ಕಾಂಗ್ರೆಸ್, ಜೆಡಿಎಸ್ ನಡುವಿನ ಜಗಳವೇ ನಮಗೆ ಲಾಭ: ಶ್ರೀರಾಮುಲು

ರಾಯಚೂರು: ಪ್ರಸ್ತುತ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನಡುವಿನ ಜಗಳದಿಂದಲೇ ನಮಗೆ ಲಾಭವಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ರಾಯಚೂರಿನ ಸಿಂಧನೂರು ತಾಲೂಕಿನ ಜವಳಗೇರಾದಲ್ಲಿ ಮೊರಾರ್ಜಿ ವಸತಿ ಶಾಲೆ ಉದ್ಘಾಟನೆ ಬಳಿಕ ಮಾತನಾಡಿದ ಸಚಿವರು, ಬಿಜೆಪಿಯಲ್ಲಿ ನಮ್ಮ ಲೆಕ್ಕಾಚಾರ ನಮಗಿದೆ. ಆದ್ದರಿಂದಲೇ ನಾವು ರಾಜ್ಯಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ

ಜೆಡಿಎಸ್‌ನವರು ತಮ್ಮ ಸಿದ್ಧಾಂತಗಳನ್ನಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎಂತಹ ಪರಿಸ್ಥಿತಿಯಲ್ಲೂ ಕಾಂಗ್ರೆಸ್ ಕಡೆಗೆ ಹೋಗಲು ಆಗಲಿಲ್ಲ. ಸಿದ್ದರಾಮಯ್ಯ ಅವರು ಮೊದಲಿನಿಂದಲೂ ಜೆಡಿಎಸ್ ವಿರುದ್ಧವಾಗಿಯೇ ಬಂದಿದ್ದಾರೆ. ಅವರಲ್ಲಿ ಗಲಾಟೆಯಾಗಿರುವುದರಿಂದ ನಮಗೆ ಅನುಕೂಲವಾಗಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು

Comments

Leave a Reply

Your email address will not be published. Required fields are marked *