ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ – ಪ್ರಯಾಣಿಕರ ಪರದಾಟ

ಬೆಂಗಳೂರು: ನಗರದ ನಮ್ಮ ಮೆಟ್ರೋ (Namma Metro) ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಪರದಾಡಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ನೇರಳೆ ಮಾರ್ಗದ (Purple Line) ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಕಾರಣದಿಂದಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಈ ಹಿನ್ನೆಲೆ ಕೆಂಗೇರಿಯಿಂದ ಬೈಯಪ್ಪನಹಳ್ಳಿಗೆ ತೆರಳುವ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಮ್ಮ ಮೆಟ್ರೋ, ಸಿಗ್ನಲ್ ಸಮಸ್ಯೆಯಿಂದಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸಿಗ್ನಲ್ ಸರಿ ಮಾಡೋ ಪ್ರಯತ್ನದಲ್ಲಿದ್ದೇವೆ. ಆಗಿರೋ ಸಮಸ್ಯೆಯನ್ನು ಬಗೆಹರಿಸೋ ನಿಟ್ಟಿನಲ್ಲಿ ಟೆಕ್ನಿಕಲ್ ಟೀಮ್ ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ. ಇದನ್ನೂ ಓದಿ: ನ್ಯೂಯಾರ್ಕ್‍ನಲ್ಲಿ ಶಾಸ್ತ್ರೀಯ ನೃತ್ಯ ಪ್ರದರ್ಶನ- ಜನಮನ ಸೆಳೆದ ಬೆಂಗಳೂರಿನ ಗುರು ರಶ್ಮಿ ನೃತ್ಯ ತಂಡ

ಆದರೆ ಪೀಕ್ ಹವರ್‌ನಲ್ಲೇ ಮೆಟ್ರೋ ಕೈಕೊಟ್ಟಿದ್ದು, ಟ್ರೈನ್ ಬಾರದ ಹಿನ್ನೆಲೆ ಪ್ರಯಾಣಿಕರು ಪರದಾಡಿದ್ದಾರೆ. ಆಫೀಸ್‌ಗೆ ಹೊರಟವರೆಲ್ಲಾ ನಿಲ್ದಾಣದಲ್ಲೇ ಮೆಟ್ರೋಗಾಗಿ ಕಾಯೋ ಪರಿಸ್ಥಿತಿ ಉಂಟಾಗಿದೆ. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]