Tag: ZP election

  • ದೇವೇಗೌಡ್ರು ಸಹಾಯ ಮಾಡಿದವರ ಬೆನ್ನಿಗೆ ಚೂರಿ ಹಾಕ್ತಾರೆ: ಬಿಜೆಪಿ ಸದಸ್ಯ ಕಿಡಿ

    ದೇವೇಗೌಡ್ರು ಸಹಾಯ ಮಾಡಿದವರ ಬೆನ್ನಿಗೆ ಚೂರಿ ಹಾಕ್ತಾರೆ: ಬಿಜೆಪಿ ಸದಸ್ಯ ಕಿಡಿ

    ಮೈಸೂರು: ಜೆಡಿಎಸ್ ಅವರು ನಂಬಿಸಿ ಕತ್ತು ಕೊಯ್ದು, ಕೊಟ್ಟ ಮಾತು ತಪ್ಪಿ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಚುನಾವಣೆ ಪ್ರಕ್ರಿಯೆಯಿಂದ ಹೊರಬಂದ ಬಿಜೆಪಿ ಸದಸ್ಯರು ಜೆಡಿಎಸ್‍ಗೆ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ಸದಸ್ಯರು ಆಕ್ರೋಶ ಹೊರಹಾಕಿದ್ದಾರೆ. ಸಹಾಯ ಮಾಡಿದವರ ಬೆನ್ನಿಗೆ ಚೂರಿ ಹಾಕುವವರು ದೇವೇಗೌಡರು. ರಾತ್ರಿ 10.30ರ ವರೆಗೆ ನಿಮ್ಮ ಜೊತೆಗೆ ಇರುತ್ತೇವೆ ಎಂದು ಹೇಳಿದ್ದರು. ಆದ್ರೆ ಇದೀಗ ಏಕಾಏಕಿ ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದಾರೆ. ಜೆಡಿಎಸ್ ಅವರು ನಂಬಿಕೆ ದ್ರೋಹದ ಕೆಲಸ ಮಾಡಿದ್ದಾರೆ. ಅಧಿಕಾರಕ್ಕಾಗಿ ಯಾರ ಜೊತೆಗಾದ್ರೂ ಜೆಡಿಎಸ್ ನವರು ಹೋಗುತ್ತಾರೆ ಎನ್ನುವುದಕ್ಕೆ ಇದು ಸ್ಪಷ್ಟ ಉದಾಹರಣೆ. ಅವರು ಈ ರೀತಿ ಮಾಡುತ್ತಾರೆ ಎಂದಿದ್ದರೆ ನಾವು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರಲಿಲ್ಲ ಎಂದು ಜಿ.ಪಂ ಬಿಜೆಪಿ ಸದಸ್ಯ ನಟರಾಜು ಕಿಡಿಕಾರಿದ್ದಾರೆ.

    ಜೆಡಿಎಸ್ ಅವರು ನಂಬಿಸಿ ಕತ್ತು ಕೊಯ್ದಿದ್ದಾರೆ. ಆದರಿಂದ ನಾವು ಚುನಾವಣೆ ಪ್ರಕ್ರಿಯೆಯಿಂದ ದೂರ ಸರಿದಿದ್ದೇವೆ. ನಾವು ನಾಮಪತ್ರವನ್ನ ವಾಪಸ್ ತೆಗೆದುಕೊಂಡಿದ್ದೇವೆ. ಜೆಡಿಎಸ್ ಅವರು ಸಮಯ ಸಾಧಕರು. ಸಮಯ ಬಂದಾಗ ಕಾಂಗ್ರೆಸ್ ಜೊತೆಗೂ ಹೋಗ್ತಾರೆ. ಬಿಜೆಪಿ ಜೊತೆಗೂ ಸೇರುತ್ತಾರೆ. ಬಿಎಸ್‍ಪಿ ಜೊತೆಗೂ ಕೈಜೊಡಿಸುತ್ತಾರೆ. ಮುಂದಿನ ಚುನಾವಣೆಯಲ್ಲಿ ಜನರು ಇವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಬಿಜೆಪಿ ಸದ್ಯಸರು ಆರೋಪಿಸಿ ಜಿಲ್ಲಾ ಪಂಚಾಯ್ತಿ ಮುಂದೆ ಪ್ರತಿಭಟನೆ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೈಸೂರು ಜಿಲ್ಲಾಪಂಚಾಯ್ತಿ ಜೆಡಿಎಸ್ ತೆಕ್ಕೆಗೆ

    ಮೈಸೂರು ಜಿಲ್ಲಾಪಂಚಾಯ್ತಿ ಜೆಡಿಎಸ್ ತೆಕ್ಕೆಗೆ

    ಮೈಸೂರು: ಇಲ್ಲಿ ಜಿಲ್ಲಾ ಪಂಚಾಯ್ತಿ ಅಧಿಕಾರ ಜೆಡಿಎಸ್ ತೆಕ್ಕೆಗೆ ಬಿದ್ದಿದ್ದು, ಅಧ್ಯಕ್ಷರಾಗಿ ಪರಿಮಳಾ ಶ್ಯಾಮ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಅಂತರಸಂತೆ ಕ್ಷೇತ್ರದ ಜೆಡಿಎಸ್ ಸದಸ್ಯೆಯಾಗಿರುವ ಪರಿಮಳಾ ಶ್ಯಾಮ್ ವಿರುದ್ಧವಾಗಿ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ನಾಮಧಾರಿಗೌಡ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಯಲಿದ್ದು, ಮೈತ್ರಿ ಲೆಕ್ಕದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಗೆಲುವು ಸಾಧಿಸಿದೆ.

    ಮೈಸೂರು ಜಿಲ್ಲಾ ಪಂಚಾಯತ್‍ನಲ್ಲಿ ಒಟ್ಟು 49 ಸ್ಥಾನಗಳಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ 22, ಜೆಡಿಎಸ್ 18, ಬಿಜೆಪಿ 8 ಹಾಗೂ ಪಕ್ಷೇತರ 1 ಸ್ಥಾನ ಗಳಿಸಿದೆ. ಶಾಸಕ ಅನಿಲ್ ಚಿಕ್ಕಮಾದುವಿಂದ ತೆರವಾದ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಚುನಾವಣೆ ನಂತರ ಕಾಂಗ್ರೆಸ್ಸಿನ 3 ಸದಸ್ಯರು ಜೆಡಿಎಸ್ ಬೆಂಬಲಿಸಿದ್ದರಿಂದ ಜೆಡಿಎಸ್ 20 ಸ್ಥಾನ ಹಾಗೂ ಕಾಂಗ್ರೆಸ್ 20 ಸ್ಥಾನ ಗಳಿಸಿದೆ.

    ಮೀಸಲಾತಿ ಅಭ್ಯರ್ಥಿ ಇಲ್ಲದ ಕಾರಣ ಅಧ್ಯಕ್ಷ ಸ್ಥಾನದಿಂದ ಬಿಜೆಪಿ ದೂರ ಉಳಿದಿತ್ತು. ಈ ಹಿನ್ನೆಲೆಯಲ್ಲಿ ಜೆಡಿಎಸ್‍ನ ಪರಿಮಳಾ ಶ್ಯಾಮ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸದ್ಯ ಉಪಾಧ್ಯಕ್ಷ ಸ್ಥಾನಕ್ಕೆ ಮಾತ್ರ ಬಿಜೆಪಿ ನಾಮಪತ್ರ ಸಲ್ಲಿಸಿದೆ.

    ಪರಿಮಳಾ ಶ್ಯಾಮ್ ಅಧ್ಯಕ್ಷ ಸ್ಥಾನದ ಏಕೈಕ ಆಕಾಂಕ್ಷಿಯಾಗಿದ್ದು, ಚುನಾವಣಾಧಿಕಾರಿ ರೂಪಾ ಅವರಿಗೆ ಪರಿಮಳಾ ಶ್ಯಾಮ್ ಅವರು ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ಹಿಂದುಳಿದ ವರ್ಗ(ಮಹಿಳೆ)ಗೆ ಮೀಸಲಾಗಿರುವ ಸ್ಥಾನವನ್ನು ಅವರು ಪಡೆದುಕೊಂಡಿದ್ದಾರೆ. ಜೆಡಿಎಸ್ ಸದಸ್ಯ ಬೀರಿಹುಂಡಿ ಬಸವಣ್ಣ ಜತೆ ಆಗಮಿಸಿ ಉಮೇದುವಾರಿಕೆಯಿಂದ ಅನಾಯಾಸವಾಗಿ ಪರಿಮಳಾ ಶ್ಯಾಮ್ ಅವರಿಗೆ ಅಧ್ಯಕ್ಷ ಸ್ಥಾನ ಒಲಿದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv