ಪ್ರಿಯತಮೆಯ ಆತ್ಮಹತ್ಯೆಯಿಂದ ಮನನೊಂದು ಪ್ರಿಯಕರನೂ ಆತ್ಮಹತ್ಯೆ

ತುಮಕೂರು: ಪ್ರಿಯತಮೆಯ ಆತ್ಮಹತ್ಯೆಯಿಂದ ಮನನೊಂದು ಪ್ರಿಯಕರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮಾಗಡಿ ರಸ್ತೆ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ಆರು ತಿಂಗಳ ಬಳಿಕ ಅಸ್ತಿಪಂಜರವಾಗಿ ಶವ ಪತ್ತೆಯಾಗಿದೆ.

ಮೂಲತಃ ಕುಣಿಗಲ್ ತಾಲೂಕಿನ ಅರಮನೆ ಹೊನ್ನಮಾಚಹಳ್ಳಿ ಗ್ರಾಮದ ಹಾಲಿ ಬೆಂಗಳೂರು ಸುಂಕದಕಟ್ಟೆ ನಿವಾಸಿ ಸಂತೋಷ್ (28), ಹುಲಿಯೂರುದುರ್ಗ ಹೋಬಳಿ ಕೆಬ್ಬಳಿ ಗ್ರಾಮದ ಶಾಲಿನಿ (21) ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳಾಗಿದ್ದಾರೆ. ಇದನ್ನೂ ಓದಿ:  ರಾಷ್ಟ್ರಧ್ವಜದ ಮೇಲೆ ನಿಂತು ನಮಾಜ್- ವ್ಯಕ್ತಿಯ ಬಂಧನ

POLICE JEEP

ಸಂತೋಷ್ ಹಾಗೂ ಶಾಲಿನಿ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಹುಡುಗಿಯ ಕಡೆಯವರು ಸಂತೋಷ್‍ಗೆ ಕೊಟ್ಟು ಮದುವೆ ಮಾಡಲು ನಿರಾಕರಿಸಿದ್ದರು ಎನ್ನಲಾಗಿದೆ. ಇದರಿಂದ ಬೇಸರಗೊಂಡ ಯುವತಿ 2021ರ ಅಕ್ಟೋಬರ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ವಿಚಾರ ತಿಳಿದು ಸಂತೋಷ್ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಆತನನ್ನು ಪೋಷಕರು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿದ್ದರು. ಈ ಸಂಬಂಧ ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಯಮುನೋತ್ರಿ ದೇವಸ್ಥಾನದ ಹೆದ್ದಾರಿಯಲ್ಲಿ ಗೋಡೆ ಕುಸಿತ – 10 ಸಾವಿರ ಮಂದಿ ಸಂಕಷ್ಟದಲ್ಲಿ

ಪುನಃ 6 ತಿಂಗಳ ಹಿಂದೆ ಸಂತೋಷ್ ನಾಪತ್ತೆಯಾಗಿದ್ದನು. ಹುಲಿಯೂರುದುರ್ಗ ದಟ್ಟ ಅರಣ್ಯ ಪ್ರದೇಶದಲ್ಲಿ ಅನಾಮದೇಯವಾಗಿ ನಿಲ್ಲಿಸಿದ ಬೈಕ್ ಹಾಗೂ ಅಸ್ತಿಪಂಜರವಾಗಿ ಬಿದ್ದಿದ್ದ ಮೃತದೇಹವನ್ನು ನೋಡಿದ ಅರಣ್ಯ ಸಿಬ್ಬಂದಿ ಹುಲಿಯೂರುದುರ್ಗ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಪಿಎಸ್‍ಐ ಚೇತನ್ ಭೇಟಿ ನೀಡಿ ಪರಿಶೀಲಿಸಿ, ಬೈಕ್ ಹಾಗೂ ಅಸ್ತಿಪಂಜರ ದೇಹವನ್ನು ವಶಕ್ಕೆ ಪಡೆದು, ತನಿಖೆ ನಡೆಸಿದಾಗ ಸಂತೋಷ್‍ನ ಮೃತ ದೇಹ ಎಂದು ತಿಳಿದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Comments

Leave a Reply

Your email address will not be published. Required fields are marked *