ತು ಪಾತ್ರದ ಹೆಸರೇನು ಎನ್ನುವುದನ್ನು ರಿವೀಲ್ ಮಾಡಿರಲಿಲ್ಲ. ಸಪ್ತಮಿ ಹುಟ್ಟು ಹಬ್ಬದ ಸಂದರ್ಭದಲ್ಲಿ ಪಾತ್ರದ ಬಗ್ಗೆ ಕೆಲ ಮಾಹಿತಿ ಮತ್ತು ಫೋಟೋವನ್ನು ರಿಲೀಸ್ ಮಾಡಿದೆ ಚಿತ್ರತಂಡ.

    ಈ ಸಿನಿಮಾದಲ್ಲಿ ಯುವರಾಜಕುಮಾರ್ (Yuvraj Kumar) ನಾಯಕನಾಗಿ ನಟಿಸುತ್ತಿದ್ದಾರೆ. ಸಪ್ತಮಿ ಗೌಡ  ಅವರು ಸಿರಿ ಎನ್ನುವ ಪಾತ್ರ ಮಾಡುತ್ತಿದ್ದಾರೆ. ಅದೊಂದು ಡಿಗ್ಲಾಮರ್ ಪಾತ್ರ ಎಂದು ಹೇಳಲಾಗುತ್ತಿದೆ. ಕಾಲೇಜು ಹುಡುಗಿಯಾಗಿ ಈ ಸಿನಿಮಾದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾರೆ ಸಪ್ತಮಿ. ಯುವರಾಜ್ ಕುಮಾರ್ ಈ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಲಾಂಚ್ ಆಗುತ್ತಿದ್ದು, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರುತ್ತಿದೆ.

    ಯುವ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದೇ ಒಂದು ರೋಚಕ. ಶನಿವಾರ (ಫೆ.4)ರಂದು ಸಂಜೆ ಕೆಸಿಸಿ ಕಾರ್ಯಕ್ರಮಕ್ಕೆ ತನ್ನ ತಾಯಿಯೊಂದಿಗೆ ನಟಿ ಸಪ್ತಮಿ ತೆರಳುತ್ತಿದ್ದರು. ಈ ವೇಳೆ ಹೊಂಬಾಳೆ ಸಂಸ್ಥೆ ಟೀಂ ಕಡೆಯಿಂದ ನಟಿಗೆ ಕಾಲ್ ಬಂದಿದೆ. ಆಫೀಸ್‌ಗೆ ಬನ್ನಿ ಎಂದಷ್ಟೇ ಹೇಳಲಾಗಿದೆ. ಬಳಿದ ಚಿತ್ರತಂಡಕ್ಕೆ ಸಪ್ತಮಿ ಭೇಟಿ ನೀಡಿದ್ದಾರೆ. ಬಳಿಕ ಯುವ ರಾಜ್‌ಕುಮಾರ್ (Yuva Rajkumar) ಅವರ ಪಕ್ಕ ನಿಲ್ಲಿಸಿ ಫೋಟೋ ಕ್ಲಿಕ್ಕಿಸಲಾಗಿದೆ. ನಂತರ `ಯುವ’ ಚಿತ್ರಕ್ಕೆ ನೀವೇ ಹೀರೋಯಿನ್ ಎಂದು ಸರ್ಪ್ರೈಸ್ ನೀಡಿದ್ದಾರೆ.

    ಪಾಪ್ ಕಾರ್ನ್ ಮಂಕಿ ಟೈಗರ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ರು. ಡಾಲಿಗೆ ನಾಯಕಿಯಾಗಿ ಮೊದಲ ಸಿನಿಮಾದಲ್ಲೇ ಸೈ ಎನಿಸಿಕೊಂಡರು. ಬಳಿಕ `ಕಾಂತಾರ’ (Kantara) ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ಜೋಡಿಯಾಗುವ ಮೂಲಕ ಸಿನಿಪ್ರೇಕ್ಷಕರ ಗಮನ ಸೆಳೆದ ಬಳಿಕೆ ಅವರ ಕೈಯಲ್ಲಿ ಸಾಕಷ್ಟು ಚಿತ್ರಗಳಿವೆ. ಇದನ್ನೂ ಓದಿ:ನಟ ಚಿರಂಜೀವಿ ಸರ್ಜಾ 3 ನೇ ವರ್ಷದ ಪುಣ್ಯತಿಥಿ

    ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ `ದಿ ವಾಕ್ಸಿನ್ ವಾರ್’ ಚಿತ್ರದಲ್ಲಿ ಕೂಡ ಸಪ್ತಮಿ (Saptami Gowda) ಮೇಜರ್ ರೋಲ್ ಪ್ಲೈ ಮಾಡ್ತಿದ್ದಾರೆ. ಈ ಮೂಲಕ ಬಿಟೌನ್ ಅಂಗಳಕ್ಕೂ ನಟಿ ಲಗ್ಗೆ ಇಟ್ಟಿದ್ದಾರೆ. ಈಗಾಗಲೇ ಹಲವು ಹಂತದ ಚಿತ್ರೀಕರಣದಲ್ಲೂ ಅವರು ಭಾಗಿಯಾಗಿದ್ದಾರೆ. ಅದೊಂದು ಮಹತ್ವದ ಪಾತ್ರವೆಂದು ಹೇಳಿಕೊಂಡಿದ್ದಾರೆ.

    ಪೈಲ್ವಾನ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಕೃಷ್ಣ ಇದೀಗ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಅವರಿಗೆ ಸಿನಿಮಾವೊಂದು ಮಾಡುತ್ತಿದ್ದು, ಈಗಾಗಲೇ ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದೆ. ಈ ಸಿನಿಮಾಗೂ ಸಪ್ತಮಿಯೇ ನಾಯಕಿ. ಇನ್ನಷ್ಟೇ ಶೂಟಿಂಗ್ ಆರಂಭವಾಗಬೇಕು.

  • ಹುಟ್ಟು ಹಬ್ಬ ಆಚರಿಸಿಕೊಳ್ತಿರೋ ಕಾಂತಾರ ಬೆಡಗಿ ಕೈಲಿ ಸಾಲು ಸಾಲು ಚಿತ್ರಗಳು

    ಹುಟ್ಟು ಹಬ್ಬ ಆಚರಿಸಿಕೊಳ್ತಿರೋ ಕಾಂತಾರ ಬೆಡಗಿ ಕೈಲಿ ಸಾಲು ಸಾಲು ಚಿತ್ರಗಳು

    ಕಾಂತಾರ (Kantar) ಸಿನಿಮಾ ಮೂಲಕ ದೇಶದ ಗಮನ ಸೆಳೆದಿರುವ ಸಪ್ತಮಿ ಗೌಡ  (Saptami Gowda) ಇಂದು ಹುಟ್ಟು ಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಸ್ಯಾಂಡಲ್ ವುಡ್ ನ ಅನೇಕರು ಸಪ್ತಮಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಅದರಲ್ಲೂ ಸಪ್ತಮಿ ಗೌಡ ಕೈಲಿ ಸಾಲು ಸಾಲು ಚಿತ್ರಗಳಿದ್ದು, ಚಿತ್ರತಂಡದಿಂದಲೂ ಶುಭಾಶಯಗಳ ಹಾರೈಕೆ ಹರಿದು ಬಂದಿದೆ.

    ಪಾಪ್ ಕಾರ್ನ್ ಮಂಕಿ ಟೈಗರ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ರು. ಡಾಲಿಗೆ ನಾಯಕಿಯಾಗಿ ಮೊದಲ ಸಿನಿಮಾದಲ್ಲೇ ಸೈ ಎನಿಸಿಕೊಂಡರು. ಬಳಿಕ `ಕಾಂತಾರ’ (Kantara) ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ಜೋಡಿಯಾಗುವ ಮೂಲಕ ಸಿನಿಪ್ರೇಕ್ಷಕರ ಗಮನ ಸೆಳೆದರು. ಇದನ್ನೂ ಓದಿ:ಮತ್ತೆ ಕಿರುತೆರೆಗೆ ಮರಳಿದ ‘ಬಿಗ್‌ ಬಾಸ್‌’ ಚೈತ್ರಾ ಹಳ್ಳಿಕೇರಿ

    ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ `ದಿ ವಾಕ್ಸಿನ್ ವಾರ್’ ಚಿತ್ರದಲ್ಲಿ ಕೂಡ ಸಪ್ತಮಿ (Saptami Gowda) ಮೇಜರ್ ರೋಲ್ ಪ್ಲೈ ಮಾಡ್ತಿದ್ದಾರೆ. ಈ ಮೂಲಕ ಬಿಟೌನ್ ಅಂಗಳಕ್ಕೂ ನಟಿ ಲಗ್ಗೆ ಇಟ್ಟಿದ್ದಾರೆ. ಈಗಾಗಲೇ ಹಲವು ಹಂತದ ಚಿತ್ರೀಕರಣದಲ್ಲೂ ಅವರು ಭಾಗಿಯಾಗಿದ್ದಾರೆ. ಅದೊಂದು ಮಹತ್ವದ ಪಾತ್ರವೆಂದು ಹೇಳಿಕೊಂಡಿದ್ದಾರೆ.

    ಯುವ ಸಿನಿಮಾಗೂ ಸಪ್ತಮಿ ಗೌಡ ನಾಯಕಿ. ಈ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದೇ ಒಂದು ರೋಚಕ. ಶನಿವಾರ (ಫೆ.4)ರಂದು ಸಂಜೆ ಕೆಸಿಸಿ ಕಾರ್ಯಕ್ರಮಕ್ಕೆ ತನ್ನ ತಾಯಿಯೊಂದಿಗೆ ನಟಿ ಸಪ್ತಮಿ ತೆರಳುತ್ತಿದ್ದರು. ಈ ವೇಳೆ ಹೊಂಬಾಳೆ ಸಂಸ್ಥೆ ಟೀಂ ಕಡೆಯಿಂದ ನಟಿಗೆ ಕಾಲ್ ಬಂದಿದೆ. ಆಫೀಸ್‌ಗೆ ಬನ್ನಿ ಎಂದಷ್ಟೇ ಹೇಳಲಾಗಿದೆ. ಬಳಿದ ಚಿತ್ರತಂಡಕ್ಕೆ ಸಪ್ತಮಿ ಭೇಟಿ ನೀಡಿದ್ದಾರೆ. ಬಳಿಕ ಯುವ ರಾಜ್‌ಕುಮಾರ್ (Yuva Rajkumar) ಅವರ ಪಕ್ಕ ನಿಲ್ಲಿಸಿ ಫೋಟೋ ಕ್ಲಿಕ್ಕಿಸಲಾಗಿದೆ. ನಂತರ `ಯುವ’ ಚಿತ್ರಕ್ಕೆ ನೀವೇ ಹೀರೋಯಿನ್ ಎಂದು ಸರ್ಪ್ರೈಸ್ ನೀಡಿದ್ದಾರೆ.

    ಪೈಲ್ವಾನ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಕೃಷ್ಣ ಇದೀಗ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಅವರಿಗೆ ಸಿನಿಮಾವೊಂದು ಮಾಡುತ್ತಿದ್ದು, ಈಗಾಗಲೇ ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದೆ. ಈ ಸಿನಿಮಾಗೂ ಸಪ್ತಮಿಯೇ ನಾಯಕಿ. ಇನ್ನಷ್ಟೇ ಶೂಟಿಂಗ್ ಆರಂಭವಾಗಬೇಕು.

  • ‘ಕೆಜಿಎಫ್’ ರೈಟರ್ ಮೂಲಕ ಕನ್ನಡಕ್ಕೆ ಬಂದ ಬೋಲ್ಡ್ ಬ್ಯೂಟಿ

    ‘ಕೆಜಿಎಫ್’ ರೈಟರ್ ಮೂಲಕ ಕನ್ನಡಕ್ಕೆ ಬಂದ ಬೋಲ್ಡ್ ಬ್ಯೂಟಿ

    ಕೆಜಿಎಫ್ ಸಿನಿಮಾ ರೈಟರ್ ಚಂದ್ರಮೌಳಿ (Chandramouli) ಇದೀಗ ಡೈರೆಕ್ಟರ್ ಆಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ‘ದಿಲ್ ಮಾರ್’ (Dil Mar) ಸಿನಿಮಾ ಮೂಲಕ ಮೊದಲ ಬಾರಿಗೆ ಅವರು ನಿರ್ದೇಶಕರಾಗಿ ಹೆಜ್ಜೆ ಇಡುತ್ತಿದ್ದಾರೆ. ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಸಿನಿಮಾದಲ್ಲಿ   ಮಾಸ್ ಮಹಾರಾಜ ರವಿತೇಜಾ ನಟನೆಯ ಕಿಲಾಡಿ ಚಿತ್ರದಲ್ಲಿ ನಟಿಸಿದ್ದ ಬೋಲ್ಡ್ ಬ್ಯೂಟಿ ಡಿಂಪಲ್ ಹಯಾತಿ (Dimple Hayathi) ನಾಯಕಿಯಾಗಿ ನಟಿಸಿದ್ದಾರೆ.

