ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ಗೆ (Bus) ಕಾರು (Car) ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ (Accident) ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ನಡೆದಿದೆ.

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಹಾಸನ ಕಡೆಯುಂದ ಬರುತ್ತಿದ್ದ ಸ್ವಿಫ್ಟ್ ಕಾರು ಮುಂದೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕ ಚಟುವಟಿಕೆ- 6 ರಾಜ್ಯಗಳ 51 ಸ್ಥಳಗಳಲ್ಲಿ NIA ದಾಳಿ

ಮೃತರನ್ನು ಬೆಂಗಳೂರಿನ ಬೆಂಡಿಗನಹಳ್ಳಿಯ ನಮಿತಾ, ರಾಜಸ್ಥಾನ ಮೂಲದ ಪಂಕಜ್ ಶರ್ಮಾ, ಬೆಂಗಳೂರಿನ ವಂಶಿ ಕೃಷ್ಣ, ಧಾರವಾಡದ ರಘುನಾಥ್ ಎಂದು ಗುರುತಿಸಲಾಗಿದೆ. ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮದುವೆ ಹಾಲ್‍ನಲ್ಲಿ ಅಗ್ನಿ ಅವಘಡ- 100 ಮಂದಿ ದುರ್ಮರಣ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]