Tag: zameer ahemad

  • ಬಿಬಿಎಂಪಿ ಮೇಲೆ ಗೂಬೆ ಕೂರಿಸಿದ ಶಾಸಕ ಜಮೀರ್ ಅಹ್ಮದ್

    ಬಿಬಿಎಂಪಿ ಮೇಲೆ ಗೂಬೆ ಕೂರಿಸಿದ ಶಾಸಕ ಜಮೀರ್ ಅಹ್ಮದ್

    -ನನ್ನ ಕೇಳಿ ಹೋಗಬೇಕಿತ್ತು
    -ರಾತ್ರಿ ಯಾಕೆ ಹೋದ್ರು?

    ಬೆಂಗಳೂರು: ಈ ರೀತಿಯ ಘಟನೆಗಳು ನಡೆಯಬಾರದಿತ್ತು. ಗಲಾಟೆ ನಡೆಸಿದವರ ಬಗ್ಗೆ ಖಂಡಿತ ಕಠಿಣ ಕ್ರಮ ಜರುಗಿಸಬೇಕು. ರಾತ್ರಿ ವೇಳೆ ಬಿಬಿಎಂಪಿ ಅಧಿಕಾರಿಗಳು ಯಾಕೆ ಪಾದರಾಯನಪುರಕ್ಕೆ ಹೋಗಬೇಕು. ಬೆಳಗ್ಗೆ ಹೋಗಿದ್ದು ತಪ್ಪು ಎಂದು ಬಿಬಿಎಂಪಿ ಮೇಲೆ ಶಾಸಕ ಜಮೀರ್ ಅಹಮದ್ ಗೂಬೆ ಕೂರಿಸಿದ್ದಾರೆ.

    ಕೊರೊನಾ ಶಂಕಿತರನ್ನು ಕರೆದುಕೊಂಡು ಹೋಗುವ ಮುನ್ನ ನನ್ನನ್ನು ಕೇಳಿ ಬೇಕಿತ್ತು. ಡೇ ಟೈಮ್ ನಲ್ಲಿ ಶಂಕಿತರನ್ನು ಕರೆದುಕೊಂಡು ಹೋಗುವಂತೆ ಕಮಿಷನರ್ ಗೆ ಸಹ ಹೇಳಿದ್ದೆ. ರಾತ್ರಿ ಹೋಗುವ ಅಗತ್ಯವೇನಿತ್ತು? ಬಿಬಿಎಂಪಿ ಕಮಿಷನರ್ ಅನಿಲ್ ಜೊತೆ ಸಹ ಮಾತನಾಡಿದ್ದೇನೆ. ಭಾನುವಾರ ಬೆಳಗ್ಗೆಯಿಂದ ನನ್ನ ಪಿಎ ಕಾಯ್ತಾ ಕುಳಿತಿದ್ದರು. ಹೋಟೆಲ್ ಸಿಗದ ಹಿನ್ನೆಲೆಯಲ್ಲಿ ರಾತ್ರಿ ಹೋಗಿದ್ದರಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ನಮಗೆ ಇಲ್ಲಿಯೇ ಚಿಕಿತ್ಸೆ ನೀಡಿ ಎಂದು ಜನರು ಒತ್ತಾಯಿಸಿದ್ದಾರೆ. ಎಲ್ಲರಿಗೂ ತಿಳುವಳಿಕೆ ಹೇಳಿ ಸೋಂಕು ಶಂಕಿತರನ್ನು ಕರೆದುಕೊಂಡು ಹೋಗುವ ಬದಲು ಮನೆಯ ಮುಂದೆ ವಾಹನ ತೆಗೆದುಕೊಂಡು ನಿಂತಿದ್ದರಿಂದ ಈ ಗಲಾಟೆ ನಡೆದಿದೆ ಎಂದು ಜಮೀರ್ ಅಹಮದ್ ಹೇಳಿದ್ದಾರೆ.

    ಬಿಬಿಎಂಪಿ ಕಮೀಷನರ್ ಏನ್ ಹೇಳಿದ್ದಾರೆ ಅಂತ ಗೊತ್ತಿಲ್ಲ. ಸೀಲ್‍ಡೌನ್ ಆಗಿದ್ದರಿಂದ ಜನ ಟೆನ್ಷನ್ ನಲ್ಲಿದ್ದಾರೆ. ಹಾಗಾಗಿ ಅಧಿಕಾರಿಗಳು ನನ್ನ ಗಮನಕ್ಕೆ ತರದೇ ಹೋಗಬಾರದಿತ್ತು. ಕೆಲವರು ಮಾಡಿದ ತಪ್ಪಿನಿಂದ ಇಡೀ ಸಮುದಾಯವನ್ನು ಟಾರ್ಗೆಟ್ ಮಾಡಬಾರದು. ಗಲಾಟೆ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ನಾನೇ ಹೇಳುತ್ತಿದ್ದೇನೆ. ಇಷ್ಟು ದಿನ ಶಾಂತವಾಗಿದ್ದ ಪ್ರದೇಶದಲ್ಲಿ ಗಲಾಟೆ ಹೇಗೆ ನಡೆಯಿತು ನನಗೆ ಶಾಕ್ ಆಗಿದೆ ಎಂದರು.

  • ಐಎಂಎ ವಂಚನೆ ಪ್ರಕರಣ-ಜಮೀರ್ ಅಹ್ಮದ್‍ಗೆ ಮುಂದುವರಿದ ವಿಚಾರಣೆ

    ಐಎಂಎ ವಂಚನೆ ಪ್ರಕರಣ-ಜಮೀರ್ ಅಹ್ಮದ್‍ಗೆ ಮುಂದುವರಿದ ವಿಚಾರಣೆ

    ಬೆಂಗಳೂರು: ಐಎಂಎ ವಂಚನೆ ಪ್ರಕರಣವನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಮಾಜಿ ಸಚಿವ ಜಮೀರ್ ಅಹ್ಮದ್ ಅವರನ್ನು ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

    ಆರ್.ಟಿ.ನಗರದ ಸಿಬಿಐ ಕಚೇರಿಯಲ್ಲಿ ಜಮೀರ್ ಅಹ್ಮದ್ ವಿಚಾರಣೆ ನಡೆಯಲಿದೆ. ಜಮೀರ್ ಅಹ್ಮದ್ ಸರ್ಫೆಂಟೈನ್ ರಸ್ತೆಯಲ್ಲಿರುವ ನಿವೇಶನವನ್ನು ಕಡಿಮೆ ಬೆಲೆಯಲ್ಲಿ ಮನ್ಸೂರ್ ಖಾನ್‍ಗೆ ಮಾರಿದ್ದರು. ಹೀಗಾಗಿ ಐಎಂಎ ಪ್ರಕರಣದಲ್ಲಿ ಜಮೀರ್ ಅಹ್ಮದ್ ಹೆಸರು ಕೇಳಿ ಬಂದಿತ್ತು.

    ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆ ತೋರಿಸಿ ಮನ್ಸೂರ್ ನಿಂದ ಹಣ ಪಡೆದಿರುವ ಆರೋಪವನ್ನು ಜಮೀರ್ ಅಹ್ಮದ್ ಎದುರಿಸುತ್ತಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಸಿಬಿಐ ಮುಂದೆ ದಾಖಲಾತಿಗಳೊಂದಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.

    ಜಮೀರ್ ವಿರುದ್ಧದ ಆರೋಪವೇನು?:
    ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಜೂನ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಬಿಜೆಪಿ ಮುಖಂಡ ಎನ್. ರಮೇಶ್ ಅವರು, 90 ಕೋಟಿ ರೂ. ಮೌಲ್ಯದ ನಿವೇಶನವನ್ನು ಕೇವಲ 9.38 ಕೋಟಿ ರೂ.ಗೆ ಮಾರಾಟ ಮಾಡಿದ್ದು, ಉಳಿದ 80 ಕೋಟಿ ರೂ.ಗಳನ್ನು ಕಪ್ಪು ಹಣ ಹವಾಲಾ ರೂಪದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಪಡೆದಿದ್ದಾರೆ. ವಿವಾದಿತ ನಿವೇಶನವನ್ನು ಅಕ್ರಮ ಮಾರಾಟ ಮಾಡಿ ಉಳಿದ ಹಣವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. 2001ರಲ್ಲಿ ಕೇವಲ ಎರಡೂವರೆ ಕೋಟಿ ರೂ.ಗೆ ನಿವೇಶನವನ್ನು ಖರೀದಿಸಿ ಅಕ್ರಮವಾಗಿ ಐಎಂಎಗೆ ಮಾರಾಟ ಮಾಡಿದ್ದಾರೆ ಎಂದು ದೂರಿದ್ದರು.

    ಭೂ ಮಾಲೀಕನಿಗೆ ಕೇವಲ ಎರಡೂವರೆ ಕೋಟಿ ರೂ.ಗಳನ್ನು ನೀಡಿ ಜಮೀನು ಖರೀದಿಸಿದ್ದು, ಅದೇ ಜಮೀನನ್ನು 9 ಕೋಟಿ ರೂ.ಗೆ ಐಎಂಎ ಮಾಲೀಕನಿಗೆ ಮಾರಾಟ ಮಾಡಿದ್ದಾರೆ. ಆದರೆ ಆ ಜಮೀನಿನ ಸದ್ಯದ ಮಾರುಕಟ್ಟೆ ಬೆಲೆ ಕನಿಷ್ಟ 90 ಕೋಟಿ ರೂ.ಗಳಾಗಿದ್ದು, 2018ರಲ್ಲಿ ಮನ್ಸೂರ್ ಖಾನ್‍ಗೆ ಕೇವಲ 9.38 ಕೋಟಿ ರೂ.ಗೆ ಜಮೀರ್ ಅಹ್ಮದ್ ಖಾನ್ ಮಾರಾಟ ಮಾಡಿದ್ದಾರೆ. ಉಳಿದ 80 ಕೋಟಿ ರೂ. ಕಪ್ಪು ಹಣವನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

    9 ವರ್ಷಗಳಿಂದ ರಿಚ್ಮಂಡ್ ಟೌನ್‍ನ ಸರ್ಪಟೈನ್ ಸ್ಟ್ರೀಟ್‍ನಲ್ಲಿರುವ ವಿವಾದಿತ ನಿವೇಶನ ಕೋರ್ಟ್ ಅಂಗಳದಲ್ಲಿದ್ದು, 2014ರಲ್ಲಿ ಆಸ್ತಿ ಪ್ರಕರಣ ಕೋರ್ಟಿನಲ್ಲಿರುವಾಗಲೇ ಜಮೀರ್ ಪಾಲಿಕೆಗೆ ಪತ್ರ ಬರೆದು ಆಸ್ತಿಯನ್ನು ನಾನು ಖರೀದಿಸಿದ್ದೇನೆ ಖಾತೆ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆಗಲೇ ಪಾಲಿಕೆ ನೌಕರರು ಈ ಆಸ್ತಿ ವ್ಯಾಜ್ಯ ಕೋರ್ಟ್ ನಲ್ಲಿದೆ. ಹೀಗಾಗಿ ಖಾತೆ ಮಾಡಿಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು. ಹೀಗಿದ್ದರೂ ಸಹ ಹತ್ತು ಹಲವು ಬಾರಿ ಪತ್ರ ವ್ಯವಹಾರ ನಡೆಸಿ ಖಾತೆ ಮಾಡಿಸಿಕೊಂಡಿದ್ದಾರೆ ಎಂದು ರಮೇಶ್ ಹೇಳಿದ್ದರು.

    ತಾವು ಖಾತೆ ಮಾಡಿಸಿದ ನಂತರ ಮನ್ಸೂರ್ ಖಾನ್‍ಗೆ ಮಾರಾಟ ಮಾಡಿರುವ ಜಮೀನಿಗೆ ಖಾತೆ ಮಾಡಿಸಲು ಜಮೀರ್ ಕಸರತ್ತು ಮಾಡಿದ್ದಾರೆ. ಸಚಿವ ಜಮೀರ್ ಸುಳ್ಳು ಲೆಕ್ಕ ಕೊಡುವುದರಲ್ಲಿ ಎಕ್ಸ್ ಪರ್ಟ್. ಚುನಾವಣಾ ಪ್ರಮಾಣಪತ್ರದಲ್ಲೇ ತಪ್ಪು ಮಾಹಿತಿ ನೀಡಿದ್ದು, 2018ರ ವಿಧಾನಸಭೆ ಚುನಾವಣೆಯಲ್ಲಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿಯೂ ಮಾಜಿ ಶಾಸಕ ಚೆಲುವರಾಯ ಸ್ವಾಮಿಯಿಂದ 42 ಲಕ್ಷ ಸಾಲ ಪಡೆದಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ, ಚೆಲುವರಾಯ ಸ್ವಾಮಿ ಅದೇ 2018ರ ವಿಧಾನಸಭಾ ಚುನಾವಣೆಯಲ್ಲಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಜಮೀರ್ ಅಹ್ಮದ್ ಖಾನ್ ಸಾಲ ನೀಡಿರುವ ಮಾಹಿತಿಯನ್ನೇ ನೀಡಿಲ್ಲ ಎಂದು ಎನ್.ಆರ್.ರಮೇಶ್ ಆರೋಪಿಸಿದ್ದರು.

  • ಸರ್ಕಾರ ಬೀಳಲು ಕುಮಾರಸ್ವಾಮಿಯವ್ರೇ ಕಾರಣ- ಜಮೀರ್ ಅಹಮದ್

    ಸರ್ಕಾರ ಬೀಳಲು ಕುಮಾರಸ್ವಾಮಿಯವ್ರೇ ಕಾರಣ- ಜಮೀರ್ ಅಹಮದ್

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಮಾಜಿ ಸಚಿವ ಜಮೀರ್ ಅಹಮದ್ ಕೂಡ ಸಮ್ಮಿಶ್ರ ಸರ್ಕಾರ ಪತನವಾಗಲು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಯವರೇ ನೇರ ಕಾರಣ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

    ಸಿದ್ದರಾಮಯ್ಯ ಅವರ ಸುದ್ದಿಗೋಷ್ಠಿ ಬಳಿಕ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಎಚ್ ಡಿ ದೇವೇಗೌಡರು ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವುದಕ್ಕೆ ಇಂದು ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದೇವೇಗೌಡರು ಸಿದ್ದರಾಮಯ್ಯ ಅವರಿಂದಲೇ ಸರ್ಕಾರ ಹೋಯಿತು ಎಂದು ಹೇಳಿದ್ದಾರೆ. ಆದರೆ ಯಾವ ಕಾರಣದಿಂದ ಸಿದ್ದರಾಮಯ್ಯರಿಂದಾಗಿ ಸರ್ಕಾರ ಬಿದ್ದಿದೆ ಎಂದು ಹೇಳಿದ್ದಾರೋ ನನಗೆ ಅರ್ಥವಾಗುತ್ತಿಲ್ಲ. ಯಾಕಂದ್ರೆ ನಾನು ಆ ಸರ್ಕಾರದಲ್ಲಿ ಮಂತ್ರಿಯಾಗಿದ್ದೆ. ನನಗೆ ಗೊತ್ತಿದ್ದಂತೆ ಎಲ್ಲ ಶಾಸಕರೂ ಅಸಮಾಧಾನಗೊಂಡಿದ್ದರು. ಇವರ ಜೊತೆಗೆ ಮಂತ್ರಿಗಳು ಕೂಡ ಅಸಮಾಧಾನಿತರಾಗಿದ್ದರು ಎಂದರು.

    ಈ ಹಿಂದೆ ತಾಜ್ ವೆಸ್ಟೆಂಡ್ ಹೋಟೆಲಿನಲ್ಲಿ ಸಭೆ ನಡೆದಾಗ ನಾನು ವೇಣುಗೋಪಾಲ್ ಅವರ ಮುಂದೆಯೇ ಕುಮಾರಸ್ವಾಮಿಯವರಿಗೆ, ಅಣ್ಣ ಈವಾಗಾದ್ರೂ ಸರಿಪಡಿಸಿಕೊಳ್ಳುವ ಮೂಲಕ ಸರ್ಕಾರ ಉಳಿಸಿಕೊಳ್ಳುವ ಪ್ರಯತ್ನ ಮಾಡುವ. ಇನ್ನಾದರೂ ಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳೋಣ. ಹೀಗೆ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರವರ ಇಲಾಖೆಯಲ್ಲಿ ಅವರವರ ಕೆಲಸ ಮಾಡಿಕೊಡಿ ಎಂದು ಹೇಳಿದ್ದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ಹೀಗಾಗಿ ಸಿದ್ದರಾಮಯ್ಯರಿಂದ ಸರ್ಕಾರ ಬಿದ್ದಿದ್ದಲ್ಲ ಎಂದು ಅವರು ತಿಳಿಸಿದರು.

    ಜೆಡಿಎಸ್ ನವರು ಮಾಡಿದ ತಪ್ಪಿನಿಂದಾಗಿ ಸರ್ಕಾರ ಹೋಗಿದೆ. ಎಲ್ಲ ಶಾಸಕರು ಹಾಗೂ ಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದರೆ ಈ ಸರ್ಕಾರ ಯಾವುದೇ ಕಾರಣಕ್ಕೂ ಉರುಳುತ್ತಿರಲಿಲ್ಲ. ಒಟ್ಟಿನಲ್ಲಿ ಅವರು ಮಾಡಿದ ತಪ್ಪಿಗೆ ಬೇರೆಯವರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಗರಂ ಆದರು. ಇದನ್ನೂ ಓದಿ: ನೀಚ ರಾಜಕಾರಣ ಅಪ್ಪ, ಮಕ್ಕಳ ಹುಟ್ಟುಗುಣ – ಗೌಡರ ಕುಟುಂಬದ ವಿರುದ್ಧ ಸಿದ್ದು ಗುಟುರು

    ಸಿದ್ದರಾಮಯ್ಯ ಅವರು ಇಂದು ಹೇಳಿರುವುದು ನೂರಕ್ಕೆ ನೂರು ಸತ್ಯ. ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದ ಬಿಜೆಪಿಯವರು ತಾವು ಅಧಿಕಾರ ನಡೆಸಬೇಕೆಂದು ಪ್ರಯತ್ನ ಮಾಡುತ್ತಲೇ ಬಂದರು. ಇತ್ತ ಶಾಸಕರಲ್ಲಿ ಅಸಮಾಧಾನವಿದ್ದ ಕಾರಣ ಅವರು ತಮ್ಮ ಶಾಸಕ ಸ್ಥಾನಕ್ಕೆ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗಿದ್ದಾರೆ. ಒಂದು ವೇಳೆ 17 ಮಂದಿ ಶಾಸಕರನ್ನು ಸಿದ್ದರಾಮಯ್ಯ ಅವರೇ ಕಳುಹಿಸಿರುತ್ತಿದ್ದರೆ ಯಾಕೆ ಅವರನ್ನು ಅನರ್ಹ ಮಾಡುತ್ತಿದ್ದರು. ಇದನ್ನು ದೇವೇಗೌಡರು ಅರ್ಥಮಾಡಿಕೊಳ್ಳಬೇಕು ಎಂದರು.

    ಹೀಗಾಗಿ ಸಿದ್ದರಾಮಯ್ಯ ಅಲ್ಲ ದೇವೇಗೌಡರ ಮಗ ಕುಮಾರಸ್ವಾಮಿ ಮಾಡಿದ ತಪ್ಪಿಗೆ ಈ ಸರ್ಕಾರ ಬಿದ್ದಿದೆ ಅಂದರು.

  • ಐಎಂಎ ಜ್ಯುವೆಲ್ಲರಿ ಹಗರಣದ ಹಿಂದೆ ಅಡಗಿದೆ ಕಾಂಗ್ರೆಸ್ ನಾಯಕರ ಪ್ರತಿಷ್ಠೆ

    ಐಎಂಎ ಜ್ಯುವೆಲ್ಲರಿ ಹಗರಣದ ಹಿಂದೆ ಅಡಗಿದೆ ಕಾಂಗ್ರೆಸ್ ನಾಯಕರ ಪ್ರತಿಷ್ಠೆ

    ಬೆಂಗಳೂರು: ಐಎಂಎ ಜ್ಯುವೆಲ್ಲರಿ ಹಗರಣದಲ್ಲಿ ತೆರೆಮರೆಯ ಪಾತ್ರಧಾರಿಗಳಾದ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ರೋಶನ್ ಬೇಗ್ ನಡುವಿನ ಮುಸ್ಲಿಂ ನಾಯಕತ್ವದ ಜಟಾಪಟಿ ಹಗರಣವು ಬಯಲಾಗುವಂತೆ ಮಾಡಿದೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ತಮಗೆ ಕೈ ತಪ್ಪಿದ್ದ ಸಚಿವ ಸ್ಥಾನ ಜಮೀರ್ ಅಹಮ್ಮದ್ ಅವರ ಪಾಲಾಗಿದ್ದು ರೋಶನ್ ಬೇಗ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ತಾವೇ ಮುಸ್ಲಿಂ ಸಮುದಾಯದ ನಾಯಕ ಎಂಬ ನಾಯಕತ್ವದ ಜಟಾಪಟಿ ಇಬ್ಬರ ನಡುವಿನ ಅಸಮಾಧಾನ ಬೇರೆ ಬೇರೆ ರೂಪ ಪಡೆಯುವಂತೆ ಮಾಡಿದೆ.

    ಪಕ್ಷದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ರೋಶನ್ ಬೇಗ್ ಕಾಂಗ್ರೆಸ್ ನಲ್ಲಿ ಯಾರಿಗೂ ಬೇಡವಾಗಿದ್ದರು. ಇದನ್ನೇ ಸೂಕ್ತ ಸಮಯ ಎಂದು ಭಾವಿಸಿದ ಸಚಿವ ಜಮೀರ್ ಐಎಂಎ ಹಗರಣದ ರೂವಾರಿ ಮನ್ಸೂರ್ ಆಡಿಯೋ ಬಿಡುಗಡೆ ಮಾಡಿಸಿದರು ಅನ್ನೋದು ರೋಶನ್ ಬೇಗ್ ಬೆಂಬಲಿಗರ ಆರೋಪವಾಗಿದೆ.

    ತಮ್ಮ ವಿರುದ್ಧ ಆಡಿಯೋ ಬಿಡುಗಡೆ ಮಾಡಿದ ಜಮೀರ್ ವಿರುದ್ಧ ರೋಶನ್ ಬೇಗ್ ಜಮೀರ್ ಹಾಗೂ ಐಎಂಎ ಮಾಲೀಕನ ನಡುವಿನ 5 ಕೋಟಿ ಹಣಕಾಸು ವ್ಯವಹಾರದ ದಾಖಲೆ ಬಿಡುಗಡೆ ಮಾಡಿಸಿದರು ಎನ್ನಲಾಗುತ್ತಿದೆ. ಹಾಗೆ ನೋಡಿದರೆ ರೋಶನ್ ಬೇಗ್ ಹಾಗೂ ಜಮೀರ್ ಇಬ್ಬರು ಕೂಡ ಐಎಂಎ ಮಾಲೀಕ ಮನ್ಸೂರ್ ಗೆ ಆತ್ಮೀಯರಾಗಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರು ಹಗರಣದ ಭಾಗಿಯಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

    ಸಮುದಾಯದ ನಾಯಕತ್ವಕ್ಕಾಗಿ ನಡೆದ ಪೈಪೋಟಿ ಕುರಿತು ಪರಸ್ಪರ ಒಬ್ಬರನ್ನೊಬ್ಬರ ಬಗ್ಗೆ ಮಾತನಾಡಿಕೊಳ್ಳಲು ಹೋಗಿ ಸಮುದಾಯದ ಮುಂದೆ ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಮೂಲಕ ನಾಯಕರ ಪ್ರತಿಷ್ಠೆ, ಒಳ ಜಗಳದಿಂದ ದೊಡ್ಡ ಹಗರಣವೊಂದು ಬಯಲಾಗುವಂತೆ ಮಾಡಿದೆ.

  • ಮಾಜಿ ಪ್ರಧಾನಿ ದೇವೇಗೌಡರಿಂದ ಕಾಂಗ್ರೆಸ್‍ಗೆ ಖಡಕ್ ಸೂಚನೆ!

    ಮಾಜಿ ಪ್ರಧಾನಿ ದೇವೇಗೌಡರಿಂದ ಕಾಂಗ್ರೆಸ್‍ಗೆ ಖಡಕ್ ಸೂಚನೆ!

    ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಕಾಂಗ್ರೆಸ್ ಗೆ ಖಡಕ್ ಸೂಚನೆ ನೀಡಿದ್ದಾರೆ.

    ಶಾಸಕ ಜಮೀರ್ ಅಹಮದ್ ಯಾವುದೇ ಕಾರಣಕ್ಕೂ ಸಂಪುಟದಲ್ಲಿ ಇರಬಾರದು. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಅವರಿಗೆ ಜಾಗ ಇರಕೂಡದು ಎಂದು ಮಾಜಿ ಪ್ರಧಾನಿ ತಿಳಿಸಿದ್ದಾರೆ ಅಂತ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ಕ್ಯಾಬಿನೆಟ್‍ಗೆ ಮುಸ್ಲಿಂ ಕೋಟಾದಡಿ ಖಾದರ್, ತನ್ವೀರ್ ಸೇಠ್, ರೋಷನ್‍ಬೇಗ್, ಜಮೀರ್ ಅಹಮದ್ ಪರ ಮಾಜಿ ಸಿಎಂ ಸಿದ್ದರಾಮಯ್ಯ ನಿಂತಿದ್ದಾರೆ. ಬಂಡಾಯಗಾರರಿಗೆ ತೊಂದರೆಯಾಗಬಾರದು ಅಂತ ಹೇಳಿದ್ದರು. ಆದ್ರೆ ಇದೀಗ ದೇವೇಗೌಡರ ಸೂಚನೆಯಿಂದ ಕಾಂಗ್ರೆಸ್ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.

    ಬಂಡಾಯಗಾರರ ವಿರುದ್ಧ ಮುಂದುವರಿದ ದೇವೇಗೌಡರ ಸಮರದಿಂದಾಗಿ ಜಮೀರ್ ಅಹಮದ್ ಆಂಡ್ ಗ್ಯಾಂಗ್ ಏನ್ ಮಾಡ್ತಾರೆ ಅನ್ನೋದೇ ಸದ್ಯದ ಕುತೂಹಲವಾಗಿದೆ. ಈ ಹಿಂದೆ 2013ರ ಚುನಾವಣೆಯಲ್ಲಿ ಜೆಡಿಎಸ್ ನಿಂದ ಗೆಲುವು ಸಾಧಿಸಿದ್ದ ಜಮೀರ್ ಅಹಮದ್ ಪಕ್ಷದ ವಿರುದ್ಧ ತೊಡೆ ತಟ್ಟಿದ್ರು. ಚುನಾವಣೆ ಸಮಯದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಜಮೀರ್ ಜೆಡಿಎಸ್ ಅಭ್ಯರ್ಥಿಯ ವಿರುದ್ಧ ಗೆಲುವನ್ನು ಕಂಡಿದ್ರು.

  • ಮಂತ್ರಿಯಾದ್ರೆ ಗಿನ್ನಿಸ್ ರೆಕಾರ್ಡ್ ಲೆವೆಲ್ ಗೆ ಕೆಲ್ಸ ಮಾಡ್ತೀನಿ- ಜಮೀರ್ ಅಹಮದ್

    ಮಂತ್ರಿಯಾದ್ರೆ ಗಿನ್ನಿಸ್ ರೆಕಾರ್ಡ್ ಲೆವೆಲ್ ಗೆ ಕೆಲ್ಸ ಮಾಡ್ತೀನಿ- ಜಮೀರ್ ಅಹಮದ್

    ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾದ್ರೆ ನಾನು ಸಚಿವನಾಗುತ್ತೇನೆ. ಆಮೇಲೆ ನಾನು ಗಿನ್ನಿಸ್ ರೆಕಾರ್ಡ್ ಲೆವೆಲ್ ಕೆಲಸ ಮಾಡುತ್ತೇನೆ ಅಂತ ಶಾಸಕ ಜಮೀರ್ ಅಹಮದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಚಾಮರಾಜಪೇಟೆಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಅಗೋದನ್ನ ಯಾರಿಂದಲೂ ತಡೆಯೋಕೆ ಆಗಲ್ಲ. ಸಿದ್ದರಾಮಯ್ಯ ಸಿಎಂ ಅದ್ರೇ ನಿಮ್ಮ ಬಚ್ಚಾ ಜಮೀರ್ ಮಂತ್ರಿ ಅಗೋದನ್ನ ಯಾರಿಂದಲೂ ತಡೆಯೋಕೆ ಅಗಲ್ಲ ಅಂತ ಹೇಳಿದ್ದಾರೆ.

    ಸಿದ್ದರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡೇ ಮಾಡ್ತೀವಿ. ಅವರನ್ನು ಗೆಲ್ಲಿಸುವ ಮೂಲಕ ಮತ್ತೆ ಅಧಿಕಾರ ನಡೆಸುತ್ತೇವೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ್ರೆ ನಾನು ಮಂತ್ರಿ ಆಗೇ ಆಗ್ತೀನಿ. ಆಮೇಲೆ ಇದೆ ನೋಡಿ ಆಟ. ಮಿನಿಸ್ಟರ್ ಆಗಿ ಏನೆಲ್ಲ ಕೆಲಸ ಮಾಡ್ತಿನಿ ಅಂದ್ರೆ ನನ್ನ ಹೆಸರು ಗಿನ್ನಿಸ್ ಬಕ್‍ನಲ್ಲಿ ರೆಕಾರ್ಡ್ ಆಗುತ್ತೆ ಅಂತ ಹೇಳಿದ್ರು.

    https://www.youtube.com/watch?v=x8bg1m2yIaQ