ಕಳೆದ ಎರಡು ವರ್ಷಗಳಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆದಿಲ್ಲ. ಕೊರೋನಾ ನೆಪ ಮಾಡಿಕೊಂಡು ಚುನಾವಣೆಯನ್ನು ಮುಂದೂಡುತ್ತಲೇ ಬಂದಿದ್ದಾರೆ ಎನ್ನುವ ಆರೋಪ ಈಗಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಮೇಲಿದೆ. ಹಾಗಾಗಿ ಹಲವು ಬಾರಿ ಸಹಕಾರಿ ಸಂಘಗಳ ಉಪ ನಿಬಂಧಕರು ಹಾಗೂ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳಿಗೆ ನಿರ್ಮಾಪಕರು ಪತ್ರ ಬರೆದಿದ್ದಾರೆ. ಇದನ್ನೂ ಓದಿ : ಹರೀಶ್ ವಯಸ್ಸು 36 ಹಾಸ್ಯ ಸಿನಿಮಾಗಾಗಿ ಟೈಟಲ್ ಸಾಂಗ್ ಹಾಡಿದ ಪುನೀತ್

ಪದೇ ಪದೇ ನಿರ್ಮಾಪಕರು ಜಿಲ್ಲಾ ನೋಂದಣಾಧಿಕಾರಿಗಳಿಗೆ ಪತ್ರ ಬರೆದಾಗ, ಆಡಳಿತಾಧಿಕಾರಿ ನೇಮಿಸಬೇಕಾಗುತ್ತದೆ ಎಂದು ಈ ಹಿಂದೆ ಸಹಕಾರಿ ಇಲಾಖೆಯು ವಾಣಿಜ್ಯ ಮಂಡಳಿಗೆ ಪತ್ರ ಬರೆದಿತ್ತು. ಈ ಬೆನ್ನಲ್ಲೆ ಮೇ-2022ರಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಸುವುದಾಗಿ ತಿಳಿಸಿತ್ತು. ಇದಕ್ಕೂ ತಡೆಕೋರೆ ವಾಣಿಜ್ಯ ಮಂಡಳಿಯ 50ಕ್ಕೂ ಹೆಚ್ಚು ಸದಸ್ಯರು ಮತ್ತೆ ಸಹಕಾರಿ ಇಲಾಖೆಗೆ ಪತ್ರ ಬರೆದಿದ್ದಾರೆ. ಈಗಿರುವ ಮತದಾರರ ಪಟ್ಟಿಯನ್ನೇ ಇಟ್ಟುಕೊಂಡು ಚುನಾವಣೆ ನಡೆಸಬೇಕೆಂದು ಮನವಿ ಮಾಡಿದ್ದಾರೆ. ಹಾಗಾಗಿ ಮತ್ತೆ ವಾಣಿಜ್ಯ ಮಂಡಳಿಗೆ ಇಲಾಖೆ ಪತ್ರ ಬರೆದಿದೆ. ಇದನ್ನೂ ಓದಿ : ಸ್ಸಾರಿ.. ಈ ಬಾರಿ ಹುಟ್ಟು ಹಬ್ಬ ಆಚರಿಸಲ್ಲ : ಜಗ್ಗೇಶ್

ಮೇ 2022ಕ್ಕೂ ಮುನ್ನ ಚುನಾವಣೆ ನಡೆಸಬೇಕೆಂದು ತಾಕೀತು ಮಾಡಿದೆ. ಏಪ್ರಿಲ್ 15ರ ಒಳಗೆ ಚುನಾವಣೆ ನಡೆಸಲೇಬೇಕೆಂದು ಸುತ್ತೋಲೆ ಕಳುಹಿಸಿದೆ. ತಪ್ಪಿದ್ದಲ್ಲಿ ಅಗತ್ಯ ಕ್ರಮಗಳನ್ನು ತಗೆದುಕೊಳ್ಳುವುದಾಗಿಯೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Leave a Reply