ಜಮ್ಮು-ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಅಟ್ಟಹಾಸ- ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಹೆಚ್ಚಾಗಿದೆ. ಪೂಂಚ್ ಜಿಲ್ಲೆಯಲ್ಲಿಂದು ಉಗ್ರರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾಧಿಕಾರಿ ಹಾಗೂ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಸುರಾನ್‍ಕೋಟ್ ಪ್ರಾಂತ್ಯದೊಳಗೆ ಉಗ್ರರು ನುಗ್ಗಿರೋ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೇನೆ ಕಾರ್ಯಾಚರಣೆ ಆರಂಭಿಸಿತ್ತು. ಚರ್ಮೆರ್ ಅರಣ್ಯ ಪ್ರದೇಶದಲ್ಲಿ ಶೋಧಕಾರ್ಯ ನಡೆಸುತ್ತಿದ್ದಾಗ, ಅಡಗಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ವರು ಯೋಧರು ಹುತಾತ್ಮರಾದರೆ, ಒಬ್ಬರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ ಪಾಕ್ ಗಡಿಯ ಎಲ್‍ಓಸಿಯಲ್ಲಿ ಮತ್ತಷ್ಟು ಶಸ್ತ್ರಸಜ್ಜಿತ ಉಗ್ರರು ನುಸುಳಲು ಹೊಂಚು ಹಾಕಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆ, ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ: ಅಮಿತ್‌ ಶಾ

ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಕ್ಟೋಬರ್ 23ರಿಂದ 25ಕ್ಕೆ ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆಯಿದ್ದು, ಭದ್ರತಾ ವ್ಯವಸ್ಥೆ, ಹಲವು ಅಭಿವೃದ್ಧಿ ಯೋಜನೆಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಕಾಶ್ಮೀರದಲ್ಲಿ ಹಿಂದೂ-ಸಿಖ್‍ಗಳನ್ನು ಉಗ್ರರ ಕೊಲೆ ಮಾಡುತ್ತಿದ್ದರೂ ಮೆಹಬೂಬಾ ಮುಫ್ತಿ ಮಾತ್ರ ಪಾಕಿಸ್ತಾನದ ಜೊತೆಗೆ ಭಾರತ ಮಾತನಾಡಬೇಕು ಎಂದಿದ್ದಾರೆ. ಇದನ್ನೂ ಓದಿ: ಹಣವೇ ಇಲ್ಲ ಲಾಕ್ ಮಾಡುವ ಅವಶ್ಯಕತೆ ಇತ್ತಾ?- ಮಾಲೀಕನಿಗೆ ಪತ್ರ ಬರೆದ ಕಳ್ಳರು

Comments

Leave a Reply

Your email address will not be published. Required fields are marked *