Tag: Zika virus

  • Zika virus | ರಾಜ್ಯದಲ್ಲಿ ಝಿಕಾ ವೈರಸ್‌ಗೆ ಮೊದಲ ಬಲಿ – ಬೆಂಗಳೂರಲ್ಲೂ ಹೈ ಅಲರ್ಟ್‌

    Zika virus | ರಾಜ್ಯದಲ್ಲಿ ಝಿಕಾ ವೈರಸ್‌ಗೆ ಮೊದಲ ಬಲಿ – ಬೆಂಗಳೂರಲ್ಲೂ ಹೈ ಅಲರ್ಟ್‌

    ಬೆಂಗಳೂರು: ರಾಜ್ಯದಲ್ಲಿ ಝಿಕಾ ವೈರಸ್‌ಗೆ  (Zika virus) ಮೊದಲ ಬಲಿಯಾಗಿದೆ. ಶಿವಮೊಗ್ಗದ (Shivamogga) ಮೂಲದ 73 ವರ್ಷದ ವ್ಯಕ್ತಿ ಝಿಕಾ ವೈರಸ್‌ಗೆ ಬಲಿಯಾಗಿದ್ದಾರೆ.

    ಕಳೆದ ಜೂನ್ 24ರಂದು ವ್ಯಕ್ತಿಗೆ ಝಿಕಾ ವೈರಸ್ ಕಾಣಿಸಿಕೊಂಡಿದ್ದು, ಟೆಸ್ಟ್ ಮಾಡಿಸಿದಾಗ ವೈರಸ್ ಪತ್ತೆಯಾಗಿತ್ತು. ಈವರೆಗೆ ರಾಜ್ಯದಲ್ಲಿ ಒಟ್ಟು 9 ಝಿಕಾ ವೈರಸ್ ಕೇಸ್‌ಗಳು ಪತ್ತೆಯಾಗಿವೆ. ಈ ಪೈಕಿ ಶಿವಮೊಗ್ಗದಲ್ಲಿ ಮೂರು ಹಾಗೂ ಬೆಂಗಳೂರಲ್ಲಿ (Bengaluru) 6 ಕೇಸ್‌ಗಳು ಪತ್ತೆಯಾಗಿವೆ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ – 30 ನಿಮಿಷದ ಮಳೆಗೆ ಕೆರೆಯಂತಾದ ಬೆಂಗಳೂರು

    ಬೆಂಗಳೂರಿನಲ್ಲಿ ಮೂವರು ಗರ್ಭಿಣಿಯರಿಗೆ ಝಿಕಾ ಅಟ್ಯಾಕ್:
    ಕಳೆದ ಒಂದು ದಿನದ ಹಿಂದೆಯಷ್ಟೇ ಬೆಂಗಳೂರಿನಲ್ಲಿ 6 ಮಂದಿಯಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. 6 ಕೇಸ್‌ಗಳ ಪೈಕಿ ಮೂರು ಕೇಸ್‌ಗಳು ಗರ್ಭಿಣಿಯರಲ್ಲಿ ಪತ್ತೆಯಾಗಿದೆ. ಗರ್ಭಿಣಿಯರಲ್ಲಿ ವೈರಸ್ ಪತ್ತೆಯಾಗಿದ್ದು ಹೇಗೆ ಅನ್ನೋ ಬಗ್ಗೆ ವೈದ್ಯರು ತಲೆ ಕೆಡಿಸಿಕೊಂಡಿದ್ದಾರೆ. ಮೂವರು ಗರ್ಭಿಣಿಯರಲ್ಲಿ ಒಬ್ಬರು ಅಸ್ಸಾಂ ಮೂಲದವರು ಒಂದು ವರ್ಷದಿಂದ ಜಿಗಣಿ ಅಲ್ಲಿ ಇದ್ದಾರೆ. ಉಳಿದ ಇಬ್ಬರು ಗರ್ಭಿಣಿಯರು ಜಿಗಣಿಯವರೇ ಆಗಿದ್ದಾರೆ. ಒಬ್ಬರಿಗೆ ಹೆರಿಗೆಯಾಗಿದ್ದು ತಾಯಿ-ಮಗು ಆರೋಗ್ಯವಾಗಿದ್ದಾರೆ. ಇಬ್ಬರು ಗರ್ಭಿಣಿಯರು ವೈದ್ಯರ ನಿಗಾದಲ್ಲಿ ಇದ್ದಾರೆ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: Who Is That Preetham Gowda? ಎಂದ ಹೆಚ್‌ಡಿಕೆಗೆ ಪ್ರೀತಂ ಗೌಡ ಕೊಟ್ಟ ಉತ್ತರ ಏನು?

    ಜಿಗಣಿಯಲ್ಲೂ ಝಿಕಾ ಕೇಸ್ ಪತ್ತೆ:
    ಆನೇಕಲ್ ತಾಲೂಕು, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಗಿಣಿಯಲ್ಲಿ ಎರಡು ವಾರಗಳಲ್ಲಿ ಒಟ್ಟು 5 ಝೀಕಾ ಪ್ರಕರಣಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಜಿಗಣಿಯ ಐವರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ರೋಗಿಗಳು ಹಾಗೂ ಕುಟುಂಬಸ್ಥರ ರಕ್ತದ ಸ್ಯಾಂಪಲ್‌ಗಳನ್ನು ಪಡದುಕೊಂಡು ಆರೋಗ್ಯ ಇಲಾಖೆ ಸೋಂಕಿತರ ಮೇಲೆ ನಿಗಾ ವಹಿಸಿದೆ. ರಾಜ್ಯದಲ್ಲಿ ಒಟ್ಟು 7 ಝಿಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರು ಪತ್ತೆಯಾದ ಪ್ರದೇಶಗಳನ್ನು ಕಂಟೋನ್ಮೆಂಟ್‌ ಝೋನ್ ಎಂದು ಪರಿಗಣಿಸಿ ಆರೋಗ್ಯ ಇಲಾಖೆ ನಿಗಾ ವಹಿಸುತ್ತಿದೆ. ಇದನ್ನೂ ಓದಿ: ಬೆಂಗಳೂರಿನ‌ ಗುರಪ್ಪನಪಾಳ್ಯದಲ್ಲಿ ಅಲ್-ಹಿಂದ್ ISIS ಮಾಡ್ಯೂಲ್ ಕೇಸ್‌ – NIAಯಿಂದ ಚಾರ್ಜ್ ಶೀಟ್ ಸಲ್ಲಿಕೆ

  • ಡೆಂಗ್ಯೂ ಬಳಿಕ ಬೆಂಗಳೂರಲ್ಲಿ ಝಿಕಾ ವೈರಸ್ ಕಾಟ – ಜಿಗಣಿಯಲ್ಲಿ 5 ಪ್ರಕರಣ ಪತ್ತೆ

    ಡೆಂಗ್ಯೂ ಬಳಿಕ ಬೆಂಗಳೂರಲ್ಲಿ ಝಿಕಾ ವೈರಸ್ ಕಾಟ – ಜಿಗಣಿಯಲ್ಲಿ 5 ಪ್ರಕರಣ ಪತ್ತೆ

    – ಸೋಂಕಿತರಿದ್ದ ಪ್ರದೇಶವನ್ನು ಕಂಟೋನ್ಮೆಂಟ್ ಝೋನ್ ಎಂದು ಪರಿಗಣನೆ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಡೆಂಗ್ಯೂ ಬೆನ್ನಲ್ಲೇ ಝಿಕಾ ವೈರಸ್ (Zika Virus) ಕೂಡ ನಗರಕ್ಕೆ ಕಾಲಿಟ್ಟಿದೆ. ಆನೇಕಲ್ ತಾಲೂಕು, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಗಣಿಯಲ್ಲಿ (Jigani) ಎರಡು ವಾರಗಳಲ್ಲಿ ಒಟ್ಟು 5 ಝಿಕಾ ಪ್ರಕರಣಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.

    ಸೋಂಕು ಕಾಣಿಸಿಕೊಂಡ  ಹಿನ್ನೆಲೆ ರೋಗಿಗಳು ಹಾಗೂ ಕುಟುಂಬಸ್ಥರ ರಕ್ತದ ಸ್ಯಾಂಪಲ್‌ಗಳನ್ನು ಪಡದುಕೊಂಡು ಆರೋಗ್ಯ ಇಲಾಖೆ ಸೋಂಕಿತರ ಮೇಲೆ ನಿಗಾ ವಹಿಸಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 7 ಝಿಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರು ಪತ್ತೆಯಾದ ಪ್ರದೇಶಗಳನ್ನು ಕಂಟೋನ್ಮೆಂಟ್ ಝೋನ್ ಎಂದು ಪರಿಗಣಿಸಿ ಆರೋಗ್ಯ ಇಲಾಖೆ (Health Department) ನಿಗಾ ವಹಿಸುತ್ತಿದೆ. ಇದನ್ನೂ ಓದಿ: ಪಾಕ್‌, ಬಾಂಗ್ಲಾ, ಅಫ್ಘಾನಿಸ್ತಾನದ 188 ಹಿಂದೂ ನಿರಾಶ್ರಿತರಿಗೆ ಪೌರತ್ವ ಪ್ರಮಾಣಪತ್ರ ನೀಡಿದ ಅಮಿತ್‌ ಶಾ

    ಈಡಿಸ್ ಸೊಳ್ಳೆಯಿಂದ ಝಿಕಾ ವೈರಸ್ ಹರಡುತ್ತದೆ. ಅತಿಯಾದ ತಲೆನೋವು, ಕೆಂಪಾದ ಕಣ್ಣು, ಜ್ವರ, ಮೈಯಲ್ಲಿ ಗುಳ್ಳೆ ದದ್ದುಗಳು ಕಾಣಿಸಿಕೊಳ್ಳುವುದು ಝಿಕಾ ವೈರಸ್‌ನ ಗುಣಲಕ್ಷಣ. ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಇದನ್ನೂ ಓದಿ: Maharashtra: ಶಾಲೆಯಲ್ಲಿ ಬಿಸ್ಕೆಟ್ ತಿಂದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

    ಝಿಕಾ ವೈರಸ್ ದೃಢಪಟ್ಟರೆ, ಕುಟುಂಬದ ಸದಸ್ಯರ ರಕ್ತದ ಮಾದರಿಯನ್ನು ಲ್ಯಾಬ್ ಟೆಸ್ಟ್‌ಗೆ ಒಳಪಡಿಸಬೇಕು. ಮನೆಯ ಸುತ್ತಮುತ್ತಲಿನ ಮೂರು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುವುದು ಕಡ್ಡಾಯ. ಆ ಪ್ರದೇಶದ ಒಂದು ಕಿಲೋ ಮೀಟರ್ ವ್ಯಾಪ್ತಿಯನ್ನು ಕಂಟೋನ್ಮೆಂಟ್ ಝೋನ್ ಎಂದು ಪರಿಗಣಿಸಲಾಗುವುದು. ಝಿಕಾ ವೈರಸ್‌ ನಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಇದನ್ನೂ ಓದಿ: ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ; ಸರ್ಕಾರ ಸ್ವಲ್ಪಮಟ್ಟಿಗೆ ಶೇಕ್ ಆಗಿರೋದು ನಿಜ – ಪರಮೇಶ್ವರ್ 

  • ಶಿವಮೊಗ್ಗದಲ್ಲಿ ಮತ್ತೊಂದು ಝಿಕಾ ವೈರಸ್‌ ಕೇಸ್‌ ಪತ್ತೆ – ಡೆಂಗ್ಯೂ ನಡುವೆ ಹೆಚ್ಚಾಯ್ತು ಆತಂಕ!

    ಶಿವಮೊಗ್ಗದಲ್ಲಿ ಮತ್ತೊಂದು ಝಿಕಾ ವೈರಸ್‌ ಕೇಸ್‌ ಪತ್ತೆ – ಡೆಂಗ್ಯೂ ನಡುವೆ ಹೆಚ್ಚಾಯ್ತು ಆತಂಕ!

    ಶಿವಮೊಗ್ಗ: ಸದ್ಯ ರಾಜ್ಯದಲ್ಲಿ ಡೆಂಗ್ಯೂ ಜ್ವರದ ನಡುವೆ ಝಿಕಾ ವೈರಸ್‌ (Zika virus) ಆತಂಕ ಹೆಚ್ಚಾಗಿದೆ. ಶಿವಮೊಗ್ಗದಲ್ಲಿ ಝಿಕಾ ವೈರಸ್‌ಗೆ ವೃದ್ಧರೊಬ್ಬರು  ಬಲಿಯಾದ ಬೆನ್ನಲ್ಲೇ ಮತ್ತೊಂದು ಕೇಸ್‌ ಪತ್ತೆಯಾಗಿದೆ.

    ಶಿವಮೊಗ್ಗದ (Shivamogga) ಗಾಂಧಿನಗರದಲ್ಲಿ 74 ವರ್ಷದ ವ್ಯಕ್ತಿ ಝಿಕಾ ವೈರಸ್‌ಗೆ ಬಲಿಯಾದ ಬೆನ್ನಲ್ಲೇ ಸಾಗರದ ಯುವಕನಲ್ಲಿ ವೈರಸ್‌ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಯುವಕ ಯಾವುದೇ ಪ್ರಯಾಣ ಹಿನ್ನೆಲೆ ಹೊಂದಿಲ್ಲ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಝಿಕಾ ವೈರಸ್‌ ಕಾಣಿಸಿಕೊಂಡ ಬೆನ್ನಲ್ಲೇ ಆರೋಗ್ಯಾಧಿಕಾರಿಗಳು (Health Officer) ಫುಲ್‌ ಅಲರ್ಟ್‌ ಆಗಿದ್ದು, ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಹೈ-ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ವಾರ್ಷಿಕೋತ್ಸವ: ಸ್ಕೇಟರ್‌ಗಳಿಗೆ ಚಿನ್ನ, ಬೆಳ್ಳಿ ನಾಣ್ಯ ನೀಡಿ ಗೌರವ

    ಮಹಾರಾಷ್ಟ್ರದಲ್ಲಿ 9 ಕೇಸ್‌ ಪತ್ತೆ:
    ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ (Maharashtra) 9 ಝಿಕಾ ವೈರಸ್‌ ಕೇಸ್‌ ಪತ್ತೆಯಾಗಿದೆ. ಈ ಪೈಕಿ ಐವರು ಗರ್ಭಿಣಿಯರಲ್ಲಿ ವೈರಸ್‌ ಪತ್ತೆಯಾಗಿದೆ. ಈ ಬೆನ್ನಲ್ಲೇ ಹೆಚ್ಚಿನ ನಿಗಾ ವಹಿಸಿದ್ದು, ಇನ್ನೂ 68 ಗರ್ಭಿಣಿಯರ ಮಾದರಿಗಳನ್ನು ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಪರೀಕ್ಷೆಗೆ ಕಳುಹಿಸಲಾಗಿದೆ ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಂಸಿ) ಸಹಾಯಕ ವೈದ್ಯಾಧಿಕಾರಿ ಡಾ.ರಾಜೇಶ್ ದಿಘೆ ತಿಳಿಸಿದ್ದಾರೆ. ಇದನ್ನೂ ಓದಿ: ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ

    ಝಿಕಾ ವೈರಸ್ ರೋಗ ಲಕ್ಷಣಗಳು: ಕೆಲ ದಿನಗಳ ಹಿಂದೆಯಷ್ಟೇ ಕೇರಳದ ಕೋಝಿಕೋಡ್‌ನಲ್ಲಿ ಪತ್ತೆಯಾಗಿದ್ದ ಝಿಕಾ ವೈರಸ್ ಇದೀಗ ಚಿಕ್ಕಬಳ್ಳಾಪುರದಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ವೈರಸ್‌ ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವು ಲಕ್ಷಣಗಳನ್ನು ಹೊಂದಿದೆ. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇಯಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಚಾಲಕ ಗಂಭೀರ

  • ಶಿವಮೊಗ್ಗದಲ್ಲಿ ಝಿಕಾ ವೈರಸ್‍ಗೆ ಮೊದಲ ಬಲಿ

    ಶಿವಮೊಗ್ಗದಲ್ಲಿ ಝಿಕಾ ವೈರಸ್‍ಗೆ ಮೊದಲ ಬಲಿ

    ಶಿವಮೊಗ್ಗ: ಝಿಕಾ ವೈರಸ್ (Zika Virus) ಸೋಂಕಿನಿಂದ 74 ವರ್ಷದ ವೃದ್ಧರೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದ (Shivamogga) ಗಾಂಧಿನಗರದಲ್ಲಿ ನಡೆದಿದೆ.

    ಜೂ. 19 ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂ.21 ರಂದು ನಡೆಸಿದ್ದ ರಕ್ತ ಪರೀಕ್ಷೆಯಲ್ಲಿ ಝಿಕಾ ವೈರಸ್ ಪತ್ತೆ ಆಗಿತ್ತು. ಬಳಿಕ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಕುಟುಂಬಸ್ಥರು ಗುರುವಾರ ಅವರನ್ನು ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಹೋಗಿದ್ದರು. ತೀವ್ರ ಆರೋಗ್ಯ ಸಮಸ್ಯೆಯಿಂದ ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

    ಜ್ವರ ಮಾತ್ರವಲ್ಲದೇ ಬೇರೆ ಕಾಯಿಲೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

  • ಝಿಕಾ ವೈರಸ್‌ ಪತ್ತೆ ಕೇಸ್‌ – 56 ಮಂದಿಯ ವರದಿ ನೆಗೆಟಿವ್‌

    ಝಿಕಾ ವೈರಸ್‌ ಪತ್ತೆ ಕೇಸ್‌ – 56 ಮಂದಿಯ ವರದಿ ನೆಗೆಟಿವ್‌

    ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಝಿಕಾ ವೈರಸ್ (Zika Virus) ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ತ ಪರೀಕ್ಷೆಗೆ ಒಳಪಡಿಸಲಾಗಿದ್ದ 56 ಮಂದಿಯ ವರದಿಯೂ ನೆಗಟಿವ್ ಬಂದಿದೆ. ಇದರಿಂದ ಆರೋಗ್ಯ ಇಲಾಖೆ (Health Department) ನಿಟ್ಟುಸಿರು ಬಿಟ್ಟಿದೆ.

    ಅಕ್ಟೋಬರ್‌ 10 ರಂದು ತಲಕಾಯಲಬೆಟ್ಟ ಗ್ರಾಮದಲ್ಲಿ ಪರೀಕ್ಷೆಗೆ ಸೊಳ್ಳೆಯೊಂದರಲ್ಲಿ ಝಿಕಾ ವೈರಸ್‌ ಪತ್ತೆಯಾಗಿತ್ತು. ತಕ್ಷಣವೇ ಎಚ್ಚೆತ್ತುಕೊಂಡಿದ್ದ ಆರೋಗ್ಯ ಇಲಾಖೆ ತಲಕಾಯಲಬೆಟ್ಟ ಗ್ರಾಮದ 5 ಕಿಮೀ ವ್ಯಾಪ್ತಿಯಲ್ಲಿರುವ 5 ಗ್ರಾಮಗಳಲ್ಲಿ 43 ಮಂದಿ ಗರ್ಭಿಣಿಯರು, 13 ಮಂದಿ ಜ್ವರಪೀಡಿತರ ರಕ್ತ ಮಾದರಿಯನ್ನ ಸಂಗ್ರಹ ಮಾಡಿ ಪರೀಕ್ಷೆಗೆ ಕಳುಹಿಸಿತ್ತು. ಇದನ್ನೂ ಓದಿ: ಅಭಿಮಾನಿಗೆ ಕಪಾಳಮೋಕ್ಷ: ಕ್ಷಮೆ ಕೇಳಿದ ನಟ ನಾನಾ ಪಾಟೇಕರ್

    ಬೆಂಗಳೂರಿನ ನ್ಯಾಷನಲ್ ವೈರಾಲಜಿ ಸಂಸ್ಥೆಗೆ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. 56 ಮಂದಿಯ ವರದಿಯೂ ಈಗ ಆರೋಗ್ಯ ಇಲಾಖೆಗೆ ಲಭ್ಯವಾಗಿದ್ದು, ವರದಿ ನೆಗೆಟಿವ್‌ ಬಂದಿದೆ. ಇದರಿಂದ ಆರೋಗ್ಯ ಇಲಾಖೆಗೆ ಇದ್ದ ಆತಂಕ ದೂರವಾಗಿದೆ. ಇದನ್ನೂ ಓದಿ: ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಬೀರಿದೆ – BJP ವ್ಯವಸ್ಥೆ ಹದಗೆಟ್ಟಿದೆ: ಜಗದೀಶ್ ಶೆಟ್ಟರ್

    ಇನ್ನೂ 10 ಮಂದಿ ಜ್ವರಪೀಡಿತರ ರಕ್ತ ಮಾದರಿಯನ್ನ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬರಬೇಕಿದೆ. ಈ ಬಗ್ಗೆ ಮಾತನಾಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ್ ಕುಮಾರ್, ಜನ ವೈರಸ್ ಇಲ್ಲ ಅಂತ ಉದಾಸೀನ ಮಾಡೋದು ಬೇಡ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

    ತಲಕಾಯಲಬೆಟ್ಟ ಗ್ರಾಮದಲ್ಲಿ ಸೊಳ್ಳೆಗಳನ್ನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವುಗಳಲ್ಲಿಯೂ ವೈರಸ್‌ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಕುಟುಂಬದ ಆಸ್ತಿ ತನಿಖೆ ಮಾಡಿಸಲಿ: ಚೆಲುವರಾಯಸ್ವಾಮಿಗೆ ಕುಮಾರಸ್ವಾಮಿ ಸವಾಲ್

  • ಝಿಕಾ ಆತಂಕ; ಚಿಕ್ಕಬಳ್ಳಾಪುರದ 5 ಗ್ರಾಮಗಳಲ್ಲಿ ಅಲರ್ಟ್‌ – 31 ಮಂದಿ ಗರ್ಭಿಣಿಯರಿಗೆ ರಕ್ತ ಪರೀಕ್ಷೆ

    ಝಿಕಾ ಆತಂಕ; ಚಿಕ್ಕಬಳ್ಳಾಪುರದ 5 ಗ್ರಾಮಗಳಲ್ಲಿ ಅಲರ್ಟ್‌ – 31 ಮಂದಿ ಗರ್ಭಿಣಿಯರಿಗೆ ರಕ್ತ ಪರೀಕ್ಷೆ

    ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿನ ಸೊಳ್ಳೆಗಳ ಪರೀಕ್ಷೆ ವೇಳೆ ಮಾರಕ ಝಿಕಾ ವೈರಸ್ (Zika Virus) ಪತ್ತೆಯಾಗಿದ್ದು, ಈ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್‌ (Health Department) ಆಗಿದೆ.

    ಆರಂಭಿಕ ಹಂತದಲ್ಲೇ ಮಾರಕ ವೈರಸ್‌ಗೆ ಕಡಿವಾಣ ಹಾಕಲು ಮುಂದಾಗಿರುವ ಆರೋಗ್ಯ ಇಲಾಖೆ ತಲಕಾಯಲಬೆಟ್ಟ ಗ್ರಾಮದ 5 ಕಿಮೀ ವ್ಯಾಪ್ತಿಯಲ್ಲಿರುವ 5 ಗ್ರಾಮಗಳಲ್ಲಿ 31 ಗರ್ಭಿಣಿಯರ (Pregnant Women) ರಕ್ತ ಮಾದರಿಗಳನ್ನು ಸಂಗ್ರಹ ಮಾಡಿ ಪರೀಕ್ಷೆಗೆ ಕಳುಹಿಸಿದೆ. ಇನ್ನೂ ಜೊತೆಯಲ್ಲಿ 4 ಮಂದಿ ಜ್ವರಪೀಡಿತರ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ ಅಂತ ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ್ ಕುಮಾರ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳ ನಂತ್ರ ಚಿಕ್ಕಬಳ್ಳಾಪುರದಲ್ಲಿ ಮಾರಕ ಝಿಕಾ ವೈರಸ್‌ ಪತ್ತೆ – ಸ್ಥಳೀಯರಲ್ಲಿ ಭೀತಿ

    ಮಾದರಿ ಪರೀಕ್ಷೆಗಳ ವರದಿ ಬರಲು 15 ದಿನಗಳಾಗಲಿದ್ದು, ವರದಿ ಬಂದ ನಂತರ ಝಿಕಾ ವೈರಸ್‌ ಇದೆಯೋ ಇಲ್ಲವೋ ಎಂಬುದು ಖಚಿತವಾಗಲಿದೆ. ಅಲ್ಲಿಯವರೆಗೂ ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಉತ್ತಮ ಪೋಷಕಾಂಶಯುಕ್ತ ಆಹಾರ ಸೇವನೆಗೆ ಸೂಚನೆ ನೀಡಲಾಗಿದೆ. ಸೊಳ್ಳೆ ಪರದೆ ಬಳಸಿಕೊಂಡು ಮಲಗಲು ಸೂಚಿಸಲಾಗಿದೆ. ಸೊಳ್ಳೆ ಕಡಿತದಿಂದ ಸ್ವಯಂ ರಕ್ಷಣೆ ಮಾಡಿಕೊಂಡು ಝಿಕಾ ವೈರಸ್ ಆತಂಕದಿಂದ ದೂರ ಇರಲು ಸಲಹೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ಅಧ್ಯಯನ ಮಾಡುವ ಬದಲು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ: ಪರಮೇಶ್ವರ್

    ಝಿಕಾ ವೈರಸ್ ರೋಗ ಲಕ್ಷಣಗಳು: ಕೆಲ ದಿನಗಳ ಹಿಂದೆಯಷ್ಟೇ ಕೇರಳದ ಕೋಝಿಕೋಡ್‌ನಲ್ಲಿ ಪತ್ತೆಯಾಗಿದ್ದ ಝಿಕಾ ವೈರಸ್ ಇದೀಗ ಚಿಕ್ಕಬಳ್ಳಾಪುರದಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ವೈರಸ್‌ ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವು ಲಕ್ಷಣಗಳನ್ನು ಹೊಂದಿದೆ. ಇದನ್ನೂ ಓದಿ: ಕೇಂದ್ರದ ಬಿಜೆಪಿ ನಾಯಕರು ರಾಜ್ಯಕ್ಕೆ ಬರುತ್ತಿದ್ದದ್ದು ಕಲೆಕ್ಷನ್ ಮಾಡೋದಕ್ಕಾ – ಪರಮೇಶ್ವರ್ ಪ್ರಶ್ನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇರಳ ನಂತ್ರ ಚಿಕ್ಕಬಳ್ಳಾಪುರದಲ್ಲಿ ಮಾರಕ ಝಿಕಾ ವೈರಸ್‌ ಪತ್ತೆ – ಸ್ಥಳೀಯರಲ್ಲಿ ಭೀತಿ

    ಕೇರಳ ನಂತ್ರ ಚಿಕ್ಕಬಳ್ಳಾಪುರದಲ್ಲಿ ಮಾರಕ ಝಿಕಾ ವೈರಸ್‌ ಪತ್ತೆ – ಸ್ಥಳೀಯರಲ್ಲಿ ಭೀತಿ

    ಚಿಕ್ಕಬಳ್ಳಾಪುರ: ಕೆಲ ದಿನಗಳ ಹಿಂದೆಯಷ್ಟೇ ಕೇರಳದ ಕೋಝಿಕೋಡ್‌ನಲ್ಲಿ ಪತ್ತೆಯಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಝಿಕಾ ವೈರಸ್‌ (Zika Virus) ಇದೀಗ ಚಿಕ್ಕಬಳ್ಳಾಪುರದಲ್ಲಿ (Chikkaballapur) ಪತ್ತೆಯಾಗಿದೆ. ಆರೋಗ್ಯ ಇಲಾಖೆ ಹೈಅಲರ್ಟ್‌ ಆಗಿದೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಸೊಳ್ಳೆಗಳನ್ನ ಪರೀಕ್ಷೆಗೆ ಒಳಪಡಿಸಿದಾಗ ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರೋದು ಧೃಡವಾಗಿದೆ. ಇದನ್ನೂ ಓದಿ: ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ- ಶುಕ್ರವಾರದಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ

    ಹೀಗಾಗಿ ತಲಕಾಯಲಬೆಟ್ಟ ಗ್ರಾಮ ಸೇರಿದಂತೆ ಸುತ್ತಮುತ್ತಲ 5 ಕಿಮೀ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯಿಂದ (Health  Department) ಸರ್ವೆ ಕಾರ್ಯ ರ‍್ಯಾಂಡಮ್‌ ಚೆಕಪ್‌ ಮಾಡಲಾಗುತ್ತಿದೆ. ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ವಡ್ಡಹಳ್ಳಿ, ಬಚ್ಚಹಳ್ಳಿ ಗ್ರಾಮದ 880 ಮನೆಗಳಲ್ಲಿ ಸರಿಸುಮಾರು 4,800 ಜನರ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿದೆ. ಇದನ್ನೂ ಓದಿ: ನಿಗಮ-ಮಂಡಳಿ ನೇಮಕ ವಿಚಾರದಲ್ಲಿ ಸಿದ್ದು- ಡಿಕೆಶಿ ಟಾಕ್‌ವಾರ್‌- ಹೈಕಮಾಂಡ್‌ ಸಭೆಯ ಇನ್‌ಸೈಡ್‌ ಸ್ಟೋರಿ ಇಲ್ಲಿದೆ

    ಈಗಾಗಲೇ 30 ಮಂದಿ ಗರ್ಭಿಣಿಯರು ಹಾಗೂ ಜ್ವರದಿಂದ ಬಳಲುತ್ತಿರುವ 3 ಮಂದಿಯ ರಕ್ತ ಪರೀಕ್ಷೆ ಮಾಡಲಾಗಿದೆ. ಇನ್ನೂ ಮುಂಜಾಗ್ರತಾ ಕ್ರಮವಾಗಿ ಜ್ವರದಿಂದ ಬಳಲುತ್ತಿರುವವರ ಮೇಲೆ ನಿಗಾವಹಿಸಲಾಗಿದೆಯಾದರೂ ಝಿಕಾ ವೈರಸ್ ಸೋಂಕು ಹುಟ್ಟುವ ಮಕ್ಕಳ ಅಂಗವೈಕಲ್ಯಕ್ಕೆ ತುತ್ತಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗರ್ಭಿಣಿಯರ ಮೇಲೂ ನಿಗಾ ವಹಿಸಲಾಗಿದೆ.

    ಇದುವರೆಗೂ ಮನುಷ್ಯರಲ್ಲಿ ಝಿಕಾ ವೈರಸ್ ಪತ್ತೆಯಾಗಿಲ್ಲ. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ್ ಕುಮಾರ್ ಪಬ್ಲಿಕ್ ಟಿವಿಗೆ ಝಿಕಾ ವೈರಸ್ ಪತ್ತೆಯಾಗಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಹಣ ಕಳ್ಳತನ ಪ್ರಕರಣ – ಸಂಘದ ಸಿಬ್ಬಂದಿ ಸೇರಿ 10 ಕಳ್ಳರು ಅಂದರ್

    ಝಿಕಾ ವೈರಸ್ ರೋಗ ಲಕ್ಷಣಗಳು: ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕದಲ್ಲಿ ಝಿಕಾ ವೈರಸ್‌ ಭೀತಿ – ಚಿಕಿತ್ಸಾ ಕ್ರಮ ಪಟ್ಟಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

    ಕರ್ನಾಟಕದಲ್ಲಿ ಝಿಕಾ ವೈರಸ್‌ ಭೀತಿ – ಚಿಕಿತ್ಸಾ ಕ್ರಮ ಪಟ್ಟಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

    ಬೆಂಗಳೂರು: ರಾಯಚೂರಿನ (Raichuru) ಬಾಲಕಿಯೊಬ್ಬರಲ್ಲಿ ಝಿಕಾ ವೈರಸ್‌ (Zika Virus) ಸೋಂಕು ಪತ್ತೆಯಾಗಿರುವುದು ರಾಜ್ಯದಲ್ಲಿ ಆತಂಕ ಮೂಡಿಸಿದೆ. ಸೋಂಕಿನ ಬಗ್ಗೆ ಎಚ್ಚೆತ್ತಿರುವ ಆರೋಗ್ಯ ಇಲಾಖೆ, ವೈರಸ್‌ಗೆ ಚಿಕಿತ್ಸಾ ಕ್ರಮ, ಟೆಸ್ಟಿಂಗ್ ವಿಧಾನ ಮತ್ತು ರೋಗ ಲಕ್ಷಣಗಳ ಪಟ್ಟಿ ಬಿಡುಗಡೆ ಮಾಡಿದೆ.

    ಸೋಂಕಿನ ರೋಗ ಲಕ್ಷಣಗಳೇನು? ಅದನ್ನು ಪತ್ತೆ ಹಚ್ಚಲು ಮಾಡಬೇಕಾದ ಪರೀಕ್ಷಾ ವಿಧಾನಗಳೇನು? ಸೋಂಕಿತರನ್ನು ಗುಣಪಡಿಸಲು ಅನುಸರಿಸಬೇಕಾದ ಚಿಕಿತ್ಸಾ ಕ್ರಮಗಳೇನು ಎಂಬ ಬಗ್ಗೆ ಆರೋಗ್ಯ ಇಲಾಖೆ ಪಟ್ಟಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ಝಿಕಾ ಆತಂಕ – ಕಾಂಡೋಮ್ ಜಾಗೃತಿ ಬಳಿಕ ಗರ್ಭಿಣಿಯರ ಮೇಲೆ ತೀವ್ರ ನಿಗಾ

    ಝಿಕಾ ವೈರಸ್ ರೋಗ ಲಕ್ಷಣಗಳು
    ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವು

    ಝಿಕಾ ವೈರಸ್ ಟೆಸ್ಟಿಂಗ್ ವಿಧಾನ ಹೇಗೆ?
    ಝಿಕಾ ವೈರಸ್ ಪತ್ತೆಯಾದ ಸುತ್ತಮುತ್ತ ಪ್ರದೇಶದಲ್ಲಿ ಕಡ್ಡಾಯವಾಗಿ ಝಿಕಾ ವೈರಸ್ ಟೆಸ್ಟ್ ಮಾಡಬೇಕು. ಇತ್ತೀಚೆಗೆ ಹೊರರಾಜ್ಯ, ಹೊರದೇಶಗಳಿಗೆ ಪ್ರಯಾಣ ಮಾಡಿದ ವ್ಯಕ್ತಿಗಳಿಗೆ ಕಡ್ಡಾಯವಾಗಿ ಝಿಕಾ ವೈರಸ್ ಟೆಸ್ಟ್ ಮಾಡಬೇಕು. ಗರ್ಭಿಣಿಯರು ಇರುವ ಪ್ರದೇಶದ ಸುತ್ತಮುತ್ತ ಹೆಚ್ಚು ನಿಗಾ ಇಡಬೇಕು. ಗರ್ಭಿಣಿಯರನ್ನು ತಪಾಸಣೆಗೆ ಒಳಪಡಿಸಬೇಕು. ಇದನ್ನೂ ಓದಿ: ಸಿದ್ದರಾಮಯ್ಯರಿಗೆ ಕ್ಷೇತ್ರವೇ ಸಿಗ್ತಿಲ್ಲ, ಮುಖ್ಯಮಂತ್ರಿ ಆಗೋಕೆ ಹೇಗೆ ಸಾಧ್ಯ: ಅಭಯ್ ಪಾಟೀಲ್ ವ್ಯಂಗ್ಯ

    ಝಿಕಾ ವೈರಸ್‌ಗೆ ಚಿಕಿತ್ಸಾ ಕ್ರಮ ಹೇಗೆ?
    ಸೌಮ್ಯ ‌ಗುಣಲಕ್ಷಣ ಇರುವ ರೋಗಿಗಳಿಗೆ ಪ್ರತ್ಯೇಕ ಚಿಕಿತ್ಸೆ ಅಗತ್ಯವಿಲ್ಲ. ಝಿಕಾ ವೈರಸ್‌ಗೆ ಸಾಮಾನ್ಯ ಮೈಕೈ ನೋವು, ಜ್ವರಕ್ಕೆ ನೀಡುವ ಚಿಕಿತ್ಸೆ ನೀಡಬಹುದು. ರೋಗ ಲಕ್ಷಣಗಳಿರುವ ರೋಗಿಗಳಿಗೆ ವೈದ್ಯಕೀಯ ಸಲಹೆ ಪಡೆದುಕೊಂಡೇ ಚಿಕಿತ್ಸೆ ನೀಡಬೇಕು. ಸದ್ಯಕ್ಕೆ ಝಿಕಾ ವೈರಸ್‌ಗೆ ವ್ಯಾಕ್ಸಿನ್ ಇಲ್ಲ.

    Live Tv
    [brid partner=56869869 player=32851 video=960834 autoplay=true]

  • ಝಿಕಾ ಆತಂಕ – ಕಾಂಡೋಮ್ ಜಾಗೃತಿ ಬಳಿಕ ಗರ್ಭಿಣಿಯರ ಮೇಲೆ ತೀವ್ರ ನಿಗಾ

    ಝಿಕಾ ಆತಂಕ – ಕಾಂಡೋಮ್ ಜಾಗೃತಿ ಬಳಿಕ ಗರ್ಭಿಣಿಯರ ಮೇಲೆ ತೀವ್ರ ನಿಗಾ

    ರಾಯಚೂರು: ಜಿಲ್ಲೆಯಲ್ಲಿ ಝಿಕಾ ವೈರಸ್ (Zika Virus) ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಚಿವ ಶಂಕರ್ ಪಾಟೀಲ್ ಬಿ.ಮುನೇನಕೊಪ್ಪ (Shankar Patil Munenakoppa) ರಾಯಚೂರಿನಲ್ಲಿಂದು (Raichur) ಕೇಂದ್ರ, ರಾಜ್ಯ ತಜ್ಞರ ತಂಡ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಿದರು.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಸಚಿವ ಶಂಕರ್ ಪಾಟೀಲ್ ಬಿ.ಮುನೇನಕೊಪ್ಪ, ಪ್ರಕರಣ ಪತ್ತೆಯಾದ ಕೂಡಲೇ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 151 ಗರ್ಭಿಣಿಯರ (Pregnant Women) ಮೇಲೆ ನಿಗಾ ಇಡಲಾಗಿದೆ. 21 ಗರ್ಭಿಣಿಯರ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವೈರಸ್ ಪತ್ತೆಯಾದ ತಾಲೂಕಿನ 57 ಗರ್ಭಿಣಿಯರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಸಂಗ್ರಹಿಸಿದ ನೀರನ್ನು ಹೆಚ್ಚುದಿನ ಇಡದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಕ್ತಿಧಾಮದ ಮಕ್ಕಳಿಗೆ ಸಹಾಯ ಮಾಡಲು ಸಿದ್ಧ, ಸದ್ಯಕ್ಕೆ ಅಲ್ಲಿ ಅವಶ್ಯಕತೆ ಇಲ್ಲ: ನಟ ವಿಶಾಲ್

    ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ನಿರ್ಲಕ್ಷ್ಯ ವಹಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈ ಹಿಂದೆ ಜಿಲ್ಲೆಯಲ್ಲಿ ನಿರ್ಲಕ್ಷ್ಯವಹಿಸಿದ ಅಧಿಕಾರಿಗಳನ್ನ ವಜಾ ಮಾಡಲಾಗಿತ್ತು. ಈಗಲೂ ಅಮಾನತು ಬದಲು ವಜಾ ಮಾಡುವ ಎಚ್ಚರಿಕೆ ನೀಡಲಾಗಿದೆ. ಎಲ್ಲಾ ರೀತಿಯ ಅಧಿಕಾರವನ್ನ ಜಿಲ್ಲಾಧಿಕಾರಿಗೆ ನೀಡಿದ್ದೇವೆ. ಅಧಿಕಾರಿಗಳನ್ನ ಬಳಸಿಕೊಂಡು ಅವರು ಉತ್ತಮವಾಗಿ ಕಾರ್ಯ ನಿರ್ವಹಿಸಲಿ. ನಾವೂ ನಿರಂತರವಾಗಿ ಸಭೆ ಮಾಡಿ, ಸೂಚನೆ ನೀಡುತ್ತಿದ್ದೇವೆ. ರೋಗ, ಸೊಳ್ಳೆಗಳು ಉಲ್ಬಣಗೊಳ್ಳದಂತೆ ಕ್ರಮ ಕೈಗೊಳ್ಳಲಾಗಿದೆ ಅಂತ ಸಚಿವ ಶಂಕರ್ ಪಾಟೀಲ್ ಬಿ. ಮುನೇನಕೊಪ್ಪ ಹೇಳಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಝಿಕಾ ವೈರಸ್ ಪತ್ತೆ – ದಂಪತಿಗೆ ಕಾಂಡೋಮ್ ನೀಡಿ ಜಾಗೃತಿ

    ರಾಯಚೂರಿನ ಮಾನ್ವಿಯ ಕೋಳಿ ಕ್ಯಾಂಪ್‌ನ ಬಾಲಕಿಯಲ್ಲಿ ಝಿಕಾ ವೈರಸ್ ಪತ್ತೆಯಾಗಿರುವುದು ರಾಜ್ಯದ ಮೊದಲ ಪ್ರಕರಣವಾಗಿರುವುದರಿಂದ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದು ಗರ್ಭಿಣಿಯರ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ದಂಪತಿಗಳಿಗೆ ಕಾಂಡೋಮ್ (Condom) ನೀಡಿ ಜಾಗೃತಿ ಮೂಡಿಸಲಾಗಿತ್ತು. ಇದೀಗ ತೀವ್ರ ನಿಗಾವಹಿಸಿದ್ದು, ಮಾದರಿ ಸಂಗ್ರಹಗಳನ್ನು ಪ್ರಯೋಗಾಲಕ್ಕೆ ಪರೀಕ್ಷೆಗೆ ಕಳುಹಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಝಿಕಾ ವೈರಸ್‌ಗೆ ಹೆಚ್ಚಿದ ಆತಂಕ – ಮಕ್ಕಳ ಸಣ್ಣ ಜ್ವರಕ್ಕೂ ಹೆದರುತ್ತಿದ್ದಾರೆ ಪೋಷಕರು

    ಝಿಕಾ ವೈರಸ್‌ಗೆ ಹೆಚ್ಚಿದ ಆತಂಕ – ಮಕ್ಕಳ ಸಣ್ಣ ಜ್ವರಕ್ಕೂ ಹೆದರುತ್ತಿದ್ದಾರೆ ಪೋಷಕರು

    ರಾಯಚೂರು: ರಾಜ್ಯದಲ್ಲೇ ಮೊದಲ ಪ್ರಕರಣವಾಗಿ ರಾಯಚೂರಿನಲ್ಲಿ (Raichur) ಝಿಕಾ ವೈರಸ್ (Zika Virus) ಪತ್ತೆಯಾದ ಹಿನ್ನೆಲೆ ಜಿಲ್ಲೆಯಲ್ಲಿ ಚಿಕ್ಕಮಕ್ಕಳ ಪೋಷಕರು ಆತಂಕದಲ್ಲಿದ್ದಾರೆ. ಜಿಲ್ಲೆಯಲ್ಲಿ ಈಗ ಯಾವುದೇ ಮಕ್ಕಳ (Children) ಆಸ್ಪತ್ರೆಯನ್ನು ನೋಡಿದರೂ ತುಂಬಿ ತುಳುಕುತ್ತಿವೆ.

    ಝಿಕಾ ವೈರಸ್ ಆತಂಕದಲ್ಲಿ ಸಣ್ಣ ಜ್ವರಕ್ಕೂ (Fever) ಪೋಷಕರು ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದಾರೆ. ಜ್ವರ ಬಂದರೂ ಡೆಂಗ್ಯೂ ಲಕ್ಷಣಗಳ ಅನುಮಾನಕ್ಕೆ ಆಸ್ಪತ್ರೆಗೆ ಬರುತ್ತಿದ್ದಾರೆ. ಚಂಡಮಾರುತದ ಪರಿಣಾಮ ವಾತಾವರಣ ಬದಲಾಗಿರುವುದರಿಂದಲೂ ಮಕ್ಕಳಲ್ಲಿ ಜ್ವರ, ನೆಗಡಿಯಂತ ಸಾಮಾನ್ಯ ರೋಗಗಳು ಹೆಚ್ಚಾಗಿವೆ.

    ಜಿಲ್ಲೆಯ ಮಾನ್ವಿ ತಾಲೂಕಿನ ಕೋಳಿಕ್ಯಾಂಪ್‌ನ ಬಾಲಕಿಯಲ್ಲಿ ಝಿಕಾ ವೈರಸ್ ಪತ್ತೆಯಾದ ಬಳಿಕ ಪೋಷಕರು ಹೆಚ್ಚು ಆತಂಕಕ್ಕೆ ಒಳಗಾಗಿದ್ದಾರೆ. ಹೀಗಾಗಿ ಮಕ್ಕಳ ಆಸ್ಪತ್ರೆಗಳಲ್ಲಿ ಹೊರರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕ್ಲಿನಿಕ್‌ಗಳಲ್ಲೂ ಕೂಡಾ ಮಕ್ಕಳನ್ನು ಕರೆದುಕೊಂಡು ಬರುವವರ ಸಂಖ್ಯೆ ಹೆಚ್ಚಾಗಿದೆ. ಆರೋಗ್ಯ ಇಲಾಖೆಯ ಜಾಗೃತಿ ನಡುವೆಯೂ ಪೋಷಕರು ಆತಂಕಗೊಂಡಿದ್ದಾರೆ. ಝಿಕಾ ವೈರಸ್ ಬಗ್ಗೆ ಚಿಕ್ಕಮಕ್ಕಳ ಪೋಷಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ, ಆದರೆ ಗರ್ಭಿಣಿಯರು ಎಚ್ಚರಿಕೆ ವಹಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿ ಏಮ್ಸ್‌ಗೆ ಕನ್ನ ಹಾಕಿದ್ದು ಚೀನಾ – ಡೇಟಾ ಈಗ ಸುರಕ್ಷಿತ

    ಸರ್ಕಾರ ಈಗಾಗಲೇ ಬಿಡುಗಡೆ ಮಾಡಿರುವ ಗೈಡ್‌ಲೈನ್ಸ್ ಪ್ರಕಾರ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಗೈಡ್‌ಲೈನ್ಸ್ ಪ್ರಕಾರ ಅಧಿಕಾರಿಗಳ ಸಭೆ, ಸ್ಯಾಂಪಲ್ ಸಂಗ್ರಹ, ಜನ ಜಾಗೃತಿ, ಸೊಳ್ಳೆಗಳ ನಿಯಂತ್ರಣಕ್ಕೆ ಮುಂದಾಗಿದೆ. ಗರ್ಭಿಣಿಯರ ಬಗ್ಗೆ ಹೆಚ್ಚು ಜಾಗ್ರತೆ ವಹಿಸುತ್ತಿರುವ ಆರೋಗ್ಯ ಇಲಾಖೆ ಸೊಳ್ಳೆ ಪರದೆ ವಿತರಣೆ, ಫಾಗಿಂಗ್ ಮಾಡುತ್ತಿದೆ. ನೀರಿನಲ್ಲಿ ಸೊಳ್ಳೆಗಳ ಉತ್ಪತ್ತಿ ತಡೆಯಲು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವ ಕಾರ್ಯ ಮುಂದುವರೆಸಿದೆ.

    ಒಟ್ಟಿನಲ್ಲಿ ವೈದ್ಯರು ಹಾಗೂ ಅಧಿಕಾರಿಗಳು ಝಿಕಾ ವೈರಸ್ ಅಷ್ಟೊಂದು ಅಪಾಯಕಾರಿ ಅಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಪೋಷಕರು ಮಾತ್ರ ಆತಂಕದಲ್ಲಿದ್ದಾರೆ. ಜನ ಆತಂಕ ಪಡುವ ಬದಲು ಮನೆ ಸುತ್ತಮುತ್ತಲ ವಾತಾವರಣ ಸ್ವಚ್ಚವಾಗಿಟ್ಟುಕೊಂಡು, ಸೊಳ್ಳೆಗಳ ನಿಯಂತ್ರಣ ಮಾಡಬೇಕು ಎಂದು ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ. ಇದನ್ನೂ ಓದಿ: ಪತ್ನಿಯಿಂದ ಕಿರುಕುಳ – ಮೂರು ತಿಂಗಳ ಹಿಂದೆ ಮದ್ವೆಯಾಗಿದ್ದ ವ್ಯಕ್ತಿ ಆತ್ಮಹತ್ಯೆ

    Live Tv
    [brid partner=56869869 player=32851 video=960834 autoplay=true]