ಜನಸ್ಪಂದನಕ್ಕೆ ಕರಾಳೋತ್ಸವದ ಬಿಸಿ – ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರವನ್ನು(Doddaballapur) ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ, ಇಂದು ನಡೆದ ಜನಸ್ಪಂದನ(Janaspandana) ಕಾರ್ಯಕ್ರಮಕ್ಕೆ ಕರಾಳೋತ್ಸವ ಬಿಸಿ ತಟ್ಟಿಸಿದೆ. ಕರಾಳೋತ್ಸವವನ್ನು ನಡೆಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜನಸ್ಪಂದನ ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಬೆಳಗ್ಗೆ 9:30ಕ್ಕೆ ನಗರದ ಕನ್ನಡ ಜಾಗೃತ ಪರಿಷತ್ತಿನ ಮುಂಭಾಗದಿಂದ ಬೃಹತ್ ಜಾಥಾ ಹೊರಟು ಪಿಎಸ್‌ಐ ಜಗದೀಶ್(ಅರ್ಕಾವತಿ) ವೃತ್ತದಲ್ಲಿ ಕರಾಳೋತ್ಸವ ಮಾಡುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲು ಸಮಿತಿಯ ಮುಖಂಡರು ನಿರ್ಧರಿಸಿದ್ದರು. ಆದರೆ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನೆ ಕೈಬಿಡುವಂತೆ ಮನವೊಲಿಸಲು ಮುಂದಾದರು. ಇದಕ್ಕೆ ಒಪ್ಪದ ಕಾರಣ, ನೂರಾರು ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದು, ಬಸ್ಸಿನಲ್ಲಿ ಕರೆದೊಯ್ದರು. ಈ ವೇಳೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವರ್ತನೆ ಖಂಡಿಸಿ ಪ್ರತಿಭಟನಾನಿರತರು ಧಿಕ್ಕಾರ ಕೂಗಿದರು. ಇದನ್ನೂ ಓದಿ: ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು, ಶಾಸಕರೆಲ್ಲ ದೊಡ್ಡಬಳ್ಳಾಪುರದಲ್ಲಿ ಪತ್ತೆ: ಕಾಂಗ್ರೆಸ್ ಲೇವಡಿ

ಜಿಲ್ಲಾ ಕೇಂದ್ರ ಹೋರಾಟ ಸಮಿತಿಯ ವತಿಯಿಂದ ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ಒತ್ತಾಯಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆ ಸಂದರ್ಭದಲ್ಲಿ ಸಂಬಂಧಪಟ್ಟ ಕಡತಗಳನ್ನು ಪರಿಶೀಲಿಸಿ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ಬೊಮ್ಮಾಯಿ ಭರವಸೆ ನೀಡಿದ್ದರು. ಇದನ್ನೂ ಓದಿ: ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದ ವೃದ್ಧ ಹೃದಯಾಘಾತದಿಂದ ಸಾವು

ಜಿಲ್ಲಾ ಕೇಂದ್ರವಾಗಲು ಎಲ್ಲಾ ಅರ್ಹತೆಗಳಿದ್ದರೂ ದೊಡ್ಡಬಳ್ಳಾಪುರ ತಾಲೂಕಿಗೆ ಅನ್ಯಾಯ ಮಾಡಲಾಗುತ್ತಿದೆ. ಈ ದಿಸೆಯಲ್ಲಿ ಜಿಲ್ಲಾ ಕೇಂದ್ರದ ಅರ್ಹತೆಗಳ ಬಗ್ಗೆ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿಯ ಅರ್ಹತೆಗಳನ್ನು ಪಟ್ಟಿ ಮಾಡಿ ಹಾಗೂ ದೊಡ್ಡಬಳ್ಳಾಪುರದ ವಿಶೇಷತೆಗಳ ಬಗ್ಗೆ ಕರಪತ್ರದಲ್ಲಿ ಮಾಹಿತಿ ನೀಡಿ ಸಾರ್ವಜನಿಕರಿಗೆ ಹಂಚಿದ್ದು, ಸಾರ್ವಜನಿಕರು ಸಹ ಹೋರಾಟವನ್ನು ಬೆಂಬಲಿಸಲು ಹೋರಾಟ ಸಮಿತಿ ಮನವಿ ಮಾಡಿತ್ತು.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *