ಏಪ್ರಿಲ್ 14ರ ಬಳಿಕ ಲಾಕ್‍ಡೌನ್ ಇಲ್ಲ: ಕೇಂದ್ರ ಸಂಪುಟ ಕಾರ್ಯದರ್ಶಿ

ನವದೆಹಲಿ: ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜೀವ್ ಗೌಬಾ, ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಹಾಗೆಯೇ ಸರ್ಕಾರ ಮುಂದೆ ಈ ರೀತಿಯ ಯಾವ ಯೋಜನೆಗಳು ಇಲ್ಲ. ಲಾಕ್‍ಡೌನ್ ಮುಂದುವರಿಯಲಿದೆ ಎಂಬ ಸುದ್ದಿ ಕೇಳಿ ನನಗೆ ಶಾಕ್ ಆಯ್ತು ಎಂದಿದ್ದಾರೆ.

ಭಾರತದಲ್ಲಿ ಕೊರೊನಾ ಸೋಂಕಿತರು ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ತಡೆಗೆ ಸರ್ಕಾರ ಲಾಕ್‍ಡೌನ್ ವಿಸ್ತರಿಸಲಿದೆ ಎಂಬ ಚರ್ಚೆಗಳು ಆರಂಭಗೊಂಡಿದ್ದವು. ವಾಟ್ಸಪ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಕೆಲ ಸುಳ್ಳು ಸುದ್ದಿಗಳು ವೈರಲ್ ಆಗುತ್ತಿವೆ. ಹಾಗಾಗಿ ಇಂದು ರಾಜೀವ್ ಗೌಬಾ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಕೊರೊನಾ ತಡೆಗಾಗಿ ಪ್ರಧಾನಿ ಮೋದಿ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಿದ್ದಾರೆ. ಹಾಗೆಯೇ ಪ್ರತಿಯೊಬ್ಬರು ತಮಗೆ ತಾವೇ ಲಕ್ಷ್ಮಣ ರೇಖೆ ಹಾಕಿಕೊಂಡು ಮನೆಯಿಂದ ಹೊರ ಬರದಂತೆ ದೇಶದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *