Tag: Zamir Ahmed Khan

  • ನನ್ನ ಮೇಲಿನ ಆರೋಪಗಳೆಲ್ಲವೂ ಸತ್ಯಕ್ಕೆ ದೂರ: ಜಮೀರ್ ಸ್ಪಷ್ಟನೆ

    ನನ್ನ ಮೇಲಿನ ಆರೋಪಗಳೆಲ್ಲವೂ ಸತ್ಯಕ್ಕೆ ದೂರ: ಜಮೀರ್ ಸ್ಪಷ್ಟನೆ

    ಬೆಂಗಳೂರು: ಹುಬ್ಬಳ್ಳಿ ಗಲಭೆಯಲ್ಲಿ ಕಲ್ಲು ತೂರಾಟ ನಡೆಸಿ ಅರೆಸ್ಟ್ ಆದವರ ಪರ ಶಾಸಕ ಜಮೀರ್ ಅಹ್ಮದ್‌ಖಾನ್ ನಿಂತಿದ್ದು, ಗಲಭೆಕೋರರಿಗೆ 5 ಸಾವಿರ ನಗದು ಹಾಗೂ ರಂಜಾನ್ ಫುಡ್‌ಕಿಟ್ ನೀಡಿ ಸಹಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದ್ದಂತೆ, ಶಾಸಕ ಜಮೀರ್ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

    ZAMEER

    ತಮ್ಮ ಮೇಲಿನ ಆರೋಪಗಳಿಗೆ ತೆರೆ ಎಳೆಯಲು ಮುಂದಾದ ಅವರು, ಕಳೆದ ಏಪ್ರಿಲ್ 17ನೇ ತಾರೀಖಿನಂದು ಬೆಂಗಳೂರು ತೊರೆದು ಧಾರ್ಮಿಕ ಯಾತ್ರೆಗಾಗಿ ಮೆಕ್ಕಾಗೆ ಬಂದಿದ್ದೇನೆ. ಈಗ ನನ್ನ ವಿರುದ್ಧ ಮಾಡಲಾಗುತ್ತಿರುವ ಆರೋಪಗಳಿಗೂ ನನಗೂ ಯಾವ ರೀತಿಯ ಸಂಬಂಧವೂ ಇಲ್ಲ. ಈ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಗಲಭೆಕೋರರ ಕುಟುಂಬಕ್ಕೆ ಜಮೀರ್ ಫುಡ್‌ಕಿಟ್ ಹಂಚಿಕೆಗೆ ಬ್ರೇಕ್

    ಇಷ್ಟಕ್ಕೂ ನಡೆದಿದ್ದೇನು?
    ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ನಡೆಸಿದವರಿಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಸಹಾಯ ಮಾಡುತ್ತಿದ್ದಾರೆ. ದೇಗುಲ, ಪೊಲೀಸ್ ಠಾಣೆಗೆ ಕಲ್ಲು ಹೊಡೆದವರಿಗೆ ಜಮೀರ್ ನೆರವು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿತ್ತು.

    ಇಂದು ಮಧ್ಯಾಹ್ನ 3:30ಕ್ಕೆ ಹುಬ್ಬಳ್ಳಿಯಲ್ಲಿ ಹಣ ಹಾಗೂ ಫುಡ್‌ಕಿಟ್ ಹಂಚಿಕೆ ಮಾಡಲಾಗುತ್ತಿದ್ದು, ಕಸಬಾ ಪೇಟೆ ಪೊಲೀಸ್ ಠಾಣೆ ಬಳಿಯ ಮಸ್ತಾನ್ ಷಾ ಶಾದಿ ಮಹಲ್‌ನಲ್ಲಿ ಬೆಂಬಲಿಗರ ಮೂಲಕ ಜಮೀರ್ ಅಹ್ಮದ್ ಸಹಾಯ ಮಾಡಲಿದ್ದರು. ರಂಜಾನ್ ಹಿನ್ನೆಲೆಯಲ್ಲಿ ಮೆಕ್ಕಾದಲ್ಲಿರುವ ಜಮೀರ್ ಅಹ್ಮದ್, ಅಲ್ಲಿಂದಲೇ ಗಲಭೆಕೋರರಿಗೆ ಸಹಾಯಹಸ್ತ ಚಾಚಿದ್ದರು. ಹುಬ್ಬಳ್ಳಿಯ ತಮ್ಮ ಬೆಂಬಲಿಗರ ಮೂಲಕ ರೇಶನ್ ಕಿಟ್ ಹಂಚಿಕೆ ಮಾಡಲಿದ್ದರು. ಈ ಹಿನ್ನೆಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದನ್ನೂ ಓದಿ: ಮತ್ತೆ ಗಲಭೆಕೋರರ ಪರ ನಿಂತ ಜಮೀರ್- ಕಲ್ಲು ಹೊಡೆದವರ ಕುಟುಂಬಕ್ಕೆ 5 ಸಾವಿರ, ಫುಡ್‍ಕಿಟ್

    ಮಾಧ್ಯಮಗಳಲ್ಲಿ ಈ ಕುರಿತು ವರದಿಗಳು ಬಿತ್ತರವಾಗುತ್ತಿದ್ದಂತೆ ಜಮೀರ್ ರೇಷನ್ ಕಿಟ್ ಹಂಚಿಕೆ ಮಾಡದಂತೆ ಸೂಚನೆ ನೀಡಿದ್ದಾರೆ. ಇದರಿಂದಾಗಿ ಬೆಂಬಲಿಗರು ರೇಷನ್ ಕಿಟ್ ಹಂಚಿಕೆ ಕಾರ್ಯಕ್ರಮ ರದ್ದು ಪಡಿಸಿದ್ದಾರೆ ಎಂದು ತಿಳಿದು ಬಂದಿತ್ತು.

    ZAMEER

    ಈ ಕುರಿತು ಪ್ರಕಟಣೆ ನೀಡಿದ್ದ ಜಮೀರ್, ರಂಜಾನ್ ಹಬ್ಬದ ಸಮಯದಲ್ಲಿ ಪವಿತ್ರ ನಮಾಜ್ ವೇಳೆ ತಪ್ಪು ಮಾಡಿರುವವರಿಗೆ ಶಿಕ್ಷೆಯಾಗಲಿ. ಜೊತೆಗೆ ಮತ್ತೊಮ್ಮೆ ತಪ್ಪು ಮಾಡದಂತೆ ಬುದ್ಧಿ ನೀಡಲೆಂದು ಅಲ್ಲಾಹ್ ಹಾಗೂ ದೇವರಲ್ಲಿ ಪ್ರಾರ್ಥಿಸುತ್ತೇನೆ. ನಾನು ಮೆಕ್ಕಾದಲ್ಲಿ ಪವಿತ್ರ ರಂಜಾನ್ ಆಚರಣೆ ಸೇವೆಯಲ್ಲಿ ತೊಡಗಿದ್ದೇನೆ. ಮನೆಯಲ್ಲಿ ದುಡಿಯುವ ಗಂಡಸರು ಇಲ್ಲದ ಹಿನ್ನೆಲೆಯಲ್ಲಿ ತಾಯಂದಿರಿಗೆ ಪುಟ್ಟ ಮಕ್ಕಳಿಗೆ ಸಹಾಯಹಸ್ತ ನೀಡಲಾಗುತ್ತಿದೆ. ಈ ಸಹಾಯ ಹಸ್ತ ಯಾವುದೇ ರೀತಿಯ ಬೇರೆ ಅರ್ಥ ಕಲ್ಪಿಸುವುದು ಬೇಡ. ತಪ್ಪು ಮಾಡಿದವರು ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ನೀಡುವ ಶಿಕ್ಷೆಗೆ ಒಳಪಡಲಿ. ನನ್ನ ಸಹಾಯಹಸ್ತ ಯಾವುದೇ ರೀತಿಯ ತಪ್ಪಿತಸ್ಥರಿಗೆ ಸಹಾಯ ಅಲ್ಲ ಹಾಗೂ ಉತ್ತೇಜನವೂ ಅಲ್ಲ ಎಂದು ಹೇಳಿದ್ದರು.

