ತುಮಕೂರು: ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಯುವಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ತಿಪಟೂರಿನ ಬನ್ಸಾಲಿ ಡಾಬ ಎದುರು ನಡೆದಿದೆ.
ಗಿರೀಶ್(23), ಯೋಗಿಶ್(25) ಮತ್ತು ಪ್ರವೀಣ್(24) ಮೃತ ದುರ್ದೈವಿಗಳು. ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಮೃತರು ಭದ್ರಾವತಿ ಮೂಲದವರು ಎಂದು ತಿಳಿದು ಬಂದಿದೆ. ತಿಪಟೂರಿನ ಬನ್ಸಾಲಿ ಡಾಬ ಎದುರು ಅಪರಿಚಿತ ವಾಹನ ಸ್ವಿಪ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆತನನ್ನು ಸಮೀಪದ ತಿಪಟೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು, ಸ್ಥಳಕ್ಕೆ ತಿಪಟೂರು ಪಿಎಸ್ ಐ. ಕಾಂತರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ತಿಪಟೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply