ಜೈಪುರ್: ವಿದೇಶಿ ಟೀ-ಶರ್ಟ್ (t-shirt) ಧರಿಸಿ, ಭಾರತ್ ಜೋಡೋ ಯಾತ್ರೆ (Bharat Jodo Yatra) ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವ್ಯಂಗ್ಯವಾಡಿದ್ದಾರೆ.
‘ಭಾರತ್ ಜೋಡೋ ಯಾತ್ರೆ’ ವೇಳೆ ಹಣದುಬ್ಬರ ವಿಷಯವನ್ನು ಪ್ರಸ್ತಾಪಿಸಿದ್ದ ರಾಹುಲ್ ಗಾಂಧಿ (Rahul Gandhi) ಅವರು ಸ್ವತಃ ವಿದೇಶಿ ಬ್ರ್ಯಾಂಡ್‌ನ 41,257 ರೂ. ಮೌಲ್ಯದ ಟೀ ಶರ್ಟ್ ಧರಿಸಿದ್ದರು ಎಂದು ಬಿಜೆಪಿ ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಕಾಲೆಳೆದಿತ್ತು. ಇದು ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವಿನ ವಾಕ್ಸಮರಕ್ಕೆ ಕಾರಣವಾಗಿತ್ತು. ಇದೇ ವೇಳೆ ಅಮಿತ್ ಶಾ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಧರಿಸಿದ್ದ 41 ಸಾವಿರ ರೂ.ನ ಟೀಶರ್ಟ್ ಕುರಿತು ಬಿಜೆಪಿ ವ್ಯಂಗ್ಯ

ರಾಹುಲ್ ಗಾಂಧಿ ಅವರು ವಿದೇಶಿ ಟೀ-ಶರ್ಟ್ ಧರಿಸಿ ಭಾರತ್ ಜೋಡೋ ಯಾತ್ರೆಗೆ ಹೊರಟಿದ್ದಾರೆ. ನಾನು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಸಿಗರು ಸಂಸತ್ತಿನಲ್ಲಿ ಮಾಡಿದ ಭಾಷಣವನ್ನು ನೆನಪಿಸುತ್ತೇನೆ. ರಾಹುಲ್ ಬಾಬಾ ʻಭಾರತ ರಾಷ್ಟ್ರವಲ್ಲʼ ಎಂದು ಹೇಳಿದ್ದರು. ರಾಹುಲ್ ಗಾಂಧಿ, ನೀವು ಯಾವ ಪುಸ್ತಕದಲ್ಲಿ ಓದಿದ್ದೀರಿ? ಇದು ಲಕ್ಷಗಟ್ಟಲೆ ಜನರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ರಾಷ್ಟ್ರವಾಗಿದೆ. ರಾಹುಲ್ ಗಾಂಧಿ ಅವರು ಭಾರತದ ಇತಿಹಾಸವನ್ನು ಅಧ್ಯಯನ ಮಾಡಬೇಕಾಗಿದೆ ಎಂದು ಜೋಧ್‌ಪುರದಲ್ಲಿ ನಡೆದ ಬೂತ್ ಅಧ್ಯಕ್ಷ ಸಂಕಲ್ಪ್ ಸಮ್ಮೇಳನವನ್ನುದ್ದೇಶಿಸಿ ಮಾತನಾಡುವಾಗ ಶಾ ತಿಳಿಸಿದ್ದಾರೆ.
ಇಂಧನ ಬೆಲೆ ಏರಿಕೆ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಅಮಿತ್ ಶಾ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಿಲ್ಲ. ರಸ್ತೆ ನಿರ್ಮಿಸಲು ಸಾಧ್ಯವಿಲ್ಲ, ವಿದ್ಯುತ್ ನೀಡಲು ಸಾಧ್ಯವಿಲ್ಲ, ಉದ್ಯೋಗ ನೀಡಲು ಸಾಧ್ಯವಿಲ್ಲ. ಗೆಹ್ಲೋಟ್ ಸರ್ಕಾರವು ಕೇವಲ ವೋಟ್ ಬ್ಯಾಂಕ್ ಮತ್ತು ಓಲೈಕೆ ರಾಜಕಾರಣವನ್ನು ಮಾತ್ರ ಮಾಡಬಲ್ಲದು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ – ರಾಹುಲ್ ಗಾಂಧಿ ವಿಶ್ರಾಂತಿಗೆ ವಾಹನದಲ್ಲಿ ಬೆಡ್, ಎಸಿ ವ್ಯವಸ್ಥೆ

Leave a Reply