ಮೈಸೂರು: ಮದುವೆಗೆಂದು ಮನೆಯಲ್ಲಿ ಇಟ್ಟಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳನೊಬ್ಬ ಕದ್ದು ಪರಾರಿಯಾಗಿರುವ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದೆ.
ಇಲಿಯಾಸ್ ಕಾವೇರಿ ಎಂಪೋರಿಯಮ್ ಮಾಲೀಕರಾದ ಇಲಿಯಾಸ್ ಬೇಗ್ ಮನೆಯಲ್ಲಿ ಕಳ್ಳತನ ನಡೆದಿದೆ. ಮಗಳ ಮದುವೆಗೆಂದು ಇಲಿಯಾಸ್ ಬೇಗ್ ಮನೆಯಲ್ಲಿ ಚಿನ್ನಾಭರಣ ಹಾಗೂ ನಗದನ್ನು ಖರೀದಿಸಿ ಇಟ್ಟಿದ್ದರು. ಮದುವೆಯ ಸಂಭ್ರಮದಲ್ಲಿದ್ದ ಕುಟುಂಬಸ್ಥರು ಹೊರಗೆ ಹೋಗಿದ್ದಾಗ ಕಳ್ಳ ತನ್ನ ಕೈಚಳಕ ತೋರಿಸಿದ್ದಾನೆ. ಮನೆಯ ನಕಲಿ ಕೀ ಬಳಸಿ 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 2.50 ಲಕ್ಷ ರೂ. ನಗದನ್ನು ಕಳ್ಳ ಕದ್ದಿದ್ದಾನೆ.

ಮುಖಕ್ಕೆ ಮಾಸ್ಕ್, ಶಲ್ಯ ಧರಿಸಿ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿ ಈ ಕಳ್ಳತನ ಮಾಡಿದ್ದಾನೆ. ಕಳ್ಳ ಮನೆಗೆ ಬಂದು ಕಳ್ಳತನ ಮಾಡಿ ಹೋದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Leave a Reply