Under-19 World Cup: ಫೈನಲ್‍ನಲ್ಲಿ ಟೀಂ ಇಂಡಿಯಾ ದಾಖಲೆ

ಮುಂಬೈ: ಅಂಡರ್-19 ವಿಶ್ವಕಪ್‍ನಲ್ಲಿ ಭಾರತ ಯುವ ಪಡೆ ಸತತ ನಾಲ್ಕನೇ ವರ್ಷ ಫೈನಲ್‍ಗೆ ಲಗ್ಗೆ ಇಟ್ಟು ದಾಖಲೆ ನಿರ್ಮಿಸಿದೆ.

ಟೀಂ ಇಂಡಿಯಾ 2016, 2018, 2020 ಮತ್ತು 2022ರಲ್ಲಿ ಸತತವಾಗಿ ಫೈನಲ್‍ಗೆ ಅರ್ಹತೆ ಗಳಿಸಿದ ಏಕೈಕ ತಂಡ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. 2016ರ ಫೈನಲ್‍ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋತು ರನ್ನರ್ ಅಪ್ ಆದರೆ, 2018ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆದ್ದು ಚಾಂಪಿಯನ್ ಆಗಿತ್ತು. ಬಳಿಕ 2020ರಲ್ಲಿ ಬಾಂಗ್ಲದೇಶ ವಿರುದ್ಧ ಸೋತು ರನ್ನರ್ ಅಪ್ ಆದರೆ, ಇದೀಗ 2022ರಲ್ಲಿ ಇಂಗ್ಲೆಂಡ್ ವಿರುದ್ಧ ಫೈನಲ್ ಪಂದ್ಯ ಆಡಬೇಕಾಗಿದೆ. ಇದನ್ನೂ ಓದಿ: ಕೊನೆಯ ಎಸೆತದಲ್ಲಿ 5 ರನ್ ಗುರಿ – ಸಿಕ್ಸ್, ಫೋರ್ ಬಾರಿಸದೆ ಪಂದ್ಯ ಗೆದ್ದ ತಂಡ, ವೀಡಿಯೋ ವೈರಲ್!

2022ರ ಅಂಡರ್-19 ವಿಶ್ವಕಪ್‍ನಲ್ಲಿ ಯಶ್ ಧುಲ್ ನಾಯಕತ್ವದ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದೆ. ನಾಳೆ ಭಾರತ ಮತ್ತು ಇಂಗ್ಲೆಂಡ್ ನಡುವೆ ಫೈನಲ್ ಪಂದ್ಯ ನಡೆಯಲಿದೆ. ಈ ಬಾರಿ ಟೀಂ ಇಂಡಿಯಾ ಫೈನಲ್‍ನಲ್ಲಿ ಗೆದ್ದು 5ನೇ ಬಾರಿ ಅಂಡರ್-19 ವಿಶ್ವಕಪ್ ಪ್ರಶಸ್ತಿ ಎತ್ತಿ ಹಿಡಿಯುವ ವಿಶ್ವಾಸದಲ್ಲಿದೆ. ಇದನ್ನೂ ಓದಿ: U -19 World Cup 2022: 96 ರನ್‌ಗಳ ಭರ್ಜರಿ ಜಯ, ಫೈನಲಿಗೆ ಭಾರತ

ಅಂಡರ್-19 ಇತಿಹಾಸದಲ್ಲಿ ಟೀಂ ಇಂಡಿಯಾ 7 ಬಾರಿ ಫೈನಲ್ ತಲುಪಿದೆ. ಭಾರತ 2000ದಲ್ಲಿ ಮೊಹಮ್ಮದ್ ಕೈಫ್, 2008ರಲ್ಲಿ ವಿರಾಟ್ ಕೊಹ್ಲಿ, 2012ರಲ್ಲಿ ಉನ್ಮುಕ್ ಚಾಂದ್ ಮತ್ತು 2018ರಲ್ಲಿ ಪೃಥ್ವಿ ಶಾ ನೇತೃತ್ವದಲ್ಲಿ ಗೆದ್ದು ಚಾಂಪಿಯನ್ ಆಗಿದೆ.

Comments

Leave a Reply

Your email address will not be published. Required fields are marked *