Tag: Zebra

  • ಮೋಷನ್ ಪೋಸ್ಟರ್ ಸತ್ಯದೇವ್ ಜೊತೆ ಡಾಲಿ: ದೀಪಾವಳಿಗೆ ‘ಜೀಬ್ರಾ’

    ಮೋಷನ್ ಪೋಸ್ಟರ್ ಸತ್ಯದೇವ್ ಜೊತೆ ಡಾಲಿ: ದೀಪಾವಳಿಗೆ ‘ಜೀಬ್ರಾ’

    ಟರಾಕ್ಷಸ ಡಾಲಿ ಧನಂಜಯ್ (Dhananjay) ಹಾಗೂ ತೆಲುಗಿನ ಪ್ರತಿಭಾನ್ವಿತ ನಾಯಕ ಸತ್ಯದೇವ್ (Satyadev) ನಟನೆಯ ಬಹುನಿರೀಕ್ಷಿತ ಮಲ್ಟಿಸ್ಟಾರ್ ಸಿನಿಮಾ ಜೀಬ್ರಾ (Zebra). ಫಸ್ಟ್ ಲುಕ್ ಮೂಲಕ ಗಮನಸೆಳೆದಿದ್ದ ಜೀಬ್ರಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ನಲ್ಲಿ ((Motion Poster)) ಸತ್ಯರಾಜ್, ಸತ್ಯ ಅಕ್ಕಲಾ, ಜೆನ್ನಿಫರ್ ಪಿಕ್ಕಿನಾಟೊ, ಸುನಿಲ್, ಪ್ರಿಯಾ ಭವಾನಿ ಶಂಕರ್, ಡಾಲಿ ಧನಂಜಯ್ ಮತ್ತು ಸತ್ಯ ದೇವ್ ಅವರನ್ನು ಪರಿಚಯಿಸಲಾಗಿದೆ.

    ಮೋಷನ್ ಪೋಸ್ಟರ್ ನಲ್ಲಿ ಚೆಸ್ ಆಟ, ಕಾಯಿನ್ ಫ್ಲಿಪ್ಪಿಂಗ್, ಕರೆನ್ಸಿ ನೋಟುಗಳು ಮತ್ತು ಫ್ಲೈಓವರ್ ನಿಂದ ಕಾರ್ ಇಳಿಯುವ ದೃಶ್ಯಗಳು ಆಕರ್ಷಕವಾಗಿವೆ. ಬಹಳ ಕ್ರಿಯೇಟಿವಿಟಿಯಾಗಿ ಮೋಷನ್ ಪೋಸ್ಟರ್ ನ್ನು ಚಿತ್ರೀಕರಿಸಲಾಗಿದೆ. ಜೀಬ್ರಾ ಸಿನಿಮಾವನ್ನ ಈಶ್ವರ್ ಕಾರ್ತಿಕ್ ಡೈರೆಕ್ಷನ್ ಮಾಡಿದ್ದಾರೆ. ಕ್ರೈಂ ಮತ್ತು ಥ್ರಿಲ್ಲರ್ ಕಂಟೆಂಟ್ ಇರೋ ಚಿತ್ರ ಇದಾಗಿದೆ.

    ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಮತ್ತು ಓಲ್ಡ್ ಟೌನ್ ಪಿಕ್ಚರ್ಸ್ ಬ್ಯಾನರ್‌ಗಳ ಅಡಿಯಲ್ಲಿ ಎಸ್‌ಎನ್ ರೆಡ್ಡಿ, ಎಸ್ ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡಲಾಗಿದೆ. ಕೆಜಿಎಫ್ ಮತ್ತು ಸಲಾರ್ ಖ್ಯಾತಿಯ ರವಿ ಬಸ್ರೂರ್ ಚಿತ್ರಕ್ಕೆ ಸಂಗೀತ ನೀಡಿದ್ದು, ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣವಿದೆ. ಎಸ್ ಶ್ರೀಲಕ್ಷ್ಮಿ ರೆಡ್ಡಿ ಸಹ ನಿರ್ಮಾಪಕಿ. ಅನಿಲ್ ಕ್ರಿಶ್ ಸಂಕಲನ,ಮೀರಾಖ್ ಸಂಭಾಷಣೆ ಇದೆ. ಅಶ್ವಿನಿ ಮುಲ್ಪುರಿ, ಗಂಗಾಧರ ಬೊಮ್ಮರಾಜು ಕಾಸ್ಟ್ಯೂಮ್ ಡಿಸೈನರ್  ಆಗಿ ದುಡಿದಿದ್ದಾರೆ. ಮೋಷನ್ ಪೋಸ್ಟರ್ ಜೊತೆಗೆ ಚಿತ್ರತಂಡ ಬಿಡುಗಡೆ ದಿನಾಂಕ ಕೂಡ ಘೋಷಣೆ ಮಾಡಿದೆ. ಬೆಳಕಿನ ಹಬ್ಬ ದೀಪಾವಳಿಗೆ ಜೀಬ್ರಾ ತೆರೆಗೆ ಬರಲಿದೆ.

  • ಜೀಬ್ರಾ ತಂಡದಿಂದ ʻಸತ್ಯದೇವ್ʼ ಫಸ್ಟ್ ಲುಕ್:  ಡಾಲಿ ಧನಂಜಯ್ ನಟನೆ

    ಜೀಬ್ರಾ ತಂಡದಿಂದ ʻಸತ್ಯದೇವ್ʼ ಫಸ್ಟ್ ಲುಕ್: ಡಾಲಿ ಧನಂಜಯ್ ನಟನೆ

    ಶ್ವರ್ ಕಾರ್ತಿಕ್ ನಿರ್ದೇಶನದ ಬಹುತಾರಾಗಣದ ಚಿತ್ರ `ಜೀಬ್ರಾ’ (Zebra) ಅನೌನ್ಸ್‌ ಮಾಡಿದ್ದು ಗೊತ್ತೇ ಇದೆ.  ಈ ಸಿನಿಮಾಗೆ ಸತ್ಯದೇವ್ (Satyadev)  ನಾಯಕನಾಗಿ ನಟಿಸುತ್ತಿದ್ದಾರೆ. ಮಾತ್ರವಲ್ಲ  ಸ್ಯಾಂಡಲ್‌ವುಡ್‌ ಸ್ಟಾರ್ ಡಾಲಿ ಧನಂಜಯ (Dolly Dhananjay) ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವುದು ವಿಶೇಷ. ಡಾಲಿ ಧನಂಜಯ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಈ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ, ಸತ್ಯದೇವ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಫಸ್ಟ್ ಲುಕ್ ರಿವೀಲ್‌ ಮಾಡಿದೆ.  ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಜೊತೆಗೆ ಸತ್ಯ ದೇವ್ ಸಹ ಮುಖ್ಯ ಪಾತ್ರದಲ್ಲಿರಲಿದ್ದಾರೆ.  ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಮತ್ತು ಓಲ್ಡ್ ಟೌನ್ ಪಿಕ್ಚರ್ಸ್ ಬ್ಯಾನರ್‌ಗಳ ಅಡಿಯಲ್ಲಿ ಎಸ್‌ಎನ್ ರೆಡ್ಡಿ, ಎಸ್ ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿದ್ದಾರೆ.  ಇದೀಗ ಜೀಬ್ರಾ ತಂಡ ಫಸ್ಟ್‌ ಲುಕ್‌ ಅನಾವರಣಗೊಳಿಸಿದೆ.

    ಪೋಸ್ಟರ್‌ನಲ್ಲಿ ಸತ್ಯದೇವ್ ಅತ್ಯಂತ  ಸ್ಟೈಲಿಶ್ ಅವತಾರ ತಾಳಿದ್ದಾರೆ. ಸೂಟ್‌ ಧರಿಸಿ ಅತ್ಯಂತ ಖಡಕ್‌ ಲುಕ್‌ನಲ್ಲಿ ಕಂಡಿದ್ದಾರೆ. ತುಂಬಾ ಗಂಭೀರವಾಗಿ ಕಂಡಿದ್ದಾರೆ ಸತ್ಯದೇವ್‌.  ಭುಜದ ಮೇಲೆ ಚೀಲವನ್ನು ಹೊತ್ತುಕೊಂಡು ಬಹಳ ಗಭೀರದಿಂದ ನಡೆಯುತ್ತಿರುವ ಲುಕ್‌ನಲ್ಲಿ ಕಂಡಿದ್ದಾರೆ.  ಇನ್ನೊಂದು ಕೈಯಲ್ಲಿ ಪೆನ್ನು ಇದೆ. ಪೋಸ್ಟರ್‌ ಬ್ಯಾಕ್‌ರೌಂಡ್‌ನಲ್ಲಿ ನೋಟುಗಳು ಚೆಲ್ಲಾಪಿಲ್ಲಿಯಾಗಿವೆ.  ʻಜೀಬ್ರಾ’ ಸಿನಿಮಾದಲ್ಲಿ ಡಾಲಿ ಧನಂಜಯ್ ಜೊತೆಗೆ ಸತ್ಯದೇವ್, ನಟಿ ಅಮೃತಾ ಐಯ್ಯಂಗಾರ್, ಪ್ರಿಯಾ ಭವಾನಿ ಶಂಕರ್, ತೆಲುಗಿನ ಜನಪ್ರಿಯ ಹಾಸ್ಯನಟ ಸುನಿಲ್, ಕಟ್ಟಪ್ಪ ಖ್ಯಾತಿಯ ಸತ್ಯರಾಜ್, ಊರ್ವಶಿ ರೌಟೆಲ್ಲಾ ಇನ್ನೂ ಕೆಲವು ಪ್ರತಿಭಾವಂತ ನಟರು ಇರಲಿದ್ದಾರೆ. ಸಿನಿಮಾವನ್ನು ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡಿದ್ದು, ಕತೆ-ಚಿತ್ರಕತೆ ಅವರದ್ದೇ.

     

    ʻಲಕ್ ಫೇವರ್ಸ್ ದಿ ಬ್ರೇವ್ʼ ಎಂದು ಅಡಿಬರಹ ಕೂಡ ಇದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.  ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಆಗುತ್ತಿವೆ.   ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು  ಚಿತ್ರತಂಡ ಘೋಷಿಸಲಿದೆ. ಈಶ್ವರ್ ಕಾರ್ತಿಕ್ ನಿರ್ದೇಶನದ ಈ ಕ್ರೈಮ್ ಆಕ್ಷನ್ ಎಂಟರ್‌ಟೈನರ್‌ನಲ್ಲಿ ಪ್ರಿಯಾ ಭವಾನಿ ಶಂಕರ್ ಮತ್ತು ಜೆನ್ನಿಫರ್ ಪಿಕ್ಕಿನಾಟೊ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಸತ್ಯ ಅಕಾಲ ಮತ್ತು ಸುನಿಲ್ ಇತರ ಪ್ರಮುಖ ಪಾತ್ರಧಾರಿಗಳು. ಕೆಜಿಎಫ್ ಮತ್ತು ಸಲಾರ್ ಖ್ಯಾತಿಯ ರವಿ ಬಸ್ರೂರ್ ಚಿತ್ರಕ್ಕೆ ಸಂಗೀತ ನೀಡಿದ್ದು, ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣವಿದೆ. ಎಸ್ ಶ್ರೀಲಕ್ಷ್ಮಿ ರೆಡ್ಡಿ ಸಹ ನಿರ್ಮಾಪಕಿ. ಅನಿಲ್ ಕ್ರಿಶ್ ಸಂಕಲನ,ಮೀರಾಖ್  ಸಂಭಾಷಣೆ  ಇದೆ.  ಅಶ್ವಿನಿ ಮುಲ್ಪುರಿ, ಗಂಗಾಧರ ಬೊಮ್ಮರಾಜು  ಕಾಸ್ಟ್ಯೂಮ್ ಡಿಸೈನರ್ ಆಗಿದ್ದಾರೆ.  ಚಿತ್ರ   ಸತ್ಯದೇವ್, ಡಾಲಿ ಧನಂಜಯ, ಸತ್ಯರಾಜ್, ಪ್ರಿಯಾ ಭವಾನಿ ಶಂಕರ್, ಜೆನ್ನಿಫರ್ ಪಿಕ್ಕಿನಾಟೊ, ಸತ್ಯ ಅಕಾಲ, ಸುನಿಲ್ ಹೀಗೆ ಬಹು ತಾರಾಗಣ ಹೊಂದಿದೆ.

  • ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನ

    ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನ

    ಆನೇಕಲ್: ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ (Bannerghatta) ಜೈವಿಕ ಉದ್ಯಾನವನ ವನ್ಯ ಜೀವಿಗಳ ತಾಣವಾಗಿರುವುದರಿಂದ ರಾಷ್ಟ್ರ ಮಟ್ಟದಲ್ಲಿ ಪ್ರಖ್ಯಾತಿ ಗಳಿಸಿದೆ. ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸಿ ಇಲ್ಲಿನ ವನ್ಯ ಜೀವಿಗಳನ್ನು ಕಂಡು ಸಂತಸಗೊಳ್ಳುತ್ತಾರೆ. ಇದೀಗ ಪಾರ್ಕ್‌ಗೆ ಮತ್ತೋರ್ವ ಹೊಸ ಅತಿಥಿ ಆಗಮನವಾಗಿದ್ದು, ಪ್ರಾಣಿ ಪ್ರಿಯರನ್ನು ಮತ್ತಷ್ಟು ಆಕರ್ಷಣೆಗೊಳಿಸುತ್ತಿದೆ.

    ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತಾ, ತನ್ನ ಮುದ್ದಾದ ಕಣ್ಣಿನ ನೋಟದಿಂದ ಎಲ್ಲರನ್ನೂ ತನ್ನತ್ತ ಆಕರ್ಷಿಸುತ್ತಿರುವ ಮರಿ ಜೀಬ್ರಾ (Zebra) ಬನ್ನೇರುಘಟ್ಟ ಜೈವಿಕ ಉದ್ಯಾನವನದ ಹೊಸ ಅತಿಥಿ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ (Park) ಕಬಿನಿ ಎಂಬ ಜೀಬ್ರಾ ಮುದ್ದಾರಿ ಮರಿಗೆ ಜನ್ಮ ನೀಡಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ಕಬಿನಿ ಹಾಗೂ ಹರಿಶ್ಚಂದ್ರ ದಂಪತಿಗೆ ಮರಿ ಜನಿಸಿದೆ. ಸುಮಾರು ಮೂರರಿಂದ ನಾಲ್ಕು ವರ್ಷ ವಯಸ್ಸಿನ ತಾಯಿ ಕಬಿನಿ ಮೊದಲ ಬಾರಿಗೆ ಗರ್ಭಧರಿಸಿ ಮುದ್ದಾದ ಮರಿ ಜೀಬ್ರಾಗೆ ಜನ್ಮ ನೀಡಿದ್ದು, ಮರಿ ಜೀಬ್ರಾ ಸೇರ್ಪಡೆಯೊಂದಿಗೆ, ಮೃಗಾಲಯದಲ್ಲಿ ಒಟ್ಟು ಜೀಬ್ರಾಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ತಾಯಿ ಮತ್ತು ಮರಿ ಜೀಬ್ರಾ ಎರಡೂ ಆರೋಗ್ಯಕರವಾಗಿದ್ದು, ಪಾರ್ಕ್‌ನ ಪಶುವೈದ್ಯಕೀಯ ತಂಡ ಮತ್ತು ಪ್ರಾಣಿಪಾಲಕರು ಹೆಚ್ಚಿನ ಆರೈಕೆಯಿಂದ ನೋಡಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವೇ ದಿನಗಳಲ್ಲಿ ಪಾರ್ಕ್‌ನಲ್ಲಿ ತಾಯಿ ಜೀಬ್ರಾದೊಂದಿಗೆ ಮರಿ ಜೀಬ್ರಾವನ್ನು ಪ್ರವಾಸಿಗರು ಕಾಣಬಹುದಾಗಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯ ನಿರ್ವಾಹಕ ಅಧಿಕಾರಿ ಸೂರ್ಯ ಸೇನ್ ತಿಳಿಸಿದಿದ್ದಾರೆ. ಇದನ್ನೂ ಓದಿ:  ಸೆಪ್ಟೆಂಬರ್ 2ಕ್ಕೆ ‘ಆದಿತ್ಯ-ಎಲ್1’ ಉಡಾವಣೆ – ಏನಿದರ ವಿಶೇಷ?

    ಕಬಿನಿ ಜೀಬ್ರಾಗೆ ಇದು ಮೊದಲನೇ ಮರಿಯಾಗಿದ್ದು, ತಾಯಿ-ಮಗು ಆರೋಗ್ಯಕರವಾಗಿದೆ. ತಾಯಿ ಹಾಗೂ ಮರಿ ಜೀಬ್ರಾವನ್ನು ವಿಶೇಷ ಕಾಳಜಿ ಇಟ್ಟು ನೋಡಿಕೊಳ್ಳಲಾಗುತ್ತಿದೆ. ಮರಿ ಜೀಬ್ರಾಗೆ ತಾಯಿ ಕಬಿನಿ ಹೆಚ್ಚಿನ ಹಾಲು ನೀಡಬೇಕಾಗಿರುವ ಹಿನ್ನೆಲೆ ಪೋಷಕಾಂಶಗಳ ಹಣ್ಣುಹಂಪಲನ್ನು ತಾಯಿ ಜೀಬ್ರಾಗೆ ನೀಡಲಾಗುತ್ತಿದೆ. ಆದಷ್ಟು ಬೇಗ ಮರಿ ಜೀಬ್ರಾವನ್ನು ಪ್ರವಾಸಿಗರ ವೀಕ್ಷಣೆಗೆ ಅನುವು ಮಾಡಿಕೊಟ್ಟರೆ ಪಾರ್ಕ್‌ಗೆ ಬರುವ ಮಕ್ಕಳಿಗೆ ಮುದ್ದಾದ ಮರಿ ಜೀಬ್ರಾವನ್ನು ನೋಡಲು ಖುಷಿಯಾಗುತ್ತದೆ. ಜೊತೆಗೆ ಮುಂದಿನ ದಿನಗಳಲ್ಲಿ ಪಾರ್ಕ್ ನಲ್ಲಿ ಮರಿ ಜೀಬ್ರಾ ಒಂದು ರೀತಿಯ ಸಂತಸದ ಜೊತೆಗೆ ಪ್ರಾಣಿ-ಪಕ್ಷಿ ಪ್ರಿಯರ ಆಕರ್ಷಣೀಯವಾಗಲಿದೆ ಎಂದು ಪ್ರವಾಸಿಗರು ಸಂತಸ ಹಂಚಿಕೊಂಡರು. ಇದನ್ನೂ ಓದಿ: ದೇಶದಲ್ಲೇ ಮೊದಲ ಲಿಥಿಯಂ ಬ್ಯಾಟರಿ ಘಟಕ ಸ್ಥಾಪನೆಗೆ ಡಿಕೆಶಿ ಶಂಕುಸ್ಥಾಪನೆ

    ಒಟ್ಟಾರೆ ವನ್ಯ ಜೀವಿಗಳ ಪ್ರವಾಸಿ ತಾಣವಾದ ಬನ್ನೇರುಘಟ್ಟ ಜೈವಿಕ ಉದ್ಯಾನವನ ದಿನೇ ದಿನೇ ತನ್ನ ಖ್ಯಾತಿಯನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಇದೀಗ ಇದರ ಸೊಬಗನ್ನು ಮರಿ ಜೀಬ್ರಾ ಮತ್ತಷ್ಟು ಹೆಚ್ಚಿಸುವಂತೆ ಮಾಡಿದೆ. ಇದನ್ನೂ ಓದಿ: ಎರಡೂವರೆ ಗಂಟೆಯಲ್ಲಿ 9 ಎಕರೆ ಜಮೀನು ಹದ: ಜೋಡೆತ್ತುಗಳಿಗೆ ಮೆಚ್ಚುಗೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಾಲಿ ಹುಟ್ಟುಹಬ್ಬಕ್ಕೆ ‘ಜೀಬ್ರಾ’ ತಂಡದಿಂದ ಫಸ್ಟ್ ಲುಕ್

    ಡಾಲಿ ಹುಟ್ಟುಹಬ್ಬಕ್ಕೆ ‘ಜೀಬ್ರಾ’ ತಂಡದಿಂದ ಫಸ್ಟ್ ಲುಕ್

    ನ್ನಡದ ಹೆಸರಾಂತ ನಟ ಧನಂಜಯ್ (Dolly Dhananjay) ಅವರ ಹುಟ್ಟು ಹಬ್ಬಕ್ಕೆ (Birthday) ಅನೇಕರು ಶುಭಾಶಯಗಳನ್ನು ತಿಳಿಸಿದ್ದಾರೆ. ಜೊತೆಗೆ ಡಾಲಿ ನಟಿಸುತ್ತಿರುವ ಚಿತ್ರಗಳ ಟೀಸರ್, ಫಸ್ಟ್ ಲುಕ್, ಸಿನಿಮಾ ಟೈಟಲ್ ಬಿಡುಗಡೆಯಾಗಿವೆ. ಆ ಸಾಲುಗಳಿಗೆ ಹೊಸ ಸೇರ್ಪಡೇ ಜೀಬ್ರಾ (Zebra) ಟೀಮ್. ಈ ಸಿನಿಮಾ ಟೀಮ್ ಕೂಡ ಡಾಲಿ ಹುಟ್ಟು ಹಬ್ಬಕ್ಕೆ ವಿಶೇಷ ಕೊಡುಗೆಯೊಂದನ್ನು ನೀಡಿದೆ.

    ಜೀಬ್ರಾ ಮಲ್ಟಿ ಸ್ಟಾರರ್ ಸಿನಿಮಾ. ಈ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲಿದ್ದಾರೆ ಡಾಲಿ ಧನಂಜಯ. ಈಶ್ವರ್ ಕಾರ್ತಿಕ್ (Ishwar Karthik) ಸಾರಥ್ಯದಲ್ಲಿ  ಮೂಡಿ ಬರುತ್ತಿರುವ ಹೊಸ ಸಿನಿಮಾ ಇದಾಗಿದ್ದು, ತಮಿಳು ನಿರ್ಮಾಣ ಸಂಸ್ಥೆಯಲ್ಲಿ ಸಿನಿಮಾ ತಯಾರಾಗುತ್ತಿದೆ. ಈ ಸಿನಿಮಾದ ಧನಂಜಯ್ ಅವರ ಫಸ್ಟ್ ಲುಕ್ ಇಂದು ಬಿಡುಗಡೆಯಾಗಿದೆ.

     

    ಜೀಬ್ರಾ ಸಿನಿಮಾಗೆ ರವಿ ಬಸರೂರು ಸಂಗೀತ ನೀಡುತ್ತಿದ್ದಾರೆ. ಈಗಾಗಲೇ ಶೇಕಡಾ 90ರಷ್ಟು ಚಿತ್ರೀಕರಣವನ್ನೂ ಸಿನಿಮಾ ಟೀಮ್  ಮುಗಿಸಿದೆ. ರಿಲೀಸ್ ಗೂ ಈ ಸಿನಿಮಾ ಸಿದ್ದವಾಗುತ್ತಿದ್ದು, ಈ ಚಿತ್ರದಲ್ಲಿ ಧನಂಜಯ್ ವಿಶೇಷ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಆ ಪಾತ್ರದ ಸಣ್ಣ ಸುಳಿವು ಎನ್ನುವಂತಿದೆ ಫಸ್ಟ್ ಲುಕ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಾಲಿ ಧನಂಜಯ್ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್

    ಡಾಲಿ ಧನಂಜಯ್ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್

    ಡಾಲಿ ಧನಂಜಯ್ (Dhananjay) ಮತ್ತು ತೆಲುಗಿನ ಸತ್ಯದೇವ್ ಜೊತೆಯಾಗಿ ನಟಿಸುತ್ತಿರುವ, ಪ್ಯಾನ್ ಇಂಡಿಯಾ ಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿದೆ. ಚಿತ್ರಕ್ಕೆ ‘ಜೀಬ್ರಾ’ (Zebra) ಎಂಬ ಹೆಸರನ್ನು ಇಡಲಾಗಿದೆ. ಓಲ್ಡ್ಟೌನ್ ಪಿಕ್ಚರ್ಸ್ ಎಲ್ಎಲ್ಪಿ ಮತ್ತು ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ನಿರ್ಮಿಸುತ್ತಿರುವ ಈ ಮಲ್ಟಿಸ್ಟಾರರ್ ಚಿತ್ರವನ್ನು ‘ಪೆಂಗ್ವಿನ್’ ಖ್ಯಾತಿಯ ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ 50 ದಿನಗಳ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಬಾಕಿ ಉಳಿದಿರುವ ಚಿತ್ರೀಕರಣವನ್ನು ಹೈದರಾಬಾದ್, ಕೊಲ್ಕತ್ತಾ, ಮುಂಬೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

    ‘ಜೀಬ್ರಾ’ ಚಿತ್ರತಂಡಕ್ಕೆ ಇದೀಗ ‘ಕೆಜಿಎಫ್ 1 ಮತ್ತು 2’ ಮುಂತಾದ ಚಿತ್ರಗಳ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಆಗಮನವಾಗಿದೆ. ಇತ್ತೀಚೆಗಷ್ಟೇ ಅಜಯ್ ದೇವಗನ್ ನಿರ್ದೇಶನದ ‘ಭೋಲಾ’ ಚಿತ್ರಕ್ಕೆ ಹಿನ್ನೆಲೆ ಸಂಗೀತ ಸಂಯೋಜಿಸಿರುವ ರವಿ ಬಸ್ರೂರು, ಇದೀಗ ಜೀಬ್ರಾ ಚಿತ್ರಕ್ಕೂ ಸಂಗೀತ ಸಂಯೋಜಿಸುತ್ತಿದ್ದಾರೆ.

    ಇದನ್ನೂ ಓದಿ: ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆಗೆ ಸಾಕ್ಷಿಯಾದ ಸೆಲೆಬ್ರಿಟಿಗಳು

    ಚಿತ್ರತಂಡಕ್ಕೆ  ರವಿ ಬಸ್ರೂರು ಸೇರ್ಪಡೆಯಾಗಿರುವ ವಿಷಯ ಕುರಿತು ಮಾತನಾಡಿರುವ ನಿರ್ಮಾಪಕರಾದ ಬಾಲಸುಂದರಂ ಮತ್ತು ಪದ್ಮಜಾ ರೆಡ್ಡಿ, ‘ರವಿ ಬಸ್ರೂರು ಅವರ ಸಂಗೀತ ಮತ್ತು ಹಿನ್ನೆಲೆ ಸಂಗೀತವು ಈ ಚಿತ್ರದ ಹೈಲೈಟ್ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಅವರು ಚಿತ್ರದ ಆತ್ಮವನ್ನು ತಮ್ಮ ಸಂಗೀತದ ಮೂಲಕ ಅದ್ಭುತವಾಗಿ ಎತ್ತಿಹಿಡಿಯಲಿದ್ದಾರೆ’ ಎಂದು ಹೇಳಿದ್ದಾರೆ. ‘ಜೀಬ್ರಾ’ ಚಿತ್ರದಲ್ಲಿ ಧನಂಜಯ ಮತ್ತು ಸತ್ಯದೇವ್ (Satyadev) ಜೊತೆಗೆ ‘ಕಟ್ಟಪ್ಪ’ ಖ್ಯಾತಿಯ ಸತ್ಯರಾಜ್, ಸುನೀಲ್ ಮುಂತಾದವರು ನಟಿಸುತ್ತಿದ್ದಾರೆ. ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣ ಮತ್ತು ಅನಿಲ್ ಕ್ರಿಶ್ ಅವರ ಸಂಕಲನ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಸ್ರೇಲ್‍ನಿಂದ ತಂದಿದ್ದ ಜೀಬ್ರಾ ಬನ್ನೇರುಘಟ್ಟದಲ್ಲಿ ಸಾವು

    ಇಸ್ರೇಲ್‍ನಿಂದ ತಂದಿದ್ದ ಜೀಬ್ರಾ ಬನ್ನೇರುಘಟ್ಟದಲ್ಲಿ ಸಾವು

    ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಗಂಡು ಜೀಬ್ರಾ ಏಕಾಏಕಿ ಮೃತಪಟ್ಟಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

    ಇಸ್ರೇಲ್ ನಿಂದ ಪ್ರಾಣಿಯ ವಿನಿಮಯ ಒಪ್ಪಂದದ ಅಡಿಯಲ್ಲಿ 4 ವರ್ಷಗಳ ಹಿಂದೆ ಎರಡು ಹೆಣ್ಣು, ಎರಡು ಗಂಡು ಜೀಬ್ರಾಗಳನ್ನು ತರಲಾಗಿತ್ತು. ಈ ತಂಡದಲ್ಲಿ ಇದ್ದ ಗಂಡು ಜೀಬ್ರಾ ಸಾವನ್ನಪ್ಪಿರುವುದಕ್ಕೆ ಪ್ರಾಣಿ ಪ್ರೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಇಸ್ರೇಲ್ ನಿಂದ ತಂದಿದ್ದ ಜೀಬ್ರಾಗಳಲ್ಲಿ ಕಳೆದ ವರ್ಷವಷ್ಟೇ ಗರ್ಭಿಣಿಯಾಗಿದ್ದ ಜೀಬ್ರಾವೊಂದು ಗಿಡ ನೆಡಲು ತೆಗೆಯಲಾಗಿದ್ದ ಗುಂಡಿಗೆ ಬಿದ್ದು ಸಾವನ್ನಪ್ಪಿತ್ತು. ಆದಾದ ಒಂದು ವರ್ಷದ ಮತ್ತೊಂದು ಜೀಬ್ರಾ ಸಾವನ್ನಪ್ಪಿದೆ. ಉದ್ಯಾನವನದ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಅಂದು ಜೀಬ್ರಾ ಮೃತಪಟ್ಟಿತ್ತು. ಈ ಘಟನೆ ಮಾಸುವ ಮುನ್ನವೇ ಈಗ ಮತ್ತೊಂದು ಜೀಬ್ರಾ ಸಾವನ್ನಪ್ಪಿದೆ.

    ಜೀಬ್ರಾ ಸಾವಿನ ಮಾಹಿತಿಗಾಗಿ ಮರಣೋತ್ತರ ಪರೀಕ್ಷೆ ಯನ್ನು ಉದ್ಯಾನವನದ ವೈದ್ಯರ ತಂಡ ಕೈಗೊಂಡಿದ್ದು, ಇದೀಗ ಉದ್ಯಾನವನದಲ್ಲಿ ವಿದೇಶದಿಂದ ತರಲಾಗಿರುವ ನಾಲ್ಕು ಜೀಬ್ರಾಗಳಲ್ಲಿ ಕೇವಲ 2 ಜೀಬ್ರಾಗಳು ಮಾತ್ರ ಉಳಿದಿವೆ.

    ಜೀಬ್ರಾ ಬಂದ ಆರಂಭದಲ್ಲಿ ಇವುಗಳನ್ನು ಪ್ರತ್ಯೇಕವಾಗಿ ಇರಿಸಿ ನೋಡಲಾಗಿತ್ತು. ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡ ಬಳಿಕವೇ ಪ್ರವಾಸಿಗರ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು.