ಮೋದಿಯನ್ನು ಭೇಟಿಯಾದ ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್

Tamilisai Soundararajan

ನವದೆಹಲಿ: ತೆಲಂಗಾಣ ಮತ್ತು ಪುದುಚೇರಿ ರಾಜ್ಯಪಾಲೆಯಾದ ತಮಿಳಿಸೈ ಸೌಂದರರಾಜನ್ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಜೊತೆಗೆ ಅಮಿತ್ ಶಾ ಅವರನ್ನು ಸಹ ಭೇಟಿಯಾಗಲಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಪ್ರಗತಿ ಭವನ ಮತ್ತು ರಾಜಭವನ ನಡುವಿನ ಅಂತರ ಹೆಚ್ಚುತ್ತಿರುವ ಮಧ್ಯೆ ರಾಜ್ಯಪಾಲರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ. ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಕೂಡ ದೆಹಲಿಯಲ್ಲಿರುವುದು ಎಲ್ಲರಲ್ಲಿಯೂ ಕುತೂಹಲ ಕೆರಳಿಸಿದೆ. ಇದನ್ನೂ ಓದಿ: ಡ್ರಾಮಾ ಕ್ವೀನ್ ಭಾರತಿ ಸಿಂಗ್ ಗಂಡನಿಗೆ 6 ಮಕ್ಕಳು ಬೇಕಂತೆ : ಹೆರಿಗೆ ನೋವಿನ ಕ್ಷಣಗಳನ್ನು ಹಂಚಿಕೊಂಡ ಹಾಸ್ಯ ಕಲಾವಿದೆ

ಜೂನ್ 2021 ರಿಂದಲೂ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಅವರು ರಾಜ್ಯಪಾಲರನ್ನು ಭೇಟಿ ಮಾಡಿಲ್ಲ ಮತ್ತು ರಾಜ್ಯಪಾಲರು ಭಾಗವಹಿಸಿದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸಿಲ್ಲ ಎಂದು ಮೂಲಗಳ ಮೂಲಕ ತಿಳಿದುಬಂದಿದೆ. ಅಲ್ಲದೇ ರಾಜ್ಯಪಾಲರನ್ನು ಭೇಟಿಯಾಗಲು ಅಥವಾ ವಿವರಣೆ ನೀಡಲು ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸಿಎಂ ಅವಕಾಶ ನೀಡುತ್ತಿಲ್ಲ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ವಿವಾದಿತ ಸಮಾಧಿಯನ್ನ ಶಾಂತಿಯುತವಾಗಿ ಸ್ಥಳಾಂತರಿಸಿದ ಕ್ರೈಸ್ತ ಸಮುದಾಯ

ಇತ್ತೀಚೆಗಷ್ಟೇ ರಾಜಭವನದಲ್ಲಿ ಆಯೋಜಿಸಲಾಗಿದ್ದ ಯುಗಾದಿ ಪೂರ್ವ ಕಾರ್ಯಕ್ರಮದಿಂದ ಅರ್ಧದಲ್ಲಿಯೇ ಕೆಸಿಆರ್ ಕ್ಯಾಬಿನೆಟ್ ಮಂತ್ರಿಗಳು ಎದ್ದು ಹೋಗಿದ್ದರು. ಮುಳುಗು ಜಿಲ್ಲೆಯ ಸಮ್ಮಕ್ಕ ಸರಳಮ್ಮ ಜಾತ್ರೆಗೆ ರಾಜ್ಯಪಾಲರು ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ಇತ್ತೀಚೆಗಷ್ಟೇ ನೂತನವಾಗಿ ಉದ್ಘಾಟನೆಗೊಂಡ ಯದಾದ್ರಿ ದೇವಸ್ಥಾನಕ್ಕೆ ಭೇಟಿ ನೀಡಿದಗಲೂ ಜಿಲ್ಲಾಧಿಕಾರಿಗಳು ರಾಜ್ಯಪಾಲರನ್ನು ಬರಮಾಡಿಕೊಂಡಿರಲಿಲ್ಲ.

Comments

Leave a Reply

Your email address will not be published. Required fields are marked *