ಇಸ್ಲಾಮಾಬಾದ್: ಪಾಠ ನೆನಪಿಲ್ಲ ಎಂದ 10ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕ ಹೊಡೆದಿದ್ದು, ಇದರಿಂದ ಬಾಲಕ ಮೃತಪಟ್ಟ ಘಟನೆ ಪಾಕಿಸ್ತಾನದ ಲಾಹೋರ್ ನ ಶಾಲೆಯೊಂದರಲ್ಲಿ ನಡೆದಿದೆ.
ಶಿಕ್ಷಕ ಕ್ಲಾಸ್‍ನಲ್ಲಿ ವಿದ್ಯಾರ್ಥಿಗೆ ಪ್ರಶ್ನೆ ಕೇಳಿದ್ದಾನೆ. ಆದರೆ ವಿದ್ಯಾರ್ಥಿಗೆ ಶಿಕ್ಷಕ ಮಾಡಿದ ಪಾಠ ನೆನಪಿರಲಿಲ್ಲ. ಇದರಿಂದ ಕೋಪಗೊಂಡ ಶಿಕ್ಷಕ 10ನೇ ತರಗತಿ ವಿದ್ಯಾರ್ಥಿ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದು, ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಕ್ಕೆ ಪೊಲೀಸರು ಶಿಕ್ಷಕನನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ.
ತನ್ನ ಮಗನ ಸಾವನ್ನು ಕಂಡ ತಂದೆ ಶಿಕ್ಷಕನ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಅಲ್ಲದೆ ನನ್ನ ಮಗನಿಗೆ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ. ಫೀಸ್ ಕಟ್ಟದ ಕಾರಣ ಶಾಲೆ ಸಿಬ್ಬಂದಿ ನನ್ನ ಮಗನಿಗೆ ಸಾಕಷ್ಟು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಯ ತಂದೆ ದೂರು ನೀಡಿದ್ದಾರೆ.

Leave a Reply