ಮಂಡ್ಯದಲ್ಲಿ ಖತರ್ನಾಕ್ ಕಳ್ಳನ ಬಂಧನ

ಮಂಡ್ಯ: ಬೀಗ ಹಾಕಿರುವ ಮನೆಯನ್ನು ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್ ಕಳ್ಳನನ್ನು ಮಂಡ್ಯ ಜಿಲ್ಲೆಯ ಹಲಗೂರು ಪೊಲೀಸರು ಬಂಧಿಸಿದ್ದಾರೆ.

ಆರೀಫ್ ಪಾಷಾ(65) ಬಂಧಿತ ಆರೋಪಿ. ಜಿಲ್ಲೆಯ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ್ದರಿಂದ ಈತನ ಮೇಲೆ ಆರು ಪ್ರಕರಣ ದಾಖಲಾಗಿತ್ತು. ಆ.7ರಂದು ಬೆಳಗ್ಗೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಈತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಕಳ್ಳತನದ ಪ್ರಕರಣಗಳು ಬೆಳಕಿಗೆ ಬಂದಿದೆ.

ಬಂಧಿತನಿಂದ ಸುಮಾರು 13 ಲಕ್ಷ ರೂಪಾಯಿ ಮೌಲ್ಯದ 450 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಬಂಧಿಸಿದ ಡಿವೈಎಸ್ಪಿ ಮಲ್ಲಿಕ್, ಸಿಪಿಐ ಶಿವಮಲ್ಲವಯ್ಯ, ಪಿಎಸ್‍ಐ ಶ್ರೀಧರ್ ನೇತೃತ್ವದ ತಂಡವನ್ನು ಮಂಡ್ಯ ಜಿಲ್ಲಾ ಎಸ್ಪಿ ರಾಧಿಕಾ ಅವರು ಶ್ಲಾಘಿಸಿದ್ದಾರೆ.

Comments

Leave a Reply

Your email address will not be published. Required fields are marked *