ಗೊಂದಲ ಬೇಡ, ಶನಿವಾರ ನಟಸಾರ್ವಭೌಮ ಆಡಿಯೋ ರಿಲೀಸ್ – ಪವನ್ ಒಡೆಯರ್ ಸ್ಪಷ್ಟನೆ

ಹುಬ್ಬಳ್ಳಿ: ನಟ ಪುನೀತ್ ರಾಜ್ ಕುಮಾರ್ ಮತ್ತು ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ನಿವಾಸದ ಮೇಲೆ ಐಟಿ ದಾಳಿಯಾದ ಹಿನ್ನೆಲೆಯಲ್ಲಿ ಶನಿವಾರ ನಡೆಯಬೇಕಿದ್ದ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ ಮುಂದೂಡಿಕೆ ಆಗಲಿದೆ ಎನ್ನುವ ಗಾಳಿ ಸುದ್ದಿಗೆ ನಿರ್ದೇಶಕ ಪವನ್ ಒಡೆಯರ್ ಬ್ರೇಕ್ ಹಾಕಿದ್ದಾರೆ.

ಪವನ್ ಒಡೆಯರ್ ಅವರು ಫೇಸ್‍ಬುಕ್ ನಲ್ಲಿ ಲೈವ್ ಬಂದು, ಎಲ್ಲರಿಗೂ ನಮಸ್ಕಾರ, ನಾಳೆ ‘ನಟಸಾರ್ವಭೌಮ’ ಸಿನಿಮಾದ ಆಡಿಯೋ ರಿಲೀಸ್ ಆಗುತ್ತಾ ಎಂಬ ಎಲ್ಲರಿಗೂ ಗೊಂದಲ ಇದೆ. ಶನಿವಾರ ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ನಟಸಾರ್ವಭೌಮ ಚಿತ್ರದ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮ ನಿಮ್ಮೆಲ್ಲರ ಸಮ್ಮುಖದಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಎಲ್ಲ ಕನ್ನಡಿಗರ ಆಶೀರ್ವಾದ ನಮ್ಮ ಸಿನಿಮಾದ ಧ್ವನಿ ಸುರುಳಿ ಬಿಡುಗಡೆಯ ಕಾರ್ಯಕ್ರಮದ ಮೇಲೆ ಇರಲಿ. ನಿಮ್ಮ ನೆಚ್ಚಿನ ಸ್ಟಾರ್ ಗಳ ಡ್ಯಾನ್ಸ್ ನಾಳೆ ಇರುತ್ತದೆ. ಆದ್ದರಿಂದ ಯಾರಿಗೂ ಯಾವುದೇ ಗೊಂದಲ ಬೇಡ. ಈ ಮೂಲಕ ನಾನು ನಾಳೆ ಎಲ್ಲ ಕನ್ನಡಾಭಿಮಾನಿಗಳು ನೆಹರೂ ಕ್ರಿಡಾಂಗಣಕ್ಕೆ ಬನ್ನಿ ಅಂತ ಹೇಳಲು ಇಷ್ಟಪಡುತ್ತೇನೆ ಎಂದು ಕಾರ್ಯಕ್ರಮ ನಡೆಯುವ ಬಗ್ಗೆ ಪವನ್ ಒಡೆಯರ್ ಸ್ಪಷ್ಟನೆ ಕೊಟ್ಟಿದ್ದಾರೆ.

ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಶನಿವಾರ ಸಂಜೆ 5 ಗಂಟೆಗೆ ಬಿಡುಗಡೆಯ ಕಾರ್ಯಕ್ರಮ ನಡೆಯಲಿದೆ. ಜಯಂತ್ ಕಾಯ್ಕಿಣಿ, ಯೋಗರಾಜ್ ಭಟ್, ಕವಿರಾಜ್, ಮತ್ತು ಪವನ್ ವಡೆಯರ್ ಅವರ ಸಾಹಿತ್ಯದಲ್ಲಿ ಮೂಡಿ ಬಂದಿರುವ ಹಾಡುಗಳು ಹೇಗಿರಬಹುದು ಎನ್ನುವ ಕುತೂಹಲ ಹೆಚ್ಚಾಗಿದೆ.


ಈ ಹಿಂದೆ ಪವನ್ ಒಡೆಯರ್, ಪುನೀತ್ ರಾಜ್‍ಕುಮಾರ್ ಅವರ `ರಣವಿಕ್ರಮ’ ಚಿತ್ರವನ್ನು ನಿರ್ದೇಶಿಸಿದ್ದರು. ಪುನೀತ್ ಜೊತೆ ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸಾಧುಕೋಕಿಲಾ, ಬಿ. ಸರೋಜಾ ದೇವಿ, ಚಿಕ್ಕಣ್ಣ, ರವಿಶಂಕರ್ ನಟಿಸಿದ್ದು, ಫೆಬ್ರವರಿ 9 ರಂದು ಚಿತ್ರ ಬಿಡುಗಡೆಯಾಗಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *