ಲತಾ ಮಂಗೇಶ್ಕರ್ ನಿಧನಕ್ಕೆ ಸಂತಾಪ – ರಜೆ ಫೋಷಿಸಿದ ಮಹಾರಾಷ್ಟ್ರ ಸರ್ಕಾರ!

ಮುಂಬೈ: ಅಪ್ರತಿಮ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮಹಾರಾಷ್ಟ್ರ ಸರ್ಕಾರ ಸೋಮವಾರ ಸಾರ್ವಜನಿಕ ರಜೆ ಘೋಷಿಸಿದೆ.

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಲತಾ ಮಂಗೇಶ್ಕರ್ ಅವರು ಇಂದು ನಿಧನರಾಗಿದ್ದಾರೆ. ಈ ಹಿನ್ನೆಲೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವಿಟ್ಟರ್ ನಲ್ಲಿ, ಭಾರತ ರತ್ನ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ರಾಜ್ಯ ಸರ್ಕಾರವು ಸೋಮವಾರದಂದು ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕನ್ನಡಕ್ಕೂ ದನಿಗೂಡಿಸಿದ್ದ ಲತಾ ಮಂಗೇಶ್ಕರ್

ಲತಾ ಮಂಗೇಶ್ಕರ್ ಅವರ ನಿಧನದ ನಂತರ ಕೇಂದ್ರವು ಈಗಾಗಲೇ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಈ ಅವಧಿಯಲ್ಲಿ, ತನ್ನ ಭಾವಪೂರ್ಣ ಧ್ವನಿಯಿಂದ ದಶಕಗಳಿಂದ ಭಾರತೀಯ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿರುವ ಭಾರತ ರತ್ನ ಪ್ರಶಸ್ತಿ ಪುರಸ್ಕøತರ ಗೌರವಾರ್ಥವಾಗಿ ತ್ರಿವರ್ಣ ಧ್ವಜವನ್ನು ಅರ್ಧ ಇಳಿಸಿ ಹಾರಿಸಲಾಗುತ್ತದೆ.

ನೈಟಿಂಗೇಲ್ ಆಫ್ ಇಂಡಿಯಾ ಎಂದು ಕರೆಯಲ್ಪಡುವ 92 ವರ್ಷದ ಲೆಜೆಂಡರಿ ಗಾಯಕಿ ಲತಾ ಮಂಗೇಶ್ಕರ್ ಭಾನುವಾರ ಬೆಳಗ್ಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಕೋವಿಡ್-18 ಪಾಸಿಟಿವ್ ಬಂದ ನಂತರ ಅವರು ಕಳೆದ ತಿಂಗಳು ಆಸ್ಪತ್ರೆಗೆ ದಾಖಲಾಗಿದ್ದರು.

ಈ ವೇಳೆ ಅವರಿಗೆ ನ್ಯುಮೋನಿಯಾ ಇರುವುದು ತಿಳಿದುಬಂದಿದ್ದು, ಚಿಕಿತ್ಸೆಯಲ್ಲಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲತಾ ಮಂಗೇಶ್ಕರ್ ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

Comments

Leave a Reply

Your email address will not be published. Required fields are marked *