Tag: Zila Parishad

  • ರಾಜಸ್ಥಾನ ಪಂಚಾಯತ್‌ ಚುನಾವಣೆ – ಬಿಜೆಪಿಗೆ ಭರ್ಜರಿ ಜಯ, ಗೆಹ್ಲೋಟ್‌ಗೆ ಮುಖಭಂಗ

    ರಾಜಸ್ಥಾನ ಪಂಚಾಯತ್‌ ಚುನಾವಣೆ – ಬಿಜೆಪಿಗೆ ಭರ್ಜರಿ ಜಯ, ಗೆಹ್ಲೋಟ್‌ಗೆ ಮುಖಭಂಗ

    ಜೈಪುರ: ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಸಿಎಂ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ  ಭಾರೀ ಹಿನ್ನಡೆಯಾಗಿದೆ.

    4,371 ಪಂಚಾಯತ್‌ ಸಮಿತಿ ಸ್ಥಾನಗಳ ಪೈಕಿ ಬಿಜೆಪಿ 1,835, ಕಾಂಗ್ರೆಸ್‌ 1,718 ಸ್ಥಾನಗಳನ್ನು ಗೆದ್ದುಕೊಂಡಿದೆ. ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ 56 ಮಂದಿ, 420 ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜಿಲ್ಲಾ ಪರಿಷತ್‌ ಒಟ್ಟು 636 ಸ್ಥಾನಗಳ ಪೈಕಿ ಬಿಜೆಪಿ 266, ಕಾಂಗ್ರೆಸ್‌ 204 ಸ್ಥಾನಗಳನ್ನು ಗೆದ್ದುಕೊಂಡಿದೆ.

    ಸಚಿನ್‌ ಪೈಲಟ್‌ ಪ್ರತಿನಿಧಿಸುತ್ತಿರುವ ಟೋಂಕ್‌ ಕ್ಷೇತ್ರದ ಒಟ್ಟು 25 ಸ್ಥಾನಗಳ ಪೈಕಿ ಬಿಜೆಪಿ 15 ಕಾಂಗ್ರೆಸ್‌ 10 ಸ್ಥಾನಗಳನ್ನು ಗೆದ್ದುಕೊಂಡಿದೆ.

     ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್‌ ಪೂನಿಯಾ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬಿಜೆಪಿ ಮತ್ತೆ ಜನ ಬೆಂಬಲ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ರೈತರು ಮತ್ತು ಗ್ರಾಮೀಣ ಭಾಗಕ್ಕೆ ನೀಡಿದ ಅಭಿವೃದ್ಧಿ ಕೆಲಸಗಳಿಂದ ಜನ ನಮಗೆ ಮತ ಹಾಕಿದ್ದಾರೆ. ಇದೊಂದು ಐತಿಹಾಸಿಕ ಜಯ ಎಂದು ಬಣ್ಣಿಸಿದ್ದಾರೆ.

    ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗೆ ತಂದಿರುವ ನೀತಿಯನ್ನು ವಿರೋಧಿಸಿ ಕಾಂಗ್ರೆಸ್‌ ಪ್ರಾಯೋಜಕತ್ವದ ಭಾರತ್‌ ಬಂದ್‌ ನಡೆಯುತ್ತಿರುವಾಗಲೇ ರಾಜ್ಯದಲ್ಲಿ ಈ ಫಲಿತಾಂಶ ಬಂದಿರುವುದು ನಮಗೆ ಸಂತಸ ತಂದಿದೆ ಎಂದು ಸತೀಶ್‌ ಪೂನಿಯಾ ಹೇಳಿದರು.

    ನ. 23, ನ.27, ಡಿ.1, ಡಿ.5 ರಂದು ಒಟ್ಟು 4 ಹಂತದಲ್ಲಿ ಸ್ಥಳೀಯ ಸಂಸ್ಥೆಗಳ  ಚುನಾವಣೆ ನಡೆದಿತ್ತು.