ಸ್ವಾಮೀಜಿಗಳ ಪಲ್ಲಕ್ಕಿ ಉತ್ಸವಕ್ಕೆ ಬ್ರೇಕ್ – ನಿರ್ಬಂಧ ಹೇರಿದ್ರೆ ನಾನೇ ಪಲ್ಲಕ್ಕಿ ಹೊರುತ್ತೇನೆಂದ ಅಣ್ಣಾಮಲೈ

Pallakki Festival

ಚೆನ್ನೈ: ತಮಿಳುನಾಡಿನ ಧರ್ಮಪುರಂನ ಅಧೀನಂ ಪೀಠದಲ್ಲಿ ಸ್ವಾಮೀಜಿಗಳನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಮೆರವಣಿಗೆ ನಡೆಸುವುದನ್ನು ತಮಿಳುನಾಡು ರಾಜ್ಯ ಸರ್ಕಾರ ನಿಷೇಧಿಸಿದೆ. ಇದರಿಂದ ಕೆರಳಿರುವ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿವೆ.

MK Stalin (1)

ಪಲ್ಲಕ್ಕಿ ಉತ್ಸವವನ್ನು ಡಿಎಂಕೆ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಇದರಿಂದ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಕೆರಳಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಧಾರ್ಮಿಕ ಆಚರಣೆಗಳಿಗೆ ಅಡ್ಡಿ ಉಂಟುಮಾಡುತ್ತಿದ್ದಾರೆ. ನಿರ್ಬಂಧ ಹೇರಿದರೆ ನಾನೇ ಪಲ್ಲಕ್ಕಿ ಹೊರುವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನೀವು ಮಮತಾ ಬ್ಯಾನರ್ಜಿ ಏಜೆಂಟ್‌, ಇಲ್ಲಿಂದ ತೊಲಗಿ: ಚಿದಂಬರಂ ವಿರುದ್ಧ ಕಾಂಗ್ರೆಸ್‌ ಮುಖಂಡರು, ವಕೀಲರ ಆಕ್ರೋಶ

ಮಧುರೈ ಅಧೀನಂ ಪೀಠದ ಮಠಾಧೀಶರಾದ ಜ್ಞಾನಂಸಂಬಂಧ ದೇಶಿಕ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಬ್ರಿಟಿಷರು ಕೂಡ ಈ ಆಚರಣೆಗೆ ಅಡ್ಡಿ ಮಾಡಿರಲಿ. ಈಗೇಕೆ ಅಡ್ಡಿ? ಸರ್ಕಾರಗಳು ಧಾರ್ಮಿಕತೆಗೆ ಗೌರವ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Annamalai_EPS123

ಈ ಬೆನ್ನಲ್ಲೇ ಧರ್ಮಪುರಂ ಅಧೀನ ಮಠಾಧೀಶರೊಬ್ಬರು ಎಂ.ಕೆ.ಸ್ಟಾಲಿನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮುಜರಾಯಿ ಇಲಾಖೆ ಸಚಿವ ಪಿ.ಕೆ.ಶೇಖರ್ ಬಾಬು ತಿಳಿಸಿದ್ದಾರೆ. ಇದನ್ನೂ ಓದಿ: ರಕ್ಷಾಕವಚ ಭೇದಿಸುತ್ತಿವೆ ಭಯೋತ್ಪಾದಕರ ಬುಲೆಟ್‌ – ಹೊಸ ಬುಲೆಟ್‌ಪ್ರೂಫ್‌ ಜಾಕೆಟ್‌ ಬೇಕೆಂದ ಭಾರತೀಯ ಸೇನೆ

ಇಲ್ಲಿನ ಧರ್ಮಪುರಂನ ಅಧೀನ ಪೀಠದಲ್ಲಿ ಪಲ್ಲಕ್ಕಿ ಉತ್ಸವ ನಡೆಯುತ್ತಿತ್ತು. ಸ್ವಾಮೀಜಿಗಳನ್ನು ಪಲ್ಲಕ್ಕಿ ಮೇಲೆ ಕೂರಿಸಿ ಅದನ್ನು ಭಕ್ತರು ಹೊರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಕೆಲ ಸಂಘಟನೆಗಳು ದೂರು ನೀಡಿದ್ದವು. ಇದನ್ನು ಪರಿಗಣಿಸಿದ್ದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಸರ್ಕಾರ ಪಲ್ಲಕ್ಕಿ ಮೆರವಣಿಗೆಯನ್ನು ನಿಷೇಧಿಸಿತ್ತು.

Comments

Leave a Reply

Your email address will not be published. Required fields are marked *