ಕಾಲ್ತುಳಿತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಬಾರದು: ಬೋಲೇನಾಥ ಬಾಬಾ

ಲಕ್ನೋ: ಹತ್ರಾಸ್ ಕಾಲ್ತುಳಿತದ (Hathras Stampede) ಬಗ್ಗೆ ಬೋಲೇನಾಥ ಬಾಬಾ (Bholenath Baba) ವಿಡಿಯೋ ಮೂಲಕ ಹೇಳಿಕೆ ನಿಡಿದ್ದು, ಜುಲೈ 2ರ ಘಟನೆ ಬಗ್ಗೆ ನನಗೆ ತೀವ್ರ ನೋವಾಗಿದೆ. ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಸರ್ಕಾರ ಮತ್ತು ಆಡಳಿತದಲ್ಲಿ ನಂಬಿಕೆ ಇರಲಿ. ಈ ಕಾಲ್ತುಳಿತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ ಎಂಬ ನಂಬಿಕೆ ನನಗಿದೆ. ನಮ್ಮ ವಕೀಲರಾದ ಎ.ಪಿ.ಸಿಂಗ್ ಮೂಲಕ ಸಂತ್ರಸ್ತ ಕುಟುಂಬಗಳ ಪರ ನಿಲ್ಲಲು ಸಮಿತಿಯ ಸದಸ್ಯರಿಗೆ ಮನವಿ ಮಾಡಿದ್ದೇನೆ. ಗಾಯಾಳುಗಳಿಗೆ ಸಹಾಯ ಮಾಡಲು ಸಮಿತಿಯ ಸದಸ್ಯರಿಗೆ ಹೇಳಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಮಾನದಲ್ಲಿ ಫೈಲಟ್ ಇರಲಿಲ್ಲ- ಸ್ಪೈಸ್‍‌ಜೆಟ್ ವಿರುದ್ಧ ಪ್ರಯಾಣಿಕರು ಧಿಕ್ಕಾರ

 

ಜುಲೈ 2 ರಂದು 121 ಜನರನ್ನು ಬಲಿತೆಗೆದುಕೊಂಡ ಹತ್ರಾಸ್ ಕಾಲ್ತುಳಿತದ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ಶುಕ್ರವಾರ ರಾತ್ರಿ ದೆಹಲಿಯಲ್ಲಿ ಪೊಲೀಸರ ಮುಂದೆ ಶರಣಾಗಿದ್ದು, ಉತ್ತರ ಪ್ರದೇಶ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

ಆರೋಪಿಯನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಮಧುಕರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು. ಇದನ್ನೂ ಓದಿ: ಡೆಂಗ್ಯೂ ಗಂಭೀರ ಹಂತಕ್ಕೆ ತಲುಪಿದಾಗ ಚಿಕಿತ್ಸೆ ಇಲ್ಲ: ಡಾ. ಮಂಜುನಾಥ್