  • ಇಡಿ ದಾಳಿ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

    ಇಡಿ ದಾಳಿ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

    ಬೆಂಗಳೂರು: ಮಾಜಿ ಸಚಿವ ಜಮೀರ್ ಅಹಮದ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

    ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರತಿಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಐಟಿ, ಇಡಿ ಬಳಸಿಕೊಂಡು ಕಿರುಕುಳ ನೀಡುವ ಬಿಜೆಪಿಯ ವರ್ತನೆ ಖಂಡನೀಯ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಐಎಂಎ ಗೋಲ್ಡ್‌ನಿಂದ 5 ಕೋಟಿ ಮೌಲ್ಯದ ಚಿನ್ನಾಭರಣ ಪಡೆದಿದ್ದ ಶಾಸಕ ಜಮೀರ್!

    ಇಡಿ ದಾಳಿ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎರಡು ವರ್ಷದ ಹಿಂದೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಿದ್ದರು. ಎಲ್ಲದಕ್ಕೂ ಉತ್ತರ ಕೊಟ್ಟಿದ್ದೆ ಎಂದು ಜಮೀರ್ ಹೇಳಿದ್ದರು. ಈಗ ದಾಳಿ ನಡೆಯುವ ಅವಶ್ಯಕತೆ ಇರಲಿಲ್ಲ. ಈಗ ಕಿರುಕುಳ ನೀಡುತ್ತಿರೋದು ಯಾಕೆ? ಈ ಕಿರುಕುಳ ಹೇಗೆ ಇರುತ್ತೆ ನಂಗೂ ಗೊತ್ತಿದೆ. ಈಗ ತೊಂದರೆ ಕೊಡುತ್ತಿರುವುದು ಸರಿ ಇಲ್ಲ. ಯಾರ ಅನುಕೂಲಕ್ಕೆ ಈ ದಾಳಿ ನಡೆದಿದೆ ಗೊತ್ತಿಲ್ಲ ಎಂದರು. ಇದೇ ವೇಳೆ ಮಾಜಿ ಸಚಿವ ರೋಷನ್ ಬೇಗ್ ನಿವಾಸದ ಮೇಲಿನ ಇಡಿ ದಾಳಿಗೆ ಪ್ರತಿಕ್ರಿಯಿಸಲು ಹಿಂದೇಟು ಹಾಕಿದರು. ಇದನ್ನೂ ಓದಿ: ಧರ್ಮ ಒಡೆದು, ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದೀರಾ, ಮುಂದೆಯೂ ಅದೇ ಮಾಡಬೇಡಿ: ಶೃಂಗೇರಿ ಶಾಸಕ ರಾಜೇಗೌಡ

  • ಶಾಸಕ ಜಮೀರ್​​​ಗೆ AICC ವಾರ್ನಿಂಗ್

    ಶಾಸಕ ಜಮೀರ್​​​ಗೆ AICC ವಾರ್ನಿಂಗ್

    ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದ ಜಮೀರ್ ಅಹಮ್ಮದ್ ಖಾನ್ ಗೆ ಬಹಿರಂಗ ಹೇಳಿಕೆ ನೀಡದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಎಚ್ಚರಿಸಿದ್ದಾರೆ ಎಂದು ತಿಳಿದು ಬಂದಿದೆ.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ಬೆನ್ನಲ್ಲೇ ಶಾಸಕ ಜಮೀರ್ ಅಹಮ್ಮದ್ ಖಾನ್ ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಕರೆ ಮಾಡಿದ್ದಾರೆ. ಇಂದು ಬೆಳಗ್ಗೆ ಕರೆ ಮಾಡಿ ಮಾತನಾಡಿದ ಸುರ್ಜೆವಾಲಾ, ಪಕ್ಷದ ಶಿಸ್ತು ಮೀರದಂತೆ ಎಚ್ಚರಿಕೆ ನೀಡಿದ್ದಾರೆ. ಬಹಿರಂಗ ಹೇಳಿಕೆ ಕೊಡದಂತೆ ಜಮೀರ್ ಅಹಮ್ಮದ್ ಖಾನ್ ಗೆ ಸೂಚನೆ ನೀಡಿದ್ದಾರೆ. ಪಕ್ಷದಲ್ಲಿ ಶಿಸ್ತು ಮುಖ್ಯ, ಯಾವ ಕಾರಣಕ್ಕೂ ಬಹಿರಂಗ ಹೇಳಿಕೆ ಕೊಡದಂತೆ ವಾರ್ನಿಂಗ್ ನೀಡಿದ್ದಾರೆ ಎನ್ನಲಾಗಿದೆ.

    ಡಿಕೆ ಶಿವಕುಮಾರ್ ಎಚ್ಚರಿಕೆಗೂ ಬಗ್ಗದೆ ಸಿದ್ದರಾಮಯ್ಯನವರೇ ಮುಂದಿನ ಸಿಎಂ ಎಂದು ಜಮೀರ್ ಅಹಮ್ಮದ್ ಖಾನ್ ಪದೇ ಪದೇ ಹೇಳಿಕೆ ಕೊಡುತ್ತಿದ್ದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲರಿಂದಲೆ ಜಮೀರ್ ಗೆ ಎಚ್ಚರಿಕೆ ರವಾನಿಸುವ ಮೂಲಕ ಜಮೀರ್ ಅಹಮ್ಮದ್ ಖಾನ್ ಹೇಳಿಕೆಗೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

  • ಎಚ್‍ಡಿಕೆ ಸರ್ಕಾರ ಬೀಳಿಸಲು ಯಾರು ಷಡ್ಯಂತ್ರ ಮಾಡ್ತಿಲ್ಲ ಜಮೀರ್ ಅಹಮ್ಮದ್

    ಎಚ್‍ಡಿಕೆ ಸರ್ಕಾರ ಬೀಳಿಸಲು ಯಾರು ಷಡ್ಯಂತ್ರ ಮಾಡ್ತಿಲ್ಲ ಜಮೀರ್ ಅಹಮ್ಮದ್

    ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಉಸ್ತುವಾರಿ ಮಂತ್ರಿ ಆಗಿದ್ದರಿಂದ ಹಾವೇರಿಗೆ ಪ್ರಚಾರಕ್ಕೆ ಬಂದಿದ್ದೇನೆ ಹೊರತು ಎಚ್‍ಡಿಕೆ ಸರ್ಕಾರ ಬೀಳಿಸಲು ಯಾರು ಷಡ್ಯಂತ್ರ ಮಾಡುತ್ತಿಲ್ಲ ಎಂದು ಆಹಾರ ಮತ್ತು ನಾಗರಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.

    ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಗೊಂದಲವನ್ನು ಉಂಟುಮಾಡಿದೆ. ಅವರು ಮುಂದಿನ ಚುನಾವಣೆಯಲ್ಲಿ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದಾರೆ. ಆದ್ರೆ ಅವರೇನು ಕುಮಾರಸ್ವಾಮಿ ಸರ್ಕಾರ ಬೀಳಿಸಿ ಸಿಎಂ ಆಗ್ತಿನಿ ಅಂದಿಲ್ಲ ಎಂದು ಪ್ರತಿಕ್ರಿಯಿಸಿದರು. ಇದನ್ನು ಓದಿ:  ನಾನು ಮತ್ತೆ ಮುಖ್ಯಮಂತ್ರಿ ಆಗ್ತೀನಿ-ಸಿದ್ದರಾಮಯ್ಯ

    ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ನಾಯಕರು, ಯಾವತ್ತಿದ್ದರೂ ಅವರೇ ನಮ್ಮ ನಾಯಕರು. ಅವರ ಯೂರೋಪ್ ಪ್ರವಾಸ ಪೂರ್ವ ನಿಗದಿಯಾಗಿದ್ದು, ಅದರೆಲ್ಲೇನು ವಿಶೇಷತೆ ಇಲ್ಲ. ಅವರ ಜೊತೆ ಸಚಿವರು ಹೋಗುವ ವಿಚಾರಕ್ಕೆ ಸಂಬಂಧಪಟ್ಟಂತೆ ನನ್ನ ಕರೆದರೆ ನಾನು ಹೋಗುತ್ತಿದ್ದೆ. ಆದರೆ ನನ್ನ ಕರೆದಿಲ್ಲ ಹೀಗಾಗಿ ನಾನು ಹೋಗುತ್ತಿಲ್ಲ ಎಂದು ತಿಳಿಸಿದರು.ಇದನ್ನು ಓದಿ:ನಾನು ಸಿಎಂ ಆಗ್ಬೇಕು ಅನ್ನೋದು ಜನರ ಇಚ್ಛೆ, ನನ್ನ ಆಸೆ ಅಲ್ಲ: ಸಿದ್ದರಾಮಯ್ಯ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕ್ಷೇತ್ರದ ಜನ ನನ್ನನ್ನ ಮನೆ ಮಗ ಅಂತಾ ಆಶೀರ್ವದಿಸಿದ್ದಾರೆ: ಜಮೀರ್ ಅಹ್ಮದ್

    ಕ್ಷೇತ್ರದ ಜನ ನನ್ನನ್ನ ಮನೆ ಮಗ ಅಂತಾ ಆಶೀರ್ವದಿಸಿದ್ದಾರೆ: ಜಮೀರ್ ಅಹ್ಮದ್

    ಬೆಂಗಳೂರು: ಕ್ಷೇತ್ರದ ಜನ ನನ್ನನ್ನು ಮನೆ ಮಗ ಅಂತಾ ಆಶೀರ್ವದಿಸಿ ಗೆಲ್ಲಿಸಿದ್ದಾರೆ ಎಂದು ಚಾಮರಾಜಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

    ಕ್ಷೇತ್ರದ ಜನ ನನ್ನನ್ನು ರಾಜಕೀಯ ವ್ಯಕ್ತಿ ಎಂದು ಭಾವಿಸಿಲ್ಲ. ಮುಂದಿನ ದಿನಗಳಲ್ಲಿ ಅವರ ಸೇವೆ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸುತ್ತೇನೆ. ಮುಂಬರುವ ಐದು ವರ್ಷಗಳಲ್ಲಿ ಕ್ಷೇತ್ರಕ್ಕೆ ಇನ್ನು ಅನೇಕ ಅಭಿವೃದ್ಧಿ ಕೆಲಸ ಕಾರ್ಯ ಮಾಡುತ್ತೇನೆ ಅಂತಾ ಅಂದ್ರು.

    ನನ್ನ ಮತ್ತು ಕುಮಾರಸ್ವಾಮಿ ಅವರ ನಡುವೆ ವ್ಯತ್ಯಾಸವಿದೆ. ನಾನಾಗಿಯೇ ಜೆಡಿಎಸ್ ಬಿಟ್ಟಿಲ್ಲ, ನನ್ನನ್ನು ಪಕ್ಷ ಬಿಡುವಂತೆ ಮಾಡಲಾಯಿತು. ಬಿಜೆಪಿ ಕೋಮವಾದಿ ಪಕ್ಷವಾಗಿದ್ದು, ಜೆಡಿಎಸ್ ಸೆಕ್ಯೂಲರ್ ಆಗಿದೆ. ಇಂದಿಗೂ ನಾನು ಜೆಡಿಎಸ್ ಬಿಟ್ಟಿದ್ದನ್ನು ಇಂದಿಗೂ ಸಮರ್ಥಿಸಿಕೊಳ್ಳುತ್ತೇನೆ ಅಂತಾ ಸ್ಪಷ್ಟಪಡಿಸಿದ್ರು.