ಬೆಂಗಳೂರು: ಟಿಪ್ಪುಜಯಂತಿ ಆಚರಣೆ ಹಿನ್ನಲೆಯಲ್ಲಿ ಬೆಂಗಳೂರು ಸಿಟಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ವಿಧಾನಸೌಧ ಸುತ್ತಮುತ್ತಾ ಭದ್ರತೆಗೆ 500 ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಕೇಂದ್ರ ವಿಭಾಗ ಡಿಸಿಪಿ ದೇವರಾಜ್ ನೇತೃತ್ವದಲ್ಲಿ ವಿಧಾನಸೌಧ ಬ್ಯಾಂಕ್ವೇಟ್ ಹಾಲ್ ಬಳಿ ಭದ್ರತೆ ಒದಗಿಸಲಾಗಿದೆ. ಪಶ್ಚಿಮ ವಿಭಾಗ ಹೆಚ್ಚುವರಿ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದಲ್ಲಿ ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಡಿಜೆ ಹಳ್ಳಿ, ಕೆ.ಜೆಹಳ್ಳಿ, ಶಿವಾಜಿನಗರ, ಫ್ರೆಜರ್ ಟೌನ್, ತಿಲಕನಗರ, ವಿವೇಕ್‍ನಗರ, ಮೆಜೆಸ್ಟಿಕ್, ಮಾರ್ಕೆಟ್ ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಟ್ರಾಫಿಕ್ ಜಾಮ್ ಸಮಸ್ಯೆ ನಿಯಂತ್ರಿಸಲು ಕಬ್ಬನ್ ಪಾರ್ಕ್ ಸುತ್ತಮುತ್ತಾ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸಂಚಾರ ಆಯುಕ್ತ ಹರಿಶೇಖರನ್ ನೇತೃತ್ವದಲ್ಲಿ ಟ್ರಾಫಿಕ್ ಕಂಟ್ರೊಲ್ ಮಾಡಲಾಗುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಒದಗಿಸುವಂತೆ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಸೂಚನೆ ನೀಡಿದ್ದಾರೆ. ಅಲ್ಲದೇ ಯಾವುದೇ ಅಹಿತಕರ ಘಟನೆಗಳು ವರದಿಯಾದಲ್ಲಿ ನೀವೇ ಹೊಣೆಯಾಗುತ್ತೀರಿ ಎಂದು ಡಿಸಿಪಿಗಳಿಗೆ ಸೂಚಿಸಿದ್ದಾರೆ.

2 ಸಾವಿರ ಜನರಿಗೆ ಪಾಸ್:
ತೀವ್ರ ವಿರೋಧ ನಡುವೆಯೂ ಟಿಪ್ಪು ಸುಲ್ತಾನ್ ಜಯಂತಿಯನ್ನ ಇಂದು ಸರ್ಕಾರ ಆಚರಣೆ ಮಾಡ್ತಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಟಿಪ್ಪು ಜಯಂತಿ ಆಚರಣೆಗೆ ಸಕಲ ಸಿದ್ಧತೆ ನಡೆದಿದೆ. ಇಂದು ಬೆಳಗ್ಗೆ 11.30 ಕ್ಕೆ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಡಿಸಿಎಂ ಪರಮೇಶ್ವರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಪೊಲೀಸ್ ಬಿಗಿ ಭದ್ರತೆಯಲ್ಲಿ ಕಾರ್ಯಕ್ರಮ ನಡಯುತ್ತಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಲು 2 ಸಾವಿರ ಜನರಿಗೆ ಪಾಸ್ ನೀಡಲಾಗಿದೆ.

ಟಿಪ್ಪು ಜಯಂತಿಗೆ ಸಿಎಂ ಕುಮಾರಸ್ವಾಮಿ ವೈಯಕ್ತಿಕ ಕಾರಣಗಳಿಂದ ಗೈರಾಗುತ್ತಿದ್ದು, ಸಿಎಂ ಬದಲಿಗೆ ಡಿಸಿಎಂ ಪರಮೇಶ್ವರ್ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿವಹಿಸಿಕೊಳ್ಳಲಿದ್ದಾರೆ. ಸಿಎಂ ಪರವಾಗಿ ಜೆಡಿಎಸ್ ಸಚಿವ ವೆಂಕಟ್ ರಾವ್ ನಾಡಗೌಡ ಭಾಗವಹಿಸಿ ಸಿಎಂ ಅವರ ಸಂದೇಶ ಓದಲಿದ್ದಾರೆ. ಇನ್ನು ಟಿಪ್ಪು ಜಯಂತಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇಂದಿನ ಕಾರ್ಯಕ್ರಮಕ್ಕೆ ಯಾವ ಬಿಜೆಪಿ ಶಾಸಕರು ಬರೋದಿಲ್ಲ. ಅಲ್ಲದೆ ಆಹ್ವಾನ ಪತ್ರಿಕೆಯಲ್ಲೂ ಬಿಜೆಪಿ ನಾಯಕರ ಹೆಸರು ಇಲ್ಲ. ಕಾರ್ಯಕ್ರಮದಲ್ಲಿ ಮುಸ್ಲಿಂ ಧರ್ಮಗುರು ಅಮೀರ್ -ಎ-ಷರಿಯತ್ ನ ಹಜರತ್ ಮೌಲಾನ ಸಗೀರ್ ಅಹ್ಮದ್ ಸಾಹೇಬ್ ರಷಾದಿ ಸೇರಿದಂತೆ, ಜಮೀರ್ ಅಹಮದ್, ಮೇಯರ್ ಗಂಗಾಭಿಕೆ ಸೇರಿದಂತೆ ಕಾಂಗ್ರೆಸ್ ನ ಸಚಿವರು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/

Leave a Reply