    ಹೀರೋಯಿನ್ ಆಗಿ ಡಿಂಪಲ್ ಗೆ ಇದು ಮೊದಲ ಚಿತ್ರವಾಗಿದ್ದು, ಒಂದೊಳ್ಳೆ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಹೊಸ ಬಗೆಯ ಪಾತ್ರದ ಮೂಲಕ ಅವರು ಪ್ರೇಕ್ಷಕರ ಮುಂದೆ ನಿಲ್ಲಲಿದ್ದಾರೆ. ಡಿಂಪಲ್ ನಾಯಕಿಯಾದರೆ, ಯುವ ಪ್ರತಿಭೆ ರಾಮ್ (Ram)ನಾಯಕನಾಗಿ ಬಣ್ಣ ಹಚ್ಚಿದ್ದು, ಡೈಲಾಗ್ ಕಿಂಗ್ ಸಾಯಿ ಕುಮಾರ್ ವಿಲನ್ ಆಗಿ ಘರ್ಜಿಸಿದ್ದಾರೆ.   ಇದನ್ನೂ ಓದಿ:ನನ್ನ ಜೀವನದಲ್ಲಿ ಇದೊಂದು ಸಿನಿಮಾ ಕಪ್ಪು ಚುಕ್ಕೆ: ಹಿರಿಯ ನಟ ದತ್ತಣ್ಣ

    ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿ ಬರ್ತಿರುವ ದಿಲ್ ಮಾರ್ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಸದ್ಯದಲ್ಲಿಯೇ ಹಾಡು ಬಿಡುಗಡೆಯಾಗಲಿದೆ. ಇದಾದಾ ಬಳಿಕ ಟ್ರೇಲರ್ ರಿಲೀಸ್ ಮಾಡುವ ಮೂಲಕ ಪ್ರಮೋಷನ್ ಗೆ ಕಿಕ್ ಸ್ಟಾರ್ಟ್ ಕೊಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

    ಈ ಸಿನಿಮಾದಲ್ಲಿ ನುರಿತ ತಂತ್ರಜ್ಞಾನ ತಂಡವೇ ಕೆಲಸ ಮಾಡಿದ್ದು, ಅರ್ಜುನ್ ರೆಡ್ಡಿ ಖ್ಯಾತಿಯ ರಾದನ್ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ಕೆ ಮಹೇಶ್ ಮತ್ತು ನಾಗರಾಜ್ ಭದ್ರಾವತಿ ಬಂಡವಾಳ ಹೂಡಿದ್ದಾರೆ. ಯುವಕರನ್ನೇ ಗುರಿಯಾಗಿಸಿಕೊಂಡು ಈ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ ಎನ್ನುತ್ತಿದೆ ಚಿತ್ರತಂಡ.

  • ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ `ಕಾಂತಾರ’ ಶಿವನ ಹುಡುಗಿ

    ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ `ಕಾಂತಾರ’ ಶಿವನ ಹುಡುಗಿ

    `ಕಾಂತಾರ’ ಬೆಡಗಿ ಸಪ್ತಮಿ ಗೌಡ (Saptami Gowda) ಸದ್ಯ ಚಿತ್ರರಂಗದಲ್ಲಿ ಅಷ್ಟೇ ಅಲ್ಲ, ಸೋಷಿಯಲ್ ಮೀಡಿಯಾದ ಸೆನ್ಸೇಷನ್ ಆಗಿಯೂ ಕೂಡ ಸದ್ದು ಮಾಡ್ತಿದ್ದಾರೆ. ಈಗ ತಮ್ಮ ಹೊಸ ಬಗೆಯ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ.

