ಹೆಂಡ್ತಿ ಮಕ್ಕಳನ್ನು ಸಾಕಲು ಸೂಕ್ತ ಕೆಲಸವಿಲ್ಲ- ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ

ಹೈದರಾಬಾದ್: ವ್ಯಕ್ತಿಯೊಬ್ಬ ತನ್ನ ಹೆಂಡತಿ ಮಕ್ಕಳನ್ನು ಸಾಕಲು ನನಗೆ ಕೆಲಸವಿಲ್ಲ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಸದ್ಯ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪೊಲೆಪಲ್ಲಿ ವೆಂಕಟೇಶ್ ಎಂದು ಗುರುತಿಸಲಾಗಿದೆ. ಮೂಲತಃ ಗುಂಟೂರ್ ನವನಾಗಿರುವ ಈತ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು. ವೆಂಕಟೇಶ್ ಅಕ್ಟೋಬರ್ ಮೊದಲ ವಾರದಲ್ಲೇ ಆತ್ಮಹತ್ಯೆಗೆ ಮಾಡಿಕೊಂಡಿದ್ದನು.

ಆತ್ಮಹತ್ಯೆಗೂ ಮುನ್ನ ವೆಂಕಟೇಶ್ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿಕೊಂಡಿದ್ದನು. ಸದ್ಯ ಮರಳಿನ ಕೊರತೆಯಿಂದ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕಾರ್ಮಿಕರು ತಮ್ಮ ಕೆಲ ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವೆಂಕಟೇಶ್ ವಿಡಿಯೋ ವೈರಲ್ ಆಗುತ್ತಿದೆ.

ವಿಡಿಯೋದಲ್ಲೇನಿದೆ..?
ಪರಿಸ್ಥಿತಿ ಚೆನ್ನಾಗಿಲ್ಲ. ನನಗೆ ಕೆಲಸ ಇಲ್ಲ. ಹೀಗಾಗಿ ನನಗೆ ನನ್ನ ಹೆಂಡತಿ, ಮಕ್ಕಳನ್ನು ಸಾಕಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ತನಗೆ ಕೆಲಸವಿಲ್ಲದೆ ಸರಿ ಸುಮಾರು 4 ತಿಂಗಳುಗಳೇ ಕಳೆದಿದೆ ಎಂದು ವೆಂಕಟೇಶ್ ವಿಡಿಯೋದಲ್ಲಿ ತನ್ನ ಅಳಲು ತೋಡಿಕೊಂಡಿದ್ದಾನೆ.

ಅಕ್ಟೋಬರ್ 2ರಂದು ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಆತನ ಪತ್ನಿ ರಾಶಿ ಮಾಧ್ಯಮಗಳೊಂದಿಗೆ ಮಾತನಾಡಿ, ಮಗ ಅನಾರೋಗ್ಯದಿಂದ ಬಳಲುತ್ತಿದ್ದಾನೆ. ನಮಗೆ ಆತನಿಗೆ ಸರಿಯಾದ ಚಿಕಿತ್ಸೆ ಕೊಡಿಸಲು ಹಣವಿಲ್ಲ. ಹೀಗಾಗಿ ಕಳೆದ ಒಂದು ವರ್ಷದಿಂದ ಪತಿ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಆದರೆ ಸರ್ಕಾರದ ಹೊಸ ಮರಳು ನೀತಿ ಕಟ್ಟಡ ಕಾರ್ಮಿಕರನ್ನು ಖಿನ್ನತೆಗೆ ದೂಡಿದೆ ಎಂದು ವಿರೋಧ ಪಕ್ಷಗಳು ಮಾತ್ರ ಆರೋಪ ಮಾಡುತ್ತಿವೆ.

ವೆಂಕಟೇಶ್ ಸಾವಿಗೂ ಮುನ್ನ ನಿರ್ಮಾನ ಮೇಲ್ವಿಚಾರಕರೊಬ್ಬರು ಕೂಡ ಆತ್ಮಹತ್ಯೆಗೆ ಶರಣಾಗಿದ್ದರು. ಸದ್ಯ ವೆಂಕಟೇಶ್ ವಿಡಿಯೋವನ್ನು ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡು ಕಟ್ಟಡ ಕಾರ್ಮಿಕರಿಗೆ ಸೂಕ್ತ ಪರಿಹಾರವನ್ನು ಶೀಘ್ರವೇ ಒದಗಿಸುವಂತೆ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ. ಇದೊಂದು ಮನಕಲಕುವ ಘಟನೆಯಾಗಿದೆ. ಹೀಗಾಗಿ ಈ ವಿಡಿಯೋ ನೋಡಿದ ಮೇಲಾದರೂ ಸರ್ಕಾರ ಕೂಡಲೇ ಎಚ್ಚೆತ್ತು ಉದ್ಯೋಗ ವಂಚಿತರಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಕೆಲಸ ಕಳೆದುಕೊಂಡವರ ಜೊತೆ ನಮ್ಮ ಪಕ್ಷವಿದೆ ಎಂದು ಸ್ಥೈರ್ಯ ತುಂಬಿದ್ದಾರೆ.

Comments

Leave a Reply

Your email address will not be published. Required fields are marked *