ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಧ್ವಜಾರೋಹಣಕ್ಕೆ ಸೀಮಿತ: ಬಸನಗೌಡ ದದ್ದಲ್

ರಾಯಚೂರು: ಪದೇ ಪದೇ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಯಾಗುತ್ತಿರುವುದಕ್ಕೆ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅಸಮಾಧಾನ ಹೊರಹಾಕಿದ್ದಾರೆ.

ನೂತನ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬಿ ಪಾಟೀಲ್ ಮುನೇನಕೊಪ್ಪ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ 19 ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಾ ಅಸಮಾಧಾನ ವ್ಯಕ್ತಪಡಿಸಿದರು. ರಾಯಚೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು ಜಿಲ್ಲೆಗೆ ನೇಮಕವಾಗುವ ಉಸ್ತುವಾರಿ ಸಚಿವರು ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗಿದ್ದಾರೆ. ಈ ಬಾರಿ ಇದ್ದವರು ಮುಂದಿನ ಧ್ವಜಾರೋಹಣಕ್ಕೆ ಇರುವುದಿಲ್ಲ. ಮೂರ್ನಾಲ್ಕು ತಿಂಗಳಿಗೊಮ್ಮೆ ಸಚಿವರು ಬದಲಾಗ್ತಿರೋದ್ರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ ಎಂದರು.

ನಮ್ಮ ಜಿಲ್ಲೆಯಲ್ಲೇ ಇಬ್ಬರು ಬಿಜೆಪಿ ಶಾಸಕರಿದ್ದಾರೆ ಅವರನ್ನಾದ್ರೂ ಸಚಿವರನ್ನಾಗಿ ಮಾಡಿ ಎಂದು ಮನವಿ ಮಾಡಿದರು. ಸರ್ಕಾರ ಪದೇ ಪದೇ ಸಚಿವರನ್ನ ಬದಲಾಯಿಸುವುದು ಸರಿಯಲ್ಲ ಅಂತ ನೂತನ ಉಸ್ತುವಾರಿ ಸಚಿವರ ಮುಂದೆಯೇ ಅಸಮಧಾನ ಹೊರಹಾಕಿದರು. ಇದನ್ನೂ ಓದಿ: ಸಿಎಂ ಅಭ್ಯರ್ಥಿ ಘೋಷಿಸಲಿ, ಯಾರು ಉಳಿಯುತ್ತಾರೆ, ಹೋಗುತ್ತಾರೆ ನೋಡೋಣ: ಸಿ.ಟಿ. ರವಿ

Comments

Leave a Reply

Your email address will not be published. Required fields are marked *