ರಾಜ್ಯದಲ್ಲೀಗ ಟಿಪ್ಪು ಜಯಂತಿ ಟೆನ್ಶನ್ – ಕೊಡಗು ಜಿಲ್ಲೆಯಲ್ಲಿ ಬಂದ್ ಆಚರಣೆ

ಮಡಿಕೇರಿ: ರಾಜ್ಯದಲ್ಲೀಗ ಟಿಪ್ಪು ಜಯಂತಿ ಟೆನ್ಶನ್ ಆರಂಭವಾಗಿದ್ದು, ಟಿಪ್ಪು ಜಯಂತಿ ವಿರೋಧಿಸಿ ಕೊಡಗು ಜಿಲ್ಲೆಯಲ್ಲಿ ಬಂದ್ ನಡೆಸುತ್ತಿದ್ದಾರೆ.

ಜಯಂತಿ ವಿರೋಧಿಸಿ ಮಡಿಕೇರಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಅಲ್ಲದೇ ರಸ್ತೆಗಳು ಕೂಡ ಬಿಕೋ ಎನ್ನುತ್ತಿವೆ. ನಗರದ ಎಲ್ಲಾ ಕಡೆಗಳಲ್ಲೂ ಮುಂಜಾಗ್ರತಾ ಕ್ರಮವಾಗಿ ಎಲ್ಲೆಲ್ಲೂ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.

ಟಿಪ್ಪು ಜಯಂತಿಯನ್ನು ಸಂಪೂರ್ಣವಾಗಿ ವಿರೋಧಿಸುತ್ತಿರುವ ಕೊಡಗಿನ ಬಿಜೆಪಿ, ಟಿಪ್ಪು ಬದಲಾಗಿ 3 ವರ್ಷದ ಹಿಂದೆ ಮೃತಪಟ್ಟ ಕುಟ್ಟಪ್ಪ ಹುತಾತ್ಮ ದಿನಾಚರಣೆಗೆ ಸಿದ್ಧತೆ ನಡೆಸಿದೆ. ಮಡಿಕೇರಿಯ ಓಂಕಾರೇಶ್ವರ ದೇವಾಲಯದಲ್ಲಿ ಶಾಂತಿ ಪೂಜೆ ನಡೆಸಿದ್ದಾರೆ. ಹುತಾತ್ಮ ದಿನ ಆಚರಣೆಯಲ್ಲಿ ಭಾಗಿಯಾದ ಬಳಿಕ ಬಿಜೆಪಿ ಹಾಗೂ ಹಿಂದು ಪರ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು ಟಿಪ್ಪು ಜಯಂತಿ ಆಚರಣೆ ತಡೆಯಲು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಜರುಗದಂತೆ ಮಡಿಕೇರಿಯಾದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅತ್ತ ಖಾಕಿ ಕಣ್ಗಾವಲಿನಲ್ಲಿ ಹಳೇ ವಿಧಾನ ಸಂಭಾಗಣದಲ್ಲಿ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ.

ಟಿಪ್ಪು ಜಯಂತಿ ಅಚರಣೆ ನಡೆಸದಂತೆ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಎಂ ಎಲ್ ಸಿ ಸುನಿಲ್ ಸುಬ್ರಮಣಿ ಸಭೆಯಲ್ಲಿ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪೊಲೀಸರು ಶಾಸಕರನ್ನು, ಜನ ಪ್ರತಿನಿಧಿಗಳನ್ನು ಹೊರಗೆ ಕಳುಹಿಸುತ್ತಿದ್ದರು. ಈ ವೇಳೆ ಪೊಲೀಸರ ಜೊತೆ ಶಾಸಕರು ಮಾತಿನ ಚಕಮಕಿ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಶಾಸಕ ಅಪ್ಪಚ್ಚು ರಂಜನ್ ಎಂ ಎಲ್ ಸಿ ಸುನಿಲ್ ಸುಬ್ರಮಣಿ ಇತರರನ್ನು ಬಂಧಿಸಿದ್ದಾರೆ.

ಒಟ್ಟಿನಲ್ಲಿ ಟಿಪ್ಪು ಜಯಂತಿ ಆಚರಣೆಯಲ್ಲಿ ಹಿನ್ನೆಲೆಯಲ್ಲಿ ರಾಜ್ಯದ 6 ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *