Tag: Zubeen Garg

  • ಗಾಯಕ ಜುಬೀನ್ ಗರ್ಗ್ ಸಾವು ಕೇಸ್; ಸಹೋದರ ಸಂಬಂಧಿ ಡಿಎಸ್‌ಪಿ ಬಂಧನ

    ಗಾಯಕ ಜುಬೀನ್ ಗರ್ಗ್ ಸಾವು ಕೇಸ್; ಸಹೋದರ ಸಂಬಂಧಿ ಡಿಎಸ್‌ಪಿ ಬಂಧನ

    ಗುವಾಹಟಿ: ಕಳೆದ ತಿಂಗಳು ಸಿಂಗಾಪುರದಲ್ಲಿ ನಡೆದ ಖ್ಯಾತ ಗಾಯಕ ಜುಬೀನ್ ಗರ್ಗ್ (Zubeen Garg) ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗರ್ಗ್ ಸೋದರಸಂಬಂಧಿ, ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡಿಎಸ್‌ಪಿ ಹುದ್ದೆಯಲ್ಲಿರುವ ಸಂದೀಪನ್ ಗರ್ಗ್‌ನನ್ನು (Sandipan Garg) ಬಂಧಿಸಲಾಗಿದೆ. ಜುಬೀನ್ ಗರ್ಗ್ ನಿಧನದ ವೇಳೆ ಸಂದೀಪನ್ ಗರ್ಗ್ ಅವರ ಜೊತೆಗಿದ್ದರು ಎನ್ನಲಾಗಿದೆ.

    ಸಂದೀಪನ್ ಗರ್ಗ್ ಅವರನ್ನು ಕಳೆದ ಕೆಲವು ದಿನಗಳಲ್ಲಿ ಹಲವಾರು ಬಾರಿ ವಿಚಾರಣೆ ನಡೆಸಲಾಯಿತು. ಇದೀಗ ಸಂದೀಪನ್ ಗಾರ್ಗ್ರನ್ನು ಬಂಧಿಸಿದ್ದೇವೆ. ಪ್ರಕರಣದ ಸಂಬಂಧ ನಾವು ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಸಿಐಡಿ ವಿಶೇಷ ಡಿಜಿಪಿ ಮುನ್ನಾ ಪ್ರಸಾದ್ ಗುಪ್ತಾ ತಿಳಿಸಿದ್ದಾರೆ. ಇದನ್ನೂ ಓದಿ:  ಐಷಾರಾಮಿ ವಾಹನ ಕಳ್ಳಸಾಗಣೆ ಕೇಸ್; ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ

    ಈ ಪ್ರಕರಣದಲ್ಲಿ ಇದೀಗ ಐದನೇ ಆರೋಪಿಯ ಬಂಧನವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಶಾನ್ಯ ಭಾರತ ಉತ್ಸವದ ಮುಖ್ಯ ಸಂಘಟಕ ಶ್ಯಾಮಕಾನು ಮಹಾಂತ, ಗಾಯಕನ ವ್ಯವಸ್ಥಾಪಕ ಸಿದ್ಧಾರ್ಥ್ ಶರ್ಮಾ ಮತ್ತು ಅವರ ಇಬ್ಬರು ಬ್ಯಾಂಡ್‌ಮೇಟ್‌ಗಳಾದ ಶೇಖರ್ ಜ್ಯೋತಿ ಗೋಸ್ವಾಮಿ ಮತ್ತು ಅಮೃತ್ ಪ್ರಭಾ ಮಹಾಂತರನ್ನ ಈಗಾಗಲೇ ಬಂಧಿಸಲಾಗಿದೆ. ಆರೋಪಿಗಳೆಲ್ಲ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

    ತನಿಖೆ ವೇಳೆ ಶೇಖರ್ ಜ್ಯೋತಿ ಗೋಸ್ವಾಮಿ, ಸಿಂಗಾಪುರದಲ್ಲಿ ಮ್ಯಾನೇಜರ್ ಸಿದ್ಧಾರ್ಥ್ ಶರ್ಮಾ ಮತ್ತು ಶ್ಯಾಮಕಾನು ಮಹಾಂತ ಸೇರಿ ಜುಬೀನ್‌ಗೆ ವಿಷಪ್ರಾಶನ ಮಾಡಿದ್ದಾರೆ ಎಂದು ಹೇಳಿದ್ದರು.

  • ಗಾಯಕ ಜುಬೀನ್ ಗಾರ್ಗ್ ಸಾವು ಕೇಸ್ – ಮ್ಯಾನೇಜರ್, ಸಿಂಗಾಪುರದ ಕಾರ್ಯಕ್ರಮ ಆಯೋಜಕ ಅರೆಸ್ಟ್

    ಗಾಯಕ ಜುಬೀನ್ ಗಾರ್ಗ್ ಸಾವು ಕೇಸ್ – ಮ್ಯಾನೇಜರ್, ಸಿಂಗಾಪುರದ ಕಾರ್ಯಕ್ರಮ ಆಯೋಜಕ ಅರೆಸ್ಟ್

    ದಿಸ್ಪುರ್: ಪ್ರಸಿದ್ಧ ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್ (Zubeen Garg) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾರ್ಗ್ ಮ್ಯಾನೇಜರ್ ಹಾಗೂ ಸಿಂಗಾಪುರದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಈ ಪ್ರಕರಣ ಸಂಬಂಧ ರಚಿಸಲಾದ ಎಸ್‌ಐಟಿಯು ಮಂಗಳವಾರ (ಸೆ.30) ದೆಹಲಿ ವಿಮಾನ ನಿಲ್ದಾಣದಲ್ಲಿ ಕಾರ್ಯಕ್ರಮ ಆಯೋಜಕ ಶ್ಯಾಮಕಾನು ಮಹಾಂತನನ್ನು ಹಾಗೂ ರಾಜಸ್ಥಾನದಲ್ಲಿ ಮ್ಯಾನೇಜರ್ ಸಿದ್ಧಾರ್ಥ ಶರ್ಮಾ ಅವರನ್ನು ಬಂಧಿಸಿದೆ.ಇದನ್ನೂ ಓದಿ: ಗಾಯಕ ಜುಬೀನ್ ಗಾರ್ಗ್ ಸಾವಿನ ತನಿಖೆಗೆ ಸಿಂಗಾಪುರ ಸರ್ಕಾರದ ಸಹಕಾರ: ಅಸ್ಸಾಂ ಸಿಎಂ

    ಜುಬೀನ್ ಸಾವನ್ನಪ್ಪುವ ಮುನ್ನ ಬಂಧಿತ ಆರೋಪಿಗಳಿಬ್ಬರು ಅವರ ಜೊತೆಗಿದ್ದರು ಎಂಬ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಈ ಸಂಬಂಧ ಇಬ್ಬರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸದ್ಯ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅಲ್ಲದೇ ಈ ಇಬ್ಬರ ಹೊರತಾಗಿಯೂ 60ಕ್ಕೂ ಹೆಚ್ಚು ಎಫ್‌ಐಆರ್‌ಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    ಈ ಕುರಿತು ಗಾಯಕ ಜುಬೀನ್ ಗಾರ್ಗ್ ಅವರ ಪತ್ನಿ ಗರಿಮಾ ಗಾರ್ಗ್ ಮಾತನಾಡಿ, ನಾನು ಕಾನೂನು ಪ್ರಕ್ರಿಯೆಯಲ್ಲಿ ವಿಶ್ವಾಸ ಹೊಂದಿದ್ದೇನೆ. ಸಾವಿನ ಬಗ್ಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದೆ ಎಂದು ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಈಶಾನ್ಯ ಉತ್ಸವದಲ್ಲಿ ಪಾಲ್ಗೊಳ್ಳಲು ಜುಬೀನ್ ಗಾರ್ಗ್ ಅವರು ಸಿಂಗಾಪುರಕ್ಕೆ ತೆರಳಿದ್ದರು. ಈ ವೇಳೆ ಸಮುದ್ರದಲ್ಲಿ ಸ್ಕೂಬಾ ಡೈವಿಂಗ್ ಸಂದರ್ಭದಲ್ಲಿ ಅವಘಡಕ್ಕೆ ಸಿಲುಕಿ ಗಂಭೀರ ಸ್ಥಿತಿಯಲ್ಲಿದ್ದ ಗರ್ಗ್ ಅವರನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದರು. ಅದಾದ ಬಳಿಕ ಗಾಯಕನ ಸಾವಿನ ತನಿಖೆಗಾಗಿ ಅಸ್ಸಾಂ ಸರ್ಕಾರ ವಿಶೇಷ ಡಿಜಿಪಿ ಎಂಪಿ ಗುಪ್ತಾ ನೇತೃತ್ವದಲ್ಲಿ 10 ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಸಿಂಗಾಪುರ ಸರ್ಕಾರವು ತನಿಖೆಗೆ ಒಪ್ಪಿಗೆ ಸೂಚಿಸಿದ್ದು, ಸದ್ಯ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಮತ್ತು ಅವರ ಸಹಾಯ ಪಡೆಯಲು ಇಬ್ಬರು ಅಸ್ಸಾಂ ಪೊಲೀಸ್ ಅಧಿಕಾರಿಗಳನ್ನು ಸಿಂಗಾಪುರಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ

  • ಗಾಯಕ ಜುಬೀನ್ ಗಾರ್ಗ್ ಸಾವಿನ ತನಿಖೆಗೆ ಸಿಂಗಾಪುರ ಸರ್ಕಾರದ ಸಹಕಾರ: ಅಸ್ಸಾಂ ಸಿಎಂ

    ಗಾಯಕ ಜುಬೀನ್ ಗಾರ್ಗ್ ಸಾವಿನ ತನಿಖೆಗೆ ಸಿಂಗಾಪುರ ಸರ್ಕಾರದ ಸಹಕಾರ: ಅಸ್ಸಾಂ ಸಿಎಂ

    ಗುವಾಹಟಿ: ಗಾಯಕ ಜುಬೀನ್ ಗಾರ್ಗ್ (Zubeen Garg) ಸಾವಿನ ತನಿಖೆಗೆ ಸಹಕಾರ ಕೋರಿ ಕೇಂದ್ರವು ಸಿಂಗಾಪುರದೊಂದಿಗೆ (Singapore) ಪರಸ್ಪರ ಕಾನೂನು ಸಹಾಯ ಒಪ್ಪಂದವನ್ನು ಔಪಚಾರಿಕವಾಗಿ ಜಾರಿಗೆ ತಂದಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ  ಪೋಸ್ಟ್ ಮಾಡಿರುವ ಅವರು, ನಮ್ಮ ಪ್ರೀತಿಯ ಜುಬೀನ್ ಅವರ ನಿಧನದ ಕುರಿತು ಅಸ್ಸಾಂ ಪೊಲೀಸರು ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಗೃಹ ಸಚಿವಾಲಯವು ಈಗ ಪರಸ್ಪರ ಕಾನೂನು ಸಹಾಯ ಒಪ್ಪಂದವನ್ನು ಔಪಚಾರಿಕವಾಗಿ ಅನ್ವಯಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರವಾಹ ಪೀಡಿತ ಕಲ್ಯಾಣ ಕರ್ನಾಟಕದಲ್ಲಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

    ಪರಸ್ಪರ ಕಾನೂನು ಸಹಾಯ ಒಪ್ಪಂದ ಜಾರಿಗೆ ಬಂದ ನಂತರ, ಸಿಂಗಾಪುರದ ಅಧಿಕಾರಿಗಳಿಂದ ಪ್ರಕರಣದ ವಿವರಗಳನ್ನು ಪಡೆಯುವುದು, ಆರೋಪಿಗಳನ್ನು ಮರಳಿ ಕರೆತರುವಲ್ಲಿ ಸಹಾಯ ಮತ್ತು ನ್ಯಾಯವನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಸಂಪೂರ್ಣ ಸಹಕಾರವನ್ನು ಖಚಿತಪಡಿಸುತ್ತದೆ ಎಂದು ಶರ್ಮಾ ಸೋಮವಾರ ನುಡಿದಿದ್ದರು. ಇದನ್ನೂ ಓದಿ: ಯುದ್ಧೋಪಾದಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪ್ರವಾಹಕ್ಕೆ ಸರ್ಕಾರ ಸ್ಪಂದಿಸಬೇಕು: ಸಿ.ಟಿ ರವಿ

    ಸೆಪ್ಟೆಂಬರ್ 19ರಂದು ಸಿಂಗಾಪುರದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಗಾಯಕನ ಸಾವಿನ ತನಿಖೆಗಾಗಿ ಅಸ್ಸಾಂ ಸರ್ಕಾರ ವಿಶೇಷ ಡಿಜಿಪಿ ಎಂಪಿ ಗುಪ್ತಾ ನೇತೃತ್ವದಲ್ಲಿ 10 ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಮತ್ತು ಅವರ ಸಹಾಯ ಪಡೆಯಲು ಇಬ್ಬರು ಅಸ್ಸಾಂ ಪೊಲೀಸ್ ಅಧಿಕಾರಿಗಳನ್ನು ಈಗಾಗಲೇ ಸಿಂಗಾಪುರಕ್ಕೆ ಕಳುಹಿಸಲಾಗಿದೆ ಎಂದು ಶರ್ಮಾ ಹೇಳಿದರು. ಇದನ್ನೂ ಓದಿ: ಮಲ್ಟಿಪ್ಲೆಕ್ಸ್‌ಗಳು ಟಿಕೆಟ್ ಮಾರಾಟದ ಲೆಕ್ಕ ಇಡಬೇಕು: ಹೈಕೋರ್ಟ್ ಸೂಚನೆ

  • ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ

    ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ

    -ಸಿಎಂ ಹಿಮಂತ ಬಿಸ್ವಾ ಶರ್ಮಾ, ಕೇಂದ್ರ ಸಚಿವ ಕಿರಣ್ ಭಾಗಿ

    ದಿಸ್ಪುರ್: ಸಿಂಗಾಪುರ್‌ದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಮೃತಪಟ್ಟಿದ್ದ ಅಸ್ಸಾಂ (Assam) ಮೂಲದ ಖ್ಯಾತ ಗಾಯಕ ಜುಬೀನ್ ಗಾರ್ಗ್ (Zubeen Garg) ಅಂತ್ಯಕ್ರಿಯೆ (Funeral) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.

    ಅಸ್ಸಾಂನ ಗುವಾಹಟಿಯಲ್ಲಿ ಕುಟುಂಬಸ್ಥರು, ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಸರ್ಕಾರಿ ಗೌರವದೊಂದಿಗೆ ಗಾರ್ಗ್ಗೆ ಅಂತಿಮ ವಿದಾಯ ಹೇಳಲಾಯಿತು. ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು, ಸರ್ಬಾನಂದ ಸೋನಾವಾಲ, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಅಂತಿಮ ನಮನ ಸಲ್ಲಿಸಿದರು.ಇದನ್ನೂ ಓದಿ: ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ

    ಅಂತಿಮಯಾತ್ರೆಗೆ ಸಾಗರೋಪಾದಿಯಲ್ಲಿ ಅಭಿಮಾನಿಗಳು ಸೇರಿದ್ದರು. ಈ ಮೂಲಕ ವಿಶ್ವದಲ್ಲೇ ಅತೀ ಹೆಚ್ಚು ಜನರು ಸೇರಿದ 4ನೇ ಅಂತಿಮ ಯಾತ್ರೆಯೆಂದು ದಾಖಲೆ ನಿರ್ಮಿಸಿ, ಲಿಮ್ಕಾ ಬುಕ್ ಆಫ್ ರೆಕಾಡ್ಸ್ಗೆ ಸೇರ್ಪಡೆಯಾಗಿದೆ. ಮೈಕೆಲ್ ಜಾಕ್ಸನ್, ಪೋಪ್ ಫ್ರಾನ್ಸಿಸ್, ರಾಜಕುಮಾರಿ ಡಯಾನಾ ಮತ್ತು ರಾಣಿ ಎಲಿಜಬೆತ್ ಅವರಿಗೆ ನೀಡಿದಂತೆ ಇದು ಕೂಡ ಸ್ಮರಣೀಯ ವಿದಾಯ ಎಂದು ಗುರುತಿಸಲಾಗಿದೆ.

    ಇನ್ನು ಅಂತಿಮಯಾತ್ರೆಯಲ್ಲಿ ಜುಬೀನ್‌ಗೆ ಜಯವಾಗಲಿ, ಜುಬೀನ್ ದೀರ್ಘಕಾಲ ಉಳಿಯಲಿ ಎಂಬ ಘೋಷ ವಾಕ್ಯಗಳು ಕೇಳಿಬಂದವು. ಗಾರ್ಗ್ ಸಾವಿನ ಹಿಂದೆ ಯಾವುದೇ ಅಪರಾಧ ಕೃತ್ಯಗಳು ನಡೆದಿಲ್ಲ ಎಂದು ಖಚಿತಪಡಿಸಲು ಸರ್ಕಾರ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಲು ಸೂಚಿಸಿತ್ತು. ಅದರಂತೆ 2ನೇ ಬಾರಿಗೆ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನಡೆಸಲಾಯಿತು.ಇದನ್ನೂ ಓದಿ: ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ

     

  • ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ

    ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ

    ಅತೀ ಹೆಚ್ಚು ಜನ ಭಾಗಿಯಾದ ವಿಶ್ವದ 4ನೇ ಅಂತಿಮ ಯಾತ್ರೆ

    ದಿಸ್ಪುರ್: ಪ್ರಸಿದ್ಧ ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್ (Zubeen Garg) ಅವರ ಅಂತಿಮ ಯಾತ್ರೆ ಸೆ.21ರಂದು ಗುವಾಹಟಿಯಲ್ಲಿ ನಡೆಯಿತು. ಈ ವೇಳೆ ಲಕ್ಷಾಂತರ ಜನರು ಭಾಗಿಯಾಗಿದ್ದರು. ಈ ಮೂಲಕ ವಿಶ್ವದಲ್ಲೇ ಅತೀ ಹೆಚ್ಚು ಜನರು ಸೇರಿದ 4ನೇ ಅಂತಿಮ ಯಾತ್ರೆ ಎಂದು ದಾಖಲೆ ನಿರ್ಮಿಸಿ, ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ಗೆ ( Limca Book of Records) ಸೇರ್ಪಡೆಯಾಗಿದೆ.

    ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಪ್ರಕಾರ, ಗಾರ್ಗ್ ಅವರ ಅಂತಿಮ ಯಾತ್ರೆ ವೇಳೆ ಲಕ್ಷಾಂತರ ಜನರು ಭಾಗಿಯಾಗಿದ್ದರು. ಈ ಮೂಲಕ ಮೈಕೆಲ್ ಜಾಕ್ಸನ್, ಪೋಪ್ ಫ್ರಾನ್ಸಿಸ್, ರಾಜಕುಮಾರಿ ಡಯಾನಾ ಮತ್ತು ರಾಣಿ ಎಲಿಜಬೆತ್ ಅವರಿಗೆ ನೀಡಿದಂತೆ ಇದು ಕೂಡ ಸ್ಮರಣೀಯ ವಿದಾಯ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ

    ಅಂತಿಮ ಯಾತ್ರೆ ವೇಳೆ ಜನಸಾಗರವೇ ಹರಿದುಬಂದಿತ್ತು. ಅಭಿಮಾನಿಗಳು ಕಿಕ್ಕಿರಿದು ಅವರ ಮುಖವನ್ನು ಕೊನೆ ಬಾರಿ ನೋಡಲು ಕಾಯುತ್ತಿದ್ದರು. ಮೆರವೆಣಿಗೆಯಲ್ಲಿ ಸಂಪೂರ್ಣವಾಗಿ ಅವರ ಹಾಡುಗಳ ಸುರಿಮಳೆಯೇ ಸುರಿಯುವಂತೆ ಭಾಸವಾಗುತ್ತಿತ್ತು. ಕಿಂಗ್ ಆಫ್ ಹಮ್ಮಿಂಗ್ ಎಂದಲೇ ಹೆಸರು ಪಡೆದಿದ್ದ ಇವರ ಅಂತಿಮ ಯಾತ್ರೆ ಅಸ್ಸಾಮಿ ಸಂಗೀತ ಯುಗದ ಅಂತ್ಯವೆಂಬಂತೆ ಕಾಣುತ್ತಿತ್ತು.

    1972ರಲ್ಲಿ ಜನಿಸಿದ ಗಾರ್ಗ್ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಸಂಗೀತದಲ್ಲಿ ತಮ್ಮ ಹೆಸರನ್ನು ಅಚ್ಚಳಿಯಂತೆ ಮಾಡಿದ್ದಾರೆ. ಅಸ್ಸಾಂ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈಶಾನ್ಯ ಉತ್ಸವದಲ್ಲಿ ಪಾಲ್ಗೊಳ್ಳಲು ಸಿಂಗಾಪುರಕ್ಕೆ ತೆರಳಿದ್ದಾಗ ಜುಬೀನ್ ಗಾರ್ಗ್ ಅವರು ಸ್ಕೂಬಾ ಡೈವಿಂಗ್ ವೇಳೆ ಅವಘಡಕ್ಕೆ ಸಿಲುಕಿ ಗಂಭೀರ ಸ್ಥಿತಿಯಲ್ಲಿದ್ದರು. ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರೂ ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು.

    ಜುಬೀನ್ ಗರ್ಗ್ ಅಸ್ಸಾಮಿ ಮತ್ತು ಹಿಂದಿ ಮಾತ್ರವಲ್ಲದೆ, ಬಂಗಾಳಿ, ಮರಾಠಿ, ತಮಿಳು, ತೆಲುಗು ಮತ್ತು ನೇಪಾಳಿ ಸೇರಿದಂತೆ ಹಲವು ಭಾಷೆಗಳಿಗೆ ಹಾಡಿದ್ದಾರೆ. ತಮ್ಮ ಮೂರನೇ ವಯಸ್ಸಿನಲ್ಲೇ ಹಾಡಲು ಪ್ರಾರಂಭಿಸಿದರು. ಅವರ ಮೊದಲ ಆಲ್ಬಂ ‘ಅನಾಮಿಕಾ’ 1992 ರಲ್ಲಿ ಬಿಡುಗಡೆಯಾಯಿತು. ‘ಮಾಯಾ’, ‘ಜುಬೀನೋರ್ ಗಾನ್’, ‘ಕ್ಸಾಬ್ಡಾ’, ‘ಪಾಖಿ’, ‘ಶಿಶು’, ‘ಜಂತ್ರ’ ಅವರ ಅತ್ಯಂತ ಪ್ರೀತಿಯ ಅಸ್ಸಾಮೀಸ್ ಆಲ್ಬಂಗಳಲ್ಲಿ ಕೆಲವು. ಅವರು ‘ದಿಲ್ ಸೆ’, ‘ವಾಸ್ತವ್’, ‘ಫಿಜಾ’, ‘ಅಶೋಕ’, ‘ಕಾಂಟೆ’, ‘ಗ್ಯಾಂಗ್‌ಸ್ಟರ್’, ‘ಕ್ರಿಶ್ 3’ ಮತ್ತು ಇನ್ನೂ ಹೆಚ್ಚಿನ ಹಿಂದಿ ಚಿತ್ರಗಳಿಗೂ ಹಾಡಿದ್ದಾರೆ. ಆದಾಗ್ಯೂ, ಗ್ಯಾಂಗ್‌ಸ್ಟರ್‌ಗಾಗಿ ಅವರು ಹಾಡಿದ್ದ ‘ಯಾ ಅಲಿ’ ಹಾಡು ಅವರಿಗೆ ಅಸ್ಸಾಂನ ಹೊರಗೂ ಜನಪ್ರಿಯತೆ ತಂದುಕೊಟ್ಟಿತು.ಇದನ್ನೂ ಓದಿ: ಸ್ಕೂಬಾ ಡೈವಿಂಗ್‌ ವೇಳೆ ಬಾಲಿವುಡ್‌ನ ಖ್ಯಾತ ಗಾಯಕ ಜುಬೀನ್ ಗಾರ್ಗ್ ಸಾವು

  • ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ

    ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ

    • ಸ್ಕೂಬಾ ಡೈವಿಂಗ್ ವೇಳೆ ಸಾವನ್ನಪ್ಪಿದ್ದ ಪ್ರಸಿದ್ಧ ಗಾಯಕ

    ದಿಸ್ಪುರ: ಸ್ಕೂಬಾ ಡೈವಿಂಗ್ ವೇಳೆ ಸಾವನ್ನಪ್ಪಿದ್ದ ಪ್ರಸಿದ್ಧ ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್ ಅವರ (Zubeen Garg) ಮರಣೋತ್ತರ ಪರೀಕ್ಷೆ ಸಿಂಗಾಪುರದಲ್ಲಿ ನಡೆಯುತ್ತಿದ್ದು, ಇದೀಗ ಅಸ್ಸಾಂ ಸರ್ಕಾರ (Assam Govt) ಸಾವಿನ ತನಿಖೆ ನಡೆಸಲು ಮುಂದಾಗಿದೆ.

    ಈ ಕುರಿತು ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಜುಬೀನ್ ಗಾರ್ಗ್ ಸಾವನ್ನಪ್ಪುವ ಮುನ್ನ ಕಾರ್ಯಕ್ರಮ ಆಯೋಜಕರಾದ ಶ್ಯಾಮ್ ಕನು ಮಹಾಂತ ಹಾಗೂ ಸಿದ್ಧಾರ್ಥ ಶರ್ಮಾ ಅವರ ಜೊತೆಗಿದ್ದರು. ಹೀಗಾಗಿ ಈ ಕುರಿತು ಅಸ್ಸಾಂ ಸರ್ಕಾರ ತನಿಖೆ ನಡೆಸಲಿದ್ದು, ಕಾರ್ಯಕ್ರಮ ಆಯೋಜಕರ ವಿರುದ್ಧ ಮೋರಿಗಾಂವ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಸ್ಕೂಬಾ ಡೈವಿಂಗ್‌ ವೇಳೆ ಬಾಲಿವುಡ್‌ನ ಖ್ಯಾತ ಗಾಯಕ ಜುಬೀನ್ ಗಾರ್ಗ್ ಸಾವು

    ಆಯೋಜಕರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಸಿಐಡಿಗೆ ವರ್ಗಾಯಿಸಿ, ವಿಚಾರಣೆ ನಡೆಸಿ ಎಂದು ಅಸ್ಸಾಂ ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ. ಸಿಂಗಾಪುರ ಕಮಿಷನರ್ ಅವರೊಂದಿಗೆ ಮಾತನಾಡಿ ವಿವರವಾಗಿ ತನಿಖೆ ಮಾಡುವಂತೆ ಮನವಿ ಮಾಡಿಕೊಂಡಿದ್ದೇನೆ ಎಂದಿದ್ದಾರೆ.

    ಈಶಾನ್ಯ ಉತ್ಸವದಲ್ಲಿ ಪಾಲ್ಗೊಳ್ಳಲು ಜುಬೀನ್ ಗಾರ್ಗ್ ಅವರು ಸಿಂಗಾಪುರಕ್ಕೆ ತೆರಳಿದ್ದರು. ಈ ವೇಳೆ ಸಮುದ್ರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅವಘಡಕ್ಕೆ ಸಿಲುಕಿ ಗಂಭೀರ ಸ್ಥಿತಿಯಲ್ಲಿದ್ದ ಗರ್ಗ್ ಅವರನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

    ಜುಬೀನ್ ಗರ್ಗ್ ಅಸ್ಸಾಮಿ ಮತ್ತು ಹಿಂದಿ ಮಾತ್ರವಲ್ಲದೆ, ಬಂಗಾಳಿ, ಮರಾಠಿ, ತಮಿಳು, ತೆಲುಗು ಮತ್ತು ನೇಪಾಳಿ ಸೇರಿದಂತೆ ಹಲವು ಭಾಷೆಗಳಿಗೆ ಹಾಡಿದ್ದಾರೆ. ತಮ್ಮ ಮೂರನೇ ವಯಸ್ಸಿನಲ್ಲೇ ಹಾಡಲು ಪ್ರಾರಂಭಿಸಿದರು. ಅವರ ಮೊದಲ ಆಲ್ಬಂ ‘ಅನಾಮಿಕಾ’ 1992 ರಲ್ಲಿ ಬಿಡುಗಡೆಯಾಯಿತು. ‘ಮಾಯಾ’, ‘ಜುಬೀನೋರ್ ಗಾನ್’, ‘ಕ್ಸಾಬ್ಡಾ’, ‘ಪಾಖಿ’, ‘ಶಿಶು’, ‘ಜಂತ್ರ’ ಅವರ ಅತ್ಯಂತ ಪ್ರೀತಿಯ ಅಸ್ಸಾಮೀಸ್ ಆಲ್ಬಂಗಳಲ್ಲಿ ಕೆಲವು. ಅವರು ‘ದಿಲ್ ಸೆ’, ‘ವಾಸ್ತವ್’, ‘ಫಿಜಾ’, ‘ಅಶೋಕ’, ‘ಕಾಂಟೆ’, ‘ಗ್ಯಾಂಗ್‌ಸ್ಟರ್’, ‘ಕ್ರಿಶ್ 3’ ಮತ್ತು ಇನ್ನೂ ಹೆಚ್ಚಿನ ಹಿಂದಿ ಚಿತ್ರಗಳಿಗೂ ಹಾಡಿದ್ದಾರೆ. ಆದಾಗ್ಯೂ, ಗ್ಯಾಂಗ್‌ಸ್ಟರ್‌ಗಾಗಿ ಅವರು ಹಾಡಿದ್ದ ‘ಯಾ ಅಲಿ’ ಹಾಡು ಅವರಿಗೆ ಅಸ್ಸಾಂನ ಹೊರಗೂ ಜನಪ್ರಿಯತೆ ತಂದುಕೊಟ್ಟಿತು.ಇದನ್ನೂ ಓದಿ: ಮಾರಿಗಲ್ಲು ವೆಬ್ ಸರಣಿ : ಅಪ್ಪು ಕನಸು ನನಸು

  • ಸ್ಕೂಬಾ ಡೈವಿಂಗ್‌ ವೇಳೆ ಬಾಲಿವುಡ್‌ನ ಖ್ಯಾತ ಗಾಯಕ ಜುಬೀನ್ ಗಾರ್ಗ್ ಸಾವು

    ಸ್ಕೂಬಾ ಡೈವಿಂಗ್‌ ವೇಳೆ ಬಾಲಿವುಡ್‌ನ ಖ್ಯಾತ ಗಾಯಕ ಜುಬೀನ್ ಗಾರ್ಗ್ ಸಾವು

    ಪ್ರಸಿದ್ಧ ಅಸ್ಸಾಮೀಸ್ ಗಾಯಕ ಮತ್ತು ಸಾಂಸ್ಕೃತಿಕ ಐಕಾನ್ ಜುಬೀನ್ ಗಾರ್ಗ್ (Zubeen Garg) ಅವರು ಶುಕ್ರವಾರ ಸ್ಕೂಬಾ ಡೈವಿಂಗ್‌ ಅವಘಡದಲ್ಲಿ ಮೃತಪಟ್ಟಿದ್ದಾರೆ.

    52 ವಯಸ್ಸಿನ ಗಾರ್ಗ್‌ ಅವರು ಸಿಂಗಾಪುರದಲ್ಲಿದ್ದರು. ಸಮುದ್ರದಲ್ಲಿ ಸ್ಕೂಬಾ ಡೈವಿಂಗ್‌ ವೇಳೆ ಅವಘಡಕ್ಕೆ ಸಿಲುಕಿ ಗಂಭೀರ ಸ್ಥಿತಿಯಲ್ಲಿದ್ದ ಗರ್ಗ್‌ ಅವರನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ನಟಿ ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ; ಇಬ್ಬರು ಅಪ್ರಾಪ್ತರು ಅರೆಸ್ಟ್

    ಗಾಯಕ ಈಶಾನ್ಯ ಉತ್ಸವದಲ್ಲಿ ಪಾಲ್ಗೊಳ್ಳಲು ಸಿಂಗಾಪುರದಲ್ಲಿದ್ದರು. ಇಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಅಸ್ಸಾಂ ತನ್ನ ನೆಚ್ಚಿನ ಪುತ್ರರಲ್ಲಿ ಒಬ್ಬನನ್ನು ಕಳೆದುಕೊಂಡಿದೆ. ಜುಬೀನ್ ಅವರ ಧ್ವನಿಯು ಜನರನ್ನು ಚೈತನ್ಯಗೊಳಿಸುವ ಸಾಟಿಯಿಲ್ಲದ ಸಾಮರ್ಥ್ಯವನ್ನು ಹೊಂದಿತ್ತು. ನಮ್ಮ ಭವಿಷ್ಯದ ಪೀಳಿಗೆಯು ಅವರನ್ನು ಅಸ್ಸಾಂನ ಸಂಸ್ಕೃತಿಯ ಧೀಮಂತ ವ್ಯಕ್ತಿಯಾಗಿ ನೆನಪಿಸಿಕೊಳ್ಳುತ್ತದೆ. ಆ ಮಾಂತ್ರಿಕ ಧ್ವನಿ ಶಾಶ್ವತವಾಗಿ ಮೌನವಾಗಿದೆ ಎಂದು ಭಾವುಕ ಪೋಸ್ಟ್‌ ಹಾಕಿದ್ದಾರೆ.

    ಜುಬೀನ್ ಗರ್ಗ್ ಅಸ್ಸಾಮಿ ಮತ್ತು ಹಿಂದಿ ಮಾತ್ರವಲ್ಲದೆ, ಬಂಗಾಳಿ, ಮರಾಠಿ, ತಮಿಳು, ತೆಲುಗು ಮತ್ತು ನೇಪಾಳಿ ಸೇರಿದಂತೆ ಹಲವು ಭಾಷೆಗಳಿಗೆ ಹಾಡಿದ್ದಾರೆ. ತಮ್ಮ ಮೂರನೇ ವಯಸ್ಸಿನಲ್ಲೇ ಹಾಡಲು ಪ್ರಾರಂಭಿಸಿದರು. ಅವರ ಮೊದಲ ಆಲ್ಬಂ ‘ಅನಾಮಿಕಾ’ 1992 ರಲ್ಲಿ ಬಿಡುಗಡೆಯಾಯಿತು. ‘ಮಾಯಾ’, ‘ಜುಬೀನೋರ್ ಗಾನ್’, ‘ಕ್ಸಾಬ್ಡಾ’, ‘ಪಾಖಿ’, ‘ಶಿಶು’, ‘ಜಂತ್ರ’ ಅವರ ಅತ್ಯಂತ ಪ್ರೀತಿಯ ಅಸ್ಸಾಮೀಸ್ ಆಲ್ಬಂಗಳಲ್ಲಿ ಕೆಲವು. ಅವರು ‘ದಿಲ್ ಸೆ’, ‘ವಾಸ್ತವ್’, ‘ಫಿಜಾ’, ‘ಅಶೋಕ’, ‘ಕಾಂಟೆ’, ‘ಗ್ಯಾಂಗ್‌ಸ್ಟರ್’, ‘ಕ್ರಿಶ್ 3’ ಮತ್ತು ಇನ್ನೂ ಹೆಚ್ಚಿನ ಹಿಂದಿ ಚಿತ್ರಗಳಿಗೂ ಹಾಡಿದ್ದಾರೆ. ಆದಾಗ್ಯೂ, ಗ್ಯಾಂಗ್‌ಸ್ಟರ್‌ಗಾಗಿ ಅವರು ಹಾಡಿದ್ದ ‘ಯಾ ಅಲಿ’ ಹಾಡು ಅವರಿಗೆ ಅಸ್ಸಾಂನ ಹೊರಗೂ ಜನಪ್ರಿಯತೆ ತಂದುಕೊಟ್ಟಿತು.