Tag: zameerahmed khan

  • ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ಕ್ರಿಯಾ ಯೋಜನೆ ರೂಪಿಸಿ – ಸಿಎಂ ಸೂಚನೆ

    ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ಕ್ರಿಯಾ ಯೋಜನೆ ರೂಪಿಸಿ – ಸಿಎಂ ಸೂಚನೆ

    ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ಕ್ರೀಯಾ ಯೋಜನೆ ರೂಪಿಸಿ – ಸಿಎಂ ಸೂಚನೆ

    ಬೆಂಗಳೂರು: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲು ಸಿಎಂ ಸಿದ್ದರಾಮಯ್ಯ (Siddaramaiah) ಸೂಚಿಸಿದರು.

    ಇಂದು ಅಲ್ಪಸಂಖ್ಯಾತರ ಕಲ್ಯಾಣ (Minority Welfar) ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡುವಂತೆ ಸೂಚಿಸಿದರು. ಇದನ್ನೂ ಓದಿ: ಬೆಂಗಳೂರಿಗರಿಗೆ ಹೊಸ ವರ್ಷದ ಗುಡ್ ನ್ಯೂಸ್; ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ

    ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ (Union Government) ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯವಿರುವ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಲು ಸಿಎಂ ಸೂಚಿಸಿದರು. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೂ ಮುನ್ನ ಅಯೋಧ್ಯೆಗೆ ಮೋದಿ ಭೇಟಿ- ಶನಿವಾರದ ಕಾರ್ಯಕ್ರಮಗಳೇನು?

    ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್‌ ಮೂಲಕ ಭಾರೀ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲು ತೀರ್ಮಾನಿಸಲಾಯಿತು. ವಸತಿ ಇಲಾಖೆ ವಿವಿಧ ವಸತಿ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಗುರಿಯಿದ್ದು, ಈ ವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್‌ ಒಳಗೆ ಪೂರ್ಣಗೊಳಿಸಬೇಕು. ಈ ಬಗ್ಗೆ ಜಿಲ್ಲಾ ಪಂಚಾಯಿತಿಗಳ ಸಿಇಒಗಳು ಮತ್ತು ಸಂಬಂಧಿಸಿದ ಎಂಜಿನಿಯರರ ಸಭೆ ನಡೆಸಿ, ಲಿಂಟೆಲ್‌ ಮತ್ತು ಛಾವಣಿ ಹಂತದಲ್ಲಿರುವ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಲು ತಾಕೀತು ಮಾಡಿದರು.

    ಕೊಳಗೇರಿ ಅಭಿವೃದ್ಧಿ ಮಂಡಳಿ:
    ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ 1.8 ಲಕ್ಷ ಮನೆಗಳು ಪ್ರಗತಿಯಲ್ಲಿದೆ. ಫಲಾನುಭವಿಗಳ ವಂತಿಗೆ ಸೇರಿದಂತೆ 5 ಲಕ್ಷ ರೂ. ಗಳನ್ನು ಭರಿಸಲು ಹಾಗೂ ಇದಕ್ಕಾಗಿ ಮತ್ತು ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಸಂಪುಟ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಮುಕ್ತಾಯದ ಹಂತದಲ್ಲಿರುವ 25 ಸಾವಿರ ಮನೆಗಳನ್ನು ಫೆಬ್ರುವರಿ ಅಂತ್ಯದ ವೇಳೆ ಪೂರ್ಣಗೊಳಿಸುವಂತೆ ತಿಳಿಸಿದರು. ಇದನ್ನೂ ಓದಿ: ಕೇಂದ್ರ ಸರ್ಕಾರವೇ ರೈತರಿಂದ ನೇರವಾಗಿ ಕೊಬ್ಬರಿ ಖರೀದಿಸಲಿ – ಮೋದಿಗೆ ಹೆಚ್‌ಡಿಕೆ ಮನವಿ

    ಇನ್ನೂ ರಾಜೀವ್‌ ಗಾಂಧಿ ವಸತಿ ನಿಗಮದ ಮುಕ್ತಾಯದ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಸೂಚಿಸಿದರು. ನಿಗಮದ ವ್ಯಾಪ್ತಿಯಲ್ಲಿ 2,133 ಕೋಟಿ ರೂ. ಲಭ್ಯವಿದ್ದು, ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಸೂಚಿಸಿದರು. ಸಭೆಯಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಜ್‌ ಸಚಿವ ಬಿ.ಝಡ್‌. ಜಮೀರ್‌ ಅಹ್ಮದ್‌ ಖಾನ್‌ ಸೇರಿ ಹಿರಿಯ ‌ಅಧಿಕಾರಿಗಳು ಭಾಗವಹಿಸಿದ್ದರು.

  • ಯಾರನ್ನೋ ಮೆಚ್ಚಿಸಲು ಜಮೀರ್ ಮಾತಾಡ್ತಿದ್ದು, ಮುಂದುವರಿಸಿಕೊಂಡು ಹೋದ್ರೆ ನಗೆಪಾಟಲಾಗುತ್ತೆ: ನಿಖಿಲ್

    ಯಾರನ್ನೋ ಮೆಚ್ಚಿಸಲು ಜಮೀರ್ ಮಾತಾಡ್ತಿದ್ದು, ಮುಂದುವರಿಸಿಕೊಂಡು ಹೋದ್ರೆ ನಗೆಪಾಟಲಾಗುತ್ತೆ: ನಿಖಿಲ್

    ಮಂಡ್ಯ: ರಾಜ್ಯದ ಜನತೆಗೆ ತಪ್ಪು ಸಂದೇಶವನ್ನು ಶಾಸಕ ಜಮೀರ್ ಅಹ್ಮದ್ ಖಾನ್ ನೀಡುತ್ತಿದ್ದಾರೆ. ಯಾರನ್ನೋ ಮೆಚ್ಚಿಸಲು ಈ ರೀತಿ ಮಾತನಾಡುತ್ತಿದ್ದಾರೆ. ಇದನ್ನು ಹೀಗೆ ಮುಂದುವರಿಸಿಕೊಂಡು ಹೋದರೆ ನಗೆಪಾಟಲು ಆಗುತ್ತದೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಅವರು ಸರಿಯಾದ ಸಮಯದಲ್ಲಿ ಸರಿಯಾದ ತೀರ್ಪು ನೀಡುತ್ತಾರೆ ಎಂದು ನಟ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

    ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಯಲ್ಲಿ ಸುದ್ದಿಗಾರರೋಮದಿಗೆ ಮಾತನಾಡಿದರು. ಇದೇ ವೇಳೆ ಸಿದ್ದರಾಮಯ್ಯರ ಜೆಡಿಎಫ್ ಹೇಳಿಕೆಗೆ ತಿರುಗೇಟು ನೀಡಿದ ನಿಖಿಲ್, ಸಿದ್ದರಾಮಯ್ಯ ಜೆಡಿಎಸ್‍ನಾ ಎಫ್ ಅನ್ನೋದಾದರೆ ಸಿದ್ದರಾಮಣ್ಣನ ಮಗನೂ ಶಾಸಕನಲ್ಲವಾ. ಅವರ ಮಗನೂ ರಾಜಕಾರಣದಲ್ಲಿ ಇಲ್ಲವೇ..? ಅವರು ಮೂಲತಃ ಡಾಕ್ಟರ್ ಅಲ್ಲವೇ…? ಅವರ ವೃತ್ತಿ ಡಾಕ್ಟರ್ ಆಗಿರುವಾಗ ರಾಜಕೀಯಕ್ಕೆ ಏಕೆ ಬಂದ್ರು ಅಂತಾ ನಾವು ಕೇಳಬಹುದಾ..? ಚರ್ಚೆ ಮಾಡಿಕೊಂಡು ಕೂತರೇ ಸಾಕಷ್ಟು ವಿಷಯಗಳು ಇವೆ ಎಂದರು. ಇದನ್ನೂ ಓದಿ: ಅಲ್ಪಸಂಖ್ಯಾತ ಮುಖಂಡರನ್ನ ರಾಜ್ಯಾಧ್ಯಕ್ಷರನ್ನಾಗಿ ಘೋಷಣೆ ಮಾಡಲಿ – ಸಿದ್ದರಾಮಯ್ಯಗೆ ಶ್ರೀರಾಮುಲು ಸವಾಲು

    ಮುಂದಿನ ಚುನಾವಣೆಯಲ್ಲಿ ನಿಖಿಲ್ ರಾಮನಗರದಲ್ಲಿ ಸ್ಪರ್ಧೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ರಾಮನಗರದಲ್ಲಿ ಮಂಡ್ಯದಲ್ಲಿ ಸ್ಪರ್ಧೆ ಮಾಡುತ್ತೇನೆ ಎನ್ನುವ ವಿಚಾರ ಅಲ್ಲ. ನಮ್ಮ ಪಕ್ಷ 2023ಕ್ಕೆ ಜನರಿಗೆ ಕೊಡುವ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಬೇಕು. ಮುಂದಿನ ಬಾರಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ನಾನು ಹೋರಾಟ ನಡೆಸುತ್ತೇನೆ. ರಾಮನಗರ ಅಥವಾ ಮಂಡ್ಯದಲ್ಲಿ ಸ್ಪರ್ಧೆ ಮಾಡೋದನ್ನಾ ಮುಂದೆ ಮಾತನಾಡುತ್ತೇನೆ. ಕ್ಷೇತ್ರ ಬದಲಾವಣೆ ಮಾಡುವ ವಿಚಾರದ ಬಗ್ಗೆ ಈಗ ಮಾತನಾಡುವುದು ಸೂಕ್ತ ಅಲ್ಲ ಎಮದು ಹೇಳಿದರು. ಇದನ್ನೂ ಓದಿ: ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು- ಸಿದ್ದುಗೆ ಸಿ.ಟಿ.ರವಿ ಪ್ರಶ್ನೆ