ದಾಳಿ ಮಾಡಿದವರು ಸಿವಿಲ್ ಉಗ್ರಗಾಮಿಗಳು, ಕಂಡಲ್ಲಿ ಗುಂಡಿಟ್ಟು ಕೊಲ್ಲಬೇಕು: ಸೊಗಡು ಶಿವಣ್ಣ

ತುಮಕೂರು: ದಾಳಿ ಮಾಡಿದವರು ಸಿವಿಲ್ ಉಗ್ರಗಾಮಿಗಳು, ಅವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಕಿಡಿಕಾರಿದರು.

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಪೊಲೀಸರು 15ಕ್ಕೂ ಹೆಚ್ಚಿನ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಈ ಹಿನ್ನೆಲೆ ಸೊಗಡು ಶಿವಣ್ಣ ಅವರು ನಾಗೇಶ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾಳಿ ಮಾಡಿದವರು ಸಿವಿಲ್ ಉಗ್ರಗಾಮಿಗಳು. ಅವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲಬೇಕು. ಇಂಟಲಿಜೆನ್ಸಿ ವಿಫಲ ಆಗಿರೋದು ಇಲ್ಲಿ ಕಾಣುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಧು ಮೂಸೆ ವಾಲಾ ಹತ್ಯೆ: ತನಿಖೆ ವೇಳೆ ಶಾಕಿಂಗ್ ವಿಚಾರ ಬಯಲು 

ದಾಳಿ ಮಾಡಿದವರು ಯಾರೂ ಈ ಊರಿನವರಲ್ಲ. ಬೇರೆ ಊರಿನಿಂದ ಬಂದವರು. ಈಗಾಗಲೇ 15 ಜನ ಅರೆಸ್ಟ್ ಮಾಡಲಾಗಿದೆ. ಅದರಲ್ಲಿ 6 ಜನ ಮುಸ್ಲಿಂ ಯುವಕರಿದ್ದಾರೆ. ಇವರುಗಳು ಮಾರಕಾಸ್ತ್ರ ತಂದಿರುವ ಶಂಕೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಪ್ರತಿಭಟನೆ
ಶಿಕ್ಷಣ ಸಚಿವರ ಮನೆಗೆ ಓSUI ಕಾರ್ಯಕರ್ತರಿಂದ ಮುತ್ತಿಗೆ ಯತ್ನ ಹಿನ್ನೆಲೆ ಇಂದು ಜಿಲ್ಲಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲೆಯ ಎಲ್ಲ ತಾಲೂಕು ಕಛೇರಿಗಳ ಮುಂದೆ ಪ್ರತಿಭಟನೆ ನಡೆಸಲು ಬಿಜೆಪಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದನ್ನೂ ಓದಿ: ನಾಗೇಶ್‌ ಮನೆಗೆ ದಾಳಿ ನಡೆಸಿದವರು ತುಮಕೂರಿನವರಲ್ಲ : ಎಫ್‌ಐಆರ್‌ನಲ್ಲಿ ಏನಿದೆ?

ಸಚಿವರ ಮನೆಗೆ ನುಗ್ಗಿ ಬೆಂಕಿ ಹಚ್ಚುವ ಕೃತ್ಯವನ್ನ ಖಂಡಿಸಿ, ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಬಿಜೆಪಿ ಕಾರ್ಯಕರ್ತರು ತಿಪಟೂರಿನಲ್ಲಿ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

Comments

Leave a Reply

Your email address will not be published. Required fields are marked *