ತಮಿಳುನಾಡಿಗೆ ಕಾವೇರಿ ನೀರು ಬಿಡಿ: ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ

– ಕೇಂದ್ರ, ಕರ್ನಾಟಕ ಸರ್ಕಾರಕ್ಕೆ ತಮಿಳುನಾಡು ರೈತರ ಆಗ್ರಹ

ಚೆನ್ನೈ: ಕಾವೇರಿ ನೀರನ್ನು (Cauvery Water) ತಮಿಳುನಾಡಿಗೆ (Tamil Nadu Farmers) ಬಿಡುವಂತೆ ಆಗ್ರಹಿಸಿ ರೈತರು ತಿರುಚಿರಾಪಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಒತ್ತಾಯಿಸಿ ರೈತ ಅಯ್ಯಕಣ್ಣು ನೇತೃತ್ವದಲ್ಲಿ ರೈತರ ಗುಂಪು ಮುಕ್ಕೊಂಬು ಅಣೆಕಟ್ಟೆಯಲ್ಲಿ ಪ್ರತಿಭಟನೆ ನಡೆಸಿತು. ಇದನ್ನೂ ಓದಿ: ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ CWMA ಸೂಚನೆ

ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಮತ್ತು ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವುದು ಮುಂತಾದ ಭರವಸೆಗಳನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇದೇ ವೇಳೆ ಒತ್ತಾಯಿಸಿದರು.

ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಾರದ ಹಿಂದೆಯಷ್ಟೇ ಸೂಚನೆ ನೀಡಿತ್ತು. ಇದನ್ನೂ ಓದಿ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಹರಿಸಲು ಪ್ರಾಧಿಕಾರ ನಿರ್ದೇಶನ ನೀಡಿತ್ತು. ಈ ಹಿಂದೆ ಕಾವೇರಿ ನೀರು ನಿರ್ವಹಣಾ ಸಮಿತಿಯೂ 2.5 ಟಿಎಂಸಿ ನೀರು ಬಿಡಲು ಶಿಫಾರಸು ಮಾಡಿತ್ತು.