    ರಿಷಬ್ ಶೆಟ್ಟಿಗೆ (Rishab Shetty) ನಾಯಕಿಯಾಗಿದ್ದ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಹೀರೋಯಿನ್ ಆಗಿ ಮಿಂಚ್ತಿದ್ದಾರೆ. ಸಿನಿಮಾ, ಜಾಹೀರಾತು, ಉದ್ಘಾಟನೆ ಸಮಾರಂಭಗಳಿಗೆ ಈ ನಟಿನೇ ಬೇಕು ಅನ್ನುವಷ್ಟರ ಮಟ್ಟಿಗೆ ಡಿಮ್ಯಾಂಡ್ ಕ್ರಿಯೆಟ್ ಮಾಡಿದ್ದಾರೆ. ಇದನ್ನೂ ಓದಿ: ಜೋರ್ಡನ್ ಪ್ರವಾಸದಲ್ಲಿ ಕಾರುಣ್ಯ : ಮೃತಸಮುದ್ರ ದಂಡೆ ಮೇಲೆ ಬಿಂದಾಸ್ ಪೋಸ್

     

    View this post on Instagram

     

    A post shared by Sapthami Gowda ???? (@sapthami_gowda)

    ಕಪ್ಪು ಬಣ್ಣದ ಮಾಡ್ರನ್ ಟಾಪ್‌ನಲ್ಲಿ ಸಖತ್ ಹಾಟ್ ಆಗಿ ಮೂಗುತಿ ಸುಂದರಿ ಸಪ್ತಮಿ ಕಾಣಿಸಿಕೊಂಡಿದ್ದಾರೆ. ನಟಿಯ ಹೊಸ ಅವತಾರ ನೋಡಿ ಫ್ಯಾನ್ಸ್ ಕೂಡ ಖುಷಿಪಟ್ಟಿದ್ದಾರೆ. ನಟಿ ಶೇರ್ ಮಾಡಿರುವ ಹೊಸ ಫೋಟೋಶೂಟ್‌ಗೆ (Photoshoot) ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

    ಸಪ್ತಮಿ ಗೌಡ, ಬಾಲಿವುಡ್‌ನ (Bollywood) `ದಿ ವ್ಯಾಕ್ಸಿನ್ ವಾರ್’, ಡಾಲಿ- ರಮ್ಯಾ ಜೊತೆಗಿನ ಚಿತ್ರ, ಯುವ ರಾಜ್‌ಕುಮಾರ್ ಜೊತೆ `ಯುವ’ (Yuva) ಚಿತ್ರ ಸೇರಿದಂತೆ ಹಲವರು ಸಿನಿಮಾಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

  • Breaking: ಯುವ ರಾಜ್‌ಕುಮಾರ್‌ಗೆ ನಾಯಕಿಯಾದ `ಕಾಂತಾರ’ ಬ್ಯೂಟಿ ಸಪ್ತಮಿ

    Breaking: ಯುವ ರಾಜ್‌ಕುಮಾರ್‌ಗೆ ನಾಯಕಿಯಾದ `ಕಾಂತಾರ’ ಬ್ಯೂಟಿ ಸಪ್ತಮಿ

    ದೊಡ್ಮನೆ ಕುಡಿ ಯುವರಾಜ್‌ಕುಮಾರ್ `ಯುವ’ (Yuva Film) ಸಿನಿಮಾ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಇತ್ತೀಚಿಗಷ್ಟೇ `ಯುವ’ ಚಿತ್ರದ ಮುಹೂರ್ತ ಅದ್ದೂರಿಯಾಗಿ ಮಾಡಲಾಯಿತು. ಟೈಟಲ್ ಅನಾವರಣ ಮಾಡುವ ಮೂಲಕ ದೂಳೆಬ್ಬಿಸಿದ್ದಾಯ್ತು. ಈಗ ಯುವಗೆ ಜೋಡಿಯಾಗಿ ಬರುವ ನಾಯಕಿ (Heroine) ಬಗ್ಗೆ ಬಿಗ್ ಅಪ್‌ಡೇಟ್ ನೀಡಲಿದೆ‌ ಎಂದು ಹೊಂಬಾಳೆ ಸಂಸ್ಥೆ (Hombale Films) ತಿಳಿಸಿದೆ.

    `ಯುವ’ ಸಿನಿಮಾ ಶುರುವಾಗುವ ಮುಂಚೆಯೇ ಯುವ ರಾಜ್‌ಕುಮಾರ್‌ಗೆ ಯಾರು ನಾಯಕಿಯಾಗಿ ಬರುತ್ತಾರೆ ಎಂದು ಗಾಂಧಿನಗರದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗಿತ್ತು. ಇದೀಗ ಯುವಗೆ ನಾಯಕಿಯಾಗುವ ಲಕ್ಕಿ ನಟಿ ಯಾರು ಎಂಬುದಕ್ಕೆ ಉತ್ತರ ಸಿಕ್ಕಿದೆ.

    ದೊಡ್ಮನೆ ಕುಡಿ ಯುವಗೆ ನಾಯಕಿಯಾಗಿ `ಕಾಂತಾರ’ (Kantara) ಬ್ಯೂಟಿ ಸಪ್ತಮಿ ಗೌಡ (Saptami Gowda) ಕಾಣಿಸಿಕೊಳ್ಳಲಿದ್ದಾರೆ. ಯುವ ಜೊತೆ ರೊಮ್ಯಾನ್ಸ್ ಮಾಡಲು ಸಪ್ತಮಿ ರೆಡಿಯಾಗಿದ್ದಾರೆ. ಚಿತ್ರದಲ್ಲಿ ಸಪ್ತಮಿ ಪಾತ್ರಕ್ಕೆ ಹೆಚ್ಚಿನ ಆದ್ಯತೆಯಿದ್ದು, ಪವರ್‌ಫುಲ್ ಪಾತ್ರದ ಮೂಲಕ ನಟಿ ಬಿಗ್ ಸ್ಕ್ರೀನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಯುವ-ಸಪ್ತಮಿ ಜೋಡಿ ಮೊದಲ ಬಾರಿಗೆ ತೆರೆಯ ಮೇಲೆ ಜೋಡಿಯಾಗಿ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ:ಬರ್ತ್‌ಡೇ ಬಗ್ಗೆ ಅಪ್‌ಡೇಟ್ ನೀಡಿದ ರಾಧಿಕಾ ಪಂಡಿತ್

    `ಯುವ’ ಸಿನಿಮಾವನ್ನ ಸಂತೋಷ್ ಆನಂದ್‌ರಾಮ್ ನಿರ್ದೇಶನ ಮಾಡಿದ್ದರೆ, ಹೊಂಬಾಳೆ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಈ ವರ್ಷ ಡಿಸೆಂಬರ್ 22ಕ್ಕೆ ʻಯುವʼ ಚಿತ್ರ ತೆರೆಗೆ ಅಬ್ಬರಿಸಲಿದೆ.

  • Exclusive Details- ಯುವರಾಜ್ ಸಿನಿಮಾಗೆ ಮೂರು ಟೈಟಲ್: ‘ಯುವ’ ಫಿಕ್ಸ್ ಆಗಿದ್ದು ಯಾಕೆ?

    Exclusive Details- ಯುವರಾಜ್ ಸಿನಿಮಾಗೆ ಮೂರು ಟೈಟಲ್: ‘ಯುವ’ ಫಿಕ್ಸ್ ಆಗಿದ್ದು ಯಾಕೆ?

    ಡಾ.ರಾಜ್ ಕುಟುಂಬದ ಮತ್ತೊಂದು ಕುಡಿ ನಿನ್ನೆ ಸಿನಿಮಾ ರಂಗಕ್ಕೆ ಅಧಿಕೃತ ಪ್ರವೇಶ ಮಾಡಿದೆ. ಪುನೀತ್ ರಾಜ್ ಕುಮಾರ್ (Puneeth Rajkumar) ಉತ್ತರಾಧಿಕಾರಿ ಎಂದು ಬಿಂಬಿತರಾಗಿರುವ ಯುವರಾಜ್ ಕುಮಾರ್ (Yuvaraj Kumar) ನಟನೆಯ ಚೊಚ್ಚಲು ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಹಾಗೂ ಸಿನಿಮಾದ ಮುಹೂರ್ತ ಕೂಡ ನಡೆದಿದೆ. ಯುವರಾಜ್ ನಟನೆಯ ಮೊದಲ ಸಿನಿಮಾಗೆ ಶೀರ್ಷಿಕೆ ಏನಿರಬಹುದು ಎನ್ನುವ ಕುತೂಹಲ ಹಲವು ದಿನಗಳಿಂದ ಇತ್ತು. ಅದಕ್ಕೂ ತೆರೆ ಬಿದ್ದಿದೆ. ಆದರೆ, ಈ ಟೈಟಲ್ ಆಯ್ಕೆಯ ಹಿಂದೆ ಹಲವು ಲೆಕ್ಕಾಚಾರಗಳು ಇರುವುದು ಸುಳ್ಳಲ್ಲ.

    ಚಿತ್ರರಂಗಕ್ಕೆ ಯುವರಾಜ್ ಕುಮಾರ್ ಅವರನ್ನು ಲಾಂಚ್ ಮಾಡಲು ಮತ್ತು ಸಿನಿಮಾದ ಶೀರ್ಷಿಕೆ ಇಡಲು ಹಲವು ರೀತಿಯಲ್ಲಿ ಯೋಚನೆ ಮತ್ತು ಯೋಜನೆಯನ್ನು ಸಿದ್ಧ ಮಾಡಿತ್ತು ಹೊಂಬಾಳೆ ಫಿಲ್ಮ್ಸ್. ಇದರ ಭಾಗವಾಗಿ ಮೂರು ಸಿನಿಮಾ ಶೀರ್ಷಿಕೆಗಳನ್ನೂ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿತ್ತು. ಡಾ.ರಾಜ್ ನಟನೆಯ ಜ್ವಾಲಾಮುಖಿ ಮತ್ತು ಅಶ್ವಮೇಧ ಚಿತ್ರಗಳ ಶೀರ್ಷಿಕೆಯನ್ನೂ ಆಯ್ಕೆ ಮಾಡಿತ್ತು. ಆದರೆ, ಕೊನೆಯ ಬದಲಾವಣೆ ಎನ್ನುವಂತೆ ‘ಯುವ’ (Yuva) ಟೈಟಲ್ ಅನ್ನು ಅಂತಿಮಗೊಳಿಸಿದೆ. ಇದನ್ನೂ ಓದಿ: Breaking:ಸ್ಯಾಂಡಲ್‌ವುಡ್‌ನಲ್ಲಿ ಯುವ ಪರ್ವ ಆರಂಭ

    ಈಗಾಗಲೇ ಚಿತ್ರೋದ್ಯಮದಲ್ಲಿ ಯುವರಾಜ್ ಕುಮಾರ್, ‘ಯುವ’ ಹೆಸರಿನಲ್ಲಿ ಬ್ರ್ಯಾಂಡ್ ಆಗಿದ್ದಾರೆ. ಅಲ್ಲದೇ, ಪುನೀತ್ ರಾಜ್ ಕುಮಾರ್ ಮೊದಲ ಸಿನಿಮಾ ‘ಅಪ್ಪು’ (Appu) ಕೂಡ ಹೀಗೆಯೇ ಆಯ್ಕೆಯಾಗಿದ್ದು. ಈ ಎಲ್ಲವನ್ನೂ ಅಳೆದು ತೂಗಿ ಕೊನೆಗೂ ‘ಯುವ’ ಟೈಟಲ್ ಅನ್ನೇ ನಿರ್ದೇಶಕರು ಮತ್ತು ನಿರ್ಮಾಣ ಸಂಸ್ಥೆ ಅಂತಿಮಗೊಳಿಸಿದ್ದಾರೆ. ಮೊದಲ ಚಿತ್ರದಲ್ಲೇ ಪುನೀತ್ ರಾಜ್ ಕುಮಾರ್ ‘ಅಪ್ಪು’ ಆಗಿ ಫೇಮಸ್ ಆದರು. ಯುವರಾಜ್ ಕುಮಾರ್ ಕೂಡ ‘ಯುವ’ ಹೆಸರಿನಿಂದಲೇ ಮುಂದುವರೆಯಲಿ ಎನ್ನುವ ಗುರಿಯೂ ಈ ಟೈಟಲ್ ಹಿಂದಿದೆ.

    ಈಗಾಗಲೇ ಯುವ ಟೈಟಲ್ ಅನ್ನು ಎಲ್ಲರೂ ಮೆಚ್ಚಿದ್ದಾರೆ. ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕೂಡ ಆಗಿದೆ. ಇದು ಸೂಕ್ತ ಟೈಟಲ್ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ. ಸಿನಿಮಾದ ಕಥೆಯಲ್ಲೂ ನಾಯಕನ ಪಾತ್ರ ಯುವ ಹೆಸರಿನಿಂದಲೇ ಇರುವುದು ಪಕ್ಕಾ ಆಗಿದೆ. ಸಂತೋಷ್ ಆನಂದ್ ರಾಮ್ ಹೊಸ ರೀತಿಯಲ್ಲಿ ಕಥೆ ಬರೆದುಕೊಂಡು ಯುವರಾಜ್ ಕುಮಾರ್ ಅವರನ್ನು ಲಾಂಚ್ ಮಾಡುತ್ತಿದ್ದಾರೆ. ಇದೇ ತಿಂಗಳಿನಿಂದ ಚಿತ್ರೀಕರಣ ಕೂಡ ಶುರುವಾಗಲಿದೆ.