ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ಬೆಂಬಲಿಸುವ ಪಕ್ಷದ ನಾಯಕರನ್ನು ರಕ್ಷಿಸುತ್ತಾರೆ ಎಂದು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
ಆಂಧ್ರ ಪ್ರದೇಶದ ಅಮರಾವತಿಯಲ್ಲಿ ಮಾತನಾಡಿ ಅವರು, ಕೆ.ಚಂದ್ರಶೇಖರ್ ರಾವ್ ನಿವಾಸದ ಮೇಲೆ ದಾಳಿ ಮಾಡಲು ಸಿಬಿಐ ತಂಡವು ಹೈದ್ರಾಬಾದ್‍ಗೆ ಬಂದಿತ್ತು. ಆಗ ಕೆ.ಚಂದ್ರಶೇಖರ್ ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡುತ್ತಿದ್ದಂತೆ ಸಿಬಿಐ ತಂಡವು ವಾಪಾಸ್ ಆಗಿದೆ. ಜೊತೆಗೆ ಕೆ.ಚಂದ್ರಶೇಖರ್ ರಾವ್ ಅವರ ಮೇಲಿರುವ ಇಎಸ್‍ಐ ಆಸ್ಪತ್ರೆಯ ಹಗರಣವನ್ನು ಮುಚ್ಚಿ ಹಾಕಲಾಗುತ್ತಿದೆ ಎಂದು ದೂರಿದ್ದಾರೆ.

ರಾಜಕೀಯ ಪಕ್ಷಗಳನ್ನು ತಮ್ಮ ಮುಂದೆ ಶರಣಾಗುವಂತೆ ಪ್ರಧಾನಿ ಮೋದಿ ಅವರು ಪ್ಲಾನ್ ಮಾಡುತ್ತಿದ್ದಾರೆ. ತಮ್ಮ ವಿರುದ್ಧ ನಿಲ್ಲುವ ರಾಜಕೀಯ ನಾಯಕರ ವಿರುದ್ಧ ಸಿಬಿಐ ಅಸ್ತ್ರವನ್ನು ಪ್ರಯೋಗಿಸುತ್ತಾರೆ. ಹೀಗಾಗಿ ತಮ್ಮ ಮುಂದೆ ಶರಣಾಗುವ ನಾಯಕರನ್ನು ರಕ್ಷಿಸುತ್ತಾರೆ ಎಂದು ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾದಲ್ಲಿ ಕೆ.ಚಂದ್ರಶೇಖರ್ ರಾವ್ ಅವರು 2004ರಿಂದ 2006ರವರೆಗೆ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾಗಿದ್ದರು. ಈ ವೇಳೆ ಅವರ ವಿರುದ್ಧ ಇಎಸ್‍ಐ ಆಸ್ಪತ್ರೆಯ ಬಹುಕೋಟಿ ಹಗರಣ ದಾಖಲಾಗಿತ್ತು ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply