ಶೂಟಿಂಗ್ ಮುಗಿಸಿದ ನೈಜ ಘಟನೆಯ ‘ಹತ್ಯೆ’ ಸಿನಿಮಾ

ದೆಹಲಿ ನಿರ್ಭಯ ಹತ್ಯೆ (Hatya), ಹೈದರಾಬಾದ್ ಮರ್ಡರ್ ಮತ್ತು ಅತ್ಯಾಚಾರ, ಇತ್ತೀಚೆಗೆ ದೆಹಲಿಯಲ್ಲಿ ನಡೆದ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟಿದ ಘಟನೆಗಳು ಸೇರಿದಂತೆ ಇಂತಹ ನೈಜ ಘಟನೆಗಳನ್ನು ಆಧರಿಸಿರುವ ಚಿತ್ರವೆ ಹತ್ಯೆ.

ಈ ಚಿತ್ರದ ನಾಯಕಿ ತನ್ನ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗುತ್ತಾಳೆ. ಆ ನೋವನ್ನು ಯಾರ ಬಳಿ ಹೇಳಿಕೊಳ್ಳಲಾಗದೆ ಮನಸ್ಸಿನಲ್ಲೇ ನೋವು ಅನುಭವಿಸುತ್ತಾಳೆ. ಈ ಘಟನೆಯಿಂದ ಆಕೆಯ ಮನಸ್ಥಿತಿ ಬದಲಾಗುತ್ತದೆ. ಆನಂತರ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಾಳೆ ಇದೇ ಚಿತ್ರದ ಕಥಾಹಂದರ. ಇದೊಂದು ಮಹಿಳಾ ಪ್ರಧಾನ ಚಿತ್ರ  ಎನ್ನುತ್ತಾರೆ ಕಥೆ ಹಾಗೂ ಚಿತ್ರಕಥೆ ಬರೆದಿರುವ ಗಂಗಾಧರ್ (Gangadhar)(ಗಂಗು). ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಹೊಯ್ಸಳ’ ಬಲಿ- ಫ್ಯಾನ್ಸ್‌ಗೆ ಸಿಕ್ತು ಸಿಹಿಸುದ್ದಿ

ವರುಣ್ ‌.ಜಿ (Varun) ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ಸಾಗರಂ ವಲ್ಡ್ ಸಿನಿಮಾ ಲಾಂಛನದಲ್ಲಿ ರಾಮಲಿಂಗಂ, ಶ್ಯಾಮ್ ಹಾಗೂ ಗಂಗಾಧರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಅಲೆನ್ ಕ್ರಿಸ್ಟ ಸಂಗೀತ ನಿರ್ದೇಶನ, ಸಂಜೀವ್ ರೆಡ್ಡಿ ಸಂಕಲನ ಹಾಗೂ ಮಾಸ್ ಮಾದ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ವಿಕಾಸ್ ಗೌಡ (Vikas Gowda),  ಕಾಮಿಕಾ ಆಂಚಲ್, ಹ್ಯಾರಿ ಜೋಶ್, ಸಂತೋಷ್ ಮೇದಪ್ಪ, ಶ್ಯಾಮ್, ನಾಗೇಶ್ ಮಯ್ಯ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.  ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.