ಮಮತಾ ಬ್ಯಾನರ್ಜಿಗೆ ಶಾಕ್ – ಟಿಎಂಸಿ ಸಂಸದ ಬಿಜೆಪಿಗೆ ಜಂಪ್

ಕೋಲ್ಕತ್ತಾ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಉಳಿದಿದ್ದು, ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಬಿಜೆಪಿ ಮನೆ ಸೇರಿದ್ದಾರೆ.

ಟಿಎಂಸಿ ಸಂಸದ ಸೌಮಿತ್ರ ಖಾನ್ ಇಂದು ದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರಿದ್ದಾರೆ. ಈ ವೇಳೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಮುಖಲ್ ರಾಯ್ ಹಾಜರಿದ್ದರು.

ಪಶ್ಚಿಮ ಬಂಗಾಳದ ಬಿಷ್ಣುಪುರ್ ಕ್ಷೇತ್ರದಿಂದ ಸೌಮಿತ್ರ ಖಾನ್ ಸಂಸದರಾಗಿ ಆಯ್ಕೆಯಾಗಿದ್ದರು. ಸೌಮಿತ್ರ ಅವರ ಬೆನ್ನಲ್ಲೇ ಕೆಲ ಬೆಂಬಲಿರು ಕೂಡ ಬಿಜೆಪಿ ಸೇರಲಿದ್ದಾರೆ. ಈ ಬೆಳವಣಿಗೆಯಿಂದ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹಿನ್ನಡೆಯಾಗುವ ಸಾಧ್ಯತೆ ಇದೆ ಎನ್ನುವ ವಿಶ್ಲೇಷಣೆ ಕೇಳಿಬಂದಿದೆ.

ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಸಿಂಡಿಕೇಟ್ ರಾಜ್ ಮತ್ತು ಪೊಲೀಸ್ ರಾಜ್ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ತೃಣಮೂಲ ಕಾಂಗ್ರೆಸ್ ಗೂಂಡಾಗಳಿಗೆ ಬೆಂಬಲ ನೀಡುತ್ತಿದೆ. ರಾಜ್ಯದಲ್ಲಿ ಅಹಿತಕರ ಘಟನೆಗಳು ಹೆಚ್ಚಾಗುತ್ತಿವೆ. ಹೀಗಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಸೌಮಿತ್ರ ಖಾನ್ ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *