ಉದ್ಧವ್ ಠಾಕ್ರೆಯನ್ನು ಭೇಟಿಯಾದ ತೆಲಂಗಾಣ CM ಕೆಸಿಆರ್

ಮುಂಬೈ: ಬಿಜೆಪಿಯ ಜನ ವಿರೋಧಿ ನೀತಿಗಳ ವಿರುದ್ಧ ಆರಂಭಿಸಿರುವ ಅಭಿಯಾನದ ಅಂಗವಾಗಿ ಟಿಆರ್‍ಎಸ್ ಮುಖ್ಯಸ್ಥರಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಭಾನುವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿದ್ದಾರೆ.

ಶಿವಸೇನೆಯ ಅಧ್ಯಕ್ಷರಾಗಿರುವ ಉದ್ಧವ್ ಠಾಕ್ರೆ ಅವರು ಇತ್ತೀಚೆಗಷ್ಟೇ ಚಂದ್ರಶೇಖರ ರಾವ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಮುಂಬೈಗೆ ಆಹ್ವಾನಿಸಿದ್ದರು. ಠಾಕ್ರೆ ಅವರ ಆಹ್ವಾನದ ಮೇರೆಗೆ ಅವರ ನಿವಾಸಕ್ಕೆ ಇಂದು ಚಂದ್ರಶೇಖರ ರಾವ್ ಅವರು ಭೇಟಿ ನೀಡಿದ್ದಾರೆ. ಈ ಸಭೆಯು ಮುಖ್ಯ ಉದ್ದೇಶವೆಂದರೆ ಬಿಜೆಪಿಯ ಜನ ವಿರೋಧಿ ನೀತಿಗಳ ವಿರುದ್ಧ ರಾಷ್ಟ್ರಮಟ್ಟದಲ್ಲಿ ರಾಜಕೀಯ ಏಕತೆಯ ಪ್ರಕ್ರಿಯೆಯನ್ನು ಚುರುಕುಗೊಳಿಸುವುದಾಗಿದೆ ಎಂದು ಉದ್ಧವ್ ಠಾಕ್ರೆ ಈ ಮುನ್ನ ತಿಳಿಸಿದ್ದರು. ಇದನ್ನೂ ಓದಿ: ಭೂ ಕಬಳಿಕೆ ಆರೋಪ – ಶಾಸಕ ಜಮೀರ್‌, ಸಹೋದರರ ವಿರುದ್ಧ ಎಫ್‌ಐಆರ್‌

ಶಿವಸೇನಾ ಸಂಸದ ಮತ್ತು ಪಕ್ಷದ ಮುಖ್ಯ ವಕ್ತಾರ ಸಂಜಯ್ ರಾವತ್ ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದು, ನಂತರದ ದಿನದಲ್ಲಿ ಚಂದ್ರಶೇಖರ್ ರಾವ್ ಅವರು ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್‍ನೊಂದಿಗೆ ಅಧಿಕಾರವನ್ನು ಹಂಚಿಕೊಂಡಿರುವ ಎನ್‍ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾಗಲಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಹೇಳಿದ್ದೆ ವೇದ ವಾಕ್ಯನಾ? ಬೊಮ್ಮಾಯಿಗಿಂತ ಹಿರಿಯ ನಾನು: ಸಿದ್ದರಾಮಯ್ಯ

ಬಿಜೆಪಿ ನೀತಿಗಳ ವಿರುದ್ಧ ಹೋರಾಟ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಎತ್ತಿಹಿಡಿಯುವ ರಾವ್ ಅವರ ಹೋರಾಟ್ಟೆ ಸಂಪೂರ್ಣ ಬೆಂಬಲ ನೀಡುವುದಾಗಿ ಠಾಕ್ರೆ ಇತ್ತೀಚಿಗೆ ಘೋಷಿಸಿದ್ದರು. ಹಲವು ವಿಷಯಗಳಿಂದ ಬಿಜೆಪಿ ಮತ್ತು ಕೇಂದ್ರವನ್ನು ಟೀಕಿಸುತ್ತಾ ಬಂದಿರುವ ತೆಲಂಗಾಣ ಸಿಎಂ, ಬಿಜೆಪಿ ಮತ್ತು ಎನ್‍ಡಿಎ ಸರ್ಕಾರದ ವಿರುದ್ಧ ವಿವಿಧ ರಾಜಕೀಯ ಪಕ್ಷಗಳನ್ನು ಒಗ್ಗೂಡಿಲು ಪ್ರಯತ್ನಗಳನ್ನು ನಡೆಸುತ್ತಿದ್ದು, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದ ಸಹವರ್ತಿಗಳೊಂದಿಗೆ ಸಭೆ ನಡೆಸುವುದಾಗಿ ಹೇಳಿದ್ದರು.

Comments

Leave a Reply

Your email address will not be published. Required fields are marked *