ನಿಮ್ಗೆ ನಾಚಿಕೆ ಆಗಲ್ವಾ, ರೈತರ ಮೇಲೆ ಗೂಬೆ ಕೂರಿಸೋದು ನಿಲ್ಸಿ – ಕಾರ್ಯದರ್ಶಿಗಳಿಗೆ ಸುಪ್ರೀಂ ಛೀಮಾರಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ಸಂಬಂಧ ಹರ್ಯಾಣ, ಪಂಜಾಬ್, ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ.

ಯಾವುದೇ ದೇಶದಲ್ಲಿ ಕೃಷಿ ತ್ಯಾಜ್ಯ ಸುಡಲು ಸರ್ಕಾರಗಳು ಅನುಮತಿ ಕೊಟ್ಟಿಲ್ಲ. ವಾಯುಮಾಲಿನ್ಯ ತಡೆ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸದ ಅಧಿಕಾರಿಗಳು, ರೈತರ ಮೇಲೆ ಗೂಬೆ ಕೂರಿಸ್ತಿದ್ದೀರಾ? ನಿಮಗೆ ನಾಚಿಕೆ ಆಗುದಿಲ್ಲವೇ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದೆ.

ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ. ಈ ಸಾಧನೆಗೆ ಗರ್ವ ಪಡ್ತಿದ್ದೀರಾ? ಅಧಿಕಾರಿಗಳನ್ನು ಶಿಕ್ಷಿಸುವ ಸಮಯ ಬಂದಿದೆ ಎಂದು ಹೇಳಿ ಎಚ್ಚರಿಸಿದೆ. ಜೊತೆಗೆ, ಮೂರು ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡದಂತೆ ಆದೇಶಿಸಿದೆ.

ಇದು ಕೋಟಿ ಜನರ ಬದುಕಿನ ಪ್ರಶ್ನೆ. ಈ ರೀತಿ ನಿರ್ಲಕ್ಷ್ಯ ರುವುದು ಸರಿಯೇ? ನಿಮ್ಮ ವೈಫಲ್ಯ ನಿಮಗೆ ಗೊತ್ತಾಗುತ್ತಿಲ್ಲವೇ? ನಿಮ್ಮನ್ನೂ ನಾವು ಈ ಕೂಡಲೇ ಅಮಾನತುಗೊಳಿಸಬಹುದು ಎಂದು ಕಾರ್ಯದರ್ಶಿಗಳಿಗೆ ಎಚ್ಚರಿಕೆ ನೀಡಿತು.

Comments

Leave a Reply

Your email address will not be published. Required fields are